ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿದ್ದು ಇದರಿಂದ ಕೃಷ್ಣಾ ಘಟಪ್ರಭಾ ಮತ್ತು ದೂಧ್ ಗಂಗಾ ನದಿಗಳ ಒಳಹರಿವಿನ ಪ್ರಮಾಣದಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಕೃಷ್ಣಾ ನದಿಯ ಒಳಹರಿವಿನ ಪ್ರಮಾಣದಲ್ಲಿ ಒಂದು ಲಕ್ಷ ಕ್ಯೂಸೆಕ್ಸ್ ದಾಟಿದ್ದು ನದಿ ತೀರದ ಗ್ರಾಮಗಳಲ್ಲಿ ಇನ್ನೂ ಪ್ರವಾಹದ ಆತಂಕ ಮನೆ ಮಾಡಿದೆ. ಈಗ ಲಭ್ಯವಾದ ಮಾಹಿತಿಯಂತೆ ಮಹಾರಾಷ್ಟ್ರದ ರಾಜಾಪುರ ಬಳಿ ಕೃಷ್ಣಾ ನದಿಗೆ ಒಂದು ಲಕ್ಷ ಮತ್ತು ದೂಧ್ ಗಂಗಾ ನದಿಯಿಂದ …
Read More »ಡಿಕೆಶಿ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಲಿದ್ದಾರೆ ಯತ್ನಾಳ್!
ಬೆಂಗಳೂರು, ಆಗಸ್ಟ್ 29: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಸುಪ್ರೀಂಕೋರ್ಟ್ ಮೆಟ್ಟಿಲೇರಲಿದ್ದಾರೆ. ಕರ್ನಾಟಕ ಹೈಕೋರ್ಟ್ ಗುರುವಾರ ನೀಡಿರುವ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿದ್ದು, ಡಿ. ಕೆ. ಶಿವಕುಮಾರ್ ಕಾನೂನು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ. ಡಿ. ಕೆ. ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದ ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರದ …
Read More »ಕೊಯ್ನಾ ಜಲಾಶಯದಿಂದ ನೀರು ಬಿಡುವ ಸೂಚನೆ: ನದಿ ತೀರದಲ್ಲಿ ಎಚ್ಚರಿಕೆ
ಚಿಕ್ಕೋಡಿ: ಮಹಾರಾಷ್ಟ್ರ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಕೊಯ್ನಾ ಆಣೆಕಟ್ಟೆಯಿಂದ 32,100 ಕ್ಯುಸೆಕ್ ನೀರನ್ನು ಗುರುವಾರ ಬೆಳಿಗ್ಗೆ 6ರಿಂದ ಹರಿಬಿಡಲಾಗುವುದು ಎಂದು ಮಹಾರಾಷ್ಟ್ರದ ಅಧಿಕಾರಿಗಳು ತಿಳಿಸಿದ್ದಾರೆ. 105 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಈ ಜಲಾಶಯದಲ್ಲಿ 101.78 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಕೊಂಕಣ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದರಿಂದ ಆಣೆಕಟ್ಟೆಯಿಂದ ನೀರು ಬಿಡಲು ನಿರ್ಧರಿಸಲಾಗಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಕೃಷ್ಣಾ …
Read More »‘ಕೆರೆ ಬಳಿ ತಂದು ಕಸದ ಗುಂಪೆ ಹಾಕುತ್ತಾರೆ. ದಂಡೆ ಪಕ್ಕದಲ್ಲಿ ಶೌಚ ಮತ್ತು ಮೂತ್ರ ಮಾಡುತ್ತಾರೆ.
ಕಿತ್ತೂರು: ‘ಕೆರೆ ಬಳಿ ತಂದು ಕಸದ ಗುಂಪೆ ಹಾಕುತ್ತಾರೆ. ದಂಡೆ ಪಕ್ಕದಲ್ಲಿ ಶೌಚ ಮತ್ತು ಮೂತ್ರ ಮಾಡುತ್ತಾರೆ. ಮಾನವರ ಸತತ ಮಲೀನತೆಯ ‘ದಾಳಿ’ಗೆ ಒಳಗಾಗಿರುವ ಇಲ್ಲಿನ ಗುರುವಾರ ಪೇಟೆಯ ಐತಿಹಾಸಿಕ ರಣಗಟ್ಟಿ ಕೆರೆ ತನ್ನ ರಕ್ಷಣೆಗೆ ಮೊರೆ ಇಡುವಂತೆ ಭಾಸವಾಗುತ್ತಿದೆ’ ಎನ್ನುತ್ತಾರೆ ಜನರು. ‘ಈ ಕೆರೆಗೂ ಒಂದು ಐತಿಹಾಸಿಕ ಹಿನ್ನೆಲೆಯಿದೆ. ಕ್ರಾಂತಿನೆಲದ ರಕ್ತಲೇಪಿತ ಖಡ್ಗವನ್ನು ಇದೇ ನೀರಿನಲ್ಲಿ ತೊಳೆಯುತ್ತಿದ್ದರು. ಹಾವು ಕಡಿದರೆ ಇಲ್ಲಿನ ನೀರು ಕುಡಿಯಲು ಕೊಡುತ್ತಿದ್ದರು. ಒಂದು ಕಾಲಕ್ಕೆ ಔಷಧಿಯ …
Read More »ಹಣಬರ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ವ್ಯವಸ್ಥಿತ ಸಂಘಟನೆ ಮುಖ್ಯ: ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಹಿಂದುಳಿದ ಹಣಬರ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ವ್ಯವಸ್ಥಿತ ಸಂಘಟನೆ ಮುಖ್ಯವಾಗಿದೆ. ಈ ದಿಸೆಯಲ್ಲಿ ಸಮಾಜಕ್ಕೆ ಅಗತ್ಯವಿರುವ ಎಲ್ಲ ನೆರವನ್ನು ನೀಡಲು ಸಿದ್ಧ. ಸಮಾಜ ಬಾಂಧವರು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡುವ ಮೂಲಕ ಸಮಾಜವು ಮುಖ್ಯವಾಹಿನಿಗೆ ಬರಬೇಕಾದ ಅಗತ್ಯವಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಮಹಾಲಕ್ಷ್ಮೀ ಸಭಾ ಭವನದಲ್ಲಿ ಹಣಬರ (ಯಾದವ) ಸಮಾಜ ಕ್ಷೇಮಾಭಿವೃದ್ಧಿ ಸಂಘದ …
Read More »ಬಾಂಗ್ಲಾದೇಶದಂತೆ ‘ಪ್ರಧಾನಿ ಮೋದಿ’ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ : ಕಾಂಗ್ರೆಸ್ ಶಾಸಕ ‘ಜಿ.ಎಸ್ ಪಾಟೀಲ್’ ಶಾಕಿಂಗ್ ಹೇಳಿಕೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರವನ್ನ ಮೊಟಕುಗೊಳಿಸಿದರೆ ಬಾಂಗ್ಲಾದೇಶದಲ್ಲಿ ನಡೆದಂತೆ ಭಾರತವೂ ಪ್ರತಿಭಟನೆ ನಡೆಸಲಿದೆ ಎಂದು ಶಾಸಕ ಜಿ.ಎಸ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. “ಬಾಂಗ್ಲಾದೇಶದಂತೆ ಜನರು ಪ್ರಧಾನಿ ನರೇಂದ್ರ ಮೋದಿಯವರ ನಿವಾಸಕ್ಕೆ ಮುತ್ತಿಗೆ ಹಾಕುವ ದಿನ ದೂರವಿಲ್ಲ” ಎಂದಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರೂ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲರು ನಿರಾಕರಿಸಿದ್ದರೂ, ಕಾರ್ಯಕರ್ತರೊಬ್ಬರ ದೂರಿನ ಆಧಾರದ ಮೇಲೆ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು …
Read More »ಚಿಕ್ಕೋಡಿ: ಮಹಡಿ ಮನೆ ಮೊರೆ ಹೋದ ಜನರು
ಚಿಕ್ಕೋಡಿ: ಮೇಲಿಂದ ಮೇಲೆ ಬರುವ ನದಿ ಪ್ರವಾಹ ಭೀತಿಯಿಂದ ಹೊರ ಬರಲು ನದಿ ತೀರದ ಬಹುತೇಕ ಜನರು ಮಹಡಿ ಮನೆಗಳ ಮೊರೆ ಹೋಗಿದ್ದಾರೆ. ತೋಟದ ವಸತಿ ಪ್ರದೇಶದಲ್ಲೂ ಮಹಡಿ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಕೃಷ್ಣಾ ಹಾಗೂ ಉಪ ನದಿಗಳಲ್ಲಿ ಪ್ರತಿ ವರ್ಷ ಮಳೆಗಾಲ ಬಂದರೆ ಸಾಕು ನದಿ ತೀರದ ಜನರು ಜೀವ ಕೈಯಲ್ಲಿ ಹಿಡಿದು ದಿನ ದೂಡಬೇಕಾಗುತ್ತದೆ. ಅದರಲ್ಲೂ ಕೃಷ್ಣಾ ನದಿ ತೀರದ ಚಿಕ್ಕೋಡಿ ತಾಲ್ಲೂಕಿನ ಮಾಂಜರಿ, …
Read More »ಪಾಲಿಕೆಯಿಂದ ₹20 ಕೋಟಿ ಪರಿಹಾರ ನೀಡಲು ಸಮ್ಮತಿ ಇಲ್ಲ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ‘ಸ್ಮಾರ್ಟ್‌ಸಿಟಿ ಯೋಜನೆ ಅಡಿ ಮಾಡಿದ ಕಾಮಗಾರಿಗೆ ಮಹಾನಗರ ಪಾಲಿಕೆ ಪರಿಹಾರ ಕೊಡುವುದು ಸರಿಯಲ್ಲ. ಇದರಲ್ಲಿ ರಾಜಕೀಯ ಹಿತಾಸಕ್ತಿಯೂ ಇದೆ. ಈ ವಿಚಾರದಲ್ಲಿ ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ಕೈಗೊಂಡ ನಿರ್ಣಯಕ್ಕೆ ನನ್ನ ಸಮ್ಮತಿ ಇಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ‘ನಗರದಲ್ಲಿ ರಸ್ತೆಯೊಂದರ ವಿಸ್ತರಣೆಗಾಗಿ ಭೂ ಸ್ವಾಧೀನ ಮಾಡಿಕೊಳ್ಳಲಾಗಿದೆ. ಇದಕ್ಕೆ ₹20 ಕೋಟಿ ಪರಿಹಾರ ಕೊಡಬೇಕು ಎಂದು ಮಾಲೀಕರು ನ್ಯಾಯಾಲಯ ಮೊರೆ ಹೋಗಿದ್ದರು. ಪರಿಹಾರ …
Read More »ರಾಜಭವನ ಚಲೋ ಬದಲು ‘ಸೋನಿಯಾ ಗಾಂಧಿ ಮನೆ ಚಲೋ’ ಮಾಡಲಿ : HD ಕುಮಾರಸ್ವಾಮಿ ವ್ಯಂಗ್ಯ
ಮಂಡ್ಯ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಇದೆ 30 ರಂದು ರಾಜಭವನ ಚಲೋಗೆ ಕರೆ ನೀಡಿದೆ. ಈ ವಿಚಾರವಾಗಿ ಕೇಂದ್ರ ಸಚಿವ HD ಕುಮಾರಸ್ವಾಮಿ ರಾಜಭವನ ಚಲೋ ಬದಲು ಸೋನಿಯಾ ಗಾಂಧಿ ಮನೆ ಚಲೋ ಮಾಡಲಿ ಎಂದು ವ್ಯಂಗ್ಯವಾಡಿದ್ದಾರೆ. ಮಂಡ್ಯದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು 30ನೇ ತಾರೀಖು ರಾಜಭವನ ಚಲೋ ಮಾಡುತ್ತಿರುವುದಕ್ಕೆ …
Read More »ಶಾಂತಿ, ಸೌಹಾರ್ದದಿಂದ ಗಣೇಶ ಹಬ್ಬ ಆಚರಿಸಿ: ತಹಶೀಲ್ದಾರ್ ಮನವಿ
ಬೈಲಹೊಂಗಲ: ‘ಗೌರಿಗಣೇಶ ಹಬ್ಬವನ್ನು ಸಾರ್ವಜನಿಕರು ಶಾಂತಿ ಹಾಗೂ ಸೌಹಾರ್ದಯುತವಾಗಿ ಆಚರಿಸಬೇಕು. ಗಜಾನನ ಯುವಕ ಮಂಡಳಿಗ ಹಿರಿಯರು, ಮುಖಂಡರು ಯಾವುದೇ ಅಹಿತಕರ ಘಟನೆಗಳು ಆಗದಂತೆ ಮುಂಜಾಗೃತಿವಹಿಸಬೇಕು’ ಎಂದು ತಹಶೀಲ್ದಾರ್ ಎಚ್.ಎನ್.ಶಿರಹಟ್ಟಿ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾ ಭವನದಲ್ಲಿ ಗಣೇಶ ಹಬ್ಬ ಆಚರಣೆ ಅಂಗವಾಗಿ ಮಂಗಳವಾರ ಬೈಲಹೊಂಗಲ ಹಾಗೂ ನೇಸರಗಿ ಪೊಲೀಸ್ ಠಾಣೆ ವ್ಯಾಪ್ತಿಯ ಗಣೇಶ ಉತ್ಸವ ಮಂಡಳಿಗಳಿಗೆ ಮಂಗಳವಾರ ನಡೆದ ಶಾಂತಿಪಾಲನೆ ಸಭೆ ನೇತೃತ್ವ ವಹಿಸಿ ಮಾತನಾಡಿದರು. ಡಿವೈಎಸ್ಪಿ ರವಿ …
Read More »
Laxmi News 24×7