ಬೆಳಗಾವಿ : ನಿಶ್ಚಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮ ಹತ್ಯಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂತೆ ಬೀದಿಯ ಸೋಮಪ್ಪ ಡೊಂಗರಗಾವಿ(28) ಮೃತ ದುರ್ದೈವಿಯಾಗಿದ್ದು ಮದುವೆಗೆ ಹುಡುಕಿದ್ದ ಮದುವೆ ಸಂಬಂಧಗಳೆಲ್ಲವೂ ರದ್ದಾದ ಹಿನ್ನೆಲೆ ಮನನೊಂದು ಯುವಕ ಆತ್ಮ*ಹತ್ಯೆಗೆ ಶರಣಾಗಿದ್ದಾನೆ.ಹೊಲದಲ್ಲಿನ ಬೇವಿನ ಗಿಡದ ತೊಂಗೆಗೆ ಪ್ಲಾಸ್ಟಿಕ್ ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ.ಹಿರೇಬಾಗೆವಾಡಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಶಿವಕಾರ್ತಿಕೇಯನ್ ಹೊಸ ಸಿನಿಮಾ ‘ಮದರಾಸಿ’ ಎ.ಆರ್.ಮುರುಗದಾಸ್ ನಿರ್ದೇಶನದಲ್ಲಿ ಚಿತ್ರ
ಬೆಂಗಳೂರು: ಅಮರನ್ ಬ್ಲಾಕ್ ಬಸ್ಟರ್ ಸಕ್ಸಸ್ ಬಳಿಕ ಶಿವಕಾರ್ತಿಕೇಯನ್ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದೀಗ ಅವರ ಮದರಾಸಿ ಎಂಬ ಹೊಸ ಚಿತ್ರ ಘೋಷಣೆಯಾಗಿದೆ. ಮೊದಲ ಬಾರಿಗೆ ಶಿವಕಾರ್ತಿಕೇಯನ್ ಎ.ಆರ್.ಮುರುಗದಾಸ್ ಜೊತೆ ಕೈ ಜೋಡಿಸಿದ್ದಾರೆ. ಇವರಿಬ್ಬರ ಕಾಂಬಿನೇಷನ್ ಹೊಸ ಚಿತ್ರಕ್ಕೆ ಮದರಾಸಿ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.. ಇಂದು ಶಿವಕಾರ್ತಿಕೇಯನ್ ಜನ್ಮದಿನ. ಅವರ ಹುಟ್ಟುಹಬ್ಬದ ಪ್ರಯುಕ್ತ ಮದರಾಸಿ ಸಿನಿಮಾದ ಆಕ್ಷನ್ ಪ್ಯಾಕ್ಡ್ ಗ್ಲಿಂಪ್ಸ್ ಅನಾವರಣ ಮಾಡಲಾಗಿದೆ. ಮಾಸ್ ಅವತಾರದಲ್ಲಿ ಶಿವಕಾರ್ತಿಕೇಯನ್ …
Read More »ಗಣೇಶ್ ಕುಣಿಸಲು ಬಂದ ಜಾನಿ ಮಾಸ್ಟರ್..’Your’s Sincerely ರಾಮ್’ಗೆ ಖ್ಯಾತ ಕೊರಿಯೋಗ್ರಫರ್ ಎಂಟ್ರಿ.
ಬೆಂಗಳೂರು: ತೆಲುಗು ಚಿತ್ರರಂಗದ ಖ್ಯಾತ ಕೊರಿಯೋಗ್ರಫರ್ ಜಾನಿ ಮಾಸ್ಟರ್ ಕನ್ನಡ ಚಿತ್ರರಂಗಕ್ಕೂ ಪರಿಚಿತರು. ತಮ್ಮ ಡ್ಯಾನ್ಸ್ ಕಲೆಯ ಮೂಲಕ ಎಲ್ಲರನ್ನೂ ಮೋಡಿ ಮಾಡಿದ್ದ ಅವರು ರಾಜಕುಮಾರ ಚಿತ್ರದ ಅಪ್ಪು ಡ್ಯಾನ್ಸ್ ಡ್ಯಾನ್ಸ್, ನಟಸಾರ್ವಭೌಮ ಚಿತ್ರದ ಓಪನ್ ದ ಬಾಟಲ್, ವಿಕ್ರಾಂತ್ ರೋಣ ಚಿತ್ರದ ರಾರಾ ರಕ್ಕಮ್ಮ ರೀತಿಯ ಸೂಪರ್ ಹಿಟ್ ಗೀತೆಗಳಿಗೆ ಡ್ಯಾನ್ಸ್ ಕಂಪೋಸ್ ಮಾಡಿದ್ದಾರೆ. ಸೂಪರ್ ಹಿಟ್ ಹಾಡುಗಳಿಗೆ ನಾಯಕ-ನಾಯಕಿಯರನ್ನು ಕುಣಿಸುವ ಅವರೀಗ ಮತ್ತೊಮ್ಮೆ ಸ್ಯಾಂಡಲ್ ವುಡ್ ಸಿನಿಮಾದಲ್ಲಿ …
Read More »ಮಾರ್ಚ್ 7 ರಂದು ಆಯವ್ಯಯ ಮಂಡನೆ: ಮಾರ್ಚ್ ಮೂರರಿಂದ ಅಧಿವೇಶನ ;ಸಿಎಂ ಸಿದ್ದರಾಮಯ್ಯ
ಬೆಂಗಳೂರು : ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ಆಯವ್ಯಯವನ್ನು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆಯವ್ಯಯದ ಮೇಲೆ ಚರ್ಚೆ ನಡೆದು ಉತ್ತರವನ್ನು …
Read More »ಲಾರ್ಡ್ ಗಾಗಾ ಸಿನಿಮಾ ಮೂಲಕ ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದ ನಿರ್ದೇಶಕ ಶೂನ್ಯ.
ಬೆಂಗಳೂರು: ಹೆಡ್ ಬುಷ್ ಮತ್ತು ರೋಸಿ ಸಿನಿಮಾಗಳ ಸೂತ್ರಧಾರ ಶೂನ್ಯ ಈಗ ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿಯುತ್ತಿದ್ದಾರೆ. ಸದ್ಯ ಲೂಸ್ ಮಾದ ಯೋಗಿ 50ನೇ ಚಿತ್ರ ರೋಸಿ ನಿರ್ದೇಶನದಲ್ಲಿ ಬ್ಯುಸಿಯಾಗಿ ಅವರು ಈ ಮಧ್ಯೆ ‘ಲಾರ್ಡ್ ಗಾಗಾ’ ಎಂಬ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಆದರೆ ನಿರ್ದೇಶನ ಪಕ್ಕಕ್ಕಿಟ್ಟು ಶೂನ್ಯ ಲಾರ್ಡ್ ಗಾಗಾ ಮೂಲಕ ನಾಯಕನಾಗಿ ಬಣ್ಣ ಹಚ್ಚುತ್ತಿದ್ದಾರೆ. ಶೂನ್ಯ ನಾಯಕನಾಗಿ ನಟಿಸುತ್ತಿರುವ ಚೊಚ್ಚಲ ಸಿನಿಮಾಗೆ ಲಾರ್ಡ್ ಗಾಗಾ ಎಂಬ …
Read More »ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳ ಸಮೀಕ್ಷೆ ವರದಿ ನೀಡಲು ಸೂಚನೆ; ತುಷಾರ್ ಗಿರಿ ನಾಥ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮೀಕ್ಷೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಲಿಕೆಯ 8 ವಲಯಗಳಲ್ಲಿ ಎಷ್ಟು ಶುದ್ಧ ಕುಡಿಯುವ ನೀರಿನ ಘಟಕಗಳಿವೆ, ಎಷ್ಟು ಸುಸ್ಥಿತಿಯಲ್ಲಿವೆ, ಎಷ್ಟು ಸ್ಥಗಿತವಾಗಿವೆ ಎಂಬುದರ ಕುರಿತು ಸಮೀಕ್ಷೆ ನಡೆಸಿ …
Read More »ಕೋಳಿ ಫಾರಂನಲ್ಲಿ ಇತ್ತು ಅಸಲಿ ಗನ್ ; ಕಳ್ಳ-ಪೊಲೀಸ್ ಆಟ ಆಡಲು ಹೋಗಿ 3 ವರ್ಷದ ಮಗು ಗುಂಡೇಟಿಗೆ ಬಲಿ.
ಮಂಡ್ಯ : ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ. ಗುಂಡು ತಗುಲಿದ ಪರಿಣಾಮ ಮಗುವಿನ ಹೊಟ್ಟೆ ಛಿದ್ರವಾಗಿ ಸಾವನ್ನಪ್ಪಿದೆ. ಆಸ್ಪತ್ರೆಗೆ ಕರೆದೊಯ್ದರೂ ಫಲಿಸದ ಚಿಕಿತ್ಸೆ ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ನಾಗಮಂಗಲ ಆಸ್ಪತ್ರೆಗೆ ದಾಖಲಿಸಲಾಯಿತು. …
Read More »ಪೂಜೆ ಮಾಡುವ ನೆಪದಲ್ಲಿ ಚಿನ್ನಾಭರಣ ಎಗರಿಸಿದ್ದ ಖದಿಮರು ಪೊಲೀಸರ ವಶಕ್ಕೆ.
ದಾವಣಗೆರೆ: ಆರೋಪಿಗಳು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದ ಶಶಿಕಲಾ ಎಂಬವರ ಹಣಕಾಸಿನ ಸಮಸ್ಯೆ ಅರಿತು ಪೂಜೆ ಮಾಡಿ ಸಮಸ್ಯೆ ಬಗೆಹರಿಸುವುದಾಗಿ ಹೋಗಿದ್ದರು. ಸಂಜೆ 4 ರಿಂದ 6 ಗಂಟೆ ವೇಳೆಗೆ ಪೂಜೆ ಮಾಡಿದರೆ ಸಮಸ್ಯೆ ಬಗೆಹರಿಯುತ್ತದೆ. ಪೂಜೆ ವೇಳೆ ಚಿನ್ನಾಭರಣ ಹಾಗೂ ನಗದು ಇಡುವಂತೆ ಹೇಳಿದ್ದರು. ಅವರು ಹೇಳಿದಂತೆ ಶಶಿಕಲಾ ಹಾಗೂ ಆಕೆಯ ಕುಟುಂಬಸ್ಥರು ಪೂಜೆ ವೇಳೆ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಇರಿಸಿದ್ದರು. ಈ ವೇಳೆ …
Read More »ದಿನ ಬೆಳಗಾದರೆ ಸಿದ್ದರಾಮಯ್ಯ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ; ಡಿ.ಕೆ.ಶಿವಕುಮಾರ್
ಬೆಂಗಳೂರು: “ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನ ಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಾರವಾಗಿಯೇ ಪ್ರತಿಕ್ರಿಯಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಭಾನುವಾರ ಉತ್ತರಿಸಿದರು. ಸಿದ್ದರಾಮಯ್ಯ ಅವರು ಪಕ್ಷಕ್ಕೆ ಅನಿವಾರ್ಯ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ವಿಧಾನಸಭೆ, …
Read More »ಕೇವಲ 1 ಗಂಟೆ ಅವಧಿಯಲ್ಲಿ ಎರಡು ಖಾತೆಗಳಿಂದ 19.30 ಲಕ್ಷ ಮಂಗಮಾಯ..!
ಮೈಸೂರು:ಕೇವಲ 1 ಗಂಟೆ ಅವಧಿಯಲ್ಲಿ ಎರಡು ಖಾತೆಗಳಿಂದ ಖದೀಮರು 19.30 ಲಕ್ಷ ಲಪಟಾಯಿಸಿ ವಂಚಿಸಿರುವ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಶ್ರೀರಾಂಪುರ ನಿವಾಸಿ ಫಾರ್ಮಾಕ್ಯೂಟಿಕಲ್ಸ್ ಒಂದರಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿದ್ದ ಮುರುಗೇಶ್ ಎಂಬುವರ ಖಾತೆಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ಐಸಿಐಸಿಐ ಬ್ಯಾಂಕ್ ನಲ್ಲಿ ಹೊಂದಿದ್ದ ಒಂದು ಖಾತೆಯಿಂದ 17 ಲಕ್ಷ ಮತ್ತೊಂದು ಖಾತೆಯಿಂದ 2.30 ಲಕ್ಷ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಇಂಟರ್ನೆಟ್ ಬ್ಯಾಂಕಿಂಗ್ ವ್ಯವಸ್ಥೆ ಹೊಂದಿದ್ದ ಮುರುಗೇಶ್ …
Read More »
Laxmi News 24×7