Breaking News

ಜಿಲ್ಲೆ

ಕೋತಿ ಕಚ್ಚಿ 8 ಮಂದಿಗೆ ಗಾಯ

ಬಾದಾಮಿ: ಬನಶಂಕರಿ ರಸ್ತೆಯ ಕಾಳಿದಾಸ ಶಿಕ್ಷಣ ಸಂಸ್ಥೆಯ ಸಮೀಪ ಮಂಗಳವಾರ ಸಂಜೆ ಕಪ್ಪು ಕೋತಿಯೊಂದು ಮಹಿಳೆಯರು ಸೇರಿದಂತೆ ಎಂಟಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸಿದೆ ಎಂದು ಗಾಯಗೊಂಡ ಮಹಾದೇವ ಪತ್ರಿಕೆಗೆ ಹೇಳಿದರು. ಅರಣ್ಯ ಇಲಾಖೆ ಸಿಬ್ಬಂದಿ ಕೋತಿಯನ್ನು ಹಿಡಿದು ಬೇರೆಡೆ ಸಾಗಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.   ಕೋತಿ ನೆಗೆದಾಡುತ್ತ ಜನರ ತಲೆ, ಕಾಲು, ಬೆನ್ನು ಮತ್ತು ಕೈಗೆ ಕಚ್ಚಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. ಗಾಯಗೊಂಡವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ …

Read More »

ನಕಲಿ ವೈದ್ಯರ 12 ಚಿಕಿತ್ಸಾ ಕೇಂದ್ರಗಳಿಗೆ ಬೀಗ

ಬಾಗಲಕೋಟೆ: ಜಿಲ್ಲೆಯ ವಿವಿಧೆಡೆ ಬುಧವಾರ ಕಾರ್ಯಾಚರಣೆ ನಡೆಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು 12 ನಕಲಿ ವೈದ್ಯರ ಚಿಕಿತ್ಸಾ ಕೇಂದ್ರಗಳಿಗೆ ಬೀಗ ಜಡಿದಿದ್ದಾರೆ. ‘ಮುಧೋಳ ತಾಲ್ಲೂಕಿನ ಬೆಳಗಲಿ, ಮಹಾಲಿಂಗಪುರ, ತೇರದಾಳದ ಎರಡು ಚಿಕಿತ್ಸಾ ಕೇಂದ್ರ, ಬೀಳಗಿ ತಾಲ್ಲೂಕಿನ ಮೂರು, ಬಾದಾಮಿ ತಾಲ್ಲೂಕಿನ ಒಂದು, ಬಾಗಲಕೋಟೆಯಲ್ಲಿ ಎರಡು, ಹುನಗುಂದ ಎರಡು ಚಿಕಿತ್ಸಾ ಕೇಂದ್ರ ಬಂದ್ ಮಾಡಲಾಗಿದೆ. ಒಟ್ಟು 32 ಕಡೆ ಕಾರ್ಯಾಚರಣೆ ನಡೆಸಲಾಯಿತು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ …

Read More »

ಅಥಣಿ ಬಿಜೆಪಿ ಲೀಡ್ ಪಡೆದಿದ್ದು ಖುಷಿ ಸಂಗತಿ ; ಸವದಿ ವಿರುದ್ಧ ಸಾಹುಕಾರ್ ಪರೋಕ್ಷ ವಾಗ್ದಾಳಿ

ಅಥಣಿ : ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಪಕ್ಷಕ್ಕೆ ಅಥಣಿ ಜನ ಲೀಡ್ ಕೊಟ್ಟಿದ್ದು ಖುಷಿ ವಿಚಾರ. ನಮ್ಮವರು ಒಳ್ಳೆಯ ಕೆಲಸ ಮಾಡುವ ಮೂಲಕ‌ ಕಾಂಗ್ರೆಸ್ ಲೀಡ್ ಕಡಿಮೆ ಮಾಡಿ ಬಿಜೆಪಿಗೆ ಹೆಚ್ಚಿಸಿದ್ದಾರೆ ಎಂದು ಹೇಳುವ ಮೂಲಕ ಶಾಸಕ ಸವದಿ ವಿರುದ್ಧ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಕಾಲೆಳೆದರು. ಬಿಜೆಪಿ ಕಾರ್ಯಕರ್ತರ ಭೇಟಿ ಹಿನ್ನಲೆಯಲ್ಲಿ ಅಥಣಿ ಪಟ್ಟಣಕ್ಕೆ ಆಗಮಿಸಿದ ರಮೇಶ ಜಾರಕಿಹೊಳಿ ಮಾತನಾಡಿ. ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಲೀಡ್ ಕಳೆದುಕೊಂಡಿಟ್ಟು …

Read More »

ವಧು-ವರರ ಸಮಾವೇಶ 20ರಂದು

ಗೋಕಾಕ: ತಾಲ್ಲೂಕು ಶಿವಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ವತಿಯಿಂದ ನಡೆಯಲಿರುವ ಶಿವಶರಣ ಹಡಪದ ಅಪ್ಪಣ್ಣನವರ ಜಯಂತ್ಯುತ್ಸವ ಅಂಗವಾಗಿ ರಾಜ್ಯಮಟ್ಟದ ಹಡಪದ ಅಪ್ಪಣ್ಣ ಸಮಾಜದವರ ವಧು-ವರರ ಸಮಾವೇಶವನ್ನು ಜುಲೈ 20ರಂದು ಏರ್ಪಡಿಸಲಾಗಿದೆ. ಎಂದು ಶಿವಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ಅಧ್ಯಕ್ಷ ಸಿದ್ದಪ್ಪ ನಾವಲಗಿ ತಿಳಿಸಿದ್ದಾರೆ.   ರಾಜ್ಯಮಟ್ಟದ ಹಡಪದ ಅಪ್ಪಣ್ಣ ಸಮಾಜದವರ ವಧು-ವರರ ಸಮಾವೇಶವನ್ನು ನಗರಸಭೆ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು ಆಸಕ್ತರು ಜುಲೈ 18ರ ಒಳಗೆ ಹೆಸರು ನೋಂದಾಯಿಸಬೇಕು. …

Read More »

ವಾಲ್ಮೀಕಿ ನಿಗಮ ಹಗರಣ: ಶಾಸಕ ಬಿ. ನಾಗೇಂದ್ರ ಆಪ್ತ ಸಹಾಯಕರು ಇ.ಡಿ ವಶಕ್ಕೆ

ಬಳ್ಳಾರಿ: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರ ಬಳ್ಳಾರಿ ನಿವಾಸದ ಮೇಲೆ ಬುಧವಾರ ಮುಂಜಾನೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ವಿಜಯಕುಮಾರ್ ಮತ್ತು ಚೇತನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಈ ಇಬ್ಬರೂ ನಾಗೇಂದ್ರ ಅವರ ಆಪ್ತ ಸಹಾಯಕರಾಗಿದ್ದರು‌. ಬುಧವಾರ ಮುಂಜಾನೆ, ಸಿಆರ್ಪಿಎಫ್ ಭದ್ರತೆಯೊಂದಿಗೆ ಮೂರು ತಂಡಗಳಾಗಿ ಬಳ್ಳಾರಿಗೆ ಆಗಮಿಸಿದ ಇ.ಡಿ, ದಾಳಿ ನಡೆಸಿತು. ನಾಗೇಂದ್ರ ಅವರ ಬೆಂಗಳೂರಿನ ನಿವಾಸದಲ್ಲೂ ಶೋಧ ನಡೆಯುತ್ತಿದೆ. ಸ್ಥಳೀಯ ಪೊಲೀಸರಿಗೂ …

Read More »

ರಾಯಚೂರು: ಸರ್ಕಾರಿ ಶಾಲಾ ಕಟ್ಟಡಗಳ ದುರಸ್ತಿಗೆ ಆಗ್ರಹ

ರಾಯಚೂರು: ಜಿಲ್ಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಶಾಲೆ ಕಟ್ಟಡಗಳನ್ನು ತಕ್ಷಣ ದುರಸ್ತಿ ಮಾಡಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟುಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್‌ಒ) ಜಿಲ್ಲಾ ಘಟಕದ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಲಿಂಗಸುಗೂರು ತಾಲ್ಲೂಕಿನ ಅನ್ವರಿ ಗ್ರಾಮದಲ್ಲಿ ಎರಡು ವರ್ಷಗಳ ಹಿಂದೆಯಷ್ಟೇ ನಿರ್ಮಿಸಿದ್ದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಕುಸಿದು ವಿದ್ಯಾರ್ಥಿ ತಲೆಗೆ ಪೆಟ್ಟಾಗಿದೆ. ರಾಯಚೂರಿನ ಅರಸಿಗೇರ ಶಾಲೆಯ ಚಾವಣಿಯ ಸಿಮೆಂಟ್‌ ಕಳಚಿ ಬಿದ್ದು …

Read More »

ಗ್ಯಾರಂಟಿ’ ನಿಲ್ಲಿಸುವ ಪ್ರಶ್ನೇಯೇ ಇಲ್ಲ: ರಾಜು ಕಾಗೆ

ಕಾಗವಾಡ: ‘ರಾಜ್ಯದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ವಿರೋಧ ಪಕ್ಷದವರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದ್ದು’ ಎಂದು ಕಾಗವಾಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಶಾಸಕ ರಾಜು ಕಾಗೆ ಹೇಳಿದರು. ಕಾಗವಾಡ ಪಟ್ಟಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ನೂತನ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದರು. ‘ಐದು ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆವರೆಗೆ ಮಾತ್ರ …

Read More »

ರಾಮದುರ್ಗ: ತಾಲ್ಲೂಕಿನ ಕಡೇ ಗ್ರಾಮ ನಂದಿಹಾಳಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯೇ ಹದಗೆಟ್ಟಿದೆ.

ರಾಮದುರ್ಗ: ತಾಲ್ಲೂಕಿನ ಕಡೇ ಗ್ರಾಮ ನಂದಿಹಾಳಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯೇ ಹದಗೆಟ್ಟಿದೆ. ಇಲ್ಲಿನ ಜನರು ಪಕ್ಕದ ಕಲಾದಗಿ, ಕಾಡರಕೊಪ್ಪ, ಲೋಕಾಪುರಕ್ಕೆ ತೆರಳಲು ನಿತ್ಯ ಯಾತನೆ ಅನುಭವಿಸುವಂತಾಗಿದೆ. ನಂದಿಹಾಳದಿಂದ ಅಕ್ಕಪಕ್ಕದ ಗ್ರಾಮಗಳು ಮತ್ತು ಹೊಲಗಳಿಗೆ ತೆರಳಲು ಇರುವುದು ಇದೊಂದೇ ರಸ್ತೆ. ಆದರೆ, ಜಿಟಿಜಿಟಿ ಮಳೆಯಾದರೂ ಅದು ಕೆಸರುಮಯವಾಗಿ ಮಾರ್ಪಡುತ್ತದೆ. ಅಪಾರ ಪ್ರಮಾಣದಲ್ಲಿ ಮಳೆನೀರು ರಸ್ತೆ ಮೇಲೆಯೇ ಸಂಗ್ರಹವಾಗುತ್ತದೆ. ಇದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಹೈರಾಣಾಗಿದ್ದಾರೆ. ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಒಳಪಡದ …

Read More »

ಡೆಂಗಿ: ಸಮಗ್ರ ಮಾಹಿತಿಗೆ ಸಂಸದ ಜಗದೀಶ ಶೆಟ್ಟರ್ ಸೂಚನೆ

ಬೆಳಗಾವಿ: ‘ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗಿಗೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಂಖ್ಯೆ ಕಡಿಮೆ ಇದೆ. ಹಾಗಾಗಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಈ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ಇಲ್ಲಿನ ಜಿಲ್ಲಾಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಡೆಂಗಿ ಕಾಯಿಲೆಯಿಂದ ಬಳಲುತ್ತಿರುವವರ ಆರೋಗ್ಯ ವಿಚಾರಿಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ ಅವರು ಮಾತನಾಡಿದರು. …

Read More »

ಸಂತೋಷ್ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ರಕ್ತದಾನ.

ಸಂತೋಷ್ ಅಣ್ಣಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ರಕ್ತದಾನ. ಯರಗಟ್ಟಿ : ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಕ್ತದ ಕೊರತೆ ಉಂಟಾಗುವ ಸಾಧ್ಯತೆ ಇರುತ್ತದೆ, ಆದಕಾರಣ ಯುವ ನಾಯಕ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ನೂರಾರು ಅಭಿಮಾನಿಗಳು ರಕ್ತದಾನವನ್ನು ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ

Read More »