ಬೆಳಗಾವಿ: ಮಹಾರಾಷ್ಟ್ರದ ಕೊಯ್ನಾ ಹಾಗೂ ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕೃಷ್ಣಾ ಮತ್ತು ದೂಧಗಂಗಾ ನದಿಗಳ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ. ಈಗ ಲಭ್ಯದ ಅಗಿರುವ ಮಾಹಿತಿಯ ಪ್ರಕಾರ ಕೃಷ್ಣಾ ನದಿಯ ಒಳಹರಿವಿನ ಪ್ರಮಾಣ 62 ಸಾವಿರ ಕ್ಯೂಸೆಕ್ಸ್ ದಾಟಿದೆ. ಮಹಾರಾಷ್ಟ್ರದ ಸಾವಂತವಾಡಿ ಹಾಗೂ ಅಂಬೋಲಿ ಅರಣ್ಯ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಘಟಪ್ರಭಾ ನದಿಯ ಮೂಲಕ ಹಿಡಕಲ್ ಜಲಾಶಯಕ್ಕೆ 21 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. …
Read More »ಬೈಲಹೊಂಗಲ | ಮೊಹರಂ ಸಿದ್ಧತೆ: ಚಿನಕೋಲು, ಹುಲಿಕುಣಿತದ ಸದ್ದು
ಬೈಲಹೊಂಗಲ: ಸರ್ವಧರ್ಮ ಸಮನ್ವಯದ ಸಂದೇಶ ಸಾರುವ ಮೊಹರಂ ಹಬ್ಬದ ಸಂಭ್ರಮದ ಆಚರಣೆಗಾಗಿ ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಈಗಾಗಲೇ ತಯಾರಿ ಶುರುವಾಗಿದೆ. ವಾಲ್ಮೀಕಿ ಸಮಾಜದ ಯುವ ಪಡೆ ಹಾಗೂ ಎಲ್ಲ ಸಮಾಜದವರು ಸೇರಿಕೊಂಡು ಹಬ್ಬದ ಆಚರಣೆಗೆ ಭರದ ಸಿದ್ಧತೆ ನಡೆಸಿದ್ದಾರೆ. ಚಿನಕೋಲು, ಹುಲಿಕುಣಿತದ ತಯಾರಿ: ವಾಲ್ಮೀಕಿ ಸಮಾಜದ ಯುವ ಪಡೆಯ 20ಕ್ಕೂ ಹೆಚ್ಚಿನ ಜನ ಸದಸ್ಯರು ಕಾಲಿಗೆ ಗೆಜ್ಜೆ ಕಟ್ಟಿಕೊಂಡು, ಹಿರಿಯರ ಮಾರ್ಗದರ್ಶನದಂತೆ ಮೊಹರಂ ಗೀತೆಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ. ವಕ್ಕುಂದದ ಸುತ್ತಲಿನ …
Read More »ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನು ಅರ್ಜಿ ಹಿಂಪಡೆದ A17 ಆರೋಪಿ ನಿಖಿಲ್ ನಾಯಕ್
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ A17 ಆರೋಪಿ ನಿಖಿಲ್ ನಾಯಕ್ ಸಲ್ಲಿಸಿದ್ದ ಜಾಮೀನು ಅರ್ಜಿ ಹಿಂಪಡೆದಿದ್ದಾನೆ. ಎಫ್ ಎಸ್ ಎಲ್ ವರದಿ ಬಾರದ ಕಾರಣ ನೀಡಿ ನಿಖಿಲ್ ನಾಯಕ್ ಜಾಮೀನು ಅರ್ಜಿ ಹಿಂಪಡೆದಿದ್ದಾನೆ. ಜಾರ್ಮಿನು ಅರ್ಜಿಗೆ ಎಸ್ ಪಿಪಿ ಪ್ರಸನ್ನ ಕುಮಾರ್ ಅವರು ದಾಖಲೆ ಸಹಿತ ೬೦ ಪುಟಗಳ ಆಕ್ಷೇಪಣೆ ಸಲ್ಲಿಸಿದ್ದರು. ಹೀಗಾಗಿ ಜಾಮೀನು ಅರ್ಜಿಯನ್ನು ನಿಖಿಲ್ ನಾಯಕ್ ಪರ ವಕೀಲರು ಹಿಂಪಡೆದಿದ್ದಾರೆ. ಆರೋಪಿ ನಿಖಿಲ್ ನಾಯಕ್ ಗೆ …
Read More »ಕಾರ್ ಅಡ್ಡಗಟ್ಟಿ ₹10 ಲಕ್ಷ ಕಳವು
ಕಿತ್ತೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಹಿರೇಹಳ್ಳ ಬಳಿ ಕಾರ್ ಅಡ್ಡಗಟ್ಟಿ ₹10 ಲಕ್ಷ ಕಸಿದ ಕಳ್ಳರು ಪರಾರಿಯಾಗಿದ್ದಾರೆ. ಬೆಳಗಾವಿ ಶಾಸ್ತ್ರೀನಗರದ ಹಾರ್ಡ್‌ವೇರ್ ಅಂಗಡಿ ಮಾಲೀಕ ಅಮಿತ್ ಅಶೋಕ ಪೇರಿವಾಲ ಅವರು ಶಿವಮೊಗ್ಗದ ಮಿತ್ರರಿಗೆ ₹10 ಲಕ್ಷ ಕೊಡಲು, ತಮ್ಮ ಅಂಗಡಿಯ ಕೆಲಸಗಾರ ಚಂದನಾಥ ರಾಮೇಶ್ವರ ಸಿದ್ ಹಾಗೂ ಸುನೀಲ ರಾಜಕುಮಾರ ಪ್ರಜಾಪತ್ ಅವರನ್ನು ಕಳುಹಿಸಿದ್ದರು. ಅವರು ಸಾಗುತ್ತಿದ್ದ ಕಾರ್ ಅಡ್ಡಗಟ್ಟಿದ ಕಳ್ಳರು ಹಣ ಕಸಿದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚುವರಿ …
Read More »ಆಗಸ್ಟ್ ನಲ್ಲೇ ʻ7 ನೇ ವೇತನ ಆಯೋಗ ವರದಿʼ ಜಾರಿ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸುಗಳ ಆಗಸ್ಟ್‌ನಲ್ಲಿ ಜಾರಿಗೆ ಬರುವುದು ಖಚಿತವಾಗಿದೆ. ಏಳನೇ ವೇತನ ಆಯೋಗದ ಶಿಫಾರಸುಗಳ ಹಣಕಾಸು ಹೊಂದಾಣಿಕೆ ಕುರಿತಂತೆ ಪರಿಶೀಲನೆ ನಡೆಸಿ ಮಾಹಿತಿ ಕೊಡುವಂತೆ ಸಿಎಂ ಸಿದ್ದರಾಮಯ್ಯ ನೀಡಿದ್ದ ಸೂಚನೆಗೆ ಆರ್ಥಿಕ ಇಲಾಖೆಗೆ ಒಪ್ಪಿಗೆ ನೀಡಿದ್ದು, ಆಗಸ್ಟ್ ನಲ್ಲಿ ಏಳನೇ ವೇತನ ಆಯೋಗ ಜಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಏಳನೇ ವೇತನ ಆಯೋಗ ಶೇ.27.5 …
Read More »ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ತಪ್ಪಿದ ಭಾರಿ ಅನಾಹುತ
ವಿಜಯಪುರ: ಕಳೆದ ವರ್ಷ ಬಾಯ್ಲರ್ ಸ್ಪೋಟಗೊಂಡು ಕಾರ್ಮಿಕನ ಜೀವ ಪಡೆದ ದುರಂತ ಘಟನೆ ಮಾಸುವ ಮುನ್ನವೇ ಜಿಲ್ಲೆಯ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಭಾನುವಾರ ಬಾಯ್ಲರ್ ಸ್ಫೋಟಗೊಂಡಿದೆ. ಸುದೈವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಭಾನುವಾರ ನಸುಕಿನಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಸ್ಫೋಟ ಸಂಭವಿಸುವ ಕೆಲವೇ ಸಮಯಕ್ಕೆ ಮುನ್ನ ಕರ್ತವ್ಯದಲ್ಲಿದ್ದ ಸುಮಾರು 15 ಕಾರ್ಮಿಕರು ಚಹಾ ಕುಡಿಯಲೆಂದು ಹೊರ …
Read More »ಹುಕ್ಕೇರಿ: ಹೊಸ ನ್ಯಾಯಾಲಯ ನಿರ್ಮಾಣಕ್ಕೆ ಮನವಿ
ಹುಕ್ಕೇರಿ: ಈಗಿರುವ ಸ್ಥಳೀಯ ನ್ಯಾಯಾಲಯ ಕಟ್ಟಡದಲ್ಲಿಯೇ ನೂತನ ನ್ಯಾಯಾಲಯದ ಕಟ್ಟಡವನ್ನು ಕಟ್ಟಬೇಕು ಎಂದು ಹನ್ನೊಂದ್ ಜಮಾತ ಅಧ್ಯಕ್ಷರಾ ಸಲೀಮ್ ನದಾಫ್ ನೇತೃತ್ವದಲ್ಲಿ ತಹಶೀಲ್ದಾರರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಈಗಿನ ಕಟ್ಟಡ ಪಟ್ಟಣದ ಮಧ್ಯಭಾಗದಲ್ಲಿದ್ದು, ನ್ಯಾಯಾಲಯಕ್ಕೆ ತಹಶೀಲ್ದಾರ್ ಕಚೇರಿ, ನೋಂದಣಿ ಕಚೇರಿ, ತಾಲ್ಲೂಕು ಪಂಚಾಯ್ತಿ, ಮುಖ್ಯ ಅಂಚೆ ಕಚೇರಿ, ದಾಖಲಾತಿ ಕಚೇರಿ, ಕೆನರಾ ಬ್ಯಾಂಕ್, ಪಿಡಬ್ಲೂಡಿ, ಅರಣ್ಯ ಇಲಾಖೆ, ಸಾರ್ವಜನಿಕ ಆಸ್ಪತ್ರೆ, ಪ್ರವಾಸಿ ಮಂದಿರ, ಪೊಲೀಸ್ ಠಾಣೆ, ಬಸ್ ನಿಲ್ದಾಣ ಸೇರಿದಂತೆ ಶಾಲಾ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ :
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಹಳ್ಳೂರ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ವಾಡಿಕೆಗಿಂತ ಹೆಚ್ಚು ಮಳೆ: ಧಾರವಾಡ ಜಿಲ್ಲೆಯಲ್ಲಿ ಬಿತ್ತನೆ ಶೇ 97ರಷ್ಟು ಪೂರ್ಣ
ಧಾರವಾಡ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 2.70 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಇದ್ದು, ಈ ಪೈಕಿ ಈವರೆಗೆ 2.63 ಲಕ್ಷ (ಶೇ 97) ಪ್ರದೇಶದಲ್ಲಿ ಬಿತ್ತನೆಯಾಗಿದೆ. ಹಲವೆಡೆ ಹದ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ರೈತರು ಈ ಬಾರಿ ಹೆಸರು ಹೆಚ್ಚು ಬಿತ್ತನೆ ಮಾಡಿದ್ದಾರೆ. ಈ ಬೆಳೆ ಬಿತ್ತನೆ ಗುರಿ 67 ಸಾವಿರ ಹೆಕ್ಟೇರ್ ಇದ್ದರೆ, 97 ಸಾವಿರ ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ನವಲಗುಂದ ತಾಲ್ಲೂಕಿನಲ್ಲಿ ಅತೀ ಹೆಚ್ಚು 38 ಸಾವಿರ ಹೆಕ್ಟೇರ್, …
Read More »ಕೊಯ್ನಾ ಜಲಾಶಯಕ್ಕೆ ಹರಿದು ಬಂದ 2 ಟಿಎಂಸಿ ಅಡಿ ನೀರು
ಚಿಕ್ಕೋಡಿ: ನೆರೆಯ ಮಹಾರಾಷ್ಟ್ರ ರಾಜ್ಯದ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಬೀಳುತ್ತಿದ್ದರಿಂದ ಮಹಾರಾಷ್ಟ್ರ ರಾಜ್ಯದ ಸಾತಾರಾ ಜಿಲ್ಲೆಯ ಕೊಯ್ನಾ ಡ್ಯಾಂ ಗೆ 24 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ಅಡಿಗಳಷ್ಟು ನೀರು ಹರಿದು ಬಂದಿದ್ದು, 105 ಟಿಎಂಸಿ ಅಡಿ ಸಾಮರ್ಥ್ಯದ ಈ ಡ್ಯಾಂನಲ್ಲಿ ಬುಧವಾರ 23 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಕಳೆದ 24 ಗಂಟೆಗಳಲ್ಲಿ ಕೊಯ್ನಾ ಆಣೆಕಟ್ಟು ಪ್ರದೇಶದಲ್ಲಿ 13.3 ಸೆ.ಮೀ, ಕೃಷ್ಣಾ ನದಿ ಉಗಮ …
Read More »
Laxmi News 24×7