ಚಿಕ್ಕೋಡಿ: ಕ್ರೇನ್ ಸೀಲಿಂಗ್ ತುಂಡಾಗಿ ಬಿದ್ದು ಓರ್ವ ಕಾರ್ಮಿಕ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜಂಬಗಿ ಗ್ರಾಮದಲ್ಲಿ ಇಂದು ನಡೆದಿದೆ. ಮಧ್ಯಪ್ರದೇಶದ ಸಂತೋಷ ಮುಣ್ಣಾ ವಿಶ್ವಕರ್ಮ (28) ಮೃತಪಟ್ಟಿದ್ದಾರೆ. ಜಂಬಗಿ ಗ್ರಾಮದ ಶಾವಂತ ಪಾಟೀಲ್ ಎಂಬ ರೈತನ ಜಮೀನಿನಲ್ಲಿ ಮಧ್ಯಪ್ರದೇಶದ ಐವರು ಕಾರ್ಮಿಕರು ಬಾವಿ ಕೊರೆಯುವ ಕೆಲಸ ಮಾಡುತ್ತಿದ್ದರು. ಇಬ್ಬರು ಬಾವಿಗಿಳಿಯುತ್ತಿದ್ದ ಸಂದರ್ಭದಲ್ಲಿ ಕ್ರೇನ್ ಸೀಲಿಂಗ್ ತುಂಡಾಗಿದೆ. ಅಂದಾಜು ನೂರು ಅಡಿ ಆಳದ ಬಾವಿಗೆ …
Read More »ಕನಿಷ್ಠ ವೇತನಕ್ಕೆ ಆಗ್ರಹಿಸಿ ಜಾಡಮಾಲಿ ನೌಕರರು ಪ್ರತಿಭಟನೆ
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 977 ಜಾಡಮಾಲಿ ನೌಕರರಿಗೆ ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ಇಂದು ನೌಕರರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು. 2017ಕ್ಕಿಂತ ಪೂರ್ವದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಾಡಮಾಲಿಗಳನ್ನು ಮರುನೇಮಕಗೊಳಿಸಿ ಕನಿಷ್ಠ ವೇತನ ನೀಡಬೇಕು. ಸರ್ಕಾರ ನೇರವಾಗಿ ವೇತನ ಪಾವತಿಸಬೇಕು. ನಮ್ಮನ್ನು ಡಿ ಗ್ರೂಪ್ ನೌಕರರೆಂದು ಪರಿಗಣಿಸಲು ಇರುವ ಕಾನೂನು ನ್ಯೂನತೆ …
Read More »ರಾಜ್ಯ ಸರ್ಕಾರ ಶೀಘ್ರವೇ ಮೀಸಲಾತಿ ಕೊಡುತ್ತದೆ ಎನ್ನುವ ಭರವಸೆ ಇದೆ.:ಬಸವಜಯ ಮೃತ್ಯುಂಜಯ ಶ್ರೀ
ಬೆಳಗಾವಿ: ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರ ಶೀಘ್ರವೇ ಮೀಸಲಾತಿ ಕೊಡುತ್ತದೆ ಎನ್ನುವ ಭರವಸೆ ಇದೆ. ಎಲ್ಲಾ ಪಕ್ಷಗಳಿಗೂ ಪಂಚಮಸಾಲಿ ಮತಗಳು ಬೇಕು. ಹೀಗಾಗಿ ಲೋಕಸಭೆ ಚುನಾವಣೆಯೊಳಗೆ ಮೀಸಲಾತಿ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಇಂದು ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ಸರ್ವಪಕ್ಷಗಳ ಪಂಚಮಸಾಲಿ ಸಮಾಜದ ಹಾಲಿ ಹಾಗೂ ಮಾಜಿ ಶಾಸಕರ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಹೋರಾಟಕ್ಕೆ ಸರಿಯಾದ ನ್ಯಾಯ …
Read More »ನಿಪ್ಪಾಣಿ: ‘ನಗರಕ್ಕೆ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಕೇಂದ್ರ ಸರ್ಕಾರ ಪುರಸ್ಕೃತ ಅಮೃತ 2.0 ಯೋಜನೆಯಡಿ ₹ 30.83 ಕೋಟಿ: ಜೊಲ್ಲೆ
ನಿಪ್ಪಾಣಿ: ‘ನಗರಕ್ಕೆ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಕೇಂದ್ರ ಸರ್ಕಾರ ಪುರಸ್ಕೃತ ಅಮೃತ 2.0 ಯೋಜನೆಯಡಿ ₹ 30.83 ಕೋಟಿ ಪ್ರಸ್ತಾವಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಶೀಘ್ರದಲ್ಲಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು’ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಯೋಜನೆಯನ್ನು ನಗರದ ಮುಂದಿನ 50 ವರ್ಷಗಳ ಕಾಲಾವಧಿಯ ಜನಸಂಖ್ಯೆಯ ಆಧಾರದ ಮೇಲೆ ಲೆಕ್ಕಾಚಾರ ಮಾಡಿ ರೂಪುರೇಷೆ ಸಿದ್ಧಪಡಿಸಿ ಕಾಮಗಾರಿಯ ವಿಸ್ತೃತ ಯೋಜನಾ ವರದಿಯನ್ನು …
Read More »ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಚೈತ್ರಾಗೆ ಜಾಮೀನು ಮಂಜೂರು
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಬಂಧಿತಳಾಗಿದ್ದ ಚೈತ್ರಾ ಸೇರಿದಂತೆ ಇಬ್ಬರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ವಂಚನೆ ಆರೋಪ ಪ್ರಕರಣ ಸಂಬಂಧ ಕಳೆದ ಸೆಪ್ಟೆಂಬರ್ನಲ್ಲಿ ಚೈತ್ರಾ ಬಂಧನವಾಗಿತ್ತು. ಉದ್ಯಮಿ ಗೋವಿಂದ್ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಜೈಲು ಸೇರಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ …
Read More »ಹಲ್ಲೆಗೊಳಗಾದ ಬಿಜೆಪಿ ಮುಖಂಡನ ಆರೋಗ್ಯ ವಿಚಾರಿಸಿದ ವಿಜಯೇಂದ್ರ; ಆರೋಪಿಗಳನ್ನು ಬಂಧಿಸುವಂತೆ ಆಗ್ರಹ
ಬೆಳಗಾವಿ : ಬಿಜೆಪಿ ಮುಖಂಡನ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಇಂದು ರಾತ್ರಿಯೇ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತ ಬೀದಿಗಳಿಯಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾದ ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎಸ್ಸಿ ಮೋರ್ಚಾ ಕಾರ್ಯಕರ್ತ ಪೃಥ್ವಿ ಸಿಂಗ್ ಮೇಲೆ ಹಾಡಹಗಲೇ ಹಲ್ಲೆ ನಡೆಸಲಾಗಿದೆ. ಅವರ …
Read More »ರಮೇಶ್ ಜಾರಕಿಹೊಳಿ ಆಪ್ತನ ಮೇಲೆ ಹಲ್ಲೆ , ಚನ್ನರಾಜ ಹಟ್ಟಿಹೋಳಿ ಹಾಗೂ ಬೆಂಬಲಿಗರೇ ಈ ಘಟನೆಗೆ ಕಾರಣ ಎಂದು ಹಲ್ಲೆಗೊಳಗಾದ ಪೃಥ್ವಿ ಸಿಂಗ್ ಪ್ರಕರಣ ದಾಖಲ
ಬೆಳಗಾವಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತ ಹಾಗೂ ಬಿಜೆಪಿ ಮುಖಂಡನ ಮೇಲೆ ಕೆಲವರು ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಸೋಮವಾರ ಸಂಜೆ ಜಯನಗರದ ಪೃಥ್ವಿ ಸಿಂಗ್ ಅವರ ಮನೆ ಮುಂದೆ ಐದಾರು ಜನರು ಏಕಾಏಕಿ ಬಂದು, ಹೊರಗೆ ಕರೆದೊಯ್ದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪೃಥ್ವಿ ಸಿಂಗ್ ಅವರು ಕೆಲವರ ಜೊತೆಗೆ ಮಾತನಾಡುತ್ತಿರುವುದು ಅವರ ಮನೆ ಬಳಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗಾಯಗೊಂಡ ತಕ್ಷಣ ಪೃಥ್ವಿ …
Read More »ವಿಕಲಚೇತನರಿಗೆ ಅವಕಾಶ ನೀಡಬೇಕೇ ವಿನಹ ಅನುಂಕಪ ತೋರಿಸ ಬೇಕಿಲ್ಲ : ರೇವತಿ ಮಠದ ಅಭಿಮತ
ಗೋಕಾಕ ಡಿ 4 : ವಿಕಲಚೇತನರಿಗೆ ಅವಕಾಶ ನೀಡಬೇಕೇ ವಿನಹ ಅನುಂಕಪ ತೋರಿಸ ಬೇಕಿಲ್ಲ ಅವರಿಗೆ ನಿರಂತರ ಪ್ರೋತ್ಸಾಹ ಮತ್ತು ಬೆಂಬಲ ಅತಿ ಅಗತ್ಯ ಎಂದು ಶಿಕ್ಷಣ ಇಲಾಖೆಯ ಯೋಜನಾ ಸಮನ್ವಯ ಅಧಿಕಾರಿ ಶ್ರೀಮತಿ ರೇವತಿ ಮಠದ ಹೇಳಿದರು. ನಗರದ ಅಡಿಬಟ್ಟಿ ಬಡಾವಣೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ, ಕನ್ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಲಯನ್ಸ್ ಕಬ್ಲ್ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿಶ್ವ ಅಂಗವಿಕಲರ ದಿನಾಚರಣೆಯನ್ನು ಉದ್ಘಾಟಿಸಿ ಅವರು …
Read More »ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ನಾಲ್ಕು ರಾಜ್ಯಗಳ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಡ್ದಲ್ಲಿ ಹಿನ್ನಡೆ ಆಗಿದೆ. ತೆಲಂಗಾಣ ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ …
Read More »ರಾಯಚೂರು: ಅಂಗವೈಕಲ್ಯವನ್ನು ಮೆಟ್ಟಿ ಬದುಕು ಕಟ್ಟಿಕೊಂಡ ಮಾದರಿ ಮಹಿಳೆ!
ರಾಯಚೂರು ಡಿಸೆಂಬರ್ 3: ಈಕೆಗೆ ಒಂದು ಕಾಲಿನಲ್ಲಿ ಸ್ವಾಧೀನ ಇಲ್ಲ. ಎಲ್ಲರಂತೆ ನಡೆಯಲು ಓಡಾಡಲು ಸಾಧ್ಯವಾಗುವುದಿಲ್ಲ. ಹಾಗಂತ ಈಕೆ ಎಂದೂ ಕೂಡ ಮನೆಯಲ್ಲಿ ಖಾಲಿಯಾಗಿ ಕುಳಿತವಳಲ್ಲ. ಜೀವನದಲ್ಲಿ ತಾನೂ ಕೂಡ ಎಲ್ಲರಂತೆ ಬದುಕು ನಡೆಸಬೇಕು ಅನ್ನೋ ಛಲ ಈಕೆಯದ್ದು. ಹೀಗಾಗಿ ಸ್ವಾವಲಂಬಿ ಜೀವನ ನಡೆಸುವ ಮೂಲಕ ಈ ಮಹಿಳೆ ಎಲ್ಲಾ ಮಹಿಳೆಯರಿಗೂ ಮಾದರಿಯಾಗಿದ್ದಾಳೆ. ಅಷ್ಟಕ್ಕೂ ಆ ಮಹಿಳೆ ಯಾರು? ಎಲ್ಲಿಯವರು? ಈ ಎಲ್ಲಾ ಮಾಹಿತಿಗಾಗಿ ಮುಂದೆ ಓದಿ… ನಿತ್ಯ ನೂರಾರು …
Read More »
Laxmi News 24×7