ಚಿಕ್ಕೋಡಿ : ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ವ್ಯಕ್ತಿ ಹಾಗೂ ಆತನ ಇಬ್ಬರು ಮಕ್ಕಳು ನೀರಲ್ಲಿ ಮುಳುಗಿ ಸಾವಣಪ್ಪಿರುವ ಘಟನೆ ಭಾನುವಾರ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಕಲ್ಲಪ್ಪ ಗಾಣಿಗೇರ (36) ಮಕ್ಕಳಾದ ಮನೋಜ ಕಲ್ಲಪ್ಪ ಗಾಣಿಗೇರ (11) ಹಾಗೂ ಮದನ ಕಲ್ಲಪ್ಪ ಗಾಣಿಗೇರ (9) ಮೃತ ದುರ್ದೈವಿಗಳು. ವೃತ್ತಿಯಲ್ಲಿ ಸರ್ಕಾರಿ ಶಿಕ್ಷಕರಾಗಿದ್ದ ಕಲ್ಲಪ್ಪ ಗಾಣಿಗೇರ ನಿಡಗುಂದಿ ಗ್ರಾಮದ ಹುಕ್ಕೇರಿ ತೋಟದ ಮಗದುಮ ಸರ್ಕಾರಿ …
Read More »ಲೋಕಸಭೆ ಚುನಾವಣೆಗೆ ನಾನು, ನನ್ನ ಪುತ್ರ ಸ್ಪರ್ಧಿಸಲ್ಲ: ಪ್ರಕಾಶ್ ಹುಕ್ಕೇರಿ
ಚಿಕ್ಕೋಡಿ, ಮಾರ್ಚ್ 11: ಲೋಕಸಭೆ ಚುನಾವಣೆ (Lok Sabha Election) ಕಲವೇ ತಿಂಗಳು ಬಾಕಿ ಉಳಿದಿವೆ. ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ಎರಡೂ ರಾಷ್ಟ್ರೀಯ ಪಕ್ಷದಲ್ಲಿ ಟಿಕೆಟ್ ವಿಚಾರವಾಗಿ ಸಾಕಷ್ಟು ಹಗ್ಗಜಗ್ಗಾಟ ನಡೆಯುತ್ತಿದೆ. ರಾಜ್ಯ ರಾಜಕೀಯ ಪವರ್ ಸೆಂಟರ್ ಆಗಿರುವ ಬೆಳಗಾವಿ ಮತ್ತು ಚಿಕ್ಕೋಡಿ (Chikkodi) ಎರಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಗಲಿದೆ ಎಂಬುವುದು ಗೊಂದಲ ಗೂಡಾಗಿದೆ. ಈ ಮಧ್ಯೆ ಲೋಕಸಭೆ ಚುನಾವಣೆಗೆ ನಾನು, ನನ್ನ ಪುತ್ರ …
Read More »ನಿಮ್ಮ ರಾಮ ಮಂದಿರ ಸ್ಫೋಟಿಸುತ್ತೇವೆ,: ಬೆದರಿಕೆ ಪತ್ರ
ಚಿಕ್ಕೋಡಿ: ‘ನಿಮ್ಮ ರಾಮ ಮಂದಿರ ಸ್ಫೋಟಿಸುತ್ತೇವೆ, ಸುಧಾರಿಸಿಕೊಳ್ಳಿ’ ಎಂಬ ಬರಹ ಇರುವ ಬೆದರಿಕೆ ಪತ್ರವೊಂದು ಪತ್ತೆಯಾಗಿದೆ. ನಮ್ಮ ಮಂದಿರಕ್ಕೆ ರಕ್ಷಣೆ ನೀಡುವುದರ ಜೊತೆಗೆ ಬೆದರಿಕೆ ಪತ್ರ ಬರೆದಿರುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ನಿಪ್ಪಾಣಿ ಪಟ್ಟಣದ ಶ್ರೀ ರಾಮ ಮಂದಿರದ ಆಡಳಿತ ಮಂಡಳಿ ನಿಪ್ಪಾಣಿ ಶಹರ ಠಾಣೆಯಲ್ಲಿ ದೂರು ನೀಡಿದೆ. ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ ಆನಂದ ಸೊಲಾಪೂರೆ ನೀಡಿರುವ ಮಾಹಿತಿ ಪ್ರಕಾರ, ಅಲ್ಲಾ ಹು ಅಕ್ಬರ್ ಹೆಸರಿನಲ್ಲಿ ಬೆದರಿಕೆ ಪತ್ರ …
Read More »ಅಸಲಿಗೆ ರಾಜಕೀಯವೆಂದರೆ ಕುತಂತ್ರ, ಒಬ್ಬರು ಮತ್ತೊಬ್ಬರನ್ನು ತುಳಿಯುವುದು ಎಲ್ಲ ಪಕ್ಷಗಳಲ್ಲಿ ನಡೆಯುತ್ತದೆ :ಸತೀಶ್ ಜಾರಕಿಹೊಳಿ,
ಬೆಳಗಾವಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅವರು ದಲಿತ ಮುಖ್ಯಮಂತ್ರಿಗಾಗಿ (Dalit CM) ಬೇಡಿಕೆ ಇಂದು ನಿನ್ನೆಯದಲ್ಲ, ದಶಕಗಳಿಂದ ನಡೆದುಕೊಂಡು ಬಂದಿದೆ ಎಂದು ಹೇಳಿದರು. ಈ ವಿಷಯದಲ್ಲಿ ತಮ್ಮ ಪಕ್ಷ 99 ರವರೆಗೆ ಬಂದು ಔಟಾಗಿಬಿಡುತ್ತದೆ, ಸೆಂಚುರಿ (century) ಬಾರಿಸಲ್ಲ ಎಂದು ನಗುತ್ತಾ ಹೇಳಿದರು. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಆಕಾಂಕ್ಷೆಯನ್ನು ಮತ್ತೊಮ್ಮೆ ತೇಲಿಬಿಟ್ಟಿರುವುದರಿಂದ ದಲಿತ ಸಿಎಂ ವಿಷಯವನ್ನು ಮುನ್ನೆಲೆಗೆ ತರಲಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ …
Read More »ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕುಟುಂಬವೊಂದಕ್ಕೆ ಬಹಿಷ್ಕಾರ
ಕೊಪ್ಪಳ,: ಅಂತರ್ಜಾತಿ ವಿವಾಹವಾಗಿದ್ದಕ್ಕೆ (Inter Caste Marriage) ಕುಟುಂಬವೊಂದಕ್ಕೆ ಬಹಿಷ್ಕಾರ ಹಾಕಿದ ಅಮಾನವೀಯ ಘಟನೆ ಕೊಪ್ಪಳದ (Koppal) ಭಾಗ್ಯ ನಗರದಲ್ಲಿ (Bhagya Nagar) ನಡೆದಿರುವುದು ಗೊತ್ತಾಗಿದೆ. ಶಂಕ್ರಪ್ಪ ಬೇನಳ್ಳಿ ಎಂಬವರ ಕುಟುಂಬವನ್ನು ಕಳೆದ ಒಂದೂವರೆ ವರ್ಷದಿಂದ ಸಮಾಜದಿಂದ ಹೊರಗೆ ಇಡಲಾಗಿತ್ತು ಎಂಬ ಆರೋಪ ಈಗ ಕೇಳಿಬಂದಿದೆ. ಶಂಕ್ರಪ್ಪ ಅವರ ಪುತ್ರ ಅಂತರ್ಜಾತಿ ವಿವಾಹವಾಗಿದ್ದ. ಈ ಹಿನ್ನೆಲೆಯಲ್ಲಿ ಸಮಾಜದಿಂದ ಬಹಿಷ್ಕಾರ ಹಾಕಲಾಗಿತ್ತು ಎಂದು ಕುಟುಂಬದವರು ಆರೋಪಿಸಿದ್ದಾರೆ. ಶೆಂಕ್ರಪ್ಪ ಅವರ ಪುತ್ರ ಲಿಂಗಾಯತ ಸಮಾಜದ ಯುವತಿಯನ್ನು ಮದುವೆಯಾಗಿದ್ದರು. …
Read More »1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ:C.M.
ಬೆಳಗಾವಿ, : 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ನೀಡಿದ್ದನ್ನು ಮರೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿಯ ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಲಕ್ಷ್ಮಣ್ ಸವದಿಗೆ ಸದ್ಯದಲ್ಲೇ ಒಳ್ಳೆ ಭವಿಷ್ಯ ಇದೆ …
Read More »ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಜರುಗಿದ ಬೆಳಗಾವಿ ವಲಯದ ಬಿಜೆಪಿ ಕೋರ್ ಕಮೀಟಿ ಸಭೆ
ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಜರುಗಿದ ಬೆಳಗಾವಿ ವಲಯದ ಬಿಜೆಪಿ ಕೋರ್ ಕಮೀಟಿ ಸಭೆಯನ್ನುದ್ದೇಶಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರತಾಪ್ ನಡ್ಡಾ ಅವರು ಮಾತನಾಡುತ್ತಿರುವುದು. *ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಡಾ. ಪ್ರಭಾಕರ ಕೋರೆ, ಸಂಸದರಾದ ಮಂಗಲ ಅಂಗಡಿ, ಈರಪ್ಪ ಕಡಾಡಿ, ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಬೆಳಗಾವಿ …
Read More »ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿಯ ಬಂಧನ
ಯಾದಗಿರಿ, ಮಾರ್ಚ್ 05: ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರಿಗೆ ಜಾಮಾಜಿಕ ಜಾಲತಾಣದ ಮೂಲಕ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಸುರುಪುರ ಠಾಣೆ ಪೊಲೀಸರು (Surapur Police) ತಡರಾತ್ರಿ ಬಂಧಿಸಿದ್ದಾರೆ. ಮೊಹಮ್ಮದ್ ರಸೂಲ್ ಕಡ್ದಾರೆ (45) ಬಂಧಿತ ಆರೋಪಿ. ಯಾದಗಿರಿ ಜಿಲ್ಲೆ ಸುರಪುರದ ರಂಗಂಪೇಟೆ ನಿವಾಸಿಯಾಗಿರುವ ರಸೂಲ್ ಕಡ್ದಾರೆ ಹೈದರಾಬಾದ್ನಲ್ಲಿ ಕೂಲಿ ಮಾಡುತ್ತಿದ್ದನು. ಕೈಯಲ್ಲಿ ತಲ್ವಾರ್ ಹಿಡಿದು ಪ್ರಧಾನಿ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಮುರಗೋಡ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ …
Read More »ಊರಿನ ಸುತ್ತಲೂ ಕ್ರಷರ್ ಮಷಿನ್‌ಗಳ ಕರ್ಕಶ ಧ್ವನಿ. ದೂಳಿನ ಹಾವಳಿ.
ಚಿಕ್ಕೋಡಿ: ಊರಿನ ಸುತ್ತಲೂ ಕ್ರಷರ್ ಮಷಿನ್‌ಗಳ ಕರ್ಕಶ ಧ್ವನಿ. ದೂಳಿನ ಹಾವಳಿ. ಗ್ರಾಮದೊಳಗೆ ತಿಪ್ಪೆಗಳ ಸಾಲು. ಗ್ರಾಮ ಪಂಚಾಯಿತಿ ಕಚೇರಿ ಹತ್ತಿರವೇ ಕಸದ ರಾಶಿ. ತ್ಯಾಜ್ಯ ವಿಲೇವಾರಿ ಘಟಕದ ಬಳಿಯಂತೂ ಕಸವೋ ಕಸ. ವೀಳ್ಯದೆಲೆಗೆ ಪ್ರಸಿದ್ಧವಾದ ತಾಲ್ಲೂಕಿನ ಜೈನಾಪೂರ ಗ್ರಾಮದ ಸದ್ಯದ ನೋಟವಿದು. ಅಂದಾಜು 8,000 ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ 3 ವಾರ್ಡ್‌ಗಳಿದ್ದು, 10 ಸದಸ್ಯರಿದ್ದಾರೆ. ಈ ಪಂಚಾಯಿತಿ ವ್ಯಾಪ್ತಿಯ ತೋರಣಹಳ್ಳಿ ಗ್ರಾಮದಲ್ಲಿ 5,000 ಜನಸಂಖ್ಯೆ ಇದ್ದು, 6 ಸದಸ್ಯರಿದ್ದಾರೆ. ಜೈನಾಪೂರದಲ್ಲಿ …
Read More »
Laxmi News 24×7