ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಡಿ.4ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ವಿರುದ್ಧ ಪಟ್ಟಾಗಿ ಕುಸ್ತಿಗೆ ಇಳಿಯಲು ದೋಸ್ತಿಗಳು ಸಜ್ಜಾಗಿದ್ದಾರೆ. ರೇಸ್ಕೋರ್ಸ್ ರಸ್ತೆಯಲ್ಲಿನ ಅಪಾರ್ಟ್ವೆುಂಟ್ವೊಂದರಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ರಹಸ್ಯ ಸಮಾಲೋಚನೆ ನಡೆಸಿ, ಸದನದಲ್ಲಿ ಹೂಡಲಿರುವ ಜಂಟಿ ಸಮರದ ತಂತ್ರಗಳಿಗೆ ಅಂತಿಮ ಸ್ಪರ್ಶ ನೀಡಿದರು. ರಾಜ್ಯದ ಹಿತ, ರಚನಾತ್ಮಕವಾಗಿ ಜವಾಬ್ದಾರಿ ನಿರ್ವಹಣೆ, ಸದನದ ಅಮೂಲ್ಯ ಸಮಯ ವ್ಯರ್ಥವಾಗದಂತೆ ನೋಡಿಕೊಳ್ಳುವ ವಿಚಾರದಲ್ಲಿ ಉಭಯ ಪಕ್ಷಗಳು ಬದ್ಧವಾಗಿರಲು ಸಮ್ಮತಿಸಿವೆ. ವೈಫಲ್ಯಗಳನ್ನು ಎತ್ತಿ ಹಿಡಿಯುವ, ಕಟ್ಟಿಹಾಕುವ …
Read More »ನರೇಗಾ ಯೋಜನೆ ಬರಗಾಲದ ಸಂಕಷ್ಟದ ಸಮಯದಲ್ಲಿ ಕೂಲಿ ಕಾರ್ಮಿಕರಿಗೆ ನೆರವಾಗುತ್ತ
ಬೆಳಗಾವಿ: ನರೇಗಾ ಯೋಜನೆ ಬರಗಾಲದ ಸಂಕಷ್ಟದ ಸಮಯದಲ್ಲಿ ಕೂಲಿ ಕಾರ್ಮಿಕರಿಗೆ ನೆರವಾಗುತ್ತದೆ. ಆದರೆ ಇದೇ ಈಗ ರೈತರಿಗೆ ಸಂಕಷ್ಟ ತಂದೊಡ್ಡಿದ್ದು, ಬೆಳೆದು ನಿಂತಿರುವ ಭತ್ತದ ಕಟಾವಿಗೆ ಕೂಲಿ ಕಾರ್ಮಿಕರು ಸಿಗದೇ ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮದ ಅನ್ನದಾತರು ಪರದಾಡುತ್ತಿದ್ದಾರೆ. ಸುಗ್ಗಿ ಕಾಲದಲ್ಲಿ ಕೂಲಿ ಕೊಡಬೇಡಿ ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಹೌದು, ಮೊದಲೇ ಬರಗಾಲದಿಂದ ತತ್ತರಿಸಿ ಹೋಗಿದ್ದ ಕಡೋಲಿ ಗ್ರಾಮದ ರೈತರು ಕಷ್ಟಪಟ್ಟು ಭತ್ತ ಬೆಳೆದಿದ್ದರು. ಈಗ ಅದು ಕಟಾವಿಗೆ ಬಂದಿದೆ. ಆದರೆ, …
Read More »ಗೋಕಾಕದಲ್ಲಿ ವ್ಯಾಪಾರ ವಹಿವಾಟು ಡೌನ್ ಆಯ್ತಾ…?
ಗೋಕಾಕ : ನಗರದಲ್ಲಿ ಎಲ್ಲಿ ಹೋದರು ಒಂದೇ ಮಾತು ಏನ್ರೀ ಮಾರ್ಕೆಟ್ ಪುಲ್ ಡೌನ್ ಆಗಿದೆ, ಯಾವುದೇ ವ್ಯಾಪಾರ ವಹಿವಾಟು ಹೆಚ್ಚಾಗಿ ನಡೆಯುತ್ತಿಲ್ಲ. ಮೊದಲ ಗೋಕಾಕ ಎಂದರೆ ಸಾಕು ವ್ಯಾಪಾರಕ್ಕೆ ಜನವೋ ಜನ, ಆದರೆ ಇತ್ತೀಚೆಗೆ ಗೋಕಾಕ ತಾಲೂಕು ಮೂಡಲಗಿ ನೂತನ ತಾಲೂಕು ಆಗಿ ವಿಭಜನೆಯಾಗಿದ್ದರಿಂದ ವ್ಯಾಪಾರ ವಹಿವಾಟು ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ. ಸಣ್ಣ ಪಾನ್ ಮಸಾಲ ಅಂಗಡಿಯಿಂದ ದೊಡ್ಡ ದೊಡ್ಡ ಅಂಗಡಿಗಳಲ್ಲಿ ವ್ಯಾಪಾರ ಮಾಡುವ ಜನರೂ …
Read More »ಪರಿಸರ ರಕ್ಷಣೆ ಹಾಗೂ ಕ್ರೀಡೆಗಳಿಗೆ ದೇಶದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕಾಗಿದೆ: ಸತೀಶ ಜಾರಕಿಹೊಳಿ
ಗೋಕಾಕ: ಪರಿಸರ ರಕ್ಷಣೆ ಹಾಗೂ ಕ್ರೀಡೆಗಳಿಗೆ ದೇಶದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಅವರು, ಸೋಮವಾರದಂದು ನಗರದ ಮಹರ್ಷಿ ಶ್ರೀ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅರಣ್ಯ ಇಲಾಖೆಯಿಂದ ಹಮ್ಮಿಕೊಂಡ ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. ೧೪೦ಕೋಟಿಗಿಂತ ಹೆಚ್ಚಿನ ಜನಸಂಖ್ಯೆ ಇರುವ ನಮ್ಮ ದೇಶದಲ್ಲಿ ಕ್ರೀಡೆಗಳಲ್ಲಿ ನಿರೀಕ್ಷಿತ ಸಾಧನೆಯಾಗಿಲ್ಲ. ಕ್ರೀಡೆಗೆ ಹೆಚ್ಚಿನ …
Read More »ಪ್ರಧಾನಿ ನರೇಂದ್ರ ಮೋದಿಯವರಿಂದ ಭಾರತಕ್ಕೆ ವಿಶ್ವಮಾನ್ಯತೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ(ಗ್ರಾ) ಜಿಲ್ಲಾ ಮಟ್ಟದ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರ ಪ್ರ-ಶಿಕ್ಷಣ ವರ್ಗ ಪ್ರಧಾನಿ ನರೇಂದ್ರ ಮೋದಿಯವರಿಂದ ಭಾರತಕ್ಕೆ ವಿಶ್ವಮಾನ್ಯತೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಕೇಂದ್ರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಈಗಿಂದಲೇ ಸಜ್ಜಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಬರಲಿರುವ ಎಪ್ರೀಲ್-ಮೇ ತಿಂಗಳಲ್ಲಿ ಜರುಗಲಿರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಭಾರತದ ಪ್ರಧಾನಿಯಾಗಲು ಕಾರ್ಯಕರ್ತರು ಈಗಿನಿಂದಲೇ ಚುನಾವಣೆಯ ಸಿದ್ಧತೆಯಲ್ಲಿ ತೊಡಗಬೇಕು. ಈ ಮೂಲಕ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಶ್ರೀ ಬಂಡೇಮ್ಮ ದೇವಿ ದೇವಸ್ಥಾನದ ಆವರಣದಲ್ಲಿ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ಶ್ರೀ ಬಂಡೇಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »ಬಾಲಕ ಸಾವು ಪ್ರಕರಣ: ಶಾಲೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೋಸಂಬೆ ಭೇಟಿ, ಪರಿಶೀಲನೆ
ವಿಜಯಪುರ : ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಬುಧವಾರ ಶಾಲಾ ಕಟ್ಟಡದಲ್ಲಿ ನೀರಿನ ವಾಟರ್ ಫಿಲ್ಟರ್ ಟ್ಯಾಂಕ್ ಮಗುವಿನ ಮೇಲೆ ಬಿದ್ದು ಬಾಲಕ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಗುರುವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಶಾಲೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಅವರೊಂದಿಗೆ ಇನ್ನಿತರ ಅಧಿಕಾರಿಗಳು ಜೊತೆಗಿದ್ದರು. ಬಳಿಕ ಮೃತ ಬಾಲಕನ ಮನೆಗೆ ಭೇಟಿ ನೀಡಿ ಆ ಬಾಲಕನ ತಾಯಿಗೆ ಸಾಂತ್ವನ ಹೇಳಿದರು. …
Read More »ಸಿದ್ಧಿ ಬುಡಕಟ್ಟು ಸಮುದಾಯದ ಪೌಷ್ಟಿಕಾಹಾರ ಸ್ಥಗಿತ: ಸರ್ಕಾರದ ವಿರುದ್ಧ ಯತ್ನಾಳ್ ಆಕ್ರೋಶ
ಬೆಂಗಳೂರು, ನವೆಂಬರ್ 22: ಉತ್ತರಕನ್ನಡ ಜಿಲ್ಲೆಯ ಸಿದ್ಧಿ ಬುಡಕಟ್ಟು ಸಮುದಾಯಕ್ಕೆ (Siddi community) ವಿಶೇಷ ಗಿರಿಜನ ಯೋಜನೆಯಡಿ ನೀಡಲಾಗುತ್ತಿದ್ದ ಪೌಷ್ಠಿಕಾಹಾರವನ್ನು ಅನುದಾನ ಕೊರತೆಯ ಕಾರಣ ಸ್ಥಗಿತಗೊಳಿಸಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ಧಿ ಬುಡಕಟ್ಟು ಸಮುದಾಯದ ಪೌಷ್ಟಿಕಾಹಾರ ಸ್ಥಗಿತಗೊಂಡ ವಿಷಯಕ್ಕೆ ಸಂಬಂಧಿಸಿದ ವರದಿಯೊಂದನ್ನು ಲಗತ್ತಿಸಿ ಸಾಮಾಜಿಕ ಮಾಧ್ಯಮ ಎಕ್ಸ್ ಪೋಸ್ಟ್ನಲ್ಲಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಸಿದ್ಧಿ ಬುಡಕಟ್ಟು ಸಮುದಾಯಕ್ಕೆ …
Read More »ಸುವರ್ಣ ವಿಧಾನಸೌಧದ ಸುತ್ತ ಹುಲುಸಾಗಿ ಬೆಳೆದ ಮೇವು ಕಟಾವಿಗೆ ಅನುಮತಿ ನೀಡುವಂತೆ ರೈತರ ಮನವಿ
ಬೆಳಗಾವಿ : ಈ ಬಾರಿ ರಾಜ್ಯದಲ್ಲಿಕಂಡು ಕೇಳರಿಯದ ಬರಗಾಲದಿಂದ ಅಕ್ಷರಶಃ ರೈತರು ಕಂಗಾಲಾಗಿದ್ದಾರೆ. ಮುಂಗಾರು ಮಳೆ ಕೈ ಕೊಟ್ಟಿದ್ದರಿಂದ ಮುಂಗಾರು ಬೆಳೆ ಹಾನಿ ಅನುಭವಿಸಿದ್ದ ರೈತರು, ಇದೀಗ ಹಿಂಗಾರು ಬೆಳೆಗಳ ಹಾನಿ ಭೀತಿ ಎದುರಿಸುತ್ತಿದ್ದಾರೆ. ಅಲ್ಲದೇ ಜಾನುವಾರುಗಳ ಮೇವಿಗೂ ತಾತ್ವಾರ ಸ್ಥಿತಿ ನಿರ್ಮಾಣ ಆಗುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಜಿಲ್ಲಾಡಳಿತವು, ಡಿಸೆಂಬರ್ 4ರಿಂದ ಚಳಿಗಾಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆ ಸ್ವಚ್ಛತೆ ಹೆಸರಿನಲ್ಲಿ ಸುವರ್ಣ ವಿಧಾನಸೌಧ ಸುತ್ತಲೂ 10 ಏಕರೆಗೂ ಹೆಚ್ಚು ಪ್ರದೇಶದಲ್ಲಿ …
Read More »ರಾಯಬಾಗ ಶಾಲೆಯ ಕೊಳವೆಬಾವಿಯಲ್ಲಿ ಕಲುಷಿತ ನೀರು: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹುಬ್ಬಾರವಾಡಿ ಗ್ರಾಮದಲ್ಲಿ ಖಾಸಗಿ ಕಂಪೆನಿಯೊಂದರ ರಾಸಾಯನಿಕ ಗೊಬ್ಬರ ಸಂಗ್ರಹಣಗಾರದಿಂದಾಗಿ ಪಕ್ಕದಲ್ಲಿರುವ ಪ್ರಾಥಮಿಕ ಮತ್ತು ಅಂಗನವಾಡಿ ಕೇಂದ್ರದ ಕೊಳವೆಬಾವಿಯ ನೀರು ಕಲುಷಿತಗೊಳ್ಳುತ್ತಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಸ್ಥಳೀಯ ಆಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಸ್ಥಳೀಯ ನಿವಾಸಿ ಪಾಂಡುರಂಗ ಮಹದೇವ ಕಾಂಬ್ಳೆ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ …
Read More »
Laxmi News 24×7