Breaking News
Home / ಜಿಲ್ಲೆ (page 16)

ಜಿಲ್ಲೆ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಶ್ರೀ ಬಂಡೇಮ್ಮ ದೇವಿ ದೇವಸ್ಥಾನದ ಆವರಣದಲ್ಲಿ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ಶ್ರೀ ಬಂಡೇಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

ಬಾಲಕ ಸಾವು ಪ್ರಕರಣ: ಶಾಲೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೋಸಂಬೆ ಭೇಟಿ, ಪರಿಶೀಲನೆ

ವಿಜಯಪುರ : ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಬುಧವಾರ ಶಾಲಾ ಕಟ್ಟಡದಲ್ಲಿ ನೀರಿನ ವಾಟರ್​ ಫಿಲ್ಟರ್​ ಟ್ಯಾಂಕ್‌ ಮಗುವಿನ ಮೇಲೆ ಬಿದ್ದು ಬಾಲಕ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಗುರುವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಶಾಲೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.   ಅವರೊಂದಿಗೆ ಇನ್ನಿತರ ಅಧಿಕಾರಿಗಳು ಜೊತೆಗಿದ್ದರು. ಬಳಿಕ ಮೃತ ಬಾಲಕನ ಮನೆಗೆ ಭೇಟಿ ನೀಡಿ ಆ ಬಾಲಕನ ತಾಯಿಗೆ ಸಾಂತ್ವನ ಹೇಳಿದರು. …

Read More »

ಸಿದ್ಧಿ ಬುಡಕಟ್ಟು ಸಮುದಾಯದ ಪೌಷ್ಟಿಕಾಹಾರ ಸ್ಥಗಿತ: ಸರ್ಕಾರದ ವಿರುದ್ಧ ಯತ್ನಾಳ್ ಆಕ್ರೋಶ

ಬೆಂಗಳೂರು, ನವೆಂಬರ್ 22: ಉತ್ತರಕನ್ನಡ ಜಿಲ್ಲೆಯ ಸಿದ್ಧಿ ಬುಡಕಟ್ಟು ಸಮುದಾಯಕ್ಕೆ (Siddi community) ವಿಶೇಷ ಗಿರಿಜನ ಯೋಜನೆಯಡಿ ನೀಡಲಾಗುತ್ತಿದ್ದ ಪೌಷ್ಠಿಕಾಹಾರವನ್ನು ಅನುದಾನ ಕೊರತೆಯ ಕಾರಣ ಸ್ಥಗಿತಗೊಳಿಸಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ಧಿ ಬುಡಕಟ್ಟು ಸಮುದಾಯದ ಪೌಷ್ಟಿಕಾಹಾರ ಸ್ಥಗಿತಗೊಂಡ ವಿಷಯಕ್ಕೆ ಸಂಬಂಧಿಸಿದ ವರದಿಯೊಂದನ್ನು ಲಗತ್ತಿಸಿ ಸಾಮಾಜಿಕ ಮಾಧ್ಯಮ ಎಕ್ಸ್​​ ಪೋಸ್ಟ್​​ನಲ್ಲಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಸಿದ್ಧಿ ಬುಡಕಟ್ಟು ಸಮುದಾಯಕ್ಕೆ …

Read More »

ಸುವರ್ಣ ವಿಧಾನಸೌಧದ ಸುತ್ತ ಹುಲುಸಾಗಿ ಬೆಳೆದ ಮೇವು ಕಟಾವಿಗೆ ಅನುಮತಿ ನೀಡುವಂತೆ ರೈತರ ಮನವಿ

ಬೆಳಗಾವಿ : ಈ ಬಾರಿ ರಾಜ್ಯದಲ್ಲಿಕಂಡು ಕೇಳರಿಯದ ಬರಗಾಲದಿಂದ ಅಕ್ಷರಶಃ ರೈತರು ಕಂಗಾಲಾಗಿದ್ದಾರೆ. ಮುಂಗಾರು ಮಳೆ ಕೈ ಕೊಟ್ಟಿದ್ದರಿಂದ ಮುಂಗಾರು ಬೆಳೆ ಹಾನಿ ಅನುಭವಿಸಿದ್ದ ರೈತರು, ಇದೀಗ ಹಿಂಗಾರು ಬೆಳೆಗಳ ಹಾನಿ ಭೀತಿ ಎದುರಿಸುತ್ತಿದ್ದಾರೆ. ಅಲ್ಲದೇ ಜಾನುವಾರುಗಳ ಮೇವಿಗೂ ತಾತ್ವಾರ ಸ್ಥಿತಿ ನಿರ್ಮಾಣ ಆಗುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಜಿಲ್ಲಾಡಳಿತವು, ಡಿಸೆಂಬರ್​ 4ರಿಂದ ಚಳಿಗಾಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆ ಸ್ವಚ್ಛತೆ ಹೆಸರಿನಲ್ಲಿ ಸುವರ್ಣ ವಿಧಾನಸೌಧ ಸುತ್ತಲೂ 10 ಏಕರೆಗೂ ಹೆಚ್ಚು ಪ್ರದೇಶದಲ್ಲಿ …

Read More »

ರಾಯಬಾಗ ಶಾಲೆಯ ಕೊಳವೆಬಾವಿಯಲ್ಲಿ ಕಲುಷಿತ ನೀರು: ಸರ್ಕಾರಕ್ಕೆ ಹೈಕೋರ್ಟ್​​ ನೋಟಿಸ್

ಬೆಂಗಳೂರು: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹುಬ್ಬಾರವಾಡಿ ಗ್ರಾಮದಲ್ಲಿ ಖಾಸಗಿ ಕಂಪೆನಿಯೊಂದರ ರಾಸಾಯನಿಕ ಗೊಬ್ಬರ ಸಂಗ್ರಹಣಗಾರದಿಂದಾಗಿ ಪಕ್ಕದಲ್ಲಿರುವ ಪ್ರಾಥಮಿಕ ಮತ್ತು ಅಂಗನವಾಡಿ ಕೇಂದ್ರದ ಕೊಳವೆಬಾವಿಯ ನೀರು ಕಲುಷಿತಗೊಳ್ಳುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸ್ಥಳೀಯ ನಿವಾಸಿ ಪಾಂಡುರಂಗ ಮಹದೇವ ಕಾಂಬ್ಳೆ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

  ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ತೋಕರಟ್ಟಿ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …

Read More »

ಕ್ಯಾಪ್ಸಿಕಂ ಬೆಳೆ ಬೆಳೆದು ಲಕ್ಷಾಂತರ ರೂ. ಆದಾಯ ಗಳಿಸಿದ್ದಾರೆ. ಸಂಬರಗಿ ಗ್ರಾಮದ ಅನ್ನದಾತ ಪ್ರೇರಣೆಯಾಗಿದ್ದಾರೆ.

ಚಿಕ್ಕೋಡಿ : ಭೀಕರ ಬರಗಾಲದ ನಡುವೆ ಬೆಳೆಗಳಿಗೆ ಟ್ಯಾಂಕರ್​ ಮುಖಾಂತರ ನೀರು ಹಾಯಿಸಿ ಲಕ್ಷಾಂತರ ರೂಪಾಯಿ ಆದಾಯವನ್ನು ಗಳಿಸಿ ಇತರ ರೈತರಿಗೆ ಸಂಬರಗಿ ಗ್ರಾಮದ ಅನ್ನದಾತ ಪ್ರೇರಣೆಯಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಮಾಣಿಕ ಅವಳೆಕರ ಎಂಬ ರೈತ ನೀರಿನ ಅಭಾವದ ನಡುವೆ ಕುಗ್ಗದೇ ಟ್ಯಾಂಕರ್ ಮೂಲಕ ಬೆಳೆಗೆ ನೀರು ಪೂರೈಸಿ, ಐದು ಎಕರೆ ಪ್ರದೇಶದಲ್ಲಿ ತಂತ್ರಜ್ಞಾನ ಬಳಸಿ, ಕ್ಯಾಪ್ಸಿಕಂ ಬೆಳೆದು ಲಕ್ಷ ಲಕ್ಷ ಆದಾಯ ಗಳಿಸಿದ್ದಾರೆ. ಈ …

Read More »

ಇಂದು ಕಿತ್ತೂರು ರಾಣಿ ಚೆನ್ನಮ್ಮನ ಜನ್ಮದಿನ; ಸರ್ಕಾರದಿಂದ ಜಯಂತಿ ಆಚರಿಸಲು ಆಗ್ರಹ

ಬೆಳಗಾವಿ : ಸೂರ್ಯ ಮುಳುಗದ ಸಾಮ್ರಾಜ್ಯವೆಂದು ಸೊಕ್ಕಿನಿಂದ ಮೆರೆಯುತ್ತಿದ್ದ ಬ್ರಿಟಿಷರಿಗೆ ಮೊಟ್ಟ ಮೊದಲ ಸೋಲಿನ‌ ರುಚಿ ತೋರಿಸಿದ ವೀರರಾಣಿ ಕಿತ್ತೂರು ಚೆನ್ನಮ್ಮ ಅವರ ಜಯಂತಿ‌ ಆಚರಣೆಗೆ ಸರ್ಕಾರಗಳು ನಿರ್ಲಕ್ಷ್ಯ ವಹಿಸಿರುವುದು ಮತ್ತು ಚೆನ್ನಮ್ಮನ ಜ‌ನ್ಮದಿ‌ನಾಂಕ ಗೊಂದಲಕ್ಕೆ ಇತಿಶ್ರೀ ಹಾಡದಿರುವುದು ಈ ಭಾಗದ ಸಾಹಿತಿಗಳು, ಸ್ವಾಮೀಜಿಗಳು ಹಾಗೂ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ.  1778 ನವೆಂಬರ್​ 14 ಕನ್ನಡ ನಾಡಿನಲ್ಲಿ ಕೆಚ್ಚೆದೆಯ ಕಿತ್ತೂರು ರಾಣಿ ಚೆನ್ನಮ್ಮ ಜನಿಸಿದ ದಿನ. ಚೆನ್ನಮ್ಮನ ಜನ್ಮ ದಿನಾಂಕದ …

Read More »

ಯುವಕನ ಬರ್ಬರ ಕೊಲೆ ಪ್ರಕರಣ ನಡೆದ ಕೆಲವೇ ಹೊತ್ತಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳಗಾವಿ: ಭಾನುವಾರ ರಾತ್ರಿ ಗೋಕಾಕ್ ಪಟ್ಟಣದಲ್ಲಿ ನಡೆದ ಯುವಕನ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಸೇರಿದಂತೆ ಒಟ್ಟು ಏಳು ಜನ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಗೋಕಾಕ್ ಪೊಲೀಸರು ಯಶಸ್ವಿಯಾಗಿದ್ದಾರೆ.   ಗೋಕಾಕ್ ಪಟ್ಟಣದ ಆದಿಜಾಂಬವ ನಗರದ ಶಾನೂರ (ಸಂತೋಷ) ಪೂಜೇರಿ 26 ವರ್ಷ ಕೊಲೆಯಾದ ಯುವಕ. ಮೃತ ಶಾನೂರ ಸ್ಥಳೀಯ ಪೆಟ್ರೋಲ್ ಪಂಪ್​ನಲ್ಲಿ ಕೆಲಸ ಮಾಡುತ್ತಿದ್ದ. ಭಾನುವಾರ ಪೆಟ್ರೋಲ್ ಪಂಪ್​ನಲ್ಲಿ ಪೂಜೆ ಮುಗಿಸಿಕೊಂಡು ಮರಳಿ ಮನೆಗೆ ಹೋಗುವ …

Read More »

ಹರ್ಷಾ ಹೊಟೇಲ್ ಮಾಲೀಕ ಸುರೇಶ ನಾಯಿರಿ ನಿಧನ

ಹರ್ಷಾ ಹೊಟೇಲ್ ಮಾಲೀಕ ಸುರೇಶ ನಾಯಿರಿ ನಿಧನ ಬೆಳಗಾವಿ: ನಗರದ ಪ್ರತಿಷ್ಠಿತ ಹರ್ಷಾ ಹೊಟೇಲ್, ಶಬರಿ ಹೊಟೇಲ್‌ ಮಾಲೀಕರಾದ, ರಾಮತೀರ್ಥ‌ನಗರ ನಿವಾಸಿ ಮೂಲತಃ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಸುರೇಶ ಗಣಪಯ್ಯ ನಾಯಿರಿ(52) ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಸುರೇಶ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ‌ ಫಲಿಸದೇ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ. ಅಂತ್ಯಕ್ರಿಯೆ ಉಡುಪಿ ಜಿಲ್ಲೆಯ …

Read More »