ಬೆಳಗಾವಿ : ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಖಾನಾಪುರದ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಇದರ ನಡುವೆಯೂ ಒಬ್ಬ ಚಾಲಕ ಹರಿಯುವ ನೀರಿನಲ್ಲೇ ವಾಹನ ದಾಟಿಸಿ, ದುಸ್ಸಾಹಸ ಪ್ರದರ್ಶಿಸಿರುವ ವಿಡಿಯೋ ವೈರಲ್ ಆಗಿದೆ. ಬೆಳಗಾವಿ, ಖಾನಾಪುರ, ಹೆಮ್ಮಡಗಾ-ಅನಮೋಡ ಮಾರ್ಗವಾಗಿ ಗೋವಾ ಸಂಪರ್ಕಿಸುವ ರಸ್ತೆಯಲ್ಲಿರುವ ಹಾಲಾತ್ರಿ ಹಳ್ಳ ತುಂಬಿ ಹರಿಯುತ್ತಿದೆ. ಹಳ್ಳದ ಸೇತುವೆಯ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿದೆ. ಈ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. …
Read More »ಸಿದ್ದರಾಮಯ್ಯನವರು ಆಡಳಿತದಲ್ಲಿ ನಿಯಂತ್ರಣ ಕಳೆದುಕೊಂಡಿಲ್ಲ: ಡಿಸಿಎಂ
ಬೆಂಗಳೂರು: ”ಸಿಎಂ ಸಿದ್ದರಾಮಯ್ಯನವರು ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿಲ್ಲ. ನಾನು ಅದರ ಬಗ್ಗೆ ಏನೂ ಕೇಳಿಲ್ಲ. ನಮಗೆ ಹೈಕಮಾಂಡ್ ಇದ್ದು, ಎಲ್ಲವನ್ನೂ ನೋಡಿಕೊಳ್ಳುತ್ತದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಆಡಳಿತದಲ್ಲಿ ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, “ನಾನು ಎಲ್ಲರ ಜೊತೆ ಮಾತನಾಡುತ್ತೇನೆ. ಏನೂ ಸಮಸ್ಯೆ ಇಲ್ಲ. ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿಲ್ಲ. ಮಾಧ್ಯಮದವರೇ ಬ್ಲೋ ಅಪ್ ಮಾಡುತ್ತಿದ್ದಾರೆ” ಎಂದರು. …
Read More »ಸಮಾಧಾನ, ಅಸಮಾಧಾನ ಅಂತಾ ನಂದೇನೂ ಇಲ್ಲ:ಬಿ.ಆರ್.ಪಾಟೀಲ್
ಬೆಂಗಳೂರು : ಸಮಾಧಾನ, ಅಸಮಾಧಾನ ನಂದೇನೂ ಇಲ್ಲ. ನಡೆದಿದ್ದನ್ನು ಅವರಿಗೆ ಹೇಳಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಶಾಸಕ ಬಿ. ಆರ್. ಪಾಟೀಲ್ ತಿಳಿಸಿದ್ದಾರೆ. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಏನೆಲ್ಲ ಹೇಳಬೇಕಾಗಿತ್ತೋ ಹೇಳಿದ್ದೇನೆ. ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರಿಗೆ ಎಲ್ಲ ವಿವರವಾಗಿ ಹೇಳಿದ್ದೇನೆ ಎಂದಿದ್ದಾರೆ. ಅವರು ಸಮಾಧಾನದಿಂದ ನಮ್ಮ ವಿಚಾರಗಳನ್ನು ಕೇಳಿದ್ದಾರೆ. …
Read More »ವರ್ಷಾಂತ್ಯಕ್ಕೆ ಭಾರಿ ಬದಲಾವಣೆ ಆಗಲ್ಲ, ಕೆಲ ಸಚಿವರ ಬದಲಾವಣೆಯಾಗಲಿದೆ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ”ವರ್ಷಾಂತ್ಯಕ್ಕೆ ಭಾರೀ ಬದಲಾವಣೆ ಆಗುವುದಿಲ್ಲ, ಸಣ್ಣಪುಟ್ಟ ಬದಲಾವಣೆಗಳಾಗಲಿವೆ” ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ವರ್ಷಾಂತ್ಯಕ್ಕೆ ಕಾಂಗ್ರೆಸ್ನಲ್ಲಿ ಭಾರೀ ಬದಲಾವಣೆ ಆಗಲಿದೆ ಎಂಬ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸಣ್ಣಪುಟ್ಟ ಬದಲಾವಣೆಗಳಾಗಲಿದೆ. ಹಾಗಂತ ಭಾರಿ ಬದಲಾವಣೆ ಯಾವುದೂ ಆಗುವುದಿಲ್ಲ. ಸರ್ಕಾರದ ಮಟ್ಟದಲ್ಲಿ ಯಾವುದೇ ದೊಡ್ಡ ಬದಲಾವಣೆ ಆಗಲ್ಲ. ಕೆಲ ಸಚಿವರ ಬದಲಾವಣೆ ಆಗಲಿದೆ” ಎಂದರು. ಜಲಸಂಪನ್ಮೂಲ ಇಲಾಖೆ ಮೇಲೆ ಶಾಸಕ ರಾಜು ಕಾಗೆ ಆರೋಪ ವಿಚಾರವಾಗಿ …
Read More »ಪಂಢರಪುರದತ್ತ ಹೊರಟಿರುವ ಪಾದಯಾತ್ರಿಗಳು
ಬೆಳಗಾವಿ: ವಾರಕರಿಗಳ ನೇತೃತ್ವದಲ್ಲಿ ತಾಳ ಹಾಕುತ್ತಾ, ತಂಬೂರಿ-ಭಜನೆ ಬಾರಿಸುತ್ತಾ, ವೀಣೆ ನುಡಿಸುತ್ತಾ, ಅಭಂಗಗಳ ಮೂಲಕ ವಿಠ್ಠಲನ ನಾಮ ಸ್ಮರಿಸುತ್ತಾ, ತಲೆಯ ಮೇಲೆ ತುಳಸಿ ಹೊತ್ತು, ಕೈಯಲ್ಲಿ ವಿಠಲನ ಧ್ವಜ ಹಿಡಿದು ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಪಂಢರಪುರದತ್ತ ಭಕ್ತರ ಪಾದಯಾತ್ರೆ ಹೊರಟಿದೆ. ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೇ ಭಕ್ತವರ್ಗ ತಮ್ಮ ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ. ಹೌದು, ಈ ಎಲ್ಲ ದೃಶ್ಯ ಕಂಡು ಬಂದಿದ್ದು, ಬೆಳಗಾವಿ ರಾಣಿ ಚನ್ನಮ್ಮ ವೃತ್ತದಲ್ಲಿ. ಬೆಳಗಾವಿ ತಾಲೂಕಿನ ಸುಳಗಾ (ಯಳ್ಳೂರ) …
Read More »ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮಾತುಕತೆ ನಡೆಸಿದ ಶಾಸಕ ಬಿ.ಆರ್.ಪಾಟೀಲ್
ಬೆಂಗಳೂರು: ತಮ್ಮ ಸರ್ಕಾರದ ವಿರುದ್ಧವೇ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಅಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್, ಕಾಗವಾಡ ಕ್ಷೇತ್ರದ ರಾಜು ಕಾಗೆ ಅವರ ಜೊತೆ ಸಿಎಂ ಸಿದ್ದರಾಮಯ್ಯ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾಹಿತಿ ನೀಡಿದ ರಾಜು ಕಾಗೆ: ನವದೆಹಲಿಯಿಂದ ಇಂದು ಸಂಜೆ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಅವರು, ಶಾಸಕರನ್ನು ಕರೆಸಿ ಚರ್ಚೆ ನಡೆಸಿದ್ದಾರೆ. ಮೊದಲಿಗೆ ಸಿಎಂ ನಿವಾಸ ಕಾವೇರಿಗೆ ಆಗಮಿಸಿದ ಶಾಸಕ ರಾಜು ಕಾಗೆ ಅವರು ಸಿದ್ದರಾಮಯ್ಯ …
Read More »ಬೆಳಗಾವಿ, ಖಾನಾಪುರ, ಕಿತ್ತೂರು ಶಾಲಾ ಕಾಲೇಜುಗಳಿಗೆ ಗುರುವಾರವೂ ರಜೆ ಘೋಷಣೆ
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮಹಾಮಳೆ ಬುಧವಾರವೂ ಮುಂದುವರೆದಿರುವ ಹಿನ್ನೆಲೆಯಲ್ಲಿ ಜೂನ್ 26ರಂದು ಗುರುವಾರ ಬೆಳಗಾವಿ, ಖಾನಾಪುರ ಮತ್ತು ಕಿತ್ತೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೌದು, ಕಳೆದ ಮೂರು ದಿನಗಳಿಂದ ಬೆಳಗಾವಿಯಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ. ಹಾಗಾಗಿ, ಬುಧವಾರ ಎರಡು ತಾಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮಳೆ ಆರ್ಭಟ ಇನ್ನೂ ಜೋರಾಗಿದ್ದರಿಂದ ಜಿಲ್ಲೆಯ ಮೂರು ತಾಲೂಕುಗಳ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ …
Read More »ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಅಲದಾಳ ಗ್ರಾಮದ 2 ನೂತನ ಕೂಠಡಿ
ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರ ಲೋಕೋಪಯೋಗಿ ಇಲಾಖೆ ಅನುದಾನದಲ್ಲಿ ಸಚಿವರ ಸೂಚನೆ ಮೇರೆಗೆ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ* ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಅಲದಾಳ ಗ್ರಾಮದ 2 ನೂತನ ಕೂಠಡಿ ಒಟ್ಟು 36 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಸರ್ಕಾರಿ ಹಿರಿಯ …
Read More »ಮೂಡಲಗಿ | ಅವರಾದಿ ಸೇತುವೆ ಜಲಾವೃತ: ಸಂಪರ್ಕ ಸ್ಥಗಿತ
ಮೂಡಲಗಿ | ಅವರಾದಿ ಸೇತುವೆ ಜಲಾವೃತ: ಸಂಪರ್ಕ ಸ್ಥಗಿತ ಮೂಡಲಗಿ: ಪಶ್ಚಿಮಘಟ್ಟ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಬಿಡುವು ಇಲ್ಲದೆ ಮಳೆಯಾಗುತ್ತಿರುವುದರಿಂದ ಘಟಪ್ರಭಾ ನದಿಗೆ ಒಳಹರಿವು ಹೆಚ್ಚಾಗಿದೆ. ತಾಲ್ಲೂಕಿನ ಅವರಾದಿ ಬಳಿಯ ಘಟಪ್ರಭಾ ನದಿಗೆ ಇರುವ ಬ್ರಿಡ್ಜ್ ಕಂ ಬ್ಯಾರೆಜ್ ಬುಧವಾರ ಮಧ್ಯಾಹ್ನ ಜಲಾವೃತಗೊಂಡು ಹಲವು ಗ್ರಾಮಗಳ ಸಂಪರ್ಕ ಸ್ಥಗಿತಗೊಂಡಿದೆ. ನದಿಯ ನೀರಿನ ಮಟ್ಟವು ಇನ್ನು ಏರಿಕೆಯಾಗುವ ಸಂಭವವಿದ್ದು ಮೂಡಲಗಿ ಸುಣಧೋಳಿ ಸಂಪರ್ಕ ಇರುವ ಸುಣಧೋಳಿ ಸೇತುವೆ, ವಡೇರಹಟ್ಟಿ ಸೇತುವೆ, ಕಮಲದಿನ್ನಿ …
Read More »ಮಹಿಳೆಯನ್ನು ಪುಸಲಾಯಿಸಿ ಬಂಗಾರದ ಸರ ಕದ್ದ ಹಾಗೂ ಬಸ್ ನಲ್ಲಿದ್ದ ಬ್ಯಾಗ ಎಗರಿಸಿದ್ದ ಕಳ್ಳರ ಬಂಧನ
ಮಹಿಳೆಯನ್ನು ಪುಸಲಾಯಿಸಿ ಬಂಗಾರದ ಸರ ಕದ್ದ ಹಾಗೂ ಬಸ್ ನಲ್ಲಿದ್ದ ಬ್ಯಾಗ ಎಗರಿಸಿದ್ದ ಕಳ್ಳರ ಬಂಧನ ಮಹಿಳೆಯನ್ನು ಪುಸಲಾಯಿಸಿ ಬಂಗಾರದ ಸರ ಕದ್ದಿದ್ದ ಹಾಗೂ ಬಸ್ ನಲ್ಲಿ ಪ್ರಯಾಣಿಸುವಾಗ ಬ್ಯಾಗ್ ಎಗರಿಸಿದ್ದ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಕಳ್ಳರನ್ನು ಹಾರೂಗೇರಿ ಪೊಲೀಸರು ಬಂಧಿಸಿ ಬಂಗಾರ ವಶಪಡಿಸಿಕೊಂಡಿದ್ದಾರೆ ಬೆಳಗಾವಿ ಶಹಪುರ್ ನಿವಾಸಿ ಪದ್ಮಾವತಿ ರಾಜೇಂದ್ರ ಕುಡಚಿ ಹಾರೋಗೇರಿ ಕ್ರಾಸ್ ನಿಂದ ಮಿರಜಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಅವರ ಬ್ಯಾಗಿನಲ್ಲಿಟ್ಟಿದ್ದ 3.60.000 ಬೆಲೆಬಾಳುವ …
Read More »
Laxmi News 24×7