ಧಾರವಾಡ: ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪ್ರತಿನಿತ್ಯ ವ್ಯಾಯಾಮ ಮಾಡಬೇಕು. ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಬಿ.ಜಿ.ರಮಾ ತಿಳಿಸಿದರು. ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೊಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಮಾತನಾಡಿದರು. ಪೊಲೀಸರಿಗೆ ಕಾರ್ಯದ ಒತ್ತಡ ಇರುತ್ತದೆ. ಪೊಲೀಸರು ತಮ್ಮ ಮತ್ತು ಕುಟುಂಬದ ಆರೋಗ್ಯ ತಮ್ಮ ಆರೋಗ್ಯದ ಕಡೆಗೂ ಗಮನಹರಿಸಬೇಕು ಎಂದರು. ಪೊಲೀಸರು ಹಗಲಿರುಗಳು ಕಾರ್ಯನಿರ್ವಹಿಸುತ್ತಾರೆ. ಸಮಾಜದ ಆಂತರಿಕ ಭದ್ರತೆಗೆ ಶ್ರಮಿಸುತ್ತಾರೆ. ಪೊಲೀಸರು ಸಾರ್ವಜನಿಕರ …
Read More »ಇದೀಗ ಎಲ್ಲ ಹಳ್ಳಿಗಳಿಗೆ ಸುವರ್ಣಕಾಲ ಬಂದಿದೆ’
ಅಥಣಿ: ‘ಮುಂದಿನ ವರ್ಷದ ಒಳಗಾಗಿ ನೀರು ಒದಗಿಸುವ ಕಾರ್ಯ ಮಾಡಲಾಗುವುದು, 17100ಎಚ್‌ಪಿ ಸಾಮರ್ಥ್ಯದ ಮೂರು ಮೋಟಾರ್ ಕೂಡಿಸಿ 14 ತಿಂಗಳಿನಲ್ಲಿ ಏಳು ಗ್ರಾಮಗಳಿಗೆ ನೀರು ಪೂರೈಸಲಾಗುವುದು, ಕೃಷ್ಣಾ ನದಿಯ ಪ್ರವಾಹ ಮಹಾಪೂರ ಬಂದರೂ ತೊಂದರೆಯಾಗದಂತಹ ಉನ್ನತ ತಂತ್ರಜ್ಞಾನದ ವ್ಯವಸ್ಥೆಯನ್ನು ಅಳವಡಿಸಿಕೊಂಡು, ರಾಜ್ಯದಲ್ಲೆ ಮಾದರಿ ಯೋಜನೆಯನ್ನಾಗಿಸಲಾಗಿದೆ’ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು. ತಾಲ್ಲೂಕಿನ ಅರಟಾಳ ಕ್ರಾಸ್ ಹತ್ತಿರ ಜರುಗಿದ ಅಮ್ಮಾಜೇಶ್ವರಿ -ಕೊಟ್ಟಲಗಿ ಏತನೀರಾವರಿ ಯೋಜನೆಯ ಎಂ.ಎಸ್ ಪೈಪ್‌ಗಳ …
Read More »ನೀರು ಕೊಟ್ಟು, ರಸ್ತೆ ಕಿತ್ತುಕೊಂಡರು
ಸವದತ್ತಿ: ನಿರಂತರ ನೀರು (24X7) ಪೂರೈಕೆಗಾಗಿ ಪಟ್ಟಣದ ಬಹುಪಾಲು ರಸ್ತೆಗಳನ್ನು ಅಗೆದು ಹಾಕಲಾಗಿದೆ. ಕಾಮಗಾರಿ ಮುಗಿದ ಮೇಲೆ ಮತ್ತೆ ರಸ್ತೆ ದುರಸ್ತಿ ಮಾಡಿಲ್ಲ. ಇದೇ ಪರಿಸ್ಥಿತಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲೂ ತಲೆದೋರಿದೆ. ಕೊರಕಲು ರಸ್ತೆಗಳಿಂದ ಜನ ಬೇಸತ್ತುಹೋಗಿದ್ದಾರೆ. ಅಧಿಕಾರಿಗಳು ಮಾತ್ರ ಒಬ್ಬರ ಮೇಲೊಬ್ಬರ ನೆಪ ಹೇಳಿಕೊಂಡು ದಿನ ಕಳೆಯುತ್ತಿದ್ದಾರೆ. ಸುಪ್ರಸಿದ್ಧ ಪ್ರೇಕ್ಷಣೀಯ ಸ್ಥಾನ ಯಲ್ಲಮ್ಮನ ಗುಡ್ಡವನ್ನು ಸುತ್ತವರಿದು ಸವದತ್ತಿ ಪಟ್ಟಣ ಹಾಗೂ ಗ್ರಾಮಗಳಿವೆ. ವಿಶಾಲವಾಗಿ ಹರಿದ ಮಲಪ್ರಭೆಯಿಂದ ಸಾಕಷ್ಟು ನೀರಿನ …
Read More »ಗೋಡೆಗಳಲ್ಲಿ ಅರಳಿದ ಕಲಾಕೃತಿ
ಕಿತ್ತೂರು: ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಹಾಗೂ ಸೋಮವಾರ ಪೇಟೆಯ ಹೃದಯ ಭಾಗದಲ್ಲಿರುವ ರಾಣಿ ಚನ್ನಮ್ಮನ ಪುತ್ಥಳಿಗೆ ಹೊಸಕಳೆ ಬಂದಿದ್ದು, ಹೆದ್ದಾರಿ ಕೆಳ ಸೇತುವೆಯ ಪಕ್ಕದ ಗೋಡೆಗಳಲ್ಲಿ ರಾಣಿ ಚನ್ನಮ್ಮ ಹಾಗೂ ಇತಿಹಾಸ ಬಿಂಬಿಸುವ ಕೆಲವು ಸನ್ನಿವೇಶ, ಚಿತ್ರಗಳು ಜೀವ ಪಡೆದಿದ್ದು, ಕಿತ್ತೂರು ಕಳೆಗಟ್ಟಿದೆ. ಇಲ್ಲಿನ ಕೋಟೆ ಆವರಣದಲ್ಲಿ ಅ. 23ರಿಂದ 25 ರ ವರೆಗೆ ನಡೆಯಲಿರುವ ಚನ್ನಮ್ಮನ ಕಿತ್ತೂರು ಉತ್ಸವದ ಅಂಗವಾಗಿ ಕಲಾಕೃತಿಗಳು ಜೀವತಳೆದಿವೆ. ಅಶ್ವಾರೂಢ ಚನ್ನಮ್ಮನ ಪ್ರತಿಮೆಗೆ …
Read More »ಎಚ್‌ಐವಿ ತಡೆಗಟ್ಟುವಿಕೆ ಜಾಗೃತಿಗಾಗಿ ಮ್ಯಾರಥಾನ್
ಬೆಳಗಾವಿ: ಎಚ್‌ಐವಿ/ಏಡ್ಸ್ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ನಗರದಲ್ಲಿ ಶನಿವಾರ ‘ರೆಡ್ ರನ್’ ರಾಜ್ಯಮಟ್ಟದ 5 ಕಿ.ಮೀ ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾದ ಓಟ ಕೃಷ್ಣದೇವರಾಯ ವೃತ್ತ, ರಾಣಿ ಚನ್ನಮ್ಮನ ವೃತ್ತದ ಮಾರ್ಗವಾಗಿ ಸಾಗಿ, ಜಿಲ್ಲಾ ಕ್ರೀಡಾಂಗಣದಲ್ಲಿ ಮುಕ್ತಾಯಗೊಂಡಿತು. ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಹೆಚ್ಚುವರಿ ಯೋಜನಾ ನಿರ್ದೇಶಕಿ ಡಾ.ಉಮಾ ಬುಗ್ಗಿ ಸ್ಪರ್ಧೆಗೆ ಚಾಲನೆ ನೀಡಿದರು. …
Read More »ರಾಜ್ಯ ಸರ್ಕಾರ ಜಾತಿ ಗಣತಿ ವರದಿ ಮರುಪರಿಶೀಲಿಸಬೇಕು: ಮಹಾಂತೇಶ ಕವಟಗಿಮಠ
ಬೆಳಗಾವಿ: ‘ಎಚ್.ಕಾಂತರಾಜ ಆಯೋಗ ಕೈಗೊಂಡ 2015ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ವರದಿ ಅವೈಜ್ಞಾನಿಕವಾಗಿದೆ. ರಾಜ್ಯ ಸರ್ಕಾರ ಅದನ್ನು ಮರುಪರಿಶೀಲಿಸಬೇಕು’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಒತ್ತಾಯಿಸಿದರು. ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಾತಿ ಗಣತಿ ಮಾಡಬೇಕಾದರೆ ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕು. ಆದರೆ, ಕಾಂತರಾಜ ಆಯೋಗವು ಮನೆ-ಮನೆಗೆ ತೆರಳದೆ, ಸಾಮೂಹಿಕವಾಗಿ ಕೆಲವೇ ಜನರ ಅಭಿಪ್ರಾಯ ಸಂಗ್ರಹಿಸಿ ಸಮೀಕ್ಷೆ ಕೈಗೊಂಡಿದೆ. ಈ ವರದಿ …
Read More »ತೀವ್ರ ಬೆನ್ನು ನೋವಿನಿಂದ ನಟ ದರ್ಶನ್ ನರಳಾಟ
ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಬೆನ್ನು ನೋವಿನಿಂದ ನರಳಾಡುತ್ತಿದ್ದು, ಜೈಲಿನಲ್ಲಿಯೇ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ. ಕೊಲೆ ಆರೋಪಿ ನಟ ದರ್ಶನ್ ಬಳ್ಳಾರಿ ಕೇಂದ್ರ ಕಾರಾಗೃಹ ಜೈಲಿನಲ್ಲಿ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು, ನಿಲ್ಲುವುದಕ್ಕೂ ಆಗದೇ, ನಡೆಯುವುದಕ್ಕೂ ಆಗದೇ ನರಳಾಡುತ್ತಿದ್ದಾರೆ. ವಕೀಲ ರಾಮ್ ಸಿಂಗ್ ಜೈಲಿಗೆ ಬಂದಿದ್ದ ವೇಳೆ ದರ್ಶನ್ ನಡೆಯುವಾಗ ಪದೇ ಪದೇ ಬೆನ್ನು ಹಿಡಿದುಕೊಂಡು ನಡೆಯುತ್ತಿದ್ದು. ಕೆಲ ಸಲ …
Read More »ದಾವಣಗೆರೆ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡಗಳಿಗಿಲ್ಲ ಉದ್ಘಾಟನೆ ‘ಭಾಗ್ಯ’
ದಾವಣಗೆರೆ: ಇಲ್ಲಿನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಹಿಳೆಯರ ಮತ್ತು ಮಕ್ಕಳ ವಿಭಾಗ ಹಾಗೂ ತುರ್ತು ಚಿಕಿತ್ಸಾ ಕೇಂದ್ರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ತಿಂಗಳುಗಳೇ ಕಳೆದರೂ ಉದ್ಘಾಟನೆ ಭಾಗ್ಯ ಕೂಡಿಬಂದಿಲ್ಲ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿ ಅಂದಾಜು ₹ 35 ಕೋಟಿ ವೆಚ್ಚದಲ್ಲಿ ಮಹಿಳೆಯರ ಮತ್ತು ಮಕ್ಕಳ ವಿಭಾಗದ ಕಟ್ಟಡ ನಿರ್ಮಾಣ ಕಾಮಗಾರಿ 2021ರಲ್ಲಿ ಆರಂಭವಾಗಿತ್ತು. ಕಾಮಗಾರಿ ಪೂರ್ಣಗೊಂಡು ಆರು ತಿಂಗಳು ಕಳೆದಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿ …
Read More »ವೈಭವಯುತ ‘ಕಿತ್ತೂರು ಉತ್ಸವ’ಕ್ಕೆ ಭರದ ಸಿದ್ಧತೆ: ಶಾಸಕ ಬಾಬಾಸಾಹೇಬ ಪಾಟೀಲ
ಬೆಳಗಾವಿ: ‘ಚನ್ನಮ್ಮನ ಕಿತ್ತೂರಿನಲ್ಲಿ ಅ.23ರಿಂದ 25ರವರೆಗೆ ನಡೆಯಲಿರುವ ಉತ್ಸವವನ್ನು ಸಂಭ್ರಮದಿಂದ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. 23ರಂದು ಸಂಜೆ 7ಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವೇದಿಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ‘ದ್ವಿಶತಮಾನೋತ್ಸವದ ಕಾರಣಕ್ಕಾಗಿ ಈ ಬಾರಿ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 5 ಕೋಟಿ ಅನುದಾನ ಘೋಷಿಸಿದೆ. ಒಂದೆರಡು ದಿನಗಲ್ಲಿ ಸಂಪೂರ್ಣ ಅನುದಾನ ಬಿಡುಗಡೆಯಾಗಲಿದೆ’ ಎಂದು ಅವರು ನಗರದಲ್ಲಿ ಶನಿವಾರ …
Read More »ಅಪ್ಪನಿಗೆ ಹುಟ್ಟಿದರೆ ಎನ್ನುವ ಮಾತು.. ಮಾನಸ, ಚೈತ್ರಾಗೆ ಕಿಚ್ಚನಿಂದ ತರಾಟೆ
ಬೆಂಗಳೂರು: ಬಿಗ್‌ಬಾಸ್ ಕನ್ನಡ -11 (Bigg Boss Kannada-11) ನಲ್ಲಿಂದು (ಅ.19 ರಂದು) ವಾರದ ಕಿಚ್ಚನ ಪಂಚಾಯ್ತಿ ನಡೆಯಲಿದೆ. ಕನ್ನಡ ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ವಾಗ್ವಾದವೊಂದು ವಿಕೋಪಕ್ಕೆ ತಿರುಗಿ ಒಬ್ಬರಲ್ಲ, ಇಬ್ಬರು ಸ್ಪರ್ಧಿಗಳು ಒಂದೇ ದಿನ ಮನೆಯಿಂದ ಆಚೆ ಹೋಗಿದ್ದಾರೆ. ಜಗದೀಶ್ ಹಾಗೂ ರಂಜಿತ್ ದೊಡ್ಮನೆಯಿಂದ ವಾರದ ಮಧ್ಯದಲ್ಲೇ ಆಚೆ ಹೋಗಿದ್ದಾರೆ. ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಹಾಗೂ ನಿಂದನೆಯ ಪದಗಳನ್ನು ಬಳಸಿದ್ದರು ಎನ್ನುವ ಕಾರಣಕ್ಕೆ ಜಗದೀಶ್ ಅವರ ಮೇಲೆ …
Read More »
Laxmi News 24×7