ಬೆಳಗಾವಿಯ ಸಾಂಸ್ಕೃತಿಕ ಮತ್ತು ಸಾಮಾಜಿಕ ಲೋಕದ ಧ್ರುವತಾರೆ ಅಸ್ತಮಿಸಿದೆ. ಬಸವ ಪಥದಲ್ಲಿ ನಡೆದು, ಅಕ್ಕನ ಬಳಗ ಹಾಗೂ ಲಿಂಗಾಯತ ಸಂಘಟನೆಗಳ ಮೂಲಕ ಮನೆಮಾತಾಗಿದ್ದ ಶರಣೆ ಶಾಂತಾ ಶ್ರೀಶೈಲಪ್ಪ ಸೊಬರದ ಅವರು ಇಂದು ನಿಧನರಾದರು. ಬೆಳಗಾವಿಯ ಹಿರಿಯ ಸಮಾಜ ಸೇವಕಿ ಹಾಗೂ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ‘ವಿಶ್ವೇಶ್ವರಯ್ಯ ಪ್ರಶಸ್ತಿ’ ಪುರಸ್ಕೃತೆ ಶಾಂತಾ ಶ್ರೀಶೈಲಪ್ಪ ಸೊಬರದ ಅವರು ಇಂದು ಮಧ್ಯಾನ್ಹ ಲಿಂಗೈಕ್ಯರಾಗಿದ್ದಾರೆ. ಮಹಾಲಕ್ಷ್ಮಿ ಮಹಿಳಾ ಮಂಡಳದ ಅಧ್ಯಕ್ಷರಾಗಿ, ಬಸವ ಸಮಿತಿಯ ಅಕ್ಕನ ಬಳಗದ …
Read More »ಬೆಳಗಾವಿ ಜೆಎನ್‌ಎಂಸಿ ಆವರಣದಲ್ಲಿ ತಂಬಾಕು ನಿಯಂತ್ರಣ ಕೋಶದ ‘ಸರ್ಜಿಕಲ್ ಸ್ಟ್ರೈಕ್’: 40 ಪ್ರಕರಣ ದಾಖಲು!
ಬೆಳಗಾವಿಯ ಜೆಎನ್‌ಎಂಸಿ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿವೆ. ಕೋಟ್ಪಾ (COTPA) ಕಾಯ್ದೆ ಉಲ್ಲಂಘಿಸಿದವರ ವಿರುದ್ಧ ಗುಡುಗಿರುವ ಅಧಿಕಾರಿಗಳು, ಸ್ಥಳದಲ್ಲೇ ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ. ನಗರದ ಜೆಎನ್‌ಎಂಸಿ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಇಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಕೋಟ್ಪಾ-2003 ಕಾಯ್ದೆಯಡಿ ದಿಢೀರ್ ದಾಳಿ ನಡೆಸಲಾಯಿತು. ಜಿಲ್ಲಾ ಜಾರಿ ಅಧಿಕಾರಿಗಳ ಮಾರ್ಗದರ್ಶನದಲ್ಲಿ …
Read More »ಸಾವಿನಲ್ಲಿಯೂ ಒಂದಾದ ಗಂಡ, ಹೆಂಡತಿ,ಬೆಳಗಾವಿ ಜಿಲ್ಲೆಯಲ್ಲಿ ಹ್ರದಯವಿದ್ರಾವಕ ಘಟನೆ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಮನಸ್ಸು ಕಲುಕುವ ದಾರುಣ ಘಟನೆ ಸಂಭವಿಸಿದ್ದು, ಪತಿ, ಪತ್ನಿ ಒಂದೇ ದಿನ ಸಾವಿಗೀಡಾದ ಘಟನೆ ನಡೆದಿದೆ. ಮಧುರಾ ಕರೆಪ್ಪ ಮಾದರ (30) ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಈ ಅಕಾಲಿಕ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನೊಂದೆಡೆ, ಪತ್ನಿಯ ಸಾವಿನ ಸುದ್ದಿ ತಿಳಿದು ಆತಂಕಗೊಂಡ ಅವರ ಪತಿ ಕರೆಪ್ಪ …
Read More »ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ಆರ್ಭಟ – ಆರೋಗ್ಯ ಇಲಾಖೆ ಅಲರ್ಟ್
ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪಮಾನ ಭಾರೀ ಹೆಚ್ಚಳವಾಗಿದೆ. ದಿನೇ ದಿನೇ ಸೂರ್ಯನ ತಾಪ ಹೆಚ್ಚಾಗುತ್ತಿದ್ದು, ಜನರು ಹೊರಗೆ ಓಡಾಡುವುದೇ ಕಷ್ಟವಾಗಿದೆ. ಇದರಿಂದ ಎಚ್ಚೆತ್ತ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಪ್ರತ್ಯೇಕ ವಾರ್ಡ್ ಆರಂಭ ಮಾಡಿದೆ. ಯಾದಗಿರಿ ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿದೆ. ಸುಡುಬಿಸಿಲಿಗೆ ಜನರು ಮಧ್ಯಾಹ್ನದಿಂದ ಸಂಜೆವರಗೆ ಹೆಚ್ಚಿನ ಪ್ರಮಾಣದಲ್ಲಿ ಓಡಾಡದಂತಾಗಿದೆ. ಸೂರ್ಯನ ತಾಪಕ್ಕೆ ನವಜಾತ ಶಿಶುಗಳಿಗೆ ನಿರ್ಜಲೀಕರಣ ಸಮಸ್ಯೆ ಹಾಗೂ ವಯಸ್ಕರಿಗೆ ಕೂಡ ಅನಾರೋಗ್ಯ ಉಂಟಾಗುತ್ತಿದೆ. …
Read More »ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (KSOU) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಪ್ರತಿಷ್ಠಿತ ಕುಲಪತಿ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮೈಸೂರಿನಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಅನುಭವವಿರುವ ಶಿಕ್ಷಣ ತಜ್ಞರಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಈ ನೇಮಕಾತಿಯು ಕರ್ನಾಟಕ ಸರ್ಕಾರದ ಮಾನದಂಡಗಳ ಅನ್ವಯ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ಮತ್ತು ಸೌಲಭ್ಯಗಳನ್ನು ನೀಡಲಾಗುತ್ತದೆ. ಅರ್ಹತೆ ಮತ್ತು ಅರ್ಜಿ …
Read More »ರಾಂಪೂರದಲ್ಲಿ ಚರಂತಿಮಠ ಪರ ಬಿಜೆಪಿ-ಜೆಡಿಎಸ್ ಶಕ್ತಿ ಪ್ರದರ್ಶನ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ಬಾಗಲಕೋಟೆ: ಉಪಚುನಾವಣೆ ಹಿನ್ನೆಲೆಯಲ್ಲಿ ರಾಂಪೂರ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠರ ಪರವಾಗಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಾರ್ವಜನಿಕ ಸಭೆಯಲ್ಲಿ ಮತಯಾಚನೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಚರಂತಿಮಠರು ಭಾರೀ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಣ, ಹೆಂಡ ಮತ್ತು ಜಾತಿ ಆಧಾರಿತ ರಾಜಕಾರಣಕ್ಕೆ ಜನರು ತಲೆಬಾಗುವುದಿಲ್ಲ; ಬದಲಾವಣೆಯ ಪರ ಜನರು ತೀರ್ಮಾನಿಸಿದ್ದಾರೆ ಎಂದರು. ಕಾಂಗ್ರೆಸ್ ಸರ್ಕಾರ ಹಲವು ಜನಪರ …
Read More »ಗೌರವ ಡಾಕ್ಟರೇಟ್ ನಿರಾಕರಿಸಿದ ಬಸವರಾಜ ಬೊಮ್ಮಾಯಿ
ಹಾವೇರಿ: ಹಾವೇರಿ ವಿಶ್ವವಿದ್ಯಾಲಯವು ತಮಗೆ ನೀಡಲು ನಿರ್ಧರಿಸಿದ್ದ ಗೌರವ ಡಾಕ್ಟರೇಟ್ ಅನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ವಿನಮ್ರವಾಗಿ ನಿರಾಕರಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕ ಸೇವೆಯಲ್ಲಿರುವ ತಮಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ಅತಿ ದೊಡ್ಡ ಪ್ರಶಸ್ತಿ ಎಂದು ಹೇಳಿಕೊಂಡಿದ್ದಾರೆ. ತಮ್ಮ ಸಿಂಡಿಕೇಟ್ ಸಭೆಯಲ್ಲಿ ತಮಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಬೊಮ್ಮಾಯಿ …
Read More »ನೂರಕ್ಕೆ ನೂರರಷ್ಟು ಸಮರ್ಥ್ ಗೆಲ್ಲಿಸುವ ಕೆಲಸ ಮಾಡ್ತೀನಿ: ಜಮೀರ್ ಅಹ್ಮದ್
ದಾವಣಗೆರೆ: ಇಲ್ಲಿನ ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ನೂರಕ್ಕೆ ನೂರರಷ್ಟು ಗೆಲ್ಲಿಸುವ ಕೆಲಸ ಮಾಡ್ತೀನಿ ಎಂದು ಜಮೀರ್ ಅಹ್ಮದ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನಾನು ಕೇರಳದಲ್ಲಿ ಸ್ಟಾರ್ ಪ್ರಚಾರಕನಾಗಿದ್ದೆ. ಹತ್ತು ಕ್ಷೇತ್ರ ಕೊಟ್ಟಿದ್ದರು. ಇಂದು (ಏ.5) ಇಲ್ಲಿಗೆ ಬರುತ್ತೇನೆ ಎಂದು ಹೇಳಿದ್ದೆ. ದಾವಣಗೆರೆಗೆ ಬಂದಿದ್ದೇನೆ ಸಮರ್ಥ್ ಗೆಲ್ಲಿಸಿಕೊಂಡು ಹೋಗುತ್ತೇನೆ. ನೂರಕ್ಕೆ ನೂರರಷ್ಟು ಸಮರ್ಥ್ ಗೆಲ್ಲಿಸುವ ಕೆಲಸ ಮಾಡುತ್ತೇನೆ …
Read More »ಸಿದ್ದಗಂಗಾ ಮಠದಲ್ಲಿ 119 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ
ತುಮಕೂರು: ಸಿದ್ದಗಂಗಾ ಮಠದಲ್ಲಿ ಇಂದು (ಏ.5) ನಾಮಕರಣ ಮಹೋತ್ಸವ ನಡೆಯಿತು. 119 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರನ್ನು ನಾಮಕರಣ ಮಾಡಲಾಯಿತು. ಶಿವಕುಮಾರ ಶ್ರೀಗಳ ದಾಸೋಹ ಟ್ರಸ್ಟ್ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗಂಡು ಮಕ್ಕಳಿಗೆ ಶಿವಕುಮಾರ ಅಂತಲೂ, ಹೆಣ್ಣು ಮಕ್ಕಳಿಗೆ ಶಿವಾನಿ ಅಂತಲೂ ನಾಮಕರಣ ಮಾಡಲಾಯಿತು. ಪ್ರತಿ ಮಕ್ಕಳಿಗೆ ಒಂದು ತೊಟ್ಟಿಲು, ಬಟ್ಟೆ, ಮಾಸ್ಕಿಟೋ ಕಾಯಿಲ್, ಹಾಸಿಗೆ ದಿಂಬು ಉಚಿತವಾಗಿ ವಿತರಣೆ ಮಾಡಲಾಯಿತು. ಮಕ್ಕಳೊಂದಿಗೆ ಬಂದ ದಂಪತಿ ಶಿವಕುಮಾರ ಶ್ರೀಗಳ ನಾಮಸ್ಮರಣೆ …
Read More »ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ: ಬೊಮ್ಮಾಯಿ
ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ (Siddaramaiah) ಅವರು ಈ ಭಾಗಕ್ಕೆ ಮಾಡಿರುವ ದ್ರೋಹ ಮತ್ಯಾವ ರಾಜಕಾರಣಿಯೂ ಮಾಡಿಲ್ಲ. ಸಿದ್ದರಾಮಯ್ಯ ಅತ್ಯಂತ ಕಷ್ಟದಲ್ಲಿ ಇದ್ದಾಗ ಅವರ ಕೈಯನ್ನು ಹಿಡಿದವರು ಬಾಗಲಕೋಟೆಯ ಬಾದಾಮಿ ಜನರು. ಕಷ್ಟ ಕಾಲದಲ್ಲಿ ಕೈ ಹಿಡಿಬೇಕಾದರೆ ಬಾದಾಮಿ ಬೇಕಾಗಿತ್ತು. ಈಗ ಮುಖ್ಯಮಂತ್ರಿ ಆದ ಮೇಲೆ ಬಾದಾಮಿ, ಬಾಗಲಕೋಟೆ ಬೇಕಾಗಿಲ್ಲ. ಇಂಥವರಿಗೆ ತಕ್ಕ ಪಾಠವನ್ನು ಕಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಬಾಗಲಕೋಟೆಯ ಉಪಚುನಾವಣೆಯ ಹಿನ್ನೆಲೆಯಲ್ಲಿ …
Read More »
Laxmi News 24×7