Breaking News

ಜಿಲ್ಲೆ

ಬೆಳಗಾವಿಯ ಕೆಎಸ್‌ಆರ್‌ಟಿಸಿ ಡಿಪೋ-1 ರಲ್ಲಿ ಮೆಕ್ಯಾನಿಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ, ಮಾರ್ಚ್​ 08: ಕೆಎಸ್​​ಆರ್​ಟಿಸಿ (NWRTC) ಬೆಳಗಾವಿ(Belagavi) ಡಿಪೋ 1ರ ಮೆಕ್ಯಾನಿಕ್​ ಬಸ್​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸ್​​ ಮೆಕ್ಯಾನಿಕ್ ಕೇಶವ ಕಮಡೊಳಿ (57) ಮೃತ ದುರ್ದೈವಿ. ಮೃತ ಕೇಶವ ಕಮಡೊಳಿ ಬೆಳಗಾವಿಯ ಹಳೇ ಗಾಂಧಿನಗರದ ನಿವಾಸಿಯಾಗಿದ್ದು, ಕೆಎಸ್​​ಆರ್​ಟಿಸಿ ಬಸ್​ ವಾಶಿಂಗ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕೇಶವ್ ಅವರಿಗೆ ಬೆನ್ನು ನೋವಿದ್ದರೂ ಅಧಿಕಾರಿಗಳು ಪಂಚರ್​​ ಕೆಲಸಕ್ಕೆ ಬದಲಾಯಿದ್ದರು ಎನ್ನಲಾಗಿದೆ ಕೇಶವ ಅವರ ಡ್ಯೂಟಿ ಬದಲಿಸದಂತೆ ಡಿಪೋ ಮ್ಯಾನೇಜರ್​​ ಲಿಂಗರಾಜ ಲಾಠಿ …

Read More »

ಸರ್ವಸ್ಪರ್ಶಿ‌ ಬಜೆಜ್‌ ಯಾವುದೇ ಕ್ಷೇತ್ರವನ್ನೂ ಕಡೆಗಣಿಸದೇ ಸಮಗ್ರ ಅಭಿವೃದ್ಧಿಗಾಗಿ ಒತ್ತು ನೀಡಿದ್ದಾರೆ

ಸರ್ವವ್ಯಾಪಿ, ಸರ್ವಸ್ಪರ್ಶಿ‌ ಬಜೆಜ್‌ : ರಾಹುಲ್‌ ಜಾರಕಿಹೊಳಿ ಬೆಳಗಾವಿ: ರಾಜ್ಯದ ಸಮಗ್ರ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪರ ಬಜೆಟ್ ಮಂಡಿಸಿದ್ದಾರೆ. ಸರ್ವವ್ಯಾಪಿ, ಸರ್ವಸ್ಪರ್ಶಿ‌ ಬಜೆಜ್‌ ಎಂದು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್‌ ಜಾರಕಿಹೊಳಿ ಹೇಳಿದರು. ಈ ಕುರಿತು ಪ್ರಕಟಣೆ ತಿಳಿಸಿದ ಅವರು, ಇದು ಜನಪರ ಬಜೆಟ್, ಎಲ್ಲಾ ವರ್ಗಕ್ಕೂ ಅನುಕೂಲವಾಗಲಿದೆ. ಎಲ್ಲಾ ಸಮುದಾಯಕ್ಕೆ ಹಾಗೂ ಕೃಷಿ , ಶಿಕ್ಷಣ ಕ್ಷೇತ್ರಕ್ಕೆ ಬಹಳಷ್ಟು ಒತ್ತು ನೀಡಿದ್ದಾರೆ. …

Read More »

ಎಲ್ಲಾ ವಲಯಗಳಿಗೆ ನ್ಯಾಯ ದೊರಕಿಸುವ ಬಜೆಟ್‌ : ಸಂಸದೆ ಪ್ರಿಯಂಕಾ ಜಾರಕಿಹೊಳಿ

ಎಲ್ಲಾ ವಲಯಗಳಿಗೆ ನ್ಯಾಯ ದೊರಕಿಸುವ ಬಜೆಟ್‌ : ಸಂಸದೆ ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ವಲಯಗಳನ್ನು ಒಟ್ಟಿಗೆ ತಗೆದುಕೊಂಡು ಹೋಗುವ ಪ್ರಯತ್ನ ಮಾಡಿದ್ದಾರೆ. ಸಾಕಷ್ಟು ಹಣ ಉಚಿತ ಕಾರ್ಯಕ್ರಮಗಳಿಗೆ ಹೋಗುತ್ತದೆ. ಉಳಿದಿದ್ದರಲ್ಲಿಯೇ ನ್ಯಾಯ ದೊರಕಿಸುವ ಪ್ರಯತ್ನ ಮಾಡಿದ್ದಾರೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಬಜೆಟ್‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಾಮಾನ್ಯವಾಗಿ ಇದೊಂದು ಒಳ್ಳೆಯ ಬಜೆಟ್. ಬೆಳಗಾವಿ …

Read More »

ದಾಖಲೆಯ ಬಜೆಟ್ ಮಂಡನೆ ಬಳಿಕ ಸಿಎಂಗೆ ಹಸ್ತಲಾಘವ ಮಾಡುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ವಿತ್ತೀಯ ಶಿಸ್ತನ್ನು ಗಮನದಲ್ಲಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಇಂದು ತಮ್ಮ ಬಜೆಟ್​ ಮಂಡಿಸಿದ್ದಾರೆ. ತವರಾದ ಮೈಸೂರು ಜಿಲ್ಲೆ ಸೇರಿದಂತೆ, ಎಲ್ಲಾ ಜಿಲ್ಲೆಗಳಿಗೆ ಆದ್ಯತೆ ನೀಡುವ ಪ್ರಯತ್ನ ಮಾಡಿದ್ದಾರೆ. ಇಂದಿನ ತಮ್ಮ ದಾಖಲೆಯ ಬಜೆಟ್​ನಲ್ಲಿ ಹಲವು ಹೊಸ ಯೋಜನೆಗಳನ್ನು ಸಹ ಪ್ರಕಟಿಸಿದ್ದಾರೆ. 2025-26ನೇ ಸಾಲಿನ ಬಜೆಟ್‌ನಲ್ಲಿ, ರಾಜ್ಯದ 31 ಜಿಲ್ಲೆಗಳಿಗೂ ನ್ಯಾಯ ವದಗಿಸುವ ಯತ್ನ ಮಾಡಿರುವ ಸಿಎಂ ಸಿದ್ದರಾಮಯ್ಯ, ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡುವ ಮೂಲಕ ರಾಜ್ಯದ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ …

Read More »

೧೬ನೇ ಬಜೆಟ್ ಸಮತೋಲನದಿಂದ ಕೂಡಿದ್ದು, ಎಲ್ಲಾ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ: ಚನ್ನರಾಜ್ ಹಟ್ಟಿಹೊಳಿ

ಸಮತೋಲನದಿಂದ ಕೂಡಿರುವ ಬಜೆಟ್: ವಿಧಾನಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ* ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಂಡಿಸಿದ ದಾಖಲೆಯ ೧೬ನೇ ಬಜೆಟ್ ಸಮತೋಲನದಿಂದ ಕೂಡಿದ್ದು, ಎಲ್ಲಾ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಹೇಳಿದ್ದಾರೆ. ರಾಜ್ಯದ ಒಟ್ಟಾರೆ ಅಭಿವೃದ್ಧಿಗೆ ಬಜೆಟ್ ನಲ್ಲಿ ಆದ್ಯತೆ ನೀಡಲಾಗಿದೆ. ಎಲ್ಲ ಕ್ಷೇತ್ರಗಳನ್ನೂ ಸಮನಾಗಿ ನೋಡಲಾಗಿದೆ. ಇದೊಂದು ಅಪರೂಪದ ಬಜೆಟ್ ಆಗಿದೆ ಎಂದು ಅವರು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ …

Read More »

ಸಬ್ ರಿಜಿಸ್ಟ್ರಾರ್​ ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ

ದೊಡ್ಡಬಳ್ಳಾಪುರ (ಬೆಂಗಳೂರು) : ಸರ್ಕಾರಿ ಕಚೇರಿಗಳಲ್ಲಿ ಆನ್​​ಲೈನ್ ಸೇವೆಯ ನಂತರ ಭ್ರಷ್ಟಾಚಾರಕ್ಕೆ ಕಡಿವಾಣ ಬಿದ್ದಿದೆಯೇ? ಎಂಬ ಬಗ್ಗೆ ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ, ರಾಜ್ಯದ 25ಕ್ಕೂ ಹೆಚ್ಚು ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ದೊಡ್ಡಬಳ್ಳಾಪುರ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಇಂದು ಮಧ್ಯಾಹ್ನ 3 ಗಂಟೆಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ನಂತರ ದಾಖಲೆಗಳ ಪರಿಶೀಲನೆಗೆ ಮುಂದಾಗಿದೆ. ಲೋಕಾಯುಕ್ತ ಅಧಿಕಾರಿಗಳ ದಾಳಿ ವಿಚಾರದ ಬಗ್ಗೆ …

Read More »

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಮಸೂದೆ ಮಂಡನೆ

ಬೆಂಗಳೂರು: ಕಿರು ಸಾಲ, ಸಣ್ಣ ಸಾಲ, ಖಾಸಗಿ ಹಣಕಾಸು ಮತ್ತು ಇತರೆ ಅನಿಯಂತ್ರಿತ ಲೇವಾದೇವಿ ಮಾಫಿಯಾಗಳಿಂದ ಸಾಲ ಪಡೆದವರಿಗೆ ಉಂಟಾಗುವ ಕಿರುಕುಳ ತಪ್ಪಿಸಿ ರಕ್ಷಣೆ ನೀಡುವ ಉದ್ದೇಶದಿಂದ ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ‍್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ 2025 ನ್ನು ವಿಧಾನಸಭೆಯಲ್ಲಿ ಇಂದು ಮಂಡಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಈ ವಿಧೇಯಕವರನ್ನು ಮಂಡಿಸಿದರು. ಈ ವಿಧೇಯಕದಲ್ಲಿ ಸಾಲಗಳನ್ನು ಪಡೆಯುವ ಮತ್ತು …

Read More »

ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಚಿಕ್ಕೋಡಿ : ತಾಯಿಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂಚಲಿ ಪಟ್ಟಣದಲ್ಲಿನ ಕೃಷ್ಣಾ ನದಿ ಬಳಿ ಇಂದು ಮುಂಜಾನೆ ನಡೆದಿದೆ. ಮೃತರನ್ನು ಶಾರದಾ ಢಾಲೆ (38) ಹಾಗೂ 8, 10 ಮತ್ತು, 14 ವರ್ಷ ವಯಸ್ಸಿನ ಮಕ್ಕಳು ಎಂದು ಗುರುತಿಸಲಾಗಿದೆ. ದಿನನಿತ್ಯ ಗಂಡ ಗಲಾಟೆ ಮಾಡುತ್ತಿದ್ದ ಕಾರಣಕ್ಕೆ ಮಹಿಳೆ ತನ್ನ ಮೂವರು ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ತಿಳಿದು ಬಂದಿದೆ. ಗಂಡ ಅಶೋಕ್ ಢಾಲೆಯನ್ನು ಪೊಲೀಸರು ವಶಕ್ಕೆ ಪಡೆದು …

Read More »

ವಿಧಾನಸಭೆಯ ಆವರಣದಲ್ಲಿನ ಚಿತ್ರಪಟಗಳ ಉದ್ಘಾಟನೆ ನೆರವೇರಿಸಿದ ಡಿಸಿಎಂ ಡಿ ಕೆ ಶಿವಕುಮಾರ್.

ಬೆಂಗಳೂರು: ವಿಧಾನಸಭೆ ನಡೆದು ಬಂದ ದಾರಿ ಕುರಿತು ವಿಧಾನಸಭೆಯ ಹೊರ ಆವರಣದಲ್ಲಿ ಅಳವಡಿಸಲಾಗಿರುವ ಚಿತ್ರಪಟಗಳ ಉದ್ಘಾಟನೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ನೆರವೇರಿಸಿದರು. ವಿಧಾನಸಭಾಧ್ಯಕ್ಷ ಯು ಟಿ ಖಾದರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಕೆ ಎಚ್ ಮುನಿಯಪ್ಪ, ಕೃಷ್ಣ ಬೈರೇಗೌಡ ಮತ್ತಿತರರು ಉಪಸ್ಥಿತರಿದ್ದರು. 

Read More »

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮೀಟರ್ ಗೆ ₹1 ನಿಗದಿ; ಸಚಿವ ಎಂ ಬಿ ಪಾಟೀಲ.

ಬೆಂಗಳೂರು: ರಾಜ್ಯದಲ್ಲಿ ಬೇರೆ ಬೇರೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಒಂದೊಂದು ದರ ಇದ್ದಿದ್ದರಿಂದ ಮನೆಮನೆಗೆ ಗ್ಯಾಸ್ ಸಂಪರ್ಕ ಒದಗಿಸಲು ವಿಳಂಬವಾಗಿದೆ. ಈಗ ಈ ಸಮಸ್ಯೆ ಬಗೆಹರಿದಿದ್ದು, 2030ರೊಳಗೆ ಮಿಕ್ಕಿರುವ 60 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಪೈಪ್-ಲೈನ್ ಮೂಲಕ ಅಡುಗೆ ಅನಿಲ ಪೂರೈಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಡಿ ಎಸ್ ಅರುಣ್ ಕೇಳಿದ ಪ್ರಶ್ನೆಗೆ ಅವರು …

Read More »