Breaking News
Home / ಜಿಲ್ಲೆ (page 23)

ಜಿಲ್ಲೆ

ಬಾಗಲಕೋಟೆ: RSS ಮುಖಂಡ ಹೃದಯಾಘಾತದಿಂದ ಕಾರಿನಲ್ಲೇ ಸಾವು

ಬಾಗಲಕೋಟೆ: ಆರ್​ಎಸ್​ಎಸ್​ ಮುಖಂಡರೊಬ್ಬರು ಹೃದಯಾಘಾತದಿಂದ ಕಾರಿನಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಲೋಕಾಪೂರ ಪಟ್ಟಣದ ಬಳಿ ನಡೆದಿದೆ. ಸಿದ್ದು ಚಿಕ್ಕದಾನಿ ಮುಧೋಳ (55) ಮೃತರು. ಇವರು ಆರ್​​ಎಸ್​ಎಸ್​ನಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಸಿದ್ದು ಕಳೆದ ರಾತ್ರಿ ಬಾಗಲಕೋಟೆ ಹೋಗಿ ವಾಪಸ್​ ಬರುವಾಗ ಈ ಘಟನೆ ಸಂಭವಿಸಿದೆ. ಮುಧೋಳ ಪಟ್ಟಣದ ನಿವಾಸಿಯಾಗಿರುವ ಇವರು, ಶಿವಾಜಿ ಸರ್ಕಲ್ ಬಳಿ ಮಂಜುನಾಥ ಮೊಬೈಲ್ ಶಾಪ್ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು. ನಿನ್ನೆ ರಾತ್ರಿ ಲೋಕಾಪೂರ ಪಟ್ಟಣದ ಸಮೀಪ ಇರುವ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಅಥಣಿಯಲ್ಲಿ ಕಾಣೆಯಾದ ವಿದ್ಯಾರ್ಥಿಗಳು ಮಹಾರಾಷ್ಟ್ರದ ರತ್ನಗಿರಿಯಲ್ಲಿ ಪತ್ತೆ

ಚಿಕ್ಕೋಡಿ(ಬೆಳಗಾವಿ): ಶಾಲೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಮೂರು ಮಕ್ಕಳು ಕಾಣೆಯಾಗಿರುವ ಪ್ರಕರಣದಲ್ಲಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಮಕ್ಕಳು ಪತ್ತೆಯಾಗಿದ್ದು, ಪೋಷಕರ ಆತಂಕ ದೂರಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನಿವಾಸಿಯ ಮೂವರು ವಿದ್ಯಾರ್ಥಿಗಳು ಶುಕ್ರವಾರ ಸಂಜೆ ಅಥಣಿ ಪಟ್ಟಣದಲ್ಲಿ ಕಾಣೆಯಾಗಿದ್ದರು. ಶಾಲೆಗೆ ಹೋಗಿ ಬರುತ್ತೇನೆ ಎಂದು ಮಕ್ಕಳು ಮರಳಿ ಮನೆಗೆ ಬಾರದೆ ಇದ್ದಾಗ ಕುಟುಂಬಸ್ಥರು ಆತಂಕಗೊಂಡು ಅಥಣಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಕುಟುಂಬಸ್ಥರು ಶೋಧ ಕಾರ್ಯ ನಡೆಸಿದರು, ಹುಡುಕಾಟ ಸಮಯದಲ್ಲಿ …

Read More »

ಹೊಸದಾಗಿ 188 ಇಂದಿರಾ ಕ್ಯಾಂಟೀನ್ ತೆರೆಯಲಿದ್ದೇವೆ: ಭೈರತಿ ಸುರೇಶ್​

ಬೆಳಗಾವಿ : ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ರಾಜ್ಯಾದ್ಯಂತ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ತೆರೆಯಲಿದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್​ ತಿಳಿಸಿದ್ದಾರೆ. ಬೆಳಗಾವಿಯಲ್ಲಿಂದು ರಾಣಿ ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ಇಂದಿರಾ ಕ್ಯಾಂಟೀನ್​ ತುಂಬಾ ಸಂಕಷ್ಟದಲ್ಲಿವೆ ಎಂಬ ಪ್ರಶ್ನೆಗೆ, “ಹಿಂದಿನ ಬಿಜೆಪಿ ಸರ್ಕಾರ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಯೋಜನೆಗೆ ಕೆಟ್ಟ ಹೆಸರು ತರಲು ಸರಿಯಾಗಿ ನಿರ್ವಹಣೆ ಮಾಡದೇ ಕ್ಯಾಂಟೀನ್​ಗಳನ್ನು ಮುಚ್ಚುವ …

Read More »

*ತಿಂಗಳೊಳಗೆ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರ ಜಮೀನುಗಳಿಗೆ ನೀರು ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ರಾಮೇಶ್ವರ ಏತ ನೀರಾವರಿ ಯೋಜನೆಯ ವೆಂಕಟಾಪೂರ ಮುಖ್ಯ ಕಾಲುವೆಯನ್ನು ಪರಿಶೀಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ರಾಮೇಶ್ವರ ಏತ ನೀರಾವರಿ ಯೋಜನೆಯಡಿ ಇದುವರೆಗೂ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರಿಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಭಾಗದ ರೈತರಿಗೆ ತಮ್ಮ ಜಮೀನುಗಳಿಗೆ ನೀರು ಪೂರೈಸಲು ಹೊಸ ಚೇಂಬರ್ ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು …

Read More »

ನಕಲಿ ಕಾರ್ಮಿಕ ಕಾರ್ಡ್​ಗಳ ರದ್ದತಿಗೆ ಸಚಿವ ಸಂತೋಷ್ ಲಾಡ್ ಸೂಚನೆ

ಬೆಳಗಾವಿ: ”ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರು ನಕಲಿ ದಾಖಲಾತಿ ಸೃಷ್ಟಿಸಿ ಕಾರ್ಮಿಕ ಕಾರ್ಡ್​ಗಳನ್ನು ಪಡೆದು ಫಲಾನುಭವಿಗಳೆಂದು ನೋಂದಾಯಿತರಾಗಿ ವಿವಿಧ ಧನ ಸಹಾಯಗಳನ್ನು ಪಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಅಂಥವರ ನೋಂದಣಿಯನ್ನು ರದ್ದುಗೊಳಿಸಬೇಕು. ಅಲ್ಲದೇ ಮಂಡಳಿಯ ಯಾವುದೇ ಸೌಲಭ್ಯಗಳನ್ನು ಅವರಿಗೆ ನೀಡದಂತೆ ತಡೆಹಿಡಿಯಬೇಕು” ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ನಡೆದ ಕಾರ್ಮಿಕ ಇಲಾಖೆಯ ಪ್ರಾದೇಶಿಕ ಮಟ್ಟದ ಇಲಾಖೆ ಅಧಿಕಾರಿಗಳ …

Read More »

ಕ್ಷೇತ್ರದಲ್ಲಿ ಕೆಲಸ, ಕಾರ್ಯಗಳಿಲ್ಲದೆ ಶಾಸಕರು ಖಾಲಿ ಕುಳಿತಿದ್ದೇವೆ: ರಾಜು ಕಾಗೆ ಅಸಮಾಧಾನ

ಚಿಕ್ಕೋಡಿ (ಬೆಳಗಾವಿ) : ಸರ್ಕಾರ ರಚನೆಯಾಗಿ ನಾಲ್ಕೈದು ತಿಂಗಳಾದರೂ ಇನ್ನೂ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಯಾಗದೆ ತೊಂದರೆಯಾಗುತ್ತಿದೆ. ಹೀಗಾಗಿ ಶಾಸಕರು ಖಾಲಿ ಕುಳಿತಿದ್ದೇವೆ ಎಂದು ಶಾಸಕ ರಾಜು ಕಾಗೆ ಹೇಳಿದ್ದಾರೆ. ಬುಧವಾರ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಗ್ರಾಮದಲ್ಲಿ ತಮ್ಮ ಸ್ವಗೃಹದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಕ್ಷೇತ್ರದ ಜನರು ರಸ್ತೆ, ನೀರಾವರಿ ಯೋಜನೆ, ಸಮುದಾಯ ಭವನ, ಶಾಲೆ, ಗುಡಿ-ಗುಂಡಾರಗಳನ್ನು ಕೇಳುತ್ತಿದ್ದಾರೆ. ಶಾಸಕರ ನಿಧಿಗೆ 50 ಲಕ್ಷ ರೂ ಹಾಕಿದ್ದೇವೆ ಎಂದು ಸರ್ಕಾರ …

Read More »

ಎಗ್ಗಿಲ್ಲದೆ ಸಾಗುತ್ತಿದೆ ಮಣ್ಣು ಗಣಿಗಾರಿಕೆ

ಬಾಗಲಕೋಟೆ, ಅಕ್ಟೋಬರ್​ 04: ಆ‌ ನಗರದ ಸುತ್ತಮುತ್ತ ಗುಡ್ಡಬೆಟ್ಟಗಳಿವೆ. ಕೆಲ‌ವರ ಖಾಸಗಿ ಜಮೀನುಗಳು ಕೂಡ ಬೆಟ್ಟದ ರೀತಿಯಲ್ಲೇ ಇವೆ. ಆದರೆ ಇಂತಹ ಜಾಗದಲ್ಲಿ ಮಣ್ಣು ಗಣಿಗಾರಿಕೆ (mud mining) ಎಗ್ಗಿಲ್ಲದೆ ಸಾಗುತ್ತಿದೆ. ಕೆಲವರು ನಿಯಮ ಪಾಲಿಸಿದರೆ ಬಹುತೇಕರು ನಿಯಮ ಉಲ್ಲಂಘಿಸಿ ಮಣ್ಣು ಗಣಿಗಾರಿಕೆ ‌ನಡೆಸುತ್ತಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ಮುಚಖಂಡಿ, ಸೀಮಿಕೇರಿ ಗದ್ದನಕೇರಿ ವ್ಯಾಪ್ತಿಯಲ್ಲಿ ಮಣ್ಣು ಗಣಿಗಾರಿಕೆ ಎಗ್ಗಿಲ್ಲದೆ ಸಾಗುತ್ತಿದೆ. ಸರಕಾರಿ ಜಾಗೆಯಲ್ಲಿ ಬೆಟ್ಟ ಗುಡ್ಡ ಅಗೆದು ಮಣ್ಣು ಮಾರಾಟ ಮಾಡುತ್ತಿದ್ದಾರೆ. ಜೊತೆಗೆ ಖಾಸಗಿ ಜಮೀನುಗಳ …

Read More »

ಸಾಂಬ್ರಾ ವಿಮಾನ ನಿಲ್ದಾಣದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚುವರಿ ಜಮೀನಿನ ಬೇಡಿಕೆ ಇಟ್ಟ ಹಿನ್ನೆಲೆ ಮಂಗಳವಾರ ಸ್ಥಳ ಪರಿಶೀಲನೆ

ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣ ಅಭಿವೃದ್ಧಿಗೆ ಎಲ್ಲ ರೀತಿಯಿಂದಲೂ ನನ್ನ ಸಹಕಾರವಿದೆ. ಆದರೆ ಸುತ್ತಲಿನ ಹಳ್ಳಿಗಳಿಗೆ ಮತ್ತು ರೈತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚುವರಿ ಜಮೀನಿನ ಬೇಡಿಕೆ ಇಟ್ಟ ಹಿನ್ನೆಲೆ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದ ನಂತರ ನಡೆದ ಉನ್ನತಾಧಿಕಾರ ಮಟ್ಟದ ಸಭೆಯಲ್ಲಿ …

Read More »

*ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ* : ಬಿಸಿಯೂಟ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಕುರಿತಂತೆ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆದು ಅವರ ಸಮಸ್ಯೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಗೃಹ ಕಛೇರಿಯಲ್ಲಿ ಗೋಕಾಕ-ಮೂಡಲಗಿ ತಾಲೂಕುಗಳ ಮಧ್ಯಾಹ್ನದ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ಕಾರ್ಯಕರ್ತೆಯರನ್ನುದ್ಧೇಶಿಸಿ ಮಾತನಾಡಿದ ಅವರು, ನಿಮ್ಮೆಲ್ಲ ಹೋರಾಟಗಳಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದರು. ಕಳೆದ 2 ವರ್ಷಗಳಿಂದ …

Read More »