Breaking News

ಜಿಲ್ಲೆ

ಚಿಂಚಣಿ, ಶಿರಗಾಂವ, ಇಂಗಳಿ ಪಿಕೆಪಿಎಸ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರಿಂದ ಸನ್ಮಾನ

ಚಿಕ್ಕೋಡಿ:ಚಿಕ್ಕೋಡಿ ತಾಲ್ಲೂಕಿನ ಇಂಗಳಿ, ಶಿರಗಾಂವ, ಚಿಂಚಣಿ ಗ್ರಾಮದ ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರನ್ನು ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ 2 ಪ್ರಕಾಶ ಹುಕ್ಕೇರಿ ಸತ್ಕರಿಸಿ ,ಅಭಿನಂದಿಸಿದರು. ಚಿಕ್ಕೋಡಿ-ತಾಲ್ಲೂಕಿನ ಚಿಂಚಣಿ, ಶಿರಗಾಂವ ಹಾಗೂ ಇಂಗಳಿ ಗ್ರಾಮದ ವಿವಿದೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಮೂರೂ ಪಿಕೆಪಿಎಸ್ …

Read More »

ನೈಟ್ ಸಿಟಿ ರೌಂಡ್ಸ್ ಮೂಲಕ, ಪುಡಾರಿಗಳಿಗೆ ಬಿಸಿ ಮುಟ್ಟಿಸಿದ ಧಾರವಾಡ ಎಸಿಪಿ,ಇನ್ಸ್ಪೆಕ್ಟರ್ ; ಪುಂಡರ ಕಿರಿಕಿರಿ ಇದ್ದಲ್ಲಿ ದೂರು ನೀಡಲು ಕರೆ

ಧಾರವಾಡ:  ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಧಾರವಾಡ ಎಸಿಪಿ ಹಾಗೂ ಉಪನಗರ ಠಾಣೆಯ ಪಿಐ ಅವರು ಠಾಣೆ ವ್ಯಾಪ್ತಿಯಲ್ಲಿ ನೈಟ್ ಸಿಟಿ ರೌಂಡ್ಸ್ ಮಾಡುವ ಮೂಲಕ, ಪುಡಾರಿಗಳಿಗೆ ಬಿಸಿ ಮುಟ್ಟಿಸಿ ಸಾರ್ವಜನಿಕರ ಸಮಸ್ಯೆಗಳ ಆಲಿಸಿ ಪುಂಡರ ಕಿರಿಕಿರಿ ಇದ್ದಲ್ಲಿ ದೂರು ನೀಡಲು ಕರೆ ನೀಡಲಾಯಿತು. ನಗರದ ಸಪ್ತಾಪುರ ಸೇರಿ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜನ ನಿಬಿಡ ಪ್ರದೇಶದಲ್ಲಿ ಎಸಿಪಿ ಪ್ರಶಾಂತ ಸಿದ್ಧನಗೌಡರ ನೇತೃತ್ವದಲ್ಲಿ ನೈಟ್ ಸಿಟಿ ರೌಂಡ್ಸ್ ಮಾಡುವ …

Read More »

ಬಸ್ ಪ್ರಯಾಣ ದರ ಹೆಚ್ಚಳ;ಹೊಸ ವರ್ಷದ ಮರು ದಿನವೇ ಶಾಕಿಂಗ್ ನ್ಯೂಸ್‌.

ಬೆಂಗಳೂರು: ಹೊಸ ವರ್ಷದ ಮರು ದಿನವೇ ರಾಜ್ಯದ ಜನರಿಗೆ ಸರ್ಕಾರ ಶಾಕಿಂಗ್ ನ್ಯೂಸ್‌ ಕೊಟ್ಟಿದೆ. ಬಸ್ ಪ್ರಯಾಣ ದರ ಶೇಕಡಾ 15ರಷ್ಟು ಹೆಚ್ಚಳ ಮಾಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬಸ್ ಟಿಕೆಟ್ ದರ ಏರಿಕೆಗೆ ಸಂಪುಟ ಅನುಮೋದನೆ ನೀಡಿದೆ. ಸಾರಿಗೆ ದರ ಏರಿಕೆಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

Read More »

ಬೆಳಗಾವಿಗೆ ಬಂತು ಹುಬ್ಬಳ್ಳಿ-ಪುಣೆ ನಡುವಿನ “ವಂದೇ ಭಾರತ್” ರೈಲು.

 ಬೆಳಗಾವಿ:  ಭಾರತೀಯ ರೈಲ್ವೆಯ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಬಹಳ ಬೇಡಿಕೆ ಇದೆ. ಕರ್ನಾಟಕದ ವಿವಿಧ ನಗರಗಳಿಗೆ ಈ ರೈಲು ಸಂಪರ್ಕ ಬೇಕು ಎಂದು ರೈಲ್ವೆ ಇಲಾಖೆಗೆ ಮನವಿ ಸಲ್ಲಿಸಲಾಗುತ್ತಿದೆ. ಸದ್ಯ ರಾಜ್ಯದಲ್ಲಿ ಮತ್ತೊಂದು ವಂದೇ ಭಾರತ್ ರೈಲು ಸಂಚಾರ ಆರಂಭಿಸುವ ನಿರೀಕ್ಷೆ ಇದೆ. ಈಗಾಗಲೇ ರೈಲ್ವೆ ಇಲಾಖೆ ಇದಕ್ಕೆ ಒಪ್ಪಿಗೆ ನೀಡಿದ್ದು, 2025ರಲ್ಲಿ ಈ ರೈಲು ಸಂಚಾರ ಆರಂಭವಾಗುವ ಸಾಧ್ಯತೆ ಇದೆ. ಹೊಸ ವಂದೇ ಭಾರತ್ …

Read More »

ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆ ಪ್ರಾರಂಭ:

ಬೆಳಗಾವಿ:  ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಇಂದು ನಡೆದ ಸಭೆಯಲ್ಲಿ, ಮೈಕ್ರೋ ಫೈನಾನ್ಸ್ ಸಂಬಂಧಿತ ಪ್ರಕರಣಗಳನ್ನು ಶೀಘ್ರದಲ್ಲೇ ಇತ್ಯರ್ಥಗೊಳಿಸಿ, ಜನರಿಗೆ ನ್ಯಾಯ ಒದಗಿಸುವ ದೃಷ್ಟಿಯಿಂದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಯಿತು. ಈ ವೇಳೆ ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆ ಪ್ರಾರಂಭ ಪೋಸ್ಟರ್ ಹಾಗೂ ಬ್ಯಾನರನ್ನು ಅನಾವರಣಗೊಳಿಸಿದ ನಂತರ ಪೌರಕಾರ್ಮಿಕರಿಗೆ ನೇಮಕಾತಿ ಆದೇಶಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕ ಆಸೀಫ್‌ (ರಾಜು ) …

Read More »

ಫೋನ್ ನಲ್ಲಿ ಮಾತನಾಡುವ ನೆಪ ಮಾಡಿ ಹಣ ದೊಚಿದ ಖದೀಮ.

ಮುನವಳ್ಳಿ: ಫೋನ್ ನಲ್ಲಿ ಮಾತನಾಡುವ ನೆಪ ಮಾಡಿ ವ್ಯಕ್ತಿಯೊರ್ವ ಹಣ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಹೋಟೆಲ್ ಒಂದರಲ್ಲಿ ಈ ಕಳ್ಳತನ ನಡೆದಿದೆ . ಹೋಟೆಲ್ ಡ್ರಾ ನಲ್ಲಿ ಇದ್ದ 4 ಸಾವಿರ ರೂಪಾಯಿಯನ್ನು ಯಾರಿಗೂ ಗೊತ್ತಿಲ್ಲದ ಹಾಗೆ ಪೋನ್ ನಲ್ಲಿ ಮಾತನಾಡುವ ರೀತಿ ನಟಿಸಿ  ಕಳ್ಳತನ ಮಾಡಲಾಗಿದೆ.. ಹೋಟೆಲ್ ನಲ್ಲಿ ಕಳ್ಳತನ ಮಾಡಿದ  ದೃಶ್ಯ ಸಿಸಿ ಟಿವಿಯಲ್ಲಿ ಸಂಪೂರ್ಣವಾಗಿ …

Read More »

“ಬಾಣಂತಿಯರ ಸಾವನ್ನು ಖಂಡಿಸಿ ಪ್ರತಿದಿನ 5 ಜಿಲ್ಲೆಗಳಲ್ಲಿ ನಾಳೆಯಿಂದ ಪ್ರತಿಭಟನೆ.

ಬೆಂಗಳೂರು: ಬಾಣಂತಿಯರ ಸಾವನ್ನು ತಡೆಯಲು ವಿಫಲವಾದ ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಂಜುಳಾ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಬಾಣಂತಿಯರ ಸಾವನ್ನು ತಡೆಯುವುದರಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಅವರು ರಾಜೀನಾಮೆ ಕೊಟ್ಟು ಮನೆಗೆ ವಾಪಸ್ ಹೋಗಬೇಕು. ಮಹಿಳಾ ಮತ್ತು ಮಕ್ಕಳ …

Read More »

ಪತಿ ಹಾಗೂ ಅವರ ಮನೆಯವರ ಕಿರುಕುಳಕ್ಕೆ ಬೆಸತ್ತು ಗೃಹಿಣಿ ಆತ್ಮಹತ್ಯೆ.

ಬೆಳಗಾವಿ: ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ಮತ್ತು ಅವರ ಮನೆಯವರ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಕಿರುಕುಳಕ್ಕೆ ಬೇಸತ್ತು ತಮ್ಮ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮೃತಳ ಕುಟುಂಬದವರು ಆರೋಪಿಸಿದ್ದಾರೆ. ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ಶನಿವಾರ ನಡೆದಿದೆ. ಸಾಂಬ್ರಾ ಗ್ರಾಮದ ಸವಿತಾ ಮಾರುತಿ ಜೋಗಾನಿ(32) ಮೃತ ಮಹಿಳೆ. ಶನಿವಾರ ಮಧ್ಯಾಹ್ನ 12.30ಕ್ಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2018ರಲ್ಲಿ ಸಾಂಬ್ರಾದ ಮಾರುತಿ ಜೋಗಾನಿ ಜೊತೆಗೆ …

Read More »

ಮೃತಪಟ್ಟ ಗರ್ಭಿಣಿ ಮತ್ತು ಆತ್ಮಹತ್ಯೆಗೆ ಯತ್ನಿಸಿದ ಪತಿ

ಹುಬ್ಬಳ್ಳಿ: ಗರ್ಭಿಣಿ ಪತ್ನಿ ಮೃತಪಟ್ಟ ವಿಷಯ ತಿಳಿದ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ರಾಧಿಕಾ(19) ಮೃತಪಟ್ಟಿರುವ ಗರ್ಭಿಣಿ. ಈಕೆಯ ಪತಿ ಮಲ್ಲೇಶ್(25) ಆತ್ಮಹತ್ಯೆಗೆ ಯತ್ನಿಸಿದವರು. ಮಲ್ಲೇಶ್​ಗೆ ಕಿಮ್ಸ್​ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಂಟೂವರೆ ತಿಂಗಳ ಗರ್ಭಿಣಿಯಾಗಿದ್ದ ರಾಧಿಕಾಗೆ 6 ಬಾರಿ ಫಿಟ್ಸ್ ಬಂದಿತ್ತು. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೊಟ್ಟೆಯಲ್ಲೇ 8 ತಿಂಗಳ ಭ್ರೂಣ ಸಾವನ್ನಪ್ಪಿದ್ದ ಕಾರಣ ರಾಧಿಕಾ ಆರೋಗ್ಯದಲ್ಲಿ ತೀವ್ರವಾಗಿ …

Read More »

ರಾಜ್ಯದಲ್ಲಿ ​ವರ್ಷದ ಮೊದಲ ದಿನವೇ ಮತ್ತೋರ್ವ ಬಾಣಂತಿ ಡೆತ್.

ರಾಯಚೂರು: ರಾಜ್ಯದಲ್ಲಿ ಹೊಸ ​ವರ್ಷದ ಮೊದಲ ದಿನವೇ ಮತ್ತೋರ್ವ ಬಾಣಂತಿ ಮೃತರಾಗಿದ್ದಾರೆ. ಸಿಸೇರಿಯನ್​ ಹೆರಿಗೆಗೆ ಒಳಗಾಗಿದ್ದ ಬಾಣಂತಿ ಹಾಗೂ ಶಿಶು ಚಿಕಿತ್ಸೆಗೆ ಸ್ಫಂದಿಸದೇ ಮೃತಪಟ್ಟ ಘಟನೆ ಇಲ್ಲಿನ ರಿಮ್ಸ್ (ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ) ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮಸೀದಾಪೂರ ಗ್ರಾಮದ ಶಿವಲಿಂಗಮ್ಮ (22) ಮೃತ ಬಾಣಂತಿ ಎಂದು ತಿಳಿದು ಬಂದಿದೆ. ಚೊಚ್ಚಲ ಹೆರಿಗೆಯ ಸಮಯದಲ್ಲಿಯೇ ಬಾಣಂತಿ ಸಾವನ್ನಪ್ಪಿದ್ದಾರೆ. ಅವರನ್ನು ಮಾನವಿ ಆಸ್ಪತ್ರೆಯಿಂದ ಡಿಸೆಂಬರ್ …

Read More »