Breaking News

ಜಿಲ್ಲೆ

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

ಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶ ಹೊರಡಿಸಿದ್ದಾರೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಉಲ್ಲೇಖಿಸಿದ ಟಿಪ್ಪಣಿ ಮೇರೆಗೆ ಮಲೆಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಚಕ್ರಪಾಣಿ, ಎಸಿಎಫ್ ಗಜಾನನ ಹೆಗಡೆ ಹಾಗೂ ಹೂಗ್ಯಂ ವಲಯ ಅರಣ್ಯಾಧಿಕಾರಿ ಮಾದೇಶ್ ಅವರಿಗೆ ಮುಂದಿನ ಆದೇಶದ ತನಕ ಕಡ್ಡಾಯ ರಜೆ ಮೇಲೆ ತೆರಳಲು ಆದೇಶಿಸಲಾಗಿದೆ. ಐದು ಹುಲಿಗಳು ರಸ್ತೆಯಿಂದ ಕೇವಲ …

Read More »

ಆರ್​ಟಿಒ ಅಧಿಕಾರಿಗಳಿಂದ 98 ಆಟೋಗಳು ಜಪ್ತಿ

ಬೆಂಗಳೂರು: ನಿಗದಿ ಮಾಡಿದ್ದ ಪ್ರಯಾಣ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿ ಕಾನೂನು ಬಾಹಿರವಾಗಿ ಆಟೋ ಚಾಲನೆ ಮಾಡುತ್ತಿದ್ದವರ ಮೇಲೆ ಸೋಮವಾರ ನಗರದ 11 ಆರ್​ಟಿಒ ಕಚೇರಿಯ ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿ ಚಾಲಕರಿಗೆ ಬಿಸಿ ಮುಟ್ಟಿಸಿದ್ದಾರೆ. ಸರ್ಕಾರ ನಿಗದಿಗೊಳಿಸಿದ ಕನಿಷ್ಠ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ಮಾಹಿತಿ ಆಧರಿಸಿ ಇಂದು ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಬೆಂಗಳೂರು ನಗರ ವ್ಯಾಪ್ತಿಯ ಎಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು …

Read More »

ಮೂಡಲಗಿ , ಗೋಕಾಕ ತಾಲ್ಲೂಕು ಸೇರಿ ೫೧೯.೭೨ ಕೋಟಿ ರೂಪಾಯಿಗಳನ್ನು ಶೂನ್ಯ ಬಡ್ಡಿದರದಲ್ಲಿ ರೈತರಿಗೆ ವಿತರಿಸಿದ DCCBANK: ಬಾಲಚಂದ್ರ ಜಾರಕಿಹೊಳಿ

ಗೋಕಾಕ – ರೈತರ ಶ್ರೆಯೋಭಿವೃದ್ಧಿಗಾಗಿ ರೈತಮಿತ್ರನಾಗಿ ಕೆಲಸ ಮಾಡುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಸೇರಿ ೫೧೯.೭೨ ಕೋಟಿ ರೂಪಾಯಿಗಳನ್ನು ಶೂನ್ಯ ಬಡ್ಡಿದರದಲ್ಲಿ ರೈತರಿಗೆ ವಿತರಿಸಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಸೋಮವಾರದಂದು ನಗರದ ಹೊರ ವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾ ಭವನದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು …

Read More »

ಕೆ.ಎಸ್.ಆರ್.ಟಿ.ಸಿ ವಿಭಾಗಮಟ್ಟದ ಕುಂದು ಕೊರತೆ ಸಭೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ

ಕೆ.ಎಸ್.ಆರ್.ಟಿ.ಸಿ ವಿಭಾಗಮಟ್ಟದ ಕುಂದು ಕೊರತೆ ಸಭೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ನಗರದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ Satish Jarkiholi ಅವರ ಅಧ್ಯಕ್ಷತೆಯಲ್ಲಿ ಇಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಜಿಲ್ಲಾ ವ್ಯಾಪ್ತಿಯ ಘಟಕಗಳು ಮತ್ತು ವಿಭಾಗಗಳ ಕುಂದು ಕೊರತೆ ಪರಿಶೀಲನಾ ಸಭೆಯಲ್ಲಿ ಭಾಗಿಯಾದೆ. ಈ ವೇಳೆ ನೂತನ ಬಸ್ ಘಟಕ/ನಿಲ್ದಾಣಗಳ ಬೇಡಿಕೆ, ನೆಲಸಮಗೊಳಿಸಬೇಕಾದ ಶಿಥಿಲಾವಸ್ಥೆಯಲ್ಲಿರುವ ಬಸ್ ಘಟಕಗಳನ್ನು ಮರು ನಿರ್ಮಿಸುವುದು, ಹೊಸ …

Read More »

ಬಸವಣ್ಣನವರ ವಚನಗಳನ್ನು ವಿಶ್ವಕ್ಕೆ ತಲುಪಿಸಿದ ಡಿವೈಎಸ್ಪಿ ಬಸವರಾಜ ಯಲಿಗಾರ

ಬಸವಣ್ಣನವರ ವಚನಗಳನ್ನು ವಿಶ್ವಕ್ಕೆ ತಲುಪಿಸಿದ ಡಿವೈಎಸ್ಪಿ ಬಸವರಾಜ ಯಲಿಗಾರ ಗುಮ್ಮಟನಗರಿ ವಿಜಯಪುರ ಜಿಲ್ಲೆಯ ಭೀಮಾತೀರದ ಕುಖ್ಯಾತಿ ಹೊಂದಿರುವ ಜಿಲ್ಲೆ. ಇಲ್ಲಿನ ಪೊಲೀಸರಿಗೆ ಅಪರಾಧ ತಡೆಯೋದೆ ದೊಡ್ಡ ಕೆಲಸ. ರಾತ್ರಿ ಹಗಲು ಎನ್ನದೆ ಕೆಲಸ ಮಾಡಬೇಕು. ಅಂತಹ ಜಿಲ್ಲೆಯ ಪೊಲೀಸ್ ಅಧಿಕಾರಿ ಸದ್ದಿಲ್ಲದೆ ಬಸವಣ್ಣನ ವಚನಗಳು ವಿಶ್ವಕ್ಕೆ ತಲುಪಿಸುವ ಕೆಲಸ ಮಾಡಿದ್ದಾರೆ. ಆ ಅಧಿಕಾರಿಗೆ ವಿಜಯಪುರ ಜಿಲ್ಲೆಯಲ್ಲಿ ಅಭಿನಂದನಾ ಸಮಾರಂಭ ಅಭೂತಪೂರ್ವವಾಗಿ ನಡೆಯಿತು. ‌ ವಿಜಯಪುರ ಜಿಲ್ಲೆ ಅಂದ್ರೆ ಸಾಕು ಕ್ರೈಂ …

Read More »

ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು

ಹುಕ್ಕೇರಿ : ಗೋಕಾಕ ತಾಲೂಕಿನ ಗೋಡಚಿನಮಲ್ಕಿ ನಿಸರ್ಗ ಜಲಪಾತಕ್ಕೆ ಪ್ರವಾಸಿಗರ ದಂಡು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಸಪ್ತನದಿಗಳ ನಾಡು ಬೆಳಗಾವಿ ಜಿಲ್ಲೆಯಲ್ಲಿ ಒಂದೆಡೆ ಪ್ರವಾಹ ಸೃಷ್ಟಿಯಾಗುತ್ತದೆ, ಮತ್ತೊಂದೆಡೆ ಮಾರ್ಕಂಡೇಯ ನದಿ ಉಕ್ಕಿ ಹರಿಯುತ್ತಿರುವದರಿಂದ ಹುಕ್ಕೇರಿ ತಾಲೂಕಿನ ಶಿರೂರ ಜಲಾಶಯದಿಂದ ನೀರು ಹೋರಕ್ಕೆ ಬಿಟ್ಟಿದ್ದರಿಂದ ಗೋಕಾಕ ತಾಲೂಕಿನ ಗೊಡಚಿನಮಲ್ಕಿ ಜಲಪಾತದ ರುದ್ರರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಮುಗಿಬೀಳುತ್ತಿದ್ದಾರೆ. ಗೋಕಾಕ್​ನಿಂದ 18 ಕಿ‌.ಮೀ ದೂರದಲ್ಲಿರುವ ಗೊಡಚಿನಮಲ್ಕಿ ಗ್ರಾಮದಿಂದ ಸುಮಾರು 2.5 …

Read More »

ಬನ್ನೇರುಘಟ್ಟ ಅರಣ್ಯ ವಲಯದಲ್ಲಿ ಜಿಂಕೆ ಮಾಂಸ ಕಟ್​ ಮಾಡುತ್ತಿದ್ದವ ಅರೆಸ್ಟ್

ನೆಲಮಂಗಲ, ಜೂನ್​ 29: ಕಾಡುಪ್ರಾಣಿಗಳನ್ನು ಕೊಂದು ಮಾರಾಟ ಮಾಡುತ್ತಿದ್ದ ಜಾಲ ಬೆಂಗಳೂರಿನಲ್ಲಿ (Bengaluru) ಪತ್ತೆಯಾಗಿದೆ. ಬನ್ನೇರುಘಟ್ಟ ಅರಣ್ಯ ವಲಯದಲ್ಲಿ (Bannerghatta Forest Zone) ಜಿಂಕೆ ಮಾಂಸ ಕತ್ತರಿಸುತ್ತಿದ್ದಾಗ ಕಗ್ಗಲೀಪುರ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪ್ರತಾಪ್ (31) ಬಂಧಿತ ಆರೋಪಿ. ಬನ್ನೇರುಘಟ್ಟ ಅರಣ್ಯ ವಲಯದಲ್ಲಿ ಶೆಡ್​ ನಿರ್ಮಿಸಿಕೊಂಡು ಆರೋಪಿ ಪ್ರತಾಪ್​ ಸೇರಿದಂತೆ ನಾಲ್ವರು ಪ್ರಾಣಿಗಳ ಮಾಂಸ ಕತ್ತರಿಸುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಕಗ್ಗಲಿಪುರ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ. …

Read More »

ಆರೋಪಿಗಳನ್ನು ಕರೆತರುವಾಗ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್ಐ ಸಾವು

ಬೆಂಗಳೂರು: ಪ್ರಕರಣವೊಂದರ ಆರೋಪಿಗಳನ್ನು ಬಂಧಿಸಿ ಕರೆತರುವಾಗ‌ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್ಐ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತಲಘಟ್ಟಪುರ ಠಾಣೆಯ ಸಬ್ ಇನ್​ಸ್ಪೆಕ್ಟರ್ ಮೆಹಬೂಬ್ ಗುಡ್ಡಹಳ್ಳಿ (40) ಸಾವನ್ನಪ್ಪಿದ ಅಧಿಕಾರಿ. ಜೂನ್ 24ರಂದು ನಸುಕಿನ 2:30ರ ಸುಮಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂರ್ಯನಗರ ಬಳಿ ಸಂಭವಿಸಿದ್ದ ಅಪಘಾತದಲ್ಲಿ ಮೆಹಬೂಬ್ ಅವರು ತೀವ್ರವಾಗಿ ಗಾಯಗೊಂಡಿದ್ದರು. ಮಾದಕ ಪದಾರ್ಥಗಳ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದಾಗ ಮೆಹಬೂಬ್ ಅವರ ಕಾರಿಗೆ ಟ್ರಕ್ ಡಿಕ್ಕಿಯಾಗಿತ್ತು. ಅಪಘಾತದ ಬಳಿಕ ಟ್ರಕ್ …

Read More »

ಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿ

ಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ದುಷ್ಕರ್ಮಿಗಳು ಶ್ರೀರಾಮಸೇನೆಯ ಐವರು ಕಾರ್ಯಕರ್ತರನ್ನು ತೆಂಗಿನ ಮರಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಎರಡು ದಿನಗಳ ಹಿಂದೆ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದು ಗೋವುಗಳನ್ನು ರಕ್ಷಿಸಿದ್ದರು. ಹೀಗೆ ರಕ್ಷಿಸಿದ್ದ ಗೋವುಗಳನ್ನು ಇಂಗಳಿ ಬಳಿಯ ಗೋಶಾಲೆಗೆ ತಂದು …

Read More »

ಅಂಬೋಲಿ ಫಾಲ್ಸ್ ನಲ್ಲಿ ಕಾಲುಜಾರಿ 300 ಅಡಿ ಆಳಕ್ಕೆ ಬಿದ್ದು ಪ್ರವಾಸಿಗ ದುರ್ಮರಣ

ಅಂಬೋಲಿ ಫಾಲ್ಸ್ ನೋಡಲು ಬಂದಿದ್ದ ವ್ಯಕ್ತಿಯೋರ್ವ ಕಾಲುಜಾರಿ 300 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮಹಾರಾಷ್ಟ್ರ-ಬೆಳಗಾವಿ ಗಡಿಯಲ್ಲಿರುವ ಅಂಬೋಲಿ ಫಾಲ್ಸ್ ನ ಕವಲೇಸಾದ್ ಪಾಯಿಂಟ್ ನಲ್ಲಿ ಈ ಘಟನೆ ನಡೆದಿದೆ. ಕೊಲ್ಹಾಪುರ ಮೂಲದ ಬಾಲಸೋ ಸಂಗರ್ (45) ಮೃತ ದುರ್ದೈವಿ. ಸ್ನೇಹಿತರೊಂದಿಗೆ ಅಂಬೋಲಿ ಫಾಲ್ಸ್ ಗೆ ಬಂದಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ 300 ಅಡಿ ಆಳಕ್ಕೆ ಬಿದ್ದು ನಾಪತ್ತೆಯಾಗಿದ್ದರು. ಸ್ಥಳಕ್ಕಾಗಿಸಿದ ರಕ್ಷಣಾ ತಂಡ ಕಾರ್ಯಾಚರಣೆ ನಡೆಸಿದ್ದು, …

Read More »