Breaking News
Home / ಜಿಲ್ಲೆ (page 20)

ಜಿಲ್ಲೆ

ಬೆಳಗಾವಿ: ಚಿನ್ನದಂಗಡಿ ವ್ಯಾಪಾರಿಯಿಂದ ಲಂಚ ಸ್ವೀಕರಿಸುತ್ತಿದ್ದ ಐಟಿ ಅಧಿಕಾರಿ ಪೊಲೀಸ್ ಬಲೆಗೆ

ಬೆಳಗಾವಿ : ಚಿನ್ನದ ವ್ಯಾಪಾರಿಯೊಬ್ಬರ ಬಳಿ ಲಂಚ ಸ್ವೀಕರಿಸುತ್ತಿದ್ದ ಆದಾಯ ತೆರಿಗೆ ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳಗಾವಿಯಲ್ಲಿ ಇಂದು ನಡೆದಿದೆ. ಚಿಕ್ಕೋಡಿ ತಾಲೂಕಿನ ಅಂಕಲಿಯ ಪರಶುರಾಮ ಬಂಕಾಪುರ ಎಂಬ ಚಿನ್ನಾಭರಣ ಅಂಗಡಿ ಮಾಲೀಕನಿಗೆ ಹಣ ನೀಡುವಂತೆ ಐಟಿ ಅಧಿಕಾರಿ ಅವಿನಾಶ ಟೊನಪೆ ಕಿರುಕುಳ ನೀಡಿದ್ದರು. ಇದರಿಂದ ಚಿಂತಾಕ್ರಾಂತರಾದ ಚಿನ್ನಾಭರಣ ವ್ಯಾಪಾರಿ, ಎಸಿಪಿ ನಾರಾಯಣ ಭರಮನಿ ಅವರಿಗೆ ವಿಷಯ ತಿಳಿಸಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಲಂಚಬಾಕ ಐಟಿ …

Read More »

ಬೆಳಗಾವಿಯ ಸುವರ್ಣಸೌಧಕ್ಕೆ 12 ವರ್ಷ ತುಂಬಿದರೂ ಕೂಡ ಇನ್ನೂ ಸೌಧಕ್ಕೆ ಸುವರ್ಣ ಕಾಲವೇ ಕೂಡಿ ಬಂದಿಲ್ಲ.

ಬೆಳಗಾವಿ : ಉತ್ತರ ಕರ್ನಾಟದ ಜ್ವಲಂತ ಸಮಸ್ಯೆಗಳಿಗೆ ಮುಕ್ತಿ ನೀಡಬೇಕು. ಈ ಭಾಗದ ಜನರಿಗೆ ಶಕ್ತಿ ತುಂಬಬೇಕು ಎಂಬ ಸದುದ್ದೇಶದಿಂದ ಕುಂದಾನಗರಿ ಬೆಳಗಾವಿಯ ಹೊರವಲಯದಲ್ಲಿರುವ ಹಲಗಾ-ಬಸ್ತವಾಡ ಗ್ರಾಮಗಳ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸುವರ್ಣ ವಿಧಾನಸೌಧವನ್ನು ಸರ್ಕಾರ ನಿರ್ಮಾಣ ಮಾಡಿತ್ತು. ಈ ಸುವರ್ಣಸೌಧಕ್ಕೆ ಇಂದು 12 ವರ್ಷಗಳ ಸಂಭ್ರಮಾಚರಣೆ. 2012ರ ಅಕ್ಟೋಬರ್‌ 11 ರಂದು 438 ಕೋಟಿ ರೂ. ವೆಚ್ಚದಲ್ಲಿ ಸರ್ಕಾರ ಯಾವೆಲ್ಲಾ ಉದ್ದೇಶಗಳನ್ನಿಟ್ಟುಕೊಂಡು ಸುವರ್ಣಸೌಧವನ್ನು ನಿರ್ಮಾಣ ಮಾಡಿತ್ತೋ, ಆ ಉದ್ದೇಶಗಳನ್ನು …

Read More »

ಡಿಎಚ್​ಒ ಕಚೇರಿ ಸಿಬ್ಬಂದಿಯಿಂದ ಕಚೇರಿ ಹಿಂಭಾಗದಲ್ಲಿ ಎಣ್ಣೆ ಪಾರ್ಟಿ

ಬೆಳಗಾವಿ: ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ(ಡಿಹೆಚ್‌ಒ)ಯಲ್ಲಿ ಸಿಬ್ಬಂದಿ ಎಣ್ಣೆ ಪಾರ್ಟಿ ಮಾಡಿರುವ ಆರೋಪ ಕೇಳಿ ಬಂದಿದೆ. ಸಿಬ್ಬಂದಿ ಮದ್ಯಪಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಸಾರ್ವಜನಿಕರಿಂದ ಭಾರೀ ಟೀಕೆ ವ್ಯಕ್ತವಾಗಿದೆ. ನಗರದ ಟಿಳಕವಾಡಿಯಲ್ಲಿರುವ ಡಿಹೆಚ್​​ಒ ಕಚೇರಿ ಹಿಂಭಾಗದಲ್ಲಿರುವ ಕೊಠಡಿಯಲ್ಲಿನ ಗಾಂಧಿಜೀ ಫೋಟೋ ಎದುರಿಗೆಯೇ ಸಿಬ್ಬಂದಿ ಮದ್ಯಪಾನ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆದರೆ, ಈ ಘಟನೆ ಯಾವಾಗ ನಡೆದಿದೆ ಎಂಬ ಬಗ್ಗೆ ಸರಿಯಾದ …

Read More »

ಕೇಂದ್ರ ಸರ್ಕಾರದಿಂದ ಬರುವ ವಿದ್ಯುತ್ತನ್ನು ನಿಲ್ಲಿಸಿದ್ದರಿಂದ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ : ಸಚಿವ ಸತೀಶ್​ ಜಾರಕಿಹೊಳಿ

ಚಿಕ್ಕೋಡಿ : ಕೇಂದ್ರದಿಂದ ಬರುವ ವಿದ್ಯುತ್ ಹಠಾತ್ತನೆ ನಿಲ್ಲಿಸಿದ ಪರಿಣಾಮವಾಗಿ ರಾಜ್ಯದಲ್ಲಿ ತೊಂದರೆ ಉಂಟಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.   ಸೋಮವಾರ ಸಂಜೆ ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, ದಕ್ಷಿಣ ಭಾರತಕ್ಕೆ ಕೇಂದ್ರ ಸರ್ಕಾರದಿಂದ ಬರುವ ವಿದ್ಯುತ್ ನಿಲ್ಲಿಸಿದ್ದರಿಂದ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ. ಕಳೆದ ಮೂರು ದಿನಗಳಿಂದ ವಿದ್ಯುತ್ ಅಭಾವ ಕಂಡುಬಂದಿದೆ. ನೀರಿನ ಅಭಾವದಿಂದ ಕೆಲವು ಕಡೆ ವಿದ್ಯುತ್ ತಯಾರಿಕೆ ಆಗುತ್ತಿಲ್ಲ. …

Read More »

ಸರ್ಕಾರ ಪತನವಾಗದಿದ್ದರೆ ರಾಜೀನಾಮೆ ಕೊಡ್ತಾರಾ..? ವಿಪಕ್ಷಗಳಿಗೆ ಶಿವಾನಂದ ಪಾಟೀಲ ಟಾಂಗ್

ಬೆಳಗಾವಿ : ಸರ್ಕಾರ ಪತನವಾಗುತ್ತದೆ ಎಂದು ಹೇಳುವವರನ್ನೇ ಕೇಳಿ. ಸರ್ಕಾರ ಪತನವಾಗದಿದ್ದರೆ ರಾಜೀನಾಮೆ ಕೊಡ್ತಾರಾ..? ಎಂದು ಸಕ್ಕರೆ, ಸಹಕಾರ, ಕೃಷಿ ಮಾರುಕಟ್ಟೆ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ ಅವರು ವಿಪಕ್ಷಗಳಿಗೆ ಟಾಂಗ್​ ಕೊಟ್ಟರು.   ಬೆಳಗಾವಿಯ ಪ್ರವಾಸಿ ಮಂದಿರದಲ್ಲಿಂದು ಮಾಧ್ಯಮಗಳ ಜೊತೆಗೆ ಸಂಕ್ರಾಂತಿ ನಂತರ ಸರ್ಕಾರ ಪತನವಾಗುತ್ತದೆ ಎಂಬ ವಿಪಕ್ಷಗಳ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯಾರು ಸರ್ಕಾರ ಪತನವಾಗುತ್ತದೆ ಎಂದು ಹೇಳುತ್ತಾರೆ ಅವರಿಗೆ ಕೇಳಿ ಎಂದರು. ಕಬ್ಬಿನ ತೂಕದಲ್ಲಿ …

Read More »

ಬಾಗಲಕೋಟೆ: RSS ಮುಖಂಡ ಹೃದಯಾಘಾತದಿಂದ ಕಾರಿನಲ್ಲೇ ಸಾವು

ಬಾಗಲಕೋಟೆ: ಆರ್​ಎಸ್​ಎಸ್​ ಮುಖಂಡರೊಬ್ಬರು ಹೃದಯಾಘಾತದಿಂದ ಕಾರಿನಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಲೋಕಾಪೂರ ಪಟ್ಟಣದ ಬಳಿ ನಡೆದಿದೆ. ಸಿದ್ದು ಚಿಕ್ಕದಾನಿ ಮುಧೋಳ (55) ಮೃತರು. ಇವರು ಆರ್​​ಎಸ್​ಎಸ್​ನಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಸಿದ್ದು ಕಳೆದ ರಾತ್ರಿ ಬಾಗಲಕೋಟೆ ಹೋಗಿ ವಾಪಸ್​ ಬರುವಾಗ ಈ ಘಟನೆ ಸಂಭವಿಸಿದೆ. ಮುಧೋಳ ಪಟ್ಟಣದ ನಿವಾಸಿಯಾಗಿರುವ ಇವರು, ಶಿವಾಜಿ ಸರ್ಕಲ್ ಬಳಿ ಮಂಜುನಾಥ ಮೊಬೈಲ್ ಶಾಪ್ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು. ನಿನ್ನೆ ರಾತ್ರಿ ಲೋಕಾಪೂರ ಪಟ್ಟಣದ ಸಮೀಪ ಇರುವ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಅಥಣಿಯಲ್ಲಿ ಕಾಣೆಯಾದ ವಿದ್ಯಾರ್ಥಿಗಳು ಮಹಾರಾಷ್ಟ್ರದ ರತ್ನಗಿರಿಯಲ್ಲಿ ಪತ್ತೆ

ಚಿಕ್ಕೋಡಿ(ಬೆಳಗಾವಿ): ಶಾಲೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಮೂರು ಮಕ್ಕಳು ಕಾಣೆಯಾಗಿರುವ ಪ್ರಕರಣದಲ್ಲಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಮಕ್ಕಳು ಪತ್ತೆಯಾಗಿದ್ದು, ಪೋಷಕರ ಆತಂಕ ದೂರಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನಿವಾಸಿಯ ಮೂವರು ವಿದ್ಯಾರ್ಥಿಗಳು ಶುಕ್ರವಾರ ಸಂಜೆ ಅಥಣಿ ಪಟ್ಟಣದಲ್ಲಿ ಕಾಣೆಯಾಗಿದ್ದರು. ಶಾಲೆಗೆ ಹೋಗಿ ಬರುತ್ತೇನೆ ಎಂದು ಮಕ್ಕಳು ಮರಳಿ ಮನೆಗೆ ಬಾರದೆ ಇದ್ದಾಗ ಕುಟುಂಬಸ್ಥರು ಆತಂಕಗೊಂಡು ಅಥಣಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಕುಟುಂಬಸ್ಥರು ಶೋಧ ಕಾರ್ಯ ನಡೆಸಿದರು, ಹುಡುಕಾಟ ಸಮಯದಲ್ಲಿ …

Read More »

ಹೊಸದಾಗಿ 188 ಇಂದಿರಾ ಕ್ಯಾಂಟೀನ್ ತೆರೆಯಲಿದ್ದೇವೆ: ಭೈರತಿ ಸುರೇಶ್​

ಬೆಳಗಾವಿ : ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ರಾಜ್ಯಾದ್ಯಂತ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ತೆರೆಯಲಿದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್​ ತಿಳಿಸಿದ್ದಾರೆ. ಬೆಳಗಾವಿಯಲ್ಲಿಂದು ರಾಣಿ ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ಇಂದಿರಾ ಕ್ಯಾಂಟೀನ್​ ತುಂಬಾ ಸಂಕಷ್ಟದಲ್ಲಿವೆ ಎಂಬ ಪ್ರಶ್ನೆಗೆ, “ಹಿಂದಿನ ಬಿಜೆಪಿ ಸರ್ಕಾರ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಯೋಜನೆಗೆ ಕೆಟ್ಟ ಹೆಸರು ತರಲು ಸರಿಯಾಗಿ ನಿರ್ವಹಣೆ ಮಾಡದೇ ಕ್ಯಾಂಟೀನ್​ಗಳನ್ನು ಮುಚ್ಚುವ …

Read More »

*ತಿಂಗಳೊಳಗೆ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರ ಜಮೀನುಗಳಿಗೆ ನೀರು ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ರಾಮೇಶ್ವರ ಏತ ನೀರಾವರಿ ಯೋಜನೆಯ ವೆಂಕಟಾಪೂರ ಮುಖ್ಯ ಕಾಲುವೆಯನ್ನು ಪರಿಶೀಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ರಾಮೇಶ್ವರ ಏತ ನೀರಾವರಿ ಯೋಜನೆಯಡಿ ಇದುವರೆಗೂ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರಿಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಭಾಗದ ರೈತರಿಗೆ ತಮ್ಮ ಜಮೀನುಗಳಿಗೆ ನೀರು ಪೂರೈಸಲು ಹೊಸ ಚೇಂಬರ್ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು …

Read More »