ಖಾನಾಪೂರ :-ಖಾನಾಪೂರ ಕೋ ಆಪ್ ಬ್ಯಾಂಕ್ (ಅರ್ಬನ್ ಬ್ಯಾಂಕ್) ನ ಚುನಾವಣೆ ನಡೆದು ಹದಿನೈದರಿಂದ ಇಪ್ಪತ್ತು ದಿನಗಳು ಕಳೆದಿವೆ, ಆದರೆ ಹೊಸ ಮತದಾರರ ಪಟ್ಟಿಯ ಗೊಂದಲದ ಮೇಲೆ ಚುನಾವಣಾ ಫಲಿತಾಂಶಗಳು ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಮತ ಎಣಿಕೆ ನಡೆಯಲು ಸಾಧ್ಯವಾಗಿರಲಿಲ್ಲ. ಆದರೆ ಬಲ ಮಾಹಿತಿ ಪ್ರಕಾರ ಚುನಾವಣೆಯ ಮತ ಎಣಿಕೆಯು ಫೆಬ್ರವರಿ 4, 2025 ರ ಮಂಗಳವಾರ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದರೆ ಮತ ಎಣಿಕೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಕಾರಿ ರವೀಂದ್ರ …
Read More »ಕಾಗವಾಡ ಸದಸ್ಯರು ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ.
ಕಾಗವಾಡ ತಾಲೂಕಿನ ಉಗಾರ ಬುದ್ರುಕ ಗ್ರಾಮ ಪಂಚಾಯಿತಿಯ ಸದಸ್ಯರು ಪಿಡಿಒ ಇವರನ್ನು ವರ್ಗಾಯಿಸಲು ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ಕೈಗೊಂಡಿದ್ದಾರೆ. ಉಗಾರ ಬುದ್ರುಕ ಗ್ರಾಮ ಪಂಚಾಯತಿಯ ಸದಸ್ಯರು ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಈ ಘಟನೆ ಸಂಬAಧ ಸ್ಥಳಕ್ಕೆ ತಲುಪಿದ ತಾಲೂಕಾ ಪಂಚಾಯತಿ ಅಧಿಕಾರಿಗಳು ಸದಸ್ಯರೊಂದಿಗೆ ಚರ್ಚೆ ನಡೆಸಿ ನಿಯಂತ್ರಿಸಲು ಪ್ರಯತ್ನಿಸಿದರೂ, ಸದಸ್ಯರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದರು. ಶನಿವಾರ ರಂದು ಉಗಾರ …
Read More »‘ವೇದಾಂತ ಎಕ್ಸ್‌ಲೆನ್ಸ್ ಅವಾರ್ಡ್’ ಪಡೆದ 9 ಸಾಧಕರು;‘ಪುರಸ್ಕಾರದಿಂದ ಕ್ರಿಯಾಶೀಲತೆ ಹೆಚ್ಚಳ’
ಬೆಳಗಾವಿ: ‘ವಿವಿಧ ರಂಗಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿದವರಿಗೆ ಪುರಸ್ಕಾರ ನೀಡಿರುವ ಕಾರ್ಯ ಶ್ಲಾಘನೀಯ. ಇದರಿಂದ ತಮ್ಮ ಜವಾಬ್ದಾರಿ ಹೆಚ್ಚಿದ್ದು, ಇನ್ನಷ್ಟು ಕ್ರಿಯಾಶೀಲ, ಪ್ರಾಮಾಣಿಕವಾಗಿ ತಾವು ಸೇವೆ ಸಲ್ಲಿಸಲು ಉತ್ಸಾಹ ಬರುತ್ತದೆ’ ಎಂದು ಬೆಳಗಾವಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಜೆ.ಭಜಂತ್ರಿ ಹೇಳಿದರು. ಇಲ್ಲಿನ ಮಹಿಳಾ ವಿದ್ಯಾಲಯದಲ್ಲಿ ವೇದಾಂತ ಫೌಂಡೇಷನ್ ಶನಿವಾರ ಹಮ್ಮಿಕೊಂಡಿದ್ದ ವಿವಿಧ ಕ್ಷೇತ್ರಗಳ ಸಾಧಕರಿಗೆ 2025ನೇ ಸಾಲಿನ ‘ವೇದಾಂತ ಎಕ್ಸ್‌ಲೆನ್ಸ್ ಅವಾರ್ಡ್’ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. …
Read More »ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ ಮುಂದೂಡಿಕೆ: ಬಿಜೆಪಿ ಪ್ರತಿಭಟನೆ
ವಿಜಯಪುರ:ತೀವ್ರ ಕುತೂಹಲ ಕೆರಳಿಸಿರುವ ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ ನಡೆಯುತ್ತಿದ್ದ ವೇಳೆಯೇ ಟ್ವಿಸ್ಟ್ ಪಡೆದುಕೊಂಡಿದೆ. ಮೇಯರ್, ಉಪ ಮೇಯರ್ ಆಯ್ಕೆ ಪ್ರಕ್ರಿಯೆ ವೇಳೆ ಚುನಾವಣೆಯೆ ರದ್ದಾಗಿದೆ ಎನ್ನಲಾಗುತ್ತಿದೆ. ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಉಪ ಮೇಯರ್ ಎಲೆಕ್ಷನ್ ಮುಂದೂಡಲಾಗಿದೆ. ಇನ ಪಾಲಿಕೆ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಚುನಾವಣೆ ಪ್ರಕ್ರಿಯೆ ವೇಳೆ ಸದಸ್ಯರ ಸದಸ್ಯತ್ವ ರದ್ದು ಕೋರಿ ಪ್ರಾದೇಶಿಕ ಆಯುಕ್ತರಿಗೆ ಉಪ ಮೇಯರ್ ದಿನೇಶ ಹಳ್ಳಿ …
Read More »ಡಾ. ಅಂಬಾಜಿ ವೆಂಕಪ್ಪ ಸುಗುತೇಕರ ಅವರಿಗೆ 2025ರ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿದೆ.
ಬಾಗಲಕೋಟೆ : “ತಾಯಿ ನಿನ್ನ ಭಜನೆ ನಾನು ಮರೆಯಲಾರೆನು” ಎಂದು ಮನೆ, ಮನೆಗೂ ತೆರಳಿ ಹಾಡುತ್ತಿದ್ದ ಗೋಂಧಳಿ ವೆಂಕಪ್ಪನನ್ನು ದೇವರೂ ಮರೆತಿಲ್ಲ. ಶಾಲೆಯ ಮೆಟ್ಟಿಲನ್ನೇ ಹತ್ತದ ವೆಂಕಪ್ಪ ಗೌರವ ಡಾಕ್ಟರೇಟ್ ಪಡೆದಿದ್ದರಲ್ಲದೇ ಈಗ ಪದ್ಮಶ್ರೀ ಪ್ರಶಸ್ತಿ ಪಡೆಯುವುದರ ಮೂಲಕ ದೇಶವೇ ಬಾಗಲಕೋಟೆಯತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಅಂಬಾಜಿ ನಡೆದು ಬಂದ ಹಾದಿಯೇ ರೋಚಕ: ಹೌದು, ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಡಾ. ಅಂಬಾಜಿ ವೆಂಕಪ್ಪ ಸುಗುತೇಕರ ನಡೆದು ಬಂದ ಹಾದಿಯೇ ರೋಚಕ. …
Read More »ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ – ಮಂಜುಳಾ ನಾಯಿಕ.
ಹುಕ್ಕೇರಿ : ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಿ – ಮಂಜುಳಾ ನಾಯಿಕ. ಜನೇವರಿ 26 ರಂದು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರಕಾರಿ ಅಧಿಕಾರಿಗಳು ಕಡ್ಡಾಯವಾಗಿ ಭಾಗ ವಹಿಸಬೇಕು ಎಂದು ಹುಕ್ಕೇರಿ ತಹಸಿಲ್ದಾರ ಮಂಜುಳಾ ನಾಯಿಕ ಹೇಳಿದರು. ಅವರು ಇಂದು ಗಣರಾಜ್ಯೋತ್ಸವ ಆಚರಣೆಯ ಪೂರ್ವ ಭಾವಿ ಸಭೆಯಲ್ಲಿ ಮಾತನಾಡುತ್ತಾ ಆರ್ ಟಿ ಆಯ್ ಕಾರ್ಯಕರ್ತ ರಾಜು ಕುರಂದವಾಡೆ ಯವರು ರಾಷ್ಟ್ರೀಯ ಹಬ್ಬಗಳಲ್ಲಿ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸುವದಿಲ್ಲಾ ಈ ಕುರಿತು …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಶ್ರೀ ಮಾರುತೇಶ್ವರ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …
Read More »ಅಣ್ಣಮ್ಮ ದೇವಿ ಕೂರಿಸುವ ವಿಚಾರದಲ್ಲಿ ಸ್ಥಳೀಯರು, ಬಿಗ್‌ಬಾಸ್ -11ರ ಸ್ಪರ್ಧಿ- ಜಗದೀಶ್ ನಡುವೆ ಗಲಾಟೆ ; ದೂರು – ಪ್ರತಿದೂರು ದಾಖಲು
ಬೆಂಗಳೂರು : ಅಣ್ಣಮ್ಮ ದೇವಿ ಕೂರಿಸುವ ವಿಚಾರದಲ್ಲಿ ಸ್ಥಳೀಯರು ಹಾಗೂ ಬಿಗ್‌ಬಾಸ್ -11ರ ಸ್ಪರ್ಧಿ ಹಾಗೂ ವಕೀಲ ಜಗದೀಶ್ ನಡುವೆ ಗಲಾಟೆಯಾಗಿದ್ದು, ಈ ಸಂಬಂಧ ಕೊಡಿಗೇಹಳ್ಳಿ ಠಾಣೆಯಲ್ಲಿ ದೂರು – ಪ್ರತಿದೂರು ದಾಖಲಾಗಿದೆ. ಕೊಡಿಗೇಹಳ್ಳಿಯ ವಿರೂಪಾಕ್ಷನಗರದಲ್ಲಿ ಲಾಯರ್ ಜಗದೀಶ್‌ಗೆ ಸೇರಿರುವ ಕಾಂಪ್ಲೆೆಕ್ಸ್ ಇದ್ದು, ಅದೇ ರಸ್ತೆಯಲ್ಲಿ ಸ್ಥಳೀಯರು ಅಣ್ಣಮ್ಮ ದೇವಿ ಕೂರಿಸಲು ಪೆಂಡಾಲ್ ಹಾಕಿದ್ದಾರೆ. ಅದಕ್ಕೆ ಆಕ್ಷೇಪಿಸಿದ ಜಗದೀಶ್, ಇದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಆಗುತ್ತದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. …
Read More »ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ:C.M.
ಬೆಂಗಳೂರು: ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅಭಿಮಾನಿಗಳು ಮುಖ್ಯಮಂತ್ರಿಗಳಾಗುವಂತೆ ಆಶಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು. ಈ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ ಎಂದರು. ಬಿಜೆಪಿಯ ಆರೋಪಗಳು ರಾಜಕೀಯ ಪ್ರೇರಿತ : ನಿಗಮ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿಗರ ಆರೋಪಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರು ಸುಳ್ಳು ಆರೋಪಗಳನ್ನು …
Read More »ಫೈನಾನ್ಸ್‌ಗಳ ಹಾವಳಿಗೆ ಮೊದಲ ಬಲಿ.
ಬೆಳಗಾವಿ: ಜಿಲ್ಲೆಯ ಕಾಕತಿ ಸಮೀಪದ ದಾಬಾ ಬಳಿ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹುಕ್ಕೇರಿ ತಾಲೂಕಿನ ಶಿರೂರ ಗ್ರಾಮದ ಸರೋಜಾ ಕಿರಬಿ (52) ಬಾವಿಗೆ ಬಿದ್ದು ಪ್ರಾಣ ಬಿಟ್ಟಿದ್ದಾರೆ. ಫೈನಾನ್ಸ್ ಸಂಸ್ಥೆಯಿಂದ ಸಾಲ ಪಡೆದಿದ್ದ ಸರೋಜಾ, ಸಬ್ಸಿಡಿ ಯೋಜನೆಯ ಅಸರೆಗಾಗಿ ಸಾಲದ ಅರ್ಧ ಹಣವನ್ನು ಯಮನಾಪುರದ ಹೊಳೆಪ್ಪ ದಡ್ಡಿ ಎಂಬ ವ್ಯಕ್ತಿಗೆ ನೀಡಿದ್ದರು. ಎಲ್ಲ ಕಂತು ತಾನೇ ಪಾವತಿಸುವ ಭರವಸೆ ನೀಡಿದ್ದ ಹೊಳೆಪ್ಪ ಮೋಸಮಾಡಿದ …
Read More »
Laxmi News 24×7