Breaking News

ಜಿಲ್ಲೆ

ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ

ಬೆಂಗಳೂರು : ಸಿಐಡಿ ಕರ್ನಾಟಕ, ಇನ್ಫೋಸಿಸ್ ಫೌಂಡೇಶನ್ ಆ್ಯಂಡ್ ಡೇಟಾ ಸೆಕ್ಯುರಿಟಿ ಕೌನ್ಸಿಲ್ ಆಫ್ ಇಂಡಿಯಾ (ಡಿಎಸ್‌ಸಿಐ) ದಿಂದ ಜಂಟಿಯಾಗಿ ಸ್ಥಾಪಿಸಲ್ಪಟ್ಟಿರುವ ಸೈಬರ್ ಕ್ರೈಂ ಇನ್ವೆಸ್ಟಿಗೇಷನ್​ ಟ್ರೈನಿಂಗ್ ಆ್ಯಂಡ್ ರಿಸರ್ಚ್ ಸೆಂಟರ್ (CCITR) ವತಿಯಿಂದ ಒಂದು ದಿನದ ಸೈಬರ್ ಅಪರಾಧ ತನಿಖಾ ಶೃಂಗಸಭೆ (ಸಿಐಡಿ ಡಿಕೋಡ್-2025)ನ್ನ ಇಂದು ಆಯೋಜಿಸಲಾಗಿತ್ತು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಶೃಂಗಸಭೆಯಲ್ಲಿ ಹೆಚ್ಚುತ್ತಿರುವ ಹೊಸ ಸೈಬರ್ ಅಪರಾಧಗಳು, ಜ್ಞಾನದ ಹಂಚಿಕೆ, ಕೌಶಲ್ಯಾಭಿವೃದ್ಧಿ ಹಾಗೂ ಸಹಯೋಗದ ಮೂಲಕ ಪರಿಹರಿಸುವ …

Read More »

ರಾಮತೀರ್ಥ ನಗರದಲ್ಲಿ ಸುರೇಶ ಯಾದವ ಫೌಂಡೇಶನ್ ದಿಂದ ಹೋಳಿ ಆಚರಣೆ

ರಾಮತೀರ್ಥ ನಗರದಲ್ಲಿ ಸುರೇಶ ಯಾದವ ಫೌಂಡೇಶನ್ ದಿಂದ ಹೋಳಿ ಆಚರಣೆ ಬೆಳಗಾವಿಯ ರಾಮತೀರ್ಥ ನಗರದ ಸುರೇಶ ಯಾದವ ಪೌಡೇಶನ್ ಹಾಗೂ ರಾಮತೀರ್ಥ ನಗರದ ರಹವಾಸಿಗಳ ಸಂಯುಕ್ತ ಆಶ್ರಯದಲ್ಲಿ ಹೋಳಿ ಹಬ್ಬದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಸುರೇಶ ಯಾದವ ಅವರು ಪೂರ್ವದಲ್ಲಿ ತಾರಕಾಸುರನೆಂಭ ರಾಕ್ಷಸನಿದ್ದನು ಆತ ದುರಹಂಕಾರಿಯು ಹಾಗೂ ಕ್ರೂರಿಯು ಆಗಿದ್ದನು. ತಾರಕಾಸುರ ತನಗೆ ಸಾವು ಬಾರದಿರಲಿ ಎಂದು ತಪಸ್ಸು ಮಾಡಿದ್ದನು. ಆಗ ಬ್ರಹ್ಮ ಪ್ರತ್ಯಕ್ಷನಾಗುತ್ತಾನೆ. ಆಗ ನನಗೆ ಮರಣ ಬಾರದಿರಲಿ. …

Read More »

ವಿಕಲಚೇತನರಿಗೆ ಒಂದು ಲಕ್ಷದವರೆಗೂ ವೈದ್ಯಕೀಯ ಪರಿಹಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಶುಕ್ರವಾರ ವಿಧಾನಪರಿಷತ್ ಕಲಾಪದಲ್ಲಿ ವೈ.ಎಂ.ಸತೀಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿಕಲಚೇತನರಿಗಾಗಿ ಪ್ರಮುಖ ಮೂರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು. ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆಯಡಿ …

Read More »

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಮತ್ತು ಬೆಂಗಳೂರು ಯೋಜನೆಗಳ ಬಗ್ಗೆ ವಿವರವಾಗಿ ಉತ್ತರ ನೀಡಿದ ಡಿ.ಕೆ.ಶಿ

ಬೆಂಗಳೂರು: “ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿ ಆಲಮಟ್ಟಿ ಜಲಾಶಯ ಎತ್ತರಿಸಲು ಆಗಬೇಕಾದ ಭೂಸ್ವಾಧೀನ, ಕಲ್ಪಿಸಬೇಕಾದ ಪರಿಹಾರ ಹಾಗೂ ಪರಿಷ್ಕೃತ ಮೊತ್ತಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನ ಪರಿಷತ್​ನಲ್ಲಿ ಬಿಜೆಪಿ ಸದಸ್ಯರಾದ ಪಿ.ಎಚ್.ಪೂಜಾರ್ ಹಾಗೂ ಹನುಮಂತ ರುದ್ರಪ್ಪ ನಿರಾಣಿ ಕೇಳಿದ ಪ್ರಶ್ನೆಗೆ ಡಿ.ಕೆ.ಶಿವಕುಮಾರ್​ ಉತ್ತರಿಸಿದರು. “ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ ಸಂಬಂಧಿಸಿದಂತೆ ಸ್ಥಳೀಯ ಜನಪ್ರತಿನಿಧಿಗಳು …

Read More »

ಸವದತ್ತಿ ಯಲ್ಲಮ್ಮ ದೇವಿಗೆ ಹರಿದು ಬಂತು ಕೋಟಿ ಕೋಟಿ ಕಾಣಿಕೆ

ಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ದೇವತೆ ಯಲ್ಲಮ್ಮದೇವಿ ಮಂದಿರದಲ್ಲಿ ಗುರುವಾರ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಈ ಬಾರಿ 3.68 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಪ್ರತಿ ಬಾರಿ ಎಣಿಕೆ ಮಾಡಿದಾಗಲೂ 1ರಿಂದ 1.5 ಕೋಟಿ ರೂ.ವರೆಗೆ ಕಾಣಿಕೆ ಸಂಗ್ರಹವಾಗುತ್ತಿತ್ತು. ಆದರೆ, ಈ ಬಾರಿ ಮೂರೂವರೆ ಕೋಟಿಗೂ ಅಧಿಕ ಹಣ ಸಂಗ್ರಹವಾಗುವ ಮೂಲಕ ಹೊಸ ದಾಖಲೆಯಾಗಿದೆ. 2024ರ ಡಿಸೆಂಬರ್ 14ರಿಂದ 2025ರ ಮಾರ್ಚ್ 12ರವರೆಗೆ(89 ದಿನ) ಏಳುಕೊಳ್ಳದ ತಾಯಿ ಎಂದೇ ಖ್ಯಾತಿ …

Read More »

ನರೇಗಾ ಯೋಜನೆಯಡಿ ಕೆಲಸ ಮಾಡಲು ಜನರು ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ.:zp ceo

ಮೈಸೂರು : ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಕೆಲಸ ಮಾಡಲು ಜನರು ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ. ಆದರೂ, ಕೂಲಿ ಕಾರ್ಮಿಕರನ್ನು ಕೆರೆಗಳ ಹೊಳೆತ್ತುವ ಕೆಲಸ ಮಾಡಿಸುತ್ತಿದ್ದೇವೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಉಕೇಶ್‌ ಕುಮಾರ್‌ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿರುವ ಜಲಾಶಯಗಳಲ್ಲಿ ಈಗಾಗಲೇ ಸಾಕಷ್ಟು ನೀರು ಲಭ್ಯವಿದ್ದು, ಯಾವುದೇ ರೀತಿ …

Read More »

ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸುವಂತಿಲ್ಲ: ಪರಮೇಶ್ವರ್​

ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸುವಂತಿಲ್ಲ: ಪರಮೇಶ್ವರ್​ ರಾಜ್ಯದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಖಾಸಗಿ ವಾಹನಗಳ ಮೇಲೆ “ಪೊಲೀಸ್” ಎಂದು ಬರೆಯುವುದು ಕಾನೂನುಬಾಹಿರ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.ಇಂತಹ ಕ್ರಮ ಕಾನೂನು ಉಲ್ಲಂಘನೆಯಾಗುತ್ತದೆ ಮತ್ತು 2022ರ ಸರ್ಕಾರದ ಸುತ್ತೋಲೆಯ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಈ ವಿಷಯ ಶ್ರವಣಬೆಳಗೊಳ ಶಾಸಕರ ಪ್ರಶ್ನೆಗೆ ಲಿಖಿತ ಉತ್ತರವಾಗಿ ನೀಡಲಾಗಿದೆ. …

Read More »

ಗ್ಯಾರಂಟಿ ಅನುಷ್ಠಾನ ಸಮಿತಿಗೆ ವಿರೋಧ….

ಇಂದು ಮತ್ತೇ ಸದನದ ಭಾವಿಗಿಳಿದು ಪ್ರತಿಭಟಿಸಿದ ಬಿಜೆಪಿ ಸದಸ್ಯರು ಸದನದ ಕಾರ್ಯಕಲಾಪವನ್ನು ಮುಂದೂಡಿದ ಸಭಾಪತಿಗಳು ಇಂದು ವಿಧಾನಮಂಡಳದ ಅಧಿವೇಶನದ ಆರಂಭದಲ್ಲೇ ಬಿಜೆಪಿ ಸದಸ್ಯರು ಗ್ಯಾರಂಟಿ ಅನುಷ್ಠಾನಕ್ಕೆ ಶಾಸಕರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಸಮಿತಿ ಏಕೆ ಬೇಕು ಎಂದು ಪ್ರಶ್ನಿಸಿ ಮತ್ತೇ ಸದನದ ಭಾವಿಗಿಳಿದು ಪ್ರತಿಭಟಿಸಿದರು. ಇಂದು ವಿಧಾನಮಂಡಳದ ಅಧಿವೇಶನದ ಆರಂಭದಲ್ಲೇ ಬಿಜೆಪಿ ಸದಸ್ಯರು ಗ್ಯಾರಂಟಿ ಅನುಷ್ಠಾನಕ್ಕೆ ಶಾಸಕರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಸಮಿತಿ ಏಕೆ ಬೇಕು. ತೆರಿಗೆ ಹಣದಲ್ಲಿ ಗ್ಯಾರಂಟಿ …

Read More »

ಪರೀಕ್ಷೆ ಬರೆದ 11ದಿನದಲ್ಲಿ ಪ್ರಕಟಗೊಂಡಿದೆ ಫಲಿತಾಂಶ

ಬೆಳಗಾವಿ: ಆರ್‌ಪಿಡಿ ಕಾಲೇಜು, ಚೆನ್ನಮ್ಮ ವಿವಿಯಿಂದ ಸ್ಪಾಯತ್ತತೆ, ಮೊದಲ ಫಲಿತಾಂಶ ಬೆಳಗಾವಿ : ಇಲ್ಲಿನ ಆರ್ ಪಿಡಿ ಕಾಲೇಜ ರಾಣಿ ಚನ್ನಮ್ಮ ವಿವಿ ಜೊತೆ ಸ್ನಾಯುತ (ಅಟೋನೊಮಸ್) ಹೊಂದಿದ ಮೊದಲ ಸಲ ಬಿಎ, ಬಿ.ಕಾಂ, ಬಿಬಿಎ ಮೊದಲ ಸೆಮಿಸ್ಟರ್ ಫಲಿತಾಂಶವು ಪರೀಕ್ಷೆ ಬರೆದ 11ದಿನದಲ್ಲಿ ಪ್ರಕಟಗೊಂಡಿದೆ ಎಂದು ಎಸ್. ವೈ. ಪ್ರಭು ಹೇಳಿದರು. ಬುಧವಾರ ಬೆಳಗಾವಿಯ ಆರ್ ಪಿಡಿ ಕಾಲೇಜಿನಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಿಎ ಮೊದಲ ಸೆಮಿಸ್ಟರ್ ನಲ್ಲಿ …

Read More »

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಚಿಸಿ ಒಂದೂವರೆ ವರ್ಷವಾಯಿತು, ಬಿಜೆಪಿಯವರು ನಿದ್ರಿಸುತ್ತಿದ್ದರೇ? ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು, ಮಾರ್ಚ್​ 12 : ಸದನದಲ್ಲಿ ಹಲವಾರು ಚರ್ಚೆಗಳಾಗಬೇಕಿದೆ, ಅನುದಾನ ಹಂಚಿಕೆಯಲ್ಲಿ (grants distribution) ಯಾವುದಾದರೂ ಪ್ರಾಂತ್ಯಕ್ಕೆ ಅನ್ಯಾಯವಾಗಿದೆಯಾ ಅಂತ ಚರ್ಚಿಸಬೇಕಿದೆ, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಬೇಕಿದೆ, ಇದನ್ನೆಲ್ಲ ಬಿಟ್ಟು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ನೀಡುತ್ತಿರುವ ಸಂಬಳದ ಬಗ್ಗೆ ಬಿಜೆಪಿ ಮುಖಂಡರು ರ‍್ಯಾಲಿ ನಡೆಸಿ ಸಮಯ ಹಾಳು ಮಾಡುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಸಮಿತಿ ರಚನೆಯಾಗಿ ಒಂದೂವರೆ ವರ್ಷ ಕಳೆದಿದೆ, ಇದುವರೆಗೆ ಅವರೇನು ನಿದ್ರಿಸುತ್ತಿದ್ದರೇ ಎಂದು ಲಕ್ಷ್ಮಿ ಹೆಬ್ಬಾಳ್ಕರ್ …

Read More »