ರಟ್ಟೀಹಳ್ಳಿ ಕರ್ನಾಟಕವೋ, ಪಾಕಿಸ್ತಾನದ ಭಾಗವೋ?: ಪ್ರಮೋದ ಮುತಾಲಿಕ್ ಹಾವೇರಿ: ‘ಜಿಲ್ಲೆಯ ರಟ್ಟೀಹಳ್ಳಿಯಲ್ಲಿ ಗುರುವಾರ ಸಂಜೆ ಹಿಂದೂ ಮಹಾಸಭಾ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ರಟ್ಟೀಹಳ್ಳಿ ಪ್ರವೇಶಿಸದಂತೆ ಜಿಲ್ಲಾಧಿಕಾರಿಯವರು ನನಗೆ ನಿರ್ಬಂಧ ಹೇರಿದ್ದಾರೆ. ರಟ್ಟೀಹಳ್ಳಿ ಕರ್ನಾಟಕ ಜಿಲ್ಲಾಧಿಕಾರಿ ನಿಷೇಧ ಹೇರಿದ್ದಾರೆ. ರಟ್ಟೀಹಳ್ಳಿ ಕರ್ನಾಟಕದಲ್ಲಿ ಇದೆಯೋ ಅಥವಾ ಪಾಕಿಸ್ತಾನದ ಭಾಗವೋ’ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಪ್ರಶ್ನಿಸಿದರು. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಭಾಗವಹಿಸಿದ ಕಾರ್ಯಕ್ರಮಗಳಲ್ಲಿ ಎಲ್ಲೂ …
Read More »ಸೆಪ್ಟೆಂಬರ್ 13ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ-ನೋಂದಾಯಿಸಿಕೊಳ್ಳುವುದು ಹೇಗೆ?-ಇಲ್ಲಿದೆ ಮಾಹಿತಿ
ವಿವಿಧ ಕಂಪನಿಗಳ ವತಿಯಿಂದ ಜಿಲ್ಲಾವಾರು ಉದ್ಯೋಗ ಮೇಳಗಳನ್ನು ಮಾಡಲಾಗುಯತ್ತಿದೆ. ಹಾಗೆಯೇ ಇದೀಗ ಬೆಂಗಳೂರಿನಲ್ಲಿ ನಾಳೆ ಅಂದರೆ ಸೆಪ್ಟೆಂಬರ್ 13ರಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಹಾಗಾದರೆ ಎಷ್ಟು ಕಂಪನಿಗಳು ನೋಂದಣಿಯಾಗಿವೆ ಹಾಗೂ ಎಷ್ಟು ಮಂದಿಗೆ ಆಹ್ವಾನ ನೀಡಲಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ಸೆಪ್ಟೆಂಬರ್ 13ರಂದು ದೇವನಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಬೃಹತ್ ಉದ್ಯೋಗಮೇಳಕ್ಕೆ ಇದುವರೆಗೆ 116 ಕಂಪನಿಗಳು ನೋಂದಾಯಿಸಿಕೊಂಡಿದ್ದು, ವಿವಿಧ ಕಂಪನಿ ಹಾಗೂ …
Read More »ಉತ್ತರ ಕರ್ನಾಟಕದಲ್ಲಿ ಮಠ -ಮಾನ್ಯಗಳು ಶೈಕ್ಷಣಿಕ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿವೆ:ಸತೀಶ್ ಜಾರಕಿಹೊಳಿ
ಹುಕ್ಕೇರಿ: ಉತ್ತರ ಕರ್ನಾಟಕದಲ್ಲಿ ಮಠ -ಮಾನ್ಯಗಳು ಶೈಕ್ಷಣಿಕ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿವೆ. ಈ ನಿಟ್ಟಿನಲ್ಲಿ ಔಜೀಕರ ಜ್ಞಾನಯೋಗಾಶ್ರಮವು ಶಿಕ್ಷಣ ಸಂಸ್ಥೆ ಆರಂಭಿಸಲು ಮುಂದಾದಲ್ಲಿ ಎಲ್ಲ ರೀತಿಯ ಸಹಾಯ, ಸಹಕಾರ ನೀಡಲು ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಪಟ್ಟಣದ ಹೊರವಲಯದ ಕ್ಯಾರಗುಡ್ ಬಳಿಯ ಔಜೀಕರ ಜ್ಞಾನಯೋಗಾಶ್ರಮದಲ್ಲಿ ಔಜೀಕರ ಮಹಾರಾಜರ ಹಾಗೂ ಜಗನ್ನಾಥ ಮಹಾರಾಜರ ಸ್ಮರಣಾರ್ಥ ಮಂಗಳವಾರ ಏರ್ಪಡಿಸಿದ್ದ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವದಲ್ಲಿ …
Read More »ಅಳಿವಿನಂಚಿಗೆ ಗೊರವರ ಕುಣಿತ; ಈ ಕಲೆಯಿಂದ ದೂರವಾದ ಯುವ ಸಮುದಾಯ
ವಿಜಯಪುರ(ದೇವನಹಳ್ಳಿ): ಜಾನಪದ ನೃತ್ಯಗಳಲ್ಲಿ ಗೊರವರ ಕುಣಿತವೂ ಒಂದು. ಆದರೆ, ಈಚೆಗೆ ಕಣ್ಮರೆಯಾಗುತ್ತಿದೆ. ಯುವ ಸಮುದಾಯ ಈ ಕಲೆಯಿಂದ ದೂರ ಉಳಿದಿದೆ. ಶ್ರೀಮಂತ ಕಲೆಯೊಂದು ಅಳಿವಿನಂಚಿನಲ್ಲಿದೆ ಎಂದು ಕಲಾವಿದ ಕೃಷ್ಣಪ್ಪ ಆತಂಕ ವ್ಯಕ್ತಪಡಿಸುತ್ತಾರೆ. ‘ನಮ್ಮ ಹಿರಿಯರಿಂದ ಸಾಂಪ್ರದಾಯಿಕವಾಗಿ ಬಂದಿರುವ ಗೊರವರ ಕುಣಿತ ಆಧುನಿಕ ಸೆಳೆತಕ್ಕೆ ಸಿಲುಕಿದೆ. ನಮ್ಮ ತಲೆಮಾರಿಗೆ ಅಂತ್ಯವಾಗುವ ಆತಂಕವಿದೆ. ಯುವಕರು ಈ ನೃತ್ಯ ಮಾಡಲು ಮುಂದೆ ಬರುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸುತ್ತಾರೆ. 9ರಿಂದ 12 ಮಂದಿ ತಂಡ ಕಟ್ಟಿಕೊಂಡು ಏಳುಕೋಟಿ …
Read More »ಕೈ ಸರ್ಕಾರ ಬದಲಾಗಲು ಇನ್ನೂ 4 ದೀಪಾವಳಿ ಮುಗಿಯುವವರೆಗೆ ಕಾಯಬೇಕು: ಮಧು ಬಂಗಾರಪ್ಪ
ಬೆಳಗಾವಿ: ‘ದೀಪಾವಳಿ ನಂತರ ನಮ್ಮ ಸರ್ಕಾರ ಬೀಳುತ್ತದೆ ಎಂದು ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ. ಅವರು ಇನ್ನೂ ನಾಲ್ಕು ದೀಪಾವಳಿ ಮುಗಿಯುವವರೆಗೆ ಕಾಯಬೇಕು’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ವ್ಯಂಗ್ಯ ಮಾಡಿದರು. ‘ದೀಪಾವಳಿ ನಂತರ ಕಾಂಗ್ರೆಸ್ ಸರ್ಕಾರ ಬೀಳುತ್ತದೆ’ ಎಂಬ ಬಿಜೆಪಿ ನಾಯಕರ ಮಾತಿಗೆ ನಗರದಲ್ಲಿ ಬುಧವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ ಸಿದ್ದರಾಮಯ್ಯ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರನ್ನು ಕಂಡು ಬಿಜೆಪಿ, ಜೆಡಿಎಸ್ …
Read More »ಸತೀಶ ಜಾರಕಿಹೊಳಿಗೆ ಸಿಎಂ ಸ್ಥಾನ ಕೊಟ್ಟರೆ ಒಳ್ಳೆಯದು: ಶಾಸಕ ವಿಶ್ವಾಸ ವೈದ್ಯ
ಸತೀಶ ಜಾರಕಿಹೊಳಿಗೆ ಸಿಎಂ ಸ್ಥಾನ ಕೊಟ್ಟರೆ ಒಳ್ಳೆಯದು: ಶಾಸಕ ವಿಶ್ವಾಸ ವೈದ್ಯ ಸತೀಶ್ ಜಾರಕೊಹೊಳಿ ಪರ ಆಪ್ತನ ಬ್ಯಾಟಿಂಗ್ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗೋದಿಲ್ಲ ಮಂತ್ರಿಗಳು, ಶಾಸಕರು ಸಿಎಂ ಪರವಾಗಿದ್ದಾರೆ ಸಿಎಂ ಸಿದ್ದರಾಮಯ್ಯ ಖಂಡಿತ ಮುಂದುವರೀತ್ತಾರೆ ಸತೀಶ ಜಾರಕಿಹೊಳಿ ಮುಂದಿನ ಸಿಎಂ ಅಭಿಯಾನ ವಿಚಾರ ಅದೆಲ್ಲಾ ಹೈಕಮಾಂಡಗೆ ಬಿಟ್ಟ ವಿಚಾರ ಸಚಿವ ಸತೀಶ ಜಾರಕಿಹೊಳಿಗೆ ಸಿಎಂ ಸ್ಥಾನ ಕೊಟ್ಟರೆ ಒಳ್ಳೆಯದು! ಉತ್ತರ ಕರ್ನಾಟಕ ಅಭಿವೃದ್ಧಿ ಆಗುತ್ತೆ ನಮ್ಮ ಜಿಲ್ಲೆಯವರೆ ಸಿಎಂ …
Read More »ಸಿ.ಎಂ ಸ್ಥಾನಕ್ಕೆ ರೇಸ್‌ನಲ್ಲಿ ಯಾರೂ ಇಲ್ಲವೇ ಇಲ್ಲ: ದಿನೇಶ್ ಗುಂಡೂರಾವ್
ಬೆಳಗಾವಿ: ‘ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ. ಈಗ ಸಿ.ಎಂ ಸ್ಥಾನಕ್ಕೆ ರೇಸ್‌ನಲ್ಲಿ ಯಾರೂ ಇಲ್ಲವೇ ಇಲ್ಲ’ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು. ‘ದೀಪಾವಳಿ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ’ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಇಲ್ಲಿ ಬುಧವಾರ ಸುದ್ದಿಗಾರರಿಗೆ ಹೀಗೆ ಪ್ರತಿಕ್ರಿಯಿಸಿದ ಅವರು, ‘ಸ್ಥಿರವಾಗಿರುವ ನಮ್ಮ ಸರ್ಕಾರವನ್ನು ಸಹಿಸಿಕೊಳ್ಳಲು ಬಿಜೆಪಿಯವರಿಗೆ ಆಗುತ್ತಿಲ್ಲ. ಹಾಗಾಗಿ ಸರ್ಕಾರ ಬೀಳಿಸಲು, ಒಡೆಯಲು ಮತ್ತು ಆಪರೇಷನ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ಅಭಿವೃದ್ಧಿ …
Read More »ಸತೀಶ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ಸ್ವಾಗತ: ಬಿಜೆಪಿ ಶಾಸಕ ವಿಠ್ಠಲ ಹಲಗೇಕರ
ಬೆಳಗಾವಿ: ‘ಸಚಿವ ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿ ಇದ್ದಾರೆ. ಅವರೇ ಸಿ.ಎಂ ಆದರೆ ಸ್ವಾಗತ’ ಎಂದು ಖಾನಾಪುರ ಕ್ಷೇತ್ರದ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ ಹೇಳಿದರು. ಇಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸತೀಶ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಲಿದೆ. ಅವರು ಪಕ್ಷಾತೀತವಾಗಿ ಕೆಲಸ ಮಾಡಲಿದ್ದಾರೆ. ನಾನು ಪ್ರತಿನಿಧಿಸುವ ಖಾನಾಪುರ ಕ್ಷೇತ್ರವನ್ನು ಸಮೀಪದಿಂದ ನೋಡಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿಯೂ ಇಡೀ ಜಿಲ್ಲೆ ಓಡಾಡಿದ್ದಾರೆ. ಅವರು …
Read More »ಶಿವಾಪೂರ(ಹ) ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಅವಿರತ ಶ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ
ಶಿವಾಪೂರ(ಹ) ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಅವಿರತ ಶ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ ಅಡವಿ ಸಿದ್ಧೇಶ್ವರ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಅಂಕಲಗಿ ಶ್ರೀ ಮಠದ ಕಾರ್ಯಗಳನ್ನು ಪ್ರಶಂಶಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ಇತಿಹಾಸ ಪ್ರಸಿದ್ಧ ಅಂಕಲಗಿ ಅಡವಿ ಸಿದ್ಧೇಶ್ವರ ಮಹಾಸ್ವಾಮಿಗಳು ಇಲ್ಲಿ ಬಂದು ನೆಲೆಸಿರುವ ಇತಿಹಾಸಗಳಿದ್ದು, ಈ ಮಠಕ್ಕೆ ಭವ್ಯವಾದ ಪರಂಪರೆ ಇದೆ. ನಮ್ಮ ಕ್ಷೇತ್ರದ ಭಕ್ತಾಧಿಗಳು ಸೇರಿಕೊಂಡು ಶ್ರೀ ಮಠದ ಅಭಿವೃದ್ಧಿಗೆ ಪಣ ತೊಡೋಣ. ಮಠದ ವಿಷಯದಲ್ಲಿ …
Read More »ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಬಸ್
ಬೆಳಗಾವಿ: ರಸ್ತೆಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆಯೇ ಸರ್ಕಾರಿ ಬಸ್ ಹರಿದಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಲಗಲಿಯಲ್ಲಿ ನಡೆದಿದೆ. 10 ವರ್ಷದ ಸುನೀಲ್ ಮೃತ ಬಾಲಕ. ಶಾಲೆಗೆ ರಜೆಯಿದ್ದರೂ ವಿದ್ಯಾರ್ಥಿಗಳು ಟ್ಯೂಷನ್ ಕ್ಲಾಸ್ ಗೆ ಬಂದಿದ್ದರು. ಟ್ಯೂಷನ್ ಮುಗಿಸಿಕೊಂಡು ವಿದ್ಯಾರ್ಥಿಗಳು ರಸ್ತೆ ದಾಟಿ ರಸ್ತೆ ಪಕ್ಕದಲ್ಲಿ ನಿಂತಿದ್ದರು. ಈ ವೇಳೆ ಜವರಾಯನಂತೆ ಬಂದ ಬಸ್ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದಿದೆ. ಓರ್ವ ಬಾಲಕ ಸ್ಥಳದಲ್ಲೇ …
Read More »
Laxmi News 24×7