Breaking News

ಜಿಲ್ಲೆ

ವರ್ಗಾವಣೆ ಕೋರಿ ಆಯುಕ್ತರ ಕಚೇರಿಗೆ ಬರಬೇಡಿ : ಬಿ.ದಯಾನಂದ ಖಡಕ್‌ ಎಚ್ಚರಿಕೆ

ಬೆಂಗಳೂರು,ಅ.4- ವರ್ಗಾವಣೆ ಕೋರಿ ನೇರವಾಗಿ ಆಯುಕ್ತರ ಕಚೇರಿಗೆ ಬರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌‍ ಆಯುಕ್ತ ದಯಾನಂದ ಅವರು ಎಚ್ಚರಿಕೆ ನೀಡಿದ್ದಾರೆ. ಅಡುಗೋಡಿಯ ಸಿಎಆರ್‌ ಕವಾಯತು ಮೈದಾನದಲ್ಲಿ ಹಮಿಕೊಂಡಿದ್ದ ಮಾಸಿಕ ಕವಾಯತಿನಲ್ಲಿ ವಂದನೇ ಸ್ವೀಕರಿಸಿ ಮಾತನಾಡಿದ ಅವರು, ನಾವು ವರ್ಷದ ಕೊನೆಯ ಘಟ್ಟಕ್ಕೆ ಬಂದಿದ್ದೇವೆ. ಆದರೂ ಸಹ ಆಯುಕ್ತರ ಕಚೇರಿಗೆ ಕೆಲವು ಅಧಿಕಾರಿ ಮತ್ತು ಸಿಬ್ಬಂದಿಗಳು ಕೋರಿಕೆ ಪತ್ರವನ್ನು ಹಿಡಿದು ವರ್ಗಾವಣೆಗಾಗಿ ಬರುತ್ತಿದ್ದಾರೆ. …

Read More »

ಡಿಸೆಂಬರ್‌ನಲ್ಲಿ ಬೆಳಗಾವಿಗೆ ಬರಾಕ್‌ ಒಬಾಮಾ?

ಬೆಂಗಳೂರು: ಬರುವ ಡಿಸೆಂಬರ್‌ 24ಕ್ಕೆ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ ಆಚರಿಸಲಿದೆ. ಇದನ್ನು ಐತಿಹಾಸಿಕ ದಿನವನ್ನಾಗಿ ಆಚರಿಸಲು ಮುಂದಾಗಿರುವ ಕಾಂಗ್ರೆಸ್‌, ಅದೇ ದಿನ ಕುಂದಾನಗರಿಯಲ್ಲಿ ಪಕ್ಷದ ರಾಷ್ಟ್ರೀಯ ನಾಯಕರೆಲ್ಲರೂ ಆಗಮಿಸಿ ಕಾಂಗ್ರೆಸ್‌ ಸಭೆ ನಡೆಸಲಿದ್ದಾರೆ. ಈ ಕ್ಷಣಗಳಿಗೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಅವರೂ ಸಾಕ್ಷಿಯಾಗಲಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಭವನದಲ್ಲಿ ಬುಧವಾರ ಗಾಂಧಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ “ಗಾಂಧಿ ಭಾರತ’ ಕಾರ್ಯಕ್ರಮದಲ್ಲಿ …

Read More »

2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ

ಬೆಳಗಾವಿ: ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇದೇ 7 ಮತ್ತು 9 ರಂದು ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ(ಅ 3)ಹೇಳಿಕೆ ನೀಡಿದ್ದಾರೆ.   ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ”ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ …

Read More »

ವಿಮೆ ಹಣ ಜಮೆಗೆ ದ್ರಾಕ್ಷಿ ಬೆಳೆಗಾರರ ಆಗ್ರಹ

ವಿಜಯಪುರ: ದ್ರಾಕ್ಷಿ ಬೆಳೆಯ ವಿಮೆ ತುಂಬಿದ ರೈತರಿಗೆ ಅವಧಿ ಮುಗಿದರೂ ಹಣ ಬಿಡುಗಡೆ ಆಗಿಲ್ಲ. ಕೂಡಲೇ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಅಭಯಕುಮಾರ ನಾಂದ್ರೇಕರ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಟಿ.ಭೂಬಾಲನ ಅವರಿಗೆ ಮನವಿ ಸಲ್ಲಿಸಲಾಯಿತು.   ಮನವಿ ಸಲ್ಲಿಸಿ ಮಾತನಾಡಿದ ನಾಂದ್ರೇಕರ್ ಈಗಾಗಲೇ ನಮ್ಮ ನೆರೆ ಜಿಲ್ಲೆಯಾದ ಬೆಳಗಾವಿ ದ್ರಾಕ್ಷಿ ಬೆಳೆಗಾರರಿಗೆ ಪ್ರತಿ ಹೆಕ್ಟೇರ್‌ಗೆ ₹1.80 ಲಕ್ಷ ಜಮೆಯಾಗಿದೆ. ಹವಾಮಾನ ವಿಜಯಪುರ ಮತ್ತು ಬಾಗಲಕೋಟೆಯಲ್ಲಿ …

Read More »

ದೇವಸ್ಥಾನದ ಮಹಿಳಾ ಅರ್ಚಕಿಯೊಬ್ಬರು, ನೇಣು ಬಿಗಿದುಕೊಂಡು ಆತ್ಮಹತ್ಯೆ

ರಾಯಚೂರು : ಜೀವನದಲ್ಲಿ ಮಾನಸಿಕವಾಗಿ ನೊಂದಿದ್ದರಿಂದ ದೇವಸ್ಥಾನದ ಮಹಿಳಾ ಅರ್ಚಕಿಯೊಬ್ಬರು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಡೊಂಗರಾಂಪೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬೆಟ್ಟದ ಪರಮೇಶ್ವರ ದೇವಸ್ಥಾನದಲ್ಲಿ ಅರ್ಚಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಂಜುಳಾ (42) ಎನ್ನುವವರು ಒಂಟಿಯಾಗಿ ವಾಸಿಸುತ್ತಿದ್ದರು. ಜೀವನದಲ್ಲಿ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತಂತೆ ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬೆಳಗಾವಿ ಶಾಲೆಗಳಲ್ಲಿ ‘ಡೆಸ್ಕ್‌ ಅಭಿಯಾನ’: ಅಗತ್ಯ ಶಾಲೆಗಳಿಗೆ ವಿತರಣೆ

ಬೆಳಗಾವಿ: ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಬಳಕೆಯಾಗದೇ ಇರುವ ಹೆಚ್ಚುವರಿ ಡೆಸ್ಕ್‌ಗಳನ್ನು ಅಗತ್ಯವಿರುವ ಶಾಲೆಗಳಿಗೆ ನೀಡಿ, ಸದ್ಬಳಕೆ ಮಾಡುವ ‘ಡೆಸ್ಕ್ ಅಭಿಯಾನ’ ಆರಂಭಗೊಂಡಿದೆ. ಡೆಸ್ಕ್‌ಗಳ ಕೊರತೆ ನೀಗಿಸಲು ಜಿಲ್ಲಾ ಪಂಚಾಯಿತಿ ಮತ್ತು ಶಾಲಾ ಶಿಕ್ಷಣ ಇಲಾಖೆಯು ಆರಂಭಿಸಿರುವ ಈ ಅಭಿಯಾನವು ಕೆಲ ಶಾಲೆಗಳಲ್ಲಿ ಡೆಸ್ಕ್‌ಗಳ ಕೊರತೆ ನೀಗಿಸಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಸಮೀಕ್ಷೆ ನಡೆಸಿ, ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 1,407, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 6,080 …

Read More »

ಕಿತ್ತೂರು ಉತ್ಸವಕ್ಕೆ ಚಾಲನೆ ವೇಳೆ CM ಸಿದ್ದರಾಮಯ್ಯ ಬಟ್ಟೆಗೆ ತಾಕಿದ ಬೆಂಕಿ!

ಬೆಳಗಾವಿ: ಕಿತ್ತೂರು ವಿಜಯ ಜ್ಯೋತಿ ಯಾತ್ರೆ ರಥದ ಮುಂದೆ ಸಿಎಂ ಸಿದ್ದರಾಮಯ್ಯ ( CM Siddaramaiah) ದೀಪ ಬೆಳಗಿಸುವಾಗ ಆಕಸ್ಮಿಕವಾಗಿ ಸಣ್ಣ ಕಿಡಿ ಹಾರಿ ಸಿಎಂ ದೋತಿಗೆ ತಗುಲಿತು. ತಕ್ಷಣ ಭದ್ರತಾ ಸಿಬ್ಬಂದಿ ಕಿಡಿಯನ್ನು ನಂದಿಸಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಕಿತ್ತೂರು ಉತ್ಸವ ಜ್ಯೋತಿಗೆ ಚಾಲನೆ ನೀಡುವಾಗ ಸಿಎಂ ( CM ) ಬಟ್ಟೆಗೆ ಸಣ್ಣ ಬೆಂಕಿಯ ಕಿಡಿ ತಾಗಿದೆ. …

Read More »

ಕಾರಿಗೆ ಬೆಂಕಿ ತಗುಲಿ ವ್ಯಕ್ತಿ ಮೃತ್ಯು

ಚಿಕ್ಕೋಡಿ: ಕಾರಿಗೆ ಬೆಂಕಿ ತಗುಲಿ ಓರ್ವ ವ್ಯಕ್ತಿ ಸುಟ್ಟು ಕರಕಲಾದ ಘಟನೆ ತಾಲೂಕಿನ ಜೈನಾಪೂರ ಗ್ರಾಮದ ಬಳಿ ಆ.1ರ ಮಂಗಳವಾರ ಮಧ್ಯರಾತ್ರಿ ಸಂಭವಿಸಿದೆ. ಚಿಕ್ಕೋಡಿ ನಗರದ ಮುಲ್ಲಾ ಪ್ಲಾಟ್ ನಿವಾಸಿ ಪೈರೋಜ ಬಡಗಾಂವ(40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಾರು ಮಧ್ಯರಾತ್ರಿ ಬೆಂಕಿಗೆ ಧಗಧಗ ಹೊತ್ತಿ ಉರಿದಿದೆ. ಕಾರಿನಲ್ಲಿದ್ದ ವ್ಯಕ್ತಿ ಸುಟ್ಟು ಕರಕಲಾಗಿದ್ದಾರೆ. ಇದು ಅಪಘಾತವೋ ಅಥವಾ ಕೊಲೆಯೋ ಎಂಬ ಸಂಶಯ ವ್ಯಕ್ತವಾಗಿದೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ …

Read More »

ಮುಡಾ ಹಗರಣ : ದೂರುದಾರ ಸ್ನೇಹಮಯಿ ಕೃಷ್ಣಗೆ ಇಡಿ ನೋಟಿಸ್‌‍

ಬೆಂಗಳೂರು,ಅ.2- ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್‌‍ ನೀಡಿದ್ದಾರೆ. ಮೊದಲ ಬಾರಿಗೆ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಪ್ರಕರಣದ ಸಾಕ್ಷ್ಯಾಧಾರ ಮತ್ತು ದಾಖಲೆ ಸಲ್ಲಿಸುವಂತೆ ಇ.ಡಿ ಸಮನ್‌್ಸ ನೀಡಿದೆ. ಈ ಮೂಲಕ ಇ.ಡಿ ಅಧಿಕೃತವಾಗಿ ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದಂತಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶಾಂತಿನಗರದಲ್ಲಿರುವ ನಿರ್ದೇಶನಾಲಯದ ಕಚೇರಿಗೆ …

Read More »

ಬಿಗ್ ಬಾಸ್ ಮನೆಯಿಂದ ಫೈರ್ ಬ್ರ್ಯಾಂಡ್ ‘ಚೈತ್ರಾ ಕುಂದಾಪುರ’ ಔಟ್ ..?

ಬೆಂಗಳೂರು : ಕಳೆದ ಭಾನುವಾರದಿಂದ ಬಿಗ್ ಬಾಸ್ ಸೀಸನ್ 11 ಆರಂಭವಾಗಿದ್ದು , ಸ್ಪರ್ಧಿಗಳ ಅಸಲಿ ಆಟ ಶುರುವಾಗಿದೆ. ಮೊದಲ ವಾರವೇ ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಔಟ್ ಆಗಲಿದ್ದಾರಾ ಎಂಬ ಪ್ರಶ್ನೆ ಹಲವರನ್ನು ಕಾಡುತ್ತಿದೆ. ಹೌದು. ಚೈತ್ರಾ ಕುಂದಾಪುರ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರ ಕಳುಹಿಸುವಂತೆ ಕಲರ್ಸ್ ಕನ್ನಡ ಚಾನಲ್ ಗೆ ನೊಟೀಸ್ ನೀಡಲಾಗಿದೆ.     ವರ್ಷದ ಹಿಂದಷ್ಟೇ ಖ್ಯಾತ ಉದ್ಯಮಿ ಗೋವಿಂದಬಾಬು ಪೂಜಾರಿ …

Read More »