Breaking News

ಜಿಲ್ಲೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ಕುರಿತು ವಾಗ್ದಾಳಿ

ಮೈಸೂರು : ಸಿದ್ದರಾಮಯ್ಯ ಅವರು ಸಿಎಂ ಆಗಿ ಅಧಿಕಾರಕ್ಕೆ ಬಂದಾಗಿನಿಂದ ಕೇಂದ್ರದ ಜೊತೆ ಸಂಘರ್ಷದ ಹಾದಿ ತುಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆರೋಪಿಸಿದರು. ನೀತಿ ಆಯೋಗದ ಸಭೆಗೆ ಸಿಎಂ ಹಾಗೂ ಸಂಬಂಧಿಸಿದವರು ಗೈರಾಗಿದ್ದ ವಿಚಾರವಾಗಿ ಭಾನುವಾರ ಮಾಧ್ಯಮಗಳಿಗೆ ನಗರದ ಖಾಸಗಿ ಹೋಟೆಲ್‌ನಲ್ಲಿ ಪ್ರತಿಕ್ರಿಯೆ ನೀಡಿದರು. ಸಭೆಗೆ ಗೈರಾಗಿದ್ದ ಬಗ್ಗೆ ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ತಿಳಿಸಬೇಕು. ಸಭೆಗೆ ಗೈರಾಗುವ ಮೂಲಕ ರಾಜ್ಯದ ಜನತೆಗೆ ಅನ್ಯಾಯ ಮಾಡುತ್ತಿದ್ದಾರೆ. ತಮಿಳುನಾಡು ಸಿಎಂ …

Read More »

ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಯುವಕ-ಯುವತಿಯರನ್ನು ವಶಕ್ಕೆ ಪಡೆದ ಪೊಲೀಸರು

ದೇವನಹಳ್ಳಿ(ಬೆಂಗಳೂರು ಗ್ರಾ.): ಇಲ್ಲಿನ ಕನ್ನಮಂಗಲ ಗೇಟ್ ಸಮೀಪದ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ಇಂದು ಬೆಳಗ್ಗೆ ದಾಳಿ ಮಾಡಿದ್ದಾರೆ. ಈ ವೇಳೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಯುವಕ, ಯುವತಿಯರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶಾನ್ಯ ವಲಯ ಡಿಸಿಪಿ ವಿ.ಜೆ.ಸಜೀತ್ ಅವರು ಪ್ರತಿಕ್ರಿಯೆ ನೀಡಿದ್ದು, “NDPS ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ದೇವನಹಳ್ಳಿಯ ಕನ್ನಮಂಗಲ ಗೇಟ್ ಬಳಿಯ ಫಾರ್ಮ್​ ಹೌಸ್​ನಲ್ಲಿ ಪಾರ್ಟಿ ನಡೆಯುತ್ತಿರುವ …

Read More »

ನನಗೆ ಮೈಸೂರು ಸ್ಯಾಂಡಲ್​ ಸೋಪ್​ ರಾಯಭಾರಿಯಾಗುವ ಆಸೆ ಇಲ್ಲ: ಯದುವೀರ್

ಮೈಸೂರು:‌ ಮೈಸೂರು ಸ್ಯಾಂಡಲ್ ಸೋಪಿಗೆ ನನಗೆ ವೈಯಕ್ತಿಕವಾಗಿ ರಾಯಭಾರಿಯಾಗುವ ಆಸೆ ಇಲ್ಲ ಎಂದು ರಾಜವಂಶಸ್ಥರು, ಬಿಜೆಪಿ ಸಂಸದರೂ ಆಗಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದರು. “ಮೈಸೂರು ಸ್ಯಾಂಡಲ್ ಸೋಪಿಗೆ ಸೂಕ್ತ ರಾಯಭಾರಿ ಎಂದರೆ ನಮ್ಮ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಬ್ರ್ಯಾಂಡೂ ನಮ್ದೇ ಬ್ರ್ಯಾಂಡು ಅಂಬಾಸಿಡರು ನಮ್ಮವ್ರೇ ‘ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಚಾರವಾಗಿ, ನಗರದ ಖಾಸಗಿ ಹೋಟೆಲ್​ನಲ್ಲಿಂದು ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು”ರಾಜಮನೆತನ ಕಮರ್ಷಿಯಲ್ ಆಗಿ …

Read More »

ಶಾಲೆ ಪುನಾರಂಭದಲ್ಲೇಕೊರೊನಾ ಕಂಟಕ: ಆರೋಗ್ಯ ಇಲಾಖೆ ಅಲರ್ಟ್

ಬೆಂಗಳೂರು, ಮೇ 25: ರಾಜ್ಯದಲ್ಲಿ ಕೊರೊನಾ (Karnataka Covid) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೊನಾ (Coronavirus) ಸೋಂಕಿತ ವೃದ್ಧರೊಬ್ಬರು ಶನಿವಾರ (ಮೇ.24) ಬೆಂಗಳೂರಿನಲ್ಲಿ ಮೃತಪಟ್ಟಿದ್ದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಮತ್ತು ರಾಜಾಜಿನಗರದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಮುಂದಿನ ವಾರ ಮೇ.29ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪುನಾರಂಭವಾಗುತ್ತವೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದು ಹೇಗೆ ಅಂತ ಪೋಷಕರು ಆತಂಕಗೊಂಡಿದ್ದಾರೆ. ಮಕ್ಕಳಿಗೆ ಮಾಸ್ಕ್ …

Read More »

ವಾಯುರೂಪದಲ್ಲಿ ಮತ್ತೆ ಬಾಧೆ! ಮೇಘಸ್ಫೋಟದ ಬಗ್ಗೆ ಕೋಡಿಮಠ ಸ್ವಾಮೀಜಿ ಭವಿಷ್ಯ

ಬೆಳಗಾವಿ: ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದೆ. ಮೇಘಸ್ಫೋಟವೂ ಸಂಭವಿಸಿ, ಸಾವು-ನೋವು ಹೆಚ್ಚಾಗಲಿದೆ. ‘ಅರಸನ ಅರಮನೆಗೆ ಕಾರ್ಮೋಡ ಕವಿದಿದೆ’ ಎನ್ನುವ ಮೂಲಕ‌ ಅನೇಕ ರಾಜಕೀಯ ಮುಖಂಡರು ಸಾವನ್ನಪ್ಪುತ್ತಾರೆ ಎಂದು ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ ಮತ್ತೆ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಐದು ವರ್ಷ ಕೋವಿಡ್ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರುವುದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ ಎಂದರು. …

Read More »

ಮೂರು ವರ್ಷದ ಬಾಲಕನ ಕೊಲೆ, ಮಲತಂದೆ ಸೇರಿ ನಾಲ್ವರು ವಶಕ್ಕೆ

ಬೆಳಗಾವಿ: ಮಲತಂದೆ ಮತ್ತು ಆತನ ಸ್ನೇಹಿತರು ಸೇರಿ ಮೂರು ವರ್ಷದ ಬಾಲಕನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ಸವದತ್ತಿ ತಾಲೂಕಿನ ಹಾರೂಗೊಪ್ಪ ಗ್ರಾಮದ ಬಳಿ ನಿನ್ನೆ ರಾತ್ರಿ ನಡೆದಿದೆ. ಬಿಹಾರ ಮೂಲದ ಕಾರ್ತಿಕ್​ ಮುಖೇಶ್​ ಮಾಂಜಿ(3) ಕೊಲೆಯಾದ ಬಾಲಕ. ಆತನ‌ ಮಲತಂದೆ ಮಹೇಶ್ವರ ಮಾಂಜಿ ಕೊಲೆ ಮಾಡಿದ ಆರೋಪಿ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ, ಮುರಗೋಡ ಸಿಪಿಐ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »

ಶಾಸಕ ವಿಠ್ಠಲ ಹಲಗೇಕರ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸತ್ಕರಿಸಿ ಗೌರವಿಸಿದ ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ

ಶಾಸಕ ವಿಠ್ಠಲ ಹಲಗೇಕರ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸತ್ಕರಿಸಿ ಗೌರವಿಸಿದ ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ ಖಾನಾಪೂರದ ಪಟ್ಟಣ ಪಂಚಾಯಿತಿ ಮಾಜಿ ಉಪ ನಗರಾಧ್ಯಕ್ಷೆ ಹಾಲಿ ಸದಸ್ಯೆ ಮೇಘಾ ಕುಂದರಗಿ ಅವರು ಶಾಸಕ ವಿಠ್ಠಲ ಹಲಗೇಕರ ಮತ್ತು ಕೆನರಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಮಾಲಾರ್ಪಣೆ ಮಾಡಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಖಾನಾಪೂರದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ ಸಂಸದ …

Read More »

ಅರಿಹಂತ ಆಸ್ಪತ್ರೆಯಲ್ಲಿ ವಿವಿಧ ಯೋಜನೆಗಳಡಿಯಲ್ಲಿ ಮಕ್ಕಳಿಗೆ ಚಿಕಿತ್ಸೆ:

ಚಿಕ್ಕಮಕ್ಕಳ ಹೃದ್ರೋಗ ತಜ್ಞವೈದ್ಯ ಡಾ. ಗೋವಿಂದ ಔರಾದ್ಕರ್ ಅವರು ಅರಿಹಂತ್ ಆಸ್ಪತ್ರೆಯಲ್ಲಿ ಲಭ್ಯ ಚಿಕ್ಕಮಕ್ಕಳ ಹೃದ್ರೋಗಕ್ಕೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಪರಿಣಿತಿ ಹೊಂದಿರುವ ಡಾ. ಗೋವಿಂದ ಔರಾದಕರ ಅವರು ಬೆಳಗಾವಿಯ ಅರಿಹಂತ ಆಸ್ಪತ್ರೆಯಲ್ಲಿ ಲಭ್ಯವಿರುವದರಿಂದ ಈ ಭಾಗದ ಚಿಕ್ಕಮಕ್ಕಳ ಹೃದ್ರೋಗ ಕ್ಕೆ ಒಳ್ಳೆಯ ಚಿಕಿತ್ಸೆ ಲಭಿಸಲಿದೆ. ಅತ್ಯಂತ ಕೌಶಲ್ಯಯುತ ಸಮಾರ್ಪಣಾ ಭಾವದೊಂದಿಗೆ ಸೇವೆ ಸಲ್ಲಿಸುವ ಡಾ. ಗೋವಿಂದ ಔರಾದ್ಕರ ಅವರು ತಮ್ಮ ಅಲ್ಪ ವೈದ್ಯಕೀಯ ಸೇವಾಜೀವನದಲ್ಲೇ ಮಕ್ಕಳ ಹೃದಯ ರೋಗ …

Read More »

ಪಂಥ ಬಾಳೆಕುಂದ್ರಿಯಲ್ಲಿ ಆಪರೇಷನ್ ಸಿಂಧೂರ್ ಯಶಸ್ವಿಗಾಗಿ ತಿರಂಗಾ ಯಾತ್ರಾ

ಬೆಳಗಾವಿ : ಪಂಥ ಬಾಳೆಕುಂದ್ರಿಯಲ್ಲಿ ಆಪರೇಷನ್ ಸಿಂಧೂರ್ ಯಶಸ್ವಿಗಾಗಿ ತಿರಂಗಾ ಯಾತ್ರಾ ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕು ಪಂಥ ಬಾಳೆಕುಂದ್ರಿಯಲ್ಲಿ ತಿರಂಗಾ ಯಾತ್ರೆ ನಡೆಸಲಾಯಿತು ಪುಲ್ವಾಮಾ ದಾಳಿ ಹಿನ್ನೆಲೆಯಲ್ಲಿ ಪಾಪಿ ಪಾಕಿಸ್ತಾನ ಹಾಗೂ ಉಗ್ರಗಾಮಿಗಳ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿ ಭಾರತ ದೇಶಕ್ಕೆ ಹೆಮ್ಮೆ ತಂದಿರುವ ವೀರಸೇನಾನಿಗಳನ್ನು ಬೆಂಬಲಿಸಿ ಬೆಳಗಾವಿ ತಾಲೂಕು ಸಾಂಬ್ರಾದಿಂದ ಪಂಥಬಾಳೆಕುಂದ್ರಿಯವರೆಗೆ ಸಾಗಿ ಪ್ರಮುಖ ಬೀದಿಗಳಲ್ಲಿ ತಿರಂಗಾ ಯಾತ್ರೆ ನಡೆಸಲಾಯಿತು ಭಾರತ್ …

Read More »

ಹತ್ತು ಸಾವಿರ ಲಂಚ ಸ್ವೀಕಾರ: ಮುಖ್ಯ ಪೇದೆಗೆ ವಿಧಿಸಿದ್ದ 7 ವರ್ಷ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು : ಬಾಕಿ ಇರುವ ಕ್ರಿಮಿನಲ್ ಪ್ರಕರಣ ಮುಕ್ತಾಯಗೊಳಿಸಲು 2017ರಲ್ಲಿ 10 ಸಾವಿರ ರು.ಗಳ ಲಂಚ ಸ್ವೀಕರಿಸಿರುವ ಸಂದರ್ಭದಲ್ಲಿ ಸಿಕ್ಕಿಬಿದ್ದಿದ್ದ ಬಾಗಲಗುಂಟೆ ಪೊಲೀಸ್ ಠಾಣೆಯ ಮುಖ್ಯಪೇದೆ ಎಂ.ಕೆ.ಮಂಜಣ್ಣ ಎಂಬುವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿದು ಆದೇಶಿಸಿದೆ. ಭ್ರಷ್ಟಾಚಾರ ನಿಗ್ರಹ ಕಾಯಿದೆಯಡಿ ಲಂಚ ಪಡೆದಿದ್ದು ರುಜುವಾತಾದ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಒಟ್ಟು 7 ವರ್ಷ ಶಿಕ್ಷೆ ಮತ್ತು 1 ಲಕ್ಷ ರು.ಗಳ ದಂಡದ ಆದೇಶವನ್ನು ರದ್ದುಗೊಳಿಸುವಂತೆ …

Read More »