ಬೆಳಗಾವಿ: ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಮತ್ತು ಜಾತಿ ಭೇದ ಭಾವ ತೊಡೆದುಹಾಕುವ ನಿಟ್ಟಿನಲ್ಲಿ ಸರ್ಕಾರ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹಿಸುತ್ತಿದೆ. ಈ ರೀತಿ ಬೇರೆ ಜಾತಿಯ ವರ-ವಧು ಮದುವೆ ಆದಲ್ಲಿ ಅವರಿಗೆ ಸರ್ಕಾರ ಸಹಾಯಧನ ನೀಡಿ ಆರ್ಥಿಕ ಶಕ್ತಿ ತುಂಬುತ್ತಿದೆ. ಅಂತರ್ಜಾತಿ ವಿವಾಹ ಎಂದರೆ ವಧು ಮತ್ತು ವರ ಬೇರೆ ಬೇರೆ ಜಾತಿಗೆ ಸೇರಿದವರಾಗಿರಬೇಕು. ಹೀಗೆ ಮದುವೆ ಆಗಿರುವ ಆ ದಂಪತಿಗೆ ಸಹಾಯಧನವನ್ನು 1989ರಿಂದ ಕರ್ನಾಟಕ ರಾಜ್ಯದಲ್ಲಿ ನೀಡಲಾಗುತ್ತಿದೆ. ಆರಂಭದಲ್ಲಿ 12 ಸಾವಿರ …
Read More »ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಯಾರಿಗೆ ಎಷ್ಟು ಹಣ ಸಿಗುತ್ತೆ?
ಬೆಂಗಳೂರು, (ಜೂನ್ 18): 2025-26ನೇ ಸಾಲಿನಲ್ಲಿ ಕರ್ನಾಟಕದ (Karnataka)ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿಗದಿತ ಸಮಯಕ್ಕಿಂತ ಮೊದಲೇ ಮುಂಗಾರು ಮಳೆ (Monsoon Rains) ಪ್ರಾರಂಭವಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥವಾಗಿದೆ. ಹೀಗಾಗಿ ರಾಜ್ಯ ಸರ್ಕಾರ, ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಹಾಗೂ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಬಿಡುಗಡೆ ಮಾಡಿದೆ. ನಿಯಾಮಾನುಸಾರ ಅರ್ಹತೆಯಂತೆ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಅವರ ಪಿ.ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಪರಿಹಾರ ಪಾವತಿಸಲು ಆದೇಶ ಹೊರಡಿಸಿದೆ. 1-4-2025ರಿಂದ …
Read More »ಬೆಳಗಾವಿಯ ಪ್ರವೇಶ ದ್ವಾರದಂತಿರುವ ಗಾಂಧಿನಗರ ಅಸ್ವಚ್ಛತೆಯಿಂದಾಗಿ ಈಗ ‘ಗಂಧಗಿ’ ನಗರದಂತಾಗಿದೆ….
ಬೆಳಗಾವಿಯ ಪ್ರವೇಶ ದ್ವಾರದಂತಿರುವ ಗಾಂಧಿನಗರ ಅಸ್ವಚ್ಛತೆಯಿಂದಾಗಿ ಈಗ ‘ಗಂಧಗಿ’ ನಗರದಂತಾಗಿದೆ…. ಚರಂಡಿ ದುರಸ್ತಿ ಸೇರಿದಂತೆ ಹಲವು ಸಮಸ್ಯೆಗಳನ್ನು ಪರಿಹರಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿರುವ ಹಳೆ ಗಾಂಧಿನಗರ, ದೀಪಕ ಗಲ್ಲಿ ಸುಭಾಷ ಗಲ್ಲಿ ನಿವಾಸಿಗಳು ಸ್ಮಾರ್ಟ್ ಸಿಟಿ ಎಂದು ಹೇಳುತ್ತಿರುವ ಬೆಳಗಾವಿಯ ವಿವಿಧ ಬಡಾವಣೆಗಳು ಸಮಸ್ಯೆಯ ಆಗರಗಳಾಗಿವೆ ಹಳೆ ಗಾಂಧಿನಗರ, ದೀಪಕ್ ಗಲ್ಲಿ, ಸುಭಾಷ್ ಗಲ್ಲಿಯ ಚರಂಡಿ, ರಸ್ತೆಗಳು ದುರಸ್ತಿಯಾಗದೆ ಕಸದ ರಾಶಿಯಿಂದ ಬೇಸತ್ತ ನಾಗರಿಕರು ಪಾಲಿಕೆಯ ನಿರ್ಲಕ್ಷಕ್ಕೆ ಹಿಡಿ ಶಾಪ …
Read More »ಬಂಧನ ಭೀತಿಯಿಂದ ಪಾರಾಗಲು ನಿರೀಕ್ಷಣಾ ಜಾಮೀನಿಗೆ ಮೊರೆ ಹೋದ ಲೋಕಾಯುಕ್ತ ಐಪಿಎಸ್
ಬೆಂಗಳೂರು: ಭ್ರಷ್ಟರ ವಿರುದ್ಧ ಸಮರ ಸಾರಬೇಕಿದ್ದ ಲೋಕಾಯುಕ್ತ ಅಧಿಕಾರಿಗಳೇ ಭ್ರಷ್ಟರಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆಯ ಅಧಿಕಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಹೆಡ್ ಕಾನ್ ಸ್ಟೇಬಲ್ ನಿಂಗಪ್ಪ ಜೊತೆ ಸಂಪರ್ಕದಲ್ಲಿದ್ದ ಲೋಕಾಯುಕ್ತ ಎಸ್ಪಿ-1 ಆಗಿದ್ದ ಶ್ರೀನಾಥ್ ಮಹದೇವನ್ ಜೋಷಿ ಅವರು ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಲೋಕಾಯುಕ್ತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಲೋಕಾಯುಕ್ತದಲ್ಲಿ ಲಂಚಾವತಾರ ಆರೋಪ ಭುಗಿಲೆದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ …
Read More »18 ವರ್ಷಗಳಿಂದ ಬಡ ಮತ್ತು ಮಧ್ಯಮ ವರ್ಗಕ್ಕೆ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಅಭಿವೃದ್ಧಿಪಡಿಸುವಲ್ಲಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವಿಫಲ
ಬೆಳಗಾವಿ: ಬೆಳಗಾವಿ, ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿರುವ ನಗರಗಳ ಸಾಲಿನಲ್ಲಿ ಅಗ್ರಸಾಲಿನಲ್ಲಿದೆ. ಕುಂದಾನಗರಿಯಲ್ಲಿ ಬದುಕು ಕಟ್ಟಿಕೊಳ್ಳುವವರ ಸಂಖ್ಯೆಯೂ ವರ್ಷದಿಂದ ವರ್ಷಕ್ಕೆ ಅಧಿಕವಾಗಿದೆ. ಆದರೆ, ಕಳೆದ 18 ವರ್ಷಗಳಿಂದ ಬಡ ಮತ್ತು ಮಧ್ಯಮ ವರ್ಗಕ್ಕೆ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಅಭಿವೃದ್ಧಿಪಡಿಸುವಲ್ಲಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ವಿಫಲವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಹೌದು, ಬೆಳಗಾವಿ ಮಹಾನಗರದಲ್ಲಿ ಸ್ವಂತ ಸೂರಿನ ಕನಸು ಹೊತ್ತ ಮಧ್ಯಮ ವರ್ಗದವರ ಕನಸು ಕನಸಾಗಿಯೇ ಉಳಿದಿದೆ. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ …
Read More »ಐಶ್ವರ್ಯ ಗೌಡ ವಿರುದ್ಧ ವಂಚನೆ ಪ್ರಕರಣ: ಸಿಐಡಿ ತನಿಖೆಗೆ ಆದೇಶಿಸಿದ ಪೊಲೀಸ್ ಇಲಾಖೆ
ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಸೋಗಿನಲ್ಲಿ ಚಿನ್ನದ ವ್ಯಾಪಾರಿಗೆ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಕುರಿತು ಐಶ್ವರ್ಯ ಗೌಡ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣಗಳ ಸಮಗ್ರ ತನಿಖೆ ನಡೆಸುವಂತೆ ಸಿಐಡಿಗೆ ಪೊಲೀಸ್ ಇಲಾಖೆಯು ಆದೇಶಿಸಿದೆ. ಚಂದ್ರಾಲೇಔಟ್, ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳು ಹಾಗೂ ಮಂಡ್ಯದಲ್ಲಿ ದಾಖಲಾಗಿದ್ದ ಎರಡು ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳನ್ನು ತನಿಖೆ ನಡೆಸುವಂತೆ ಇಲಾಖೆಯು ಸಿಐಡಿಗೆ ಆದೇಶಿಸಿದೆ. ಡಿ.ಕೆ. ಸುರೇಶ್ …
Read More »ಬಸ್ಸಿನ ಕಿಟಕಿ ಸೀಟಿಗಾಗಿ ಕಿತ್ತಾಟ…
ಬೆಳಗಾವಿ: ಬಸ್ಸಿನ ಕಿಟಕಿ ಸೀಟಿಗಾಗಿ ಕಿತ್ತಾಟ… ಕಾಲೇಜು ವಿದ್ಯಾರ್ಥಿಗೆ ಹರಿತವಾದ ಆಯುಧದಿಂದ ಇರಿದು ಪರಾರಿಯಾದ ಅಪರಿಚಿತ ಯುವಕರ ಗುಂಪು ಬಸ್’ನ ಕಿಟಕಿ ಸೀಟಗಾಗಿ ಕಿತ್ತಾಡಿಕೊಂಡು ಅಪರಿಚಿತ ಯುವಕರು ಕಾಲೇಜು ವಿದ್ಯಾರ್ಥಿಗೆ ಹರಿತವಾದ ಆಯುಧದಿಂದ ಇರಿದ ಘಟನೆ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್’ನ ಕಿಟಕಿ ಸೀಟಗಾಗಿ ಕಾಲೇಜು ವಿದ್ಯಾರ್ಥಿಯೊಂದಿಗೆ ಅಪರಿಚಿತ ಯುವಕರು ಜಗಳಕ್ಕಿಳಿದು, ಜಗಳ ವಿಕೋಪಕ್ಕೆ ಹೋಗಿ ವಿದ್ಯಾರ್ಥಿಯ ಎದೆಗೆ ಹರಿತವಾದ ಆಯುಧದಿಂದ …
Read More »ಅಕ್ರಮವಾಗಿ ಕಳ್ಳಭಟ್ಟಿ ಮಾರಾಟ ಅಡ್ಡೆ ಮೇಲೆ ಗೋಳಗುಮ್ಮಟ ಪೊಲೀಸರ ದಾಳಿ
ಅಕ್ರಮವಾಗಿ ಕಳ್ಳಭಟ್ಟಿ ಮಾರಾಟ ಅಡ್ಡೆ ಮೇಲೆ ಗೋಳಗುಮ್ಮಟ ಪೊಲೀಸರ ದಾಳಿ ವಿಜಯಪುರ ನಗರದ ಗೋಳಗುಮ್ಮಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಮದ್ಯ ಮಾರಾಟ ಮಾಡುವಾಗ ಪೊಲೀಸರು ದಾಳಿಗೈದು ಕಳ್ಳಬಟ್ಟಿ ಮದ್ಯ ಜಪ್ತಿಗೈದಿದ್ದಾರೆ . ವಿಜಯಪುರ ನಗರದ ಗೋಳಗುಮ್ಮಟ್ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ ಗೋಳಗುಮ್ಮ ಟ್ ಹಾಗೂ ಜಲನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮ ಮದ್ಯ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು …
Read More »ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿದು ಕ್ರಿಪ್ಟೋದಲ್ಲಿ ಹೂಡಿಕೆ ಮಾಡುತ್ತಿದ್ದ ಮಾಜಿ ಕಾನ್‌ಸ್ಟೇಬಲ್ ನಿಂಗಪ್ಪ
ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳಿಂದ ದಾಳಿಯ ಭೀತಿ ಹುಟ್ಟಿಸಿ ಸರ್ಕಾರಿ ಅಧಿಕಾರಿಗಳಿಂದ ತಿಂಗಳಿಗೆ ಲಕ್ಷಾಂತರ ರೂಪಾಯಿ ಹಣ ಪಡೆಯುತ್ತಿದ್ದುದಾಗಿ ಮಾಜಿ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ನಿಂಗಪ್ಪ ತನಿಖಾಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾನೆ. ಚಿತ್ರದುರ್ಗದ ನಿಂಗಪ್ಪ ಅಲಿಯಾಸ್ ಸಾವಂತ್ ವಿರುದ್ಧ ಲೋಕಾಯುಕ್ತ ಹಿರಿಯ ಅಧಿಕಾರಿಗಳ ಹೆಸರು ದುರ್ಬಳಕೆ ಮಾಡಿಕೊಂಡು ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದಾಗ, ತಾನು ಕಳೆದ ಆರು …
Read More »ದಲಿತ ಸಿಎಂ ವಿಚಾರ ಸದ್ಯಕ್ಕಿಲ್ಲ ಹೊಸದಾಗಿ ಬಂದ ಶಾಸಕರಿಗೆ ಸಚಿವ ಸ್ಥಾನ ನೀಡಬಾರದು ಎಂಬ ನಿರ್ಧಾರ ಆಗಿದೆ.
ಹೊಸಪೇಟೆ (ಜೂ.18): ಹೊಸದಾಗಿ ಬಂದ ಶಾಸಕರಿಗೆ ಸಚಿವ ಸ್ಥಾನ ನೀಡಬಾರದು ಎಂಬ ನಿರ್ಧಾರ ಆಗಿದೆ. ಆದರೂ, ಈ ಬಗ್ಗೆ ಮುಖ್ಯಮಂತ್ರಿ, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಹೊಸದಾಗಿ ಬಂದ ಶಾಸಕರಿಗೆ ಸಚಿವ ಸ್ಥಾನ ನೀಡಬಾರದು ಎಂಬ ನಿರ್ಧಾರ ಆಗಿದೆ. ಆದರೂ, ಈ ಬಗ್ಗೆ ಸಿಎಂ, ಹೈಕಮಾಂಡ್ ನವರು ನಿರ್ಣಯ …
Read More »
Laxmi News 24×7