Breaking News
Home / ಜಿಲ್ಲೆ (page 17)

ಜಿಲ್ಲೆ

ಚಿಕ್ಕೋಡಿ ತಾಲೂಕಿನ ಚಿಂಚಣಿಯ ಸಿದ್ಧಸಂಸ್ಥಾನ ಮಠದ ಅಲ್ಲಮಪ್ರಭು ಸ್ವಾಮೀಜಿ ಅನಾರೋಗ್ಯದಿಂದ ಲಿಂಗೈಕ್ಯ

ಬೆಳಗಾವಿ: ಗಡಿ ಭಾಗದಲ್ಲಿ ಕನ್ನಡದ ಮಠ ಎಂದೇ ಪ್ರಖ್ಯಾತಿ ಪಡೆದಿರುವ ಚಿಕ್ಕೋಡಿ ತಾಲೂಕಿನ ಚಿಂಚಣಿಯ ಸಿದ್ಧಸಂಸ್ಥಾನ ಮಠದ ಪೀಠಾಧಿಪತಿ ಅಲ್ಲಮಪ್ರಭು ಸ್ವಾಮೀಜಿ ಇಂದು ಬೆಳಗಿನ ಜಾವ ಲಿಂಗೈಕ್ಯರಾಗಿದ್ದಾರೆ. ಹಲವು ದಶಕಗಳಿಂದ ಗಡಿಯಲ್ಲಿ ಕನ್ನಡ ಕಟ್ಟುವ ಕೈಂಕರ್ಯ ತೊಟ್ಟಿದ್ದ ಚಿಂಚಣಿಯ ಅಲ್ಲಮಪ್ರಭು ಸ್ವಾಮೀಜಿ ಕನ್ನಡಪರ ಕಾರ್ಯಕ್ರಮಗಳ ಮೂಲಕ ನಾಡಿನ ಮನೆ ಮಾತಾಗಿದ್ದರು. ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಸ್ವಾಮೀಜಿ ಹಲವು ದಿನಗಳಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ …

Read More »

ಕುಂದಾನಗರಿಯಲ್ಲಿ ಬೆಳಕಿನ ಹಬ್ಬದ ಸಂಭ್ರಮ ಹಸಿರು ಪಟಾಕಿ ಬಳಸುವಂತೆ ಡಿಸಿ ಮನವಿ

ಬೆಳಗಾವಿ: ಬೆಳಕಿನ ಹಬ್ಬ ದೀಪಾವಳಿಯನ್ನು ರಾಜ್ಯಾಧ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ದೀಪಾವಳಿ ವಿಶೇಷ ಎಂದರೆ ದೀಪ ಬೆಳಗಿಸುವುದು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಪಡುವ ಹಬ್ಬ. ಆದರೆ ಈ ಸಡಗರ ಮಧ್ಯೆ ಪಟಾಕಿ ಸಿಡಿಸಲು ಹೋಗಿ ಅದೆಷ್ಟೋ ಅವಘಡಗಳು ಸಂಭವಿಸಿ ಯುವಕರು, ಮಕ್ಕಳು ಕಣ್ಣು ಕಳೆದುಕೊಂಡಿದ್ದಾರೆ. ಇಂತಹ ಘಟನೆಗಳು ಪ್ರತಿವರ್ಷವೂ ನಡೆಯುತ್ತಲೇ ಇವೆ. ಜತೆಗೆ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ಮನಗಂಡ ಬೆಳಗಾವಿ ಜಿಲ್ಲಾಡಳಿತ ಪರಿಸರಕ್ಕೆ ಮಾರಕವಾಗಿರುವ ಪಟಾಕಿಗಳನ್ನು ಬ್ಯಾನ್ ಮಾಡಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

    ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಬುದ್ನಿ ಗ್ರಾಮದಲ್ಲಿ ಶ್ರೀ ಹನುಮಾನ್ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ …

Read More »

ಚಿಕ್ಕೋಡಿ ತಾಲೂಕಿನಲ್ಲಿ ಸರಣಿ ಎಟಿಎಂ ಕಳ್ಳತನದಿಂದ ಸಾರ್ವಜನಿಕರ ಆತಂಕ

ಚಿಕ್ಕೋಡಿ (ಬೆಳಗಾವಿ) : ತಡರಾತ್ರಿ ಚಿಕ್ಕೋಡಿ ತಾಲೂಕಿನ ಪ್ರತ್ಯೇಕ ಕಡೆ ಎರಡು ಎಟಿಎಂಗಳಲ್ಲಿ ಕಳ್ಳರು ಲಕ್ಷಾಂತರ ರೂಪಾಯಿ ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಅಂಬೇಡ್ಕರ್ ನಗರದಲ್ಲಿರುವ ಎಸ್‌ಬಿಐ ಎಟಿಎಂ ಬುಧವಾರ ತಡರಾತ್ರಿ ಕಳ್ಳರು ಗ್ಯಾಸ್ ಕಟರ್ ಬಳಸಿಕೊಂಡು ಸರಿಸುಮಾರು 10 ಲಕ್ಷ ರೂಪಾಯಿಗೂ ಹೆಚ್ಚು ಹಣವನ್ನು ದರೋಡೆ ಮಾಡಿದ್ದಾರೆ.   ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ. ಎಟಿಎಂನಲ್ಲಿ ನಿಖರವಾಗಿ ಎಷ್ಟು ಹಣ …

Read More »

ದೀಪಾವಳಿ ಹಬ್ಬ; ಸಂತೋಷ ಜಾರಕಿಹೊಳಿ ಅವರಿಂದ ನೌಕರರಿಗೆ ಸಿಹಿ ಹಂಚಿಕೆ

ದೀಪಾವಳಿ ಹಬ್ಬ; ಸಂತೋಷ ಜಾರಕಿಹೊಳಿ ಅವರಿಂದ ನೌಕರರಿಗೆ ಸಿಹಿ ಹಂಚಿಕೆ ಗೋಕಾಕ : ದೀಪಾವಳಿ ಹಬ್ಬದ ನಿಮಿತ್ತ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರಿಂದ   ನಗರ ಸಭೆ ಪೌರ ಕಾರ್ಮಿಕರಿಗೆ, ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳಿಗೆ ಹಾಗೂ ಅನೇಕ ನೌಕರರಿಗೆ ಸಿಹಿ ವಿತರಿಸಿದರು.

Read More »

ಗೋಕಾಕ   ತಾಲೂಕ ಪಂಚಾಯತಿನಲ್ಲಿ ಲೋಕಾ ಯುಕ್ತ ಅಧಿ ಕಾರಿ ಗಳಿಂದ ಸಭೆ

ಗೋಕಾಕ್ ನ ತಾಲೂಕಾ ಪಂಚಾಯತಿನಲ್ಲಿ  ಲೋಕಾಯುಕ್ತ ಅಧಿಕಾರಿಗಳಿಂದಸಭೆ ಗೋಕಾಕ: ನಗರದಲಿ ಹಾಗೂ ಇನ್ನಿತರ ಕಡೆ ಲೋಕಾ ಯುಕ್ತ ಇಲಾಖೆ ಜಾಗ್ರತಿ ಮೂಡಿಸುವ ಕಾರ್ಯ ವನ್ನ ಎಲ್ಲಡೆ ಮಾಡುತ್ತಿದೆ, ಇಂದು ಗೋಕಾಕ ಪಟ್ಟಣ ದ ತಾಲೂಕಾ ಪಂಚಾಯತಿನಲ್ಲಿ   ಅಧಿ ಕಾರಿ ವರ್ಗ ಹಾಗೂ ಜನರಿಗೆ ಕಾನೂನು ಅ ರಿವು ಮೂಡಿಸುವ ಸಲುವಾ ಗಿ ಸಭೆ ಯನ್ನ ಮಾಡಿದ್ದರು ಇದರ ಲ್ಲಿ ಎಲ್ಲ ಜನ ಹಾಗೂ ಸಿಬ್ಬಂ ದಿ ಗಳ ಉಪ …

Read More »

ರಾಯಲ್‌ ಚಾಲೆಂಜರ್ಸ್‌ ತಂಡ ಕ್ರಿಕೆಟ್‌ ಚಾಂಪಿಯನ್‌

ಮೂಡಲಗಿ: ಮಾರ್ನಿಂಗ್‌ ಸ್ಟಾರ್‌ ಕ್ರಿಕೆಟರ್ಸ್‌ ಹಾಗೂ ಲಯನ್ಸ್‌ ಕ್ಲಬ್‌ ಮೂಡಲಗಿ ಪರಿವಾರ ಸಹಯೋಗದಲ್ಲಿ ಸ್ಥಳೀಯ ಎಸ್‌ಎಸ್‌ಆರ್‌ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ 5 ದಿನಗಳ ಮೂಡಲಗಿ ಪ್ರಿಮಿಯರ್‌ ಲೀಗ್‌ -2023 ಕ್ರಿಕೆಟ್‌ ಟೂರ್ನಿಯಲ್ಲಿ ಪಟ್ಟಣದ ರಾಯಲ್‌ ಚಾಲೆಜರ್ ತಂಡವು ಪ್ರಥಮ ಸ್ಥಾನ ಪಡೆದು ರೂ. 50,001 ನಗದು ಬಹುಮಾನ ಮತ್ತು ಪಾರಿತೋಷಕವನ್ನು ತನ್ನದಾಗಿಸಿಕೊಂಡಿತು. ದ್ವಿತೀಯ ಸ್ಥಾನವನ್ನು ಮೂಡಲಗಿಯ ಬುಲ್ಡೋಜರ್‌ ತಂಡ ಪಡೆದು ರೂ. 30,001 ಮತ್ತು ಪಾರಿತೋಷಕ ಪಡೆದುಕೊಂಡರೆ, ಮೂಡಲಗಿ ಸ್ಟ್ರೈಕರ್ಸ ತಂಡವು …

Read More »

SSLC ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆ-1ಕ್ಕೆ ನೋಂದಣಿಗೆ ನ.15ರ ವರೆಗೆ ಅವಕಾಶ

ಬೆಂಗಳೂರು: ಮಾರ್ಚ್‌ನಲ್ಲಿ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆ-1ಕ್ಕೆ ನೋಂದಣಿ ಮಾಡಿಕೊಳ್ಳುವ ಅವಧಿ ಯನ್ನು ನ.15ರ ವರೆಗೆ ವಿಸ್ತರಣೆ ಮಾಡಲಾಗಿದ್ದು ಈ ಅವಕಾಶವನ್ನು ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳಬಹುದಾಗಿದೆ. 2023-24ನೇ ಸಾಲಿನಿಂದ ಜಾರಿಗೆ ಬರುವಂತೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 3 ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಇದರಲ್ಲಿ ಪರೀಕ್ಷೆ-1 ಕ್ಕೆ ಅರ್ಹ ವಿದ್ಯಾರ್ಥಿಗಳು ನೋಂದಣಿ ಮಾಹಿತಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೆಬ್‌ಸೈಟ್‌ ನಲ್ಲಿ ಶಾಲಾ ಲಾಗಿನ್‌ ಮೂಲಕ ಪಡೆಯಲು ತಿಳಿಸಲಾಗಿದೆ. ಈ ಹಿಂದೆ ಆನ್ ಲೈನ್ …

Read More »

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಕುರಿತ ಚರ್ಚೆಗೆ ಎರಡು ದಿನ‌ ಮೀಸಲು: ಬಸವರಾಜ ಹೊರಟ್ಟಿ

ಬೆಳಗಾವಿ: ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ವಿಧಾನ ಪರಿಷತ್​ನಲ್ಲಿ ಎರಡು ದಿನ‌ ಮೀಸಲಿಡುವುದರ ಜೊತೆಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಸುವರ್ಣ ವಿಧಾನಸೌಧದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್ ಅವರ ಜೊತೆಗೆ ಅಧಿವೇಶನ ಸಿದ್ಧತೆ ಪರಿಶೀಲಿಸಿದ ಬಳಿಕ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಮೊದಲ ವಾರದ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಮಂಗಳವಾರ ಮತ್ತು ಬುಧವಾರ ಎರಡು ದಿನ …

Read More »

ನಾನು 2028ಕ್ಕೆ ಸಿಎಂ ಸ್ಥಾನಕ್ಕಾಗಿ ಕ್ಲೈಮ್​ ಮಾಡುತ್ತೇನೆ: ಸತೀಶ್ ಜಾರಕಿಹೊಳಿ

ಬೆಂಗಳೂರು: ಈಗ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ನಾನು 2028ಕ್ಕೆ ಸಿಎಂ ಸ್ಥಾನಕ್ಕಾಗಿ ಕ್ಲೈಮ್​ ಮಾಡುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇರೆಯವರು ಕೇಳುವುದು, ಬಿಡುವುದು ಅವರವರ ಇಷ್ಟಕ್ಕೆ ಬಿಟ್ಟದ್ದು. ನಾವು 28ಕ್ಕೆ ಕ್ಲೈಂ ಮಾಡ್ತೇವೆ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಅಂತ ಹೇಳಿದ್ದಾರೆ, ಬೇರೆಯವರು ಹೇಳುವ …

Read More »