Breaking News

ಜಿಲ್ಲೆ

ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ’

ಬೆಳಗಾವಿ: ‘ಜಿಲ್ಲಾ ಕೇಂದ್ರಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೇ ನಿಗಮದ ಕೆಲಸ ನಿರ್ವಹಿಸಬೇಕು. ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿನ ಯೋಜನೆಗಳ ಅರ್ಜಿಗಳ ಅಂಕಿ- ಅಂಶಗಳ ಮಾಹಿತಿ ಅಧಿಕಾರಿಗಳಿಗೆ ಇರಬೇಕು’ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು. ನಗರದಲ್ಲಿ ಶನಿವಾರ ನಡೆದ ಎಸ್.ಸಿ, ಎಸ್.ಟಿ, ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳ …

Read More »

ಘಟಪ್ರಭಾ | ಮೊಹರಂ: ಶಾಂತಿಯುತ ಆಚರಣೆಗೆ ಸಲಹೆ

ಘಟಪ್ರಭಾ: ಮೊಹರಂ ಹಬ್ಬವನ್ನು ಶಾಂತಿ-ಸೌಹಾರ್ದದಿಂದ ಆಚರಿಸುವಂತೆ ಡಿ.ವೈ.ಎಸ್.ಪಿ ದೂದಫೀರ ಮುಲ್ಲಾ ಹೇಳಿದರು. ಇಲ್ಲಿಯ ಪೊಲೀಸ್‌ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಭಾವೈಕ್ಯದ ಸಂಕೇತವಾದ ಮೊಹರಂ ಆಚರಣೆ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈಭವೀಕರಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡದಂತೆ ನಿಗಾ ವಹಿಸಿ ಈ ಬಗ್ಗೆ ಜಾಗೃತರಾಗಿರಬೇಕೆಂದು ಹೇಳಿದರು. ಪಿ.ಐ ಬಸವರಾಜ ಕಾಮನಬೈಲು ಮಾತನಾಡಿ, ಮೊಹರಂ ತಾಬೂತು ಮತ್ತು ಪಂಜಾಗಳನ್ನು ಕೂಡ್ರಿಸುವ ಕಮೀಟಿಯವರು ನಿರ್ವಹಣೆ ಮತ್ತು ಸುರಕ್ಷತಾ ಕ್ರಮಗಳನ್ನು …

Read More »

ಚಿಕ್ಕೋಡಿ ಜಿಲ್ಲೆ ರಚನೆ: ಎಲ್ಲರೂ ಪರ, ಸರ್ಕಾರ ನಿರ್ಧಾರ ತಗೊಳ್ಳಲಿದೆ: ಸಚಿವ ಸತೀಶ್ ಜಾರಕಿಹೊಳಿ

ಚಿಕ್ಕೋಡಿ ಜಿಲ್ಲೆ ರಚನೆ: ಎಲ್ಲರೂ ಪರ, ಸರ್ಕಾರ ನಿರ್ಧಾರ ತಗೊಳ್ಳಲಿದೆ: ಸಚಿವ ಸತೀಶ್ ಜಾರಕಿಹೊಳಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಸ್ ನಿಲ್ದಾಣದ ಬಳಿ ಸರ್ಕಾರಿ ನೌಕರರ ಭವನ ಶಂಕುಸ್ಥಾಪನೆ ನೆರವೇರಿಸಿದರು. *ಚಿಕ್ಕೋಡಿ ಜಿಲ್ಲೆ ರಚನೆ:* “ಎಲ್ಲರೂ ಚಿಕ್ಕೋಡಿ ಜಿಲ್ಲೆಯ ರಚನೆಯ ಪರವಾಗಿದ್ದೇವೆ. ಯಾರೂ ಸಹ ವಿರೋಧಿಸುತ್ತಿಲ್ಲ. ಸರ್ಕಾರ ನಿರ್ಧಾರ ತಗೊಳ್ಳಲಿದೆ,” ಎಂದು ಮಾಧ್ಯಮಗಳಿಗೆ ಹೇಳಿದರು. *ಮಾಜಿ ಸಚಿವ ನಾಗೇಂದ್ರರ ಬಂಧನ:* “ಮುಂದಿನ ಕಾನೂನು ಪ್ರಕ್ರಿಯೆ …

Read More »

ನೋವು ನಿವಾರಣೆ ಹೆಸರಲ್ಲಿ ಭಕ್ತರಿಗೆ ಕೊಡಲಿ ಏಟು ಕೊಡುವ ಪೂಜಾರಿ!

ಬಾಗಲಕೋಟೆ : ಮುಗ್ದಜನರ ಅಸಹಾಯಕತೆಯನ್ನ ಲಾಭ ಮಾಡಿಕೊಂಡು ಪೂಜೆ-ಪುನಸ್ಕಾರ ಅಂತೆಲ್ಲಾ ಹೇಳಿ ದುಡ್ಡು ಪೀಕುವ ಬಾಬಾಗಳು, ಪವಾಡ ಪುರುಷರು, ದೇವ ಮಾನವರ ಬಗ್ಗೆ ನಾವು ಕೇಳಿರುತ್ತೇವೆ. ಪೂಜೆಗಳನ್ನ (Worship) ಮಾಡಿಸಿದರೆ ಒಳ್ಳೆಯದಾಗುತ್ತೇ, ನಿಮ್ಮ ಕಷ್ಟಗಳು ಪರಿಹಾರ ಸಿಗಲಿವೆ ಎಂದೆಲ್ಲಾ ಹೇಳಿ ಮೋಸ ಮಾಡುವ ಜನರನ್ನ ಕೇಳಿರುತ್ತೇವೆ. ಆದರೆ ಇಲ್ಲೊಂದು ಮೂಡನಂಬಿಕೆಯಿಂದ (Superstition) ನಡೆದಿರುವ ಘಟನೆ ಕೇಳಿದರೆ ಬೆಚ್ಚಿ ಬೀಳುತ್ತೀರಾ. ಪೂಜಾರಿಯೊಬ್ಬ (Priest) ದೇಹದ ಭಾಗಗಗಳು ನೋವು ಎಂದು ಬಂದವರಿಗೆ ಕೊಡಲಿಯಿಂದ …

Read More »

ಅಪಹರಣ: ಸಮಯಪ್ರಜ್ಞೆ ಮೆರೆದ ಬಾಲಕ

ಖಾನಾಪುರ: ಪಟ್ಟಣದಲ್ಲಿ ಶಾಲೆಗೆ ಹೋಗುವಾಗ ಬುಧವಾರ ಅಪಹರಣವಾಗಿದ್ದ 8ನೇ ತರಗತಿ ವಿದ್ಯಾರ್ಥಿಯೊಬ್ಬ ಅಪಹರಣಕಾರರ ಕೈಯಿಂದ ತಪ್ಪಿಸಿಕೊಂಡು ಮನೆಗೆ ಬಂದು ಸೇರಿದ್ದು, ಪ್ರಕರಣ ಸುಖಾಂತ್ಯ ಕಂಡಿದೆ. ಪಟ್ಟಣದ ಅಸೋಗಾ ರಸ್ತೆಯ ರೈಲು ನಿಲ್ದಾಣದ ಪೂರ್ವ ದಿಕ್ಕಿನ ಬಡಾವಣೆಯಲ್ಲಿ ವಾಸವಿದ್ದ ಆದಿತ್ಯ ಮಿಲಿಂದ ಶಿಂಧೆ (13) ಶಾಲೆಗೆ ಹೋಗಲು ರೈಲು ನಿಲ್ದಾಣದ ಬಳಿ ಬಂದಾಗ ಆತನ ಮೂಗಿಗೆ ಅಪರಿಚಿತರು ಹಿಂದಿನಿಂದ ಪ್ರಜ್ಞೆ ತಪ್ಪಿಸುವ ಔಷಧವಿರುವ ಕರವಸ್ತ್ರವನ್ನು ಹಿಡಿದು ಪ್ರಜ್ಞೆ ತಪ್ಪಿಸಿದ್ದಾರೆ. ಬಳಿಕ ಬಾಲಕನನ್ನು …

Read More »

ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಠಾಚಾರ ಸಹಿಸಲ್ಲ: ಶಾಸಕ ರಮೇಶ ಜಾರಕಿಹೊಳಿ

ಗೋಕಾಕ: ‘ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ನಡೆದರೆ ಸಹಿಸಲ್ಲ, ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ರಮೇಶ ಜಾರಕಿಹೊಳಿ ಗುಡುಗಿದರು. ಇಲ್ಲಿನ ನಗರಸಭೆ ಸಮುದಾಯ ಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ತಾಲ್ಲೂಕು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಹಾಗೂ ಗೋಕಾಕ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ …

Read More »

ಒಂದನೇ ತರಗತಿಗೆ ಪ್ರವೇಶ: ಗರಿಷ್ಠ ವಯೋಮಿತಿ 8 ವರ್ಷಕ್ಕೆ ಏರಿಕೆ

ಬೆಂಗಳೂರು: ಒಂದನೇ ತರಗತಿ ಪ್ರವೇಶಕ್ಕೆ ಇದ್ದ ಮಕ್ಕಳ ಗರಿಷ್ಠ ವಯೋಮಿತಿಯನ್ನು ಎಂಟು ವರ್ಷಕ್ಕೆ ಹೆಚ್ಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. 2025 -26 ನೇ ಸಾಲಿನಿಂದ ಈ ನಿಯಮ ಅನ್ವಯವಾಗುತ್ತದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ಕನಿಷ್ಠ ವಯೋಮಿತಿಯನ್ನು ಆರು ವರ್ಷಗಳಿಗೆ ಕಡ್ಡಾಯಗೊಳಿಸಿದ ಕಾರಣ ಗರಿಷ್ಠ ವಯೋಮಿತಿಯಲ್ಲಿಯೂ ಹೆಚ್ಚಳ ಮಾಡಲಾಗಿದೆ. ಎಲ್ಕೆಜಿ ಪ್ರವೇಶಕ್ಕೆ 4 ವರ್ಷ, ಯುಕೆಜಿಗೆ 5 ವರ್ಷ ಕನಿಷ್ಠ …

Read More »

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಒಂದು‌ ಕಳಂಕ;ಸತೀಶ್‌ ಜಾರಕಿಹೊಳಿ

ಬೆಳಗಾವಿ: ವಾಲ್ಮೀಕಿ ನಿಗಮದ ಪ್ರಕರಣ ಸದ್ಯ ತನಿಖಾ ಹಂತದಲ್ಲಿದ್ದು, ಈ ಪ್ರಕರಣದಲ್ಲಿ ಮಂತ್ರಿಗಳು ಹಾಗೂ ಶಾಸಕರು ಭಾಗಿಯಾಗಿದ್ದರೆ ಖಂಡಿತವಾಗಿ ಅದು ಕಳಂಕ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಶುಕ್ರವಾರ ಬೆಳಗಾವಿ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ವಾಲ್ಮೀಕಿ ಪ್ರಕರಣ ತನಿಖಾ ಹಂತದಲ್ಲಿದ್ದು, ದಾಖಲೇ ನೋಡಿದ ಮೇಲೆಯೇ ಈ ಪ್ರಕರಣ ಗೊತ್ತಾಗಲಿದೆ. ತಕ್ಷಣ ಈ ಪ್ರಕರಣ ಹೀಗೆ ಇದೆ ಎಂದು ಹೇಳಲು ಕಷ್ಟ ಎಂದು …

Read More »

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. #AparnaVastarey #Aparna #Death

ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅಪರ್ಣಾ ಅವರು ಮೃತರಾಗಿದ್ದಾರೆ. ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಅವರು ಇಂದು (ಜುಲೈ 11) ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. #AparnaVastarey #Aparna #Death

Read More »

ಅನುದಾನವೆಲ್ಲಾ ಗ್ಯಾರಂಟಿಗೆ ಹೋಗ್ತಿದೆ, ರಾಜ್ಯದಲ್ಲಿ ಅಭಿವೃದ್ಧಿ ಅಸಾಧ್ಯ! ರಾಯರೆಡ್ಡಿ

ಕೊಪ್ಪಳ: 5 ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಮುಂದಿಟ್ಟುಕೊಂಡು ಕಾಂಗ್ರೆಸ್ (Congress) ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ. ಆದರೆ ಅವುಗಳನ್ನ ಜಾರಿಗೆ ತಂದು ನಿರ್ವಹಣೆ ಮಾಡುವುದು ಚುನಾವಣೆಗೂ ಮುಂಚೆ ಹೇಳಿದಷ್ಟು ಸುಲಭವಾಗಿಲ್ಲ. ಕಾಂಗ್ರೆಸ್​ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಈಗಾಗಲೇ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಕೊಕ್ಕೆ ಬಿದ್ದಿದೆ. ಇದನ್ನ ಹೀಗಾಗಲೇ ಸ್ವತಃ ಕಾಂಗ್ರೆಸ್​ ನಾಯಕರೇ ಒಪ್ಪಿಕೊಂಡಿದ್ದಾರೆ. ಇದೀಗ ಮುಖ್ಯಮಂತ್ರಿ ಆರ್ಥಿಕ ಸಲಹೆಗೆಗಾರರಾಗಿರುವ ಬಸವರಾಜ ರಾಯರೆಡ್ಡಿಯವರೇ (Basavaraj Rayareddy) ಗ್ಯಾರಂಟಿ ಯೋಜನೆಯಿರುವುದರಿಂದ ಅಭಿವೃದ್ಧಿ …

Read More »