ಮಕ್ಕಳ ಶೂನ್ಯ ಹಾಜರಾತಿಯಿಂದ ಶಾಲೆಗಳು ಬಂದ್ ಆಗಿವೆ ಅಂತಾ ಅಧಿಕಾರಿಗಳು ಹೇಳ್ತಾರೆ. ಆದ್ರೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಶೂನ್ಯ ಹಾಜರಾತಿ ಆಗುತ್ತಿರೋದೇಕೆ? ಸರ್ಕಾರಿ ಶಾಲೆಗಳಿಂದ ಮಕ್ಕಳು ದೂರವಾಗುತ್ತಿದ್ದಾರೆ. ಇದನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಗೆ ಒಟ್ಟು ಎಂಟು ತಾಲೂಕುಗಳು ಬರುತ್ತೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯಲ್ಲಿ 3500ಕ್ಕೂ ಹೆಚ್ಚು ಪ್ರಾಥಮಿಕ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು 99 ಪ್ರಾಥಮಿಕ ಶಾಲೆಗಳಲ್ಲಿ ಸರ್ಕಾರಿ ಶಿಕ್ಷಕರೇ ಇಲ್ಲ. ಅದರಲ್ಲೂ …
Read More »ನಿವೃತ್ತ ಯೋಧನನ್ನು ಹತ್ಯೆಗೈದ ಬಾಮೈದ
ಚಿಕ್ಕೋಡಿ (ಬೆಳಗಾವಿ): ಚಾಕುವಿನಿಂದ ಕತ್ತು ಸೀಳಿ ನಿವೃತ್ತ ಯೋಧನನ್ನು ಬಾಮೈದ ಹತ್ಯೆಗೈದಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಶನಿವಾರ ನಡೆದಿದೆ. ಮೃತರನ್ನು ಚಿಕ್ಕೋಡಿಯ ವಿದ್ಯಾನಗರ ನಿವಾಸಿ ನಿವೃತ್ತ ಯೋಧ ಈರಗೌಡ ಟೋಪಗೋಳ(45) ಎಂದು ಗುರುತಿಸಲಾಗಿದೆ. ಮೃತ ಈರಗೌಡ ಪತ್ನಿಯ ಸಹೋದರ ಸಂಜಯ್ ಭಾಕರೆ ಕೊಲೆಗೈದ ಆರೋಪಿ ಎಂದು ತಿಳಿದುಬಂದಿದೆ. ಮೂಲತಃ ಜೈನಾಪುರ ಗ್ರಾಮದವರಾಗಿದ್ದ ಈರಗೌಡ ಟೋಪಗೋಳ ಸೇನೆಯಿಂದ ನಿವೃತ್ತಿ ಹೊಂದಿದ ಬಳಿಕ ಸ್ಟೋನ್ ಕ್ರಷರ್ ಘಟಕ ನಡೆಸುತ್ತಿದ್ದರು. ಶನಿವಾರ ಸಂಜೆ …
Read More »ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ರಾಜ್ಯದ 42 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ :BJP
ಬೆಳಗಾವಿ: ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ಈಗಾಗಲೇ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಿದ್ದೇವೆ. ಈಗ ಸೆ.8ರಂದು ರಾಜ್ಯಾದ್ಯಂತ ಎಲ್ಲ ತಾಲೂಕುಗಳ ತಹಶೀಲ್ದಾರ್ ಕಚೇರಿ ಮುಂದೆ ಬಿಜೆಪಿ ರೈತ ಮೋರ್ಚಾ ವತಿಯಿಂದ ಬೃಹತ್ ಪ್ರತಿಭಟನೆಗೆ ನಿರ್ಧರಿಸಿದ್ದೇವೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದರು. ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮಳೆಯ ಅಭಾವದಿಂದ ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣವಾಗಿದೆ. …
Read More »*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈಕೋರ್ಟ್ ಆದೇಶದ ಪ್ರಮುಖ ಅಂಶಗಳು.
ಬೆಂಗಳೂರು : 2019ರ ಲೋಕಸಭೆ ಚುನಾವಣೆಯ ವೇಳೆ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸುವಾಗ ಪೂರ್ಣ ಪ್ರಮಾಣದಲ್ಲಿ ಆಸ್ತಿ ವಿವರ ಘೋಷಿಸಿಲ್ಲ ಎಂದು ಅರ್ಜಿದಾರರಾದ ಅಂದಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಎ. ಮಂಜು ಹಾಗೂ ಇತರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಆದೇಶಿಸಿದೆ. ಆದೇಶದಲ್ಲಿನ ಪ್ರಮುಖ ಅಂಶಗಳು: …
Read More »ಚಿಂಚಲಿ ಮಾಯಕ್ಕನ ದರ್ಶನಕ್ಕೆ ಹೊರಟ ಭಕ್ತರಿದ್ದ ಟ್ರ್ಯಾಕ್ಟರ್ ಪಲ್ಟಿ, ಮಹಿಳೆ ಸಾವು
ಚಿಕ್ಕೋಡಿ : ಶ್ರಾವಣ ಮಾಸದ ನಿಮಿತ್ತ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದ ಶಕ್ತಿದೇವತೆ ಮಾಯಕ್ಕ ದೇವಿಯ ದರ್ಶನಕ್ಕೆ ಹೊರಟ ಭಕ್ತಾದಿಗಳ ಟ್ರ್ಯಾಕ್ಟರ್ ಪಲ್ಟಿಯಾಗಿ, ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ್ ಬ್ಯಾರೇಜ್ ಮೇಲೆ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಮೃತರನ್ನು ಅಥಣಿ ತಾಲೂಕಿನ ಕಕಮರಿ ಗ್ರಾಮದ ಅಕ್ಷತಾ ಕನಮಡಿ (20) ಎಂದು ಗುರುತಿಸಲಾಗಿದೆ. ಹತ್ತಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ …
Read More »ಪಿ ಲಂಕೇಶ್ ಮೊಮ್ಮಗ, ಚಿತ್ರರಂಗಕ್ಕೆ
Samarjit Lankesh: ಪಿ ಲಂಕೇಶ್ ಮೊಮ್ಮಗ, ಇಂದ್ರಜಿತ್ ಲಂಕೇಶ್ ಮಗ ಸಮರ್ಜಿತ್ ಲಂಕೇಶ್ ಚಿತ್ರರಂಗಕ್ಕೆ ಬರಲು ರೆಡಿಯಾಗಿದ್ದು, ಅವರ ನಟನೆಯ ಮೊದಲ ಸಿನಿಮಾ ‘ಗೌರಿ’ಯ ಮುಹೂರ್ತ ಇಂದು (ಆಗಸ್ಟ್ 31) ನಡೆದಿದೆ ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಪುತ್ರ ಸಮರ್ಜಿತ್ ಲಂಕೇಶ್, ನಾಯನ ನಟನಾಗಿ ಚಿತ್ರರಂಗಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ನಟನಾಗಲು ಅವಶ್ಯಕವಿರುವ ಕೆಲವು ಕಲೆಗಳನ್ನು ಕಲಿತು ಬಂದಿರುವ ಸಮರ್ಜಿತ್ ಇದೀಗ ಚಿತ್ರರಂಗಕ್ಕೆ ಎಂಟ್ರಿ ಕೊಡಲು ರೆಡಿಯಾಗಿದ್ದು, ಮಗನ ಮೊದಲ …
Read More »ಮಹಾನಗರ ಪಾಲಿಕೆಯಲ್ಲಿ ನೇಮಕಗೊಂಡ ಮಹಾರಾಷ್ಟ್ರ ಮೂಲದ ಪೌರ ಕಾರ್ಮಿಕರನ್ನು ತಕ್ಷಣ ವಜಾಗೊಳಿಸಬೇಕೆಂದು ಒತ್ತಾಯಿಸಿ ಇಂದು ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ಪ್ರತಿಭಟನೆ
ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನೇಮಕಗೊಂಡ ಮಹಾರಾಷ್ಟ್ರ ಮೂಲದ ಪೌರ ಕಾರ್ಮಿಕರನ್ನು ತಕ್ಷಣ ವಜಾಗೊಳಿಸಬೇಕೆಂದು ಒತ್ತಾಯಿಸಿ ಇಂದು ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು. ಬೆಳಗಾವಿ ಪಾಲಿಕೆಯ ವ್ಯಾಪ್ತಿಯಲ್ಲಿ ಸಾಕಷ್ಟು ಪೌರ ಕಾರ್ಮಿಕರು ಇದ್ದಾರೆ. ಕೆಲ ಬಿಜೆಪಿ ಸದಸ್ಯರ ಕುಮ್ಮಕ್ಕಿನಿಂದ ಮಹಾರಾಷ್ಟ್ರ ಮೂಲದ ಪೌರಕಾರ್ಮಿಕರ ನೇಮಕ ಮಾಡಿಕೊಂಡಿರುವ ಕ್ರಮ ಸರಿಯಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ”ಪಾಲಿಕೆಯಲ್ಲಿ ಮಹಾರಾಷ್ಟ್ರದ ಕೋವಾಡದ ಪೌರ …
Read More »ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಸಂಬಂಧ ಎಲ್ಲ ಆಯಾಮದಲ್ಲೂ ತನಿಖೆ: ಸಚಿವ ಶಿವಾನಂದ ಪಾಟೀಲ್
ಹಾವೇರಿ: “ನಗರದ ಸಮೀಪದ ಆಲದಕಟ್ಟಿ ಗ್ರಾಮದಲ್ಲಿ ನಡೆದ ಪಟಾಕಿ ದುರಂತಕ್ಕೆ ಹಲವು ವೈಫಲ್ಯಗಳು ಕಾರಣ” ಎಂದು ಜವಳಿ ಮತ್ತು ಸಕ್ಕರೆ ಹಾಗೂ ಹಾವೇರಿ ಜಿಲ್ಲೆಯ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಹೇಳಿದರು. ಇಂದು ಆಲದಕಟ್ಟಿಯ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಘಟನೆ ಸಂಬಂಧ ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತದೆ. ಈ ದುರಂತ ನಡೆದಿರುವುದು ದುರಾದೃಷ್ಟಕರ, ಆಗಬಾರದಾಗಿತ್ತು ಆಗಿದೆ. …
Read More »ಕಾಂಗ್ರೆಸ್ ಸರ್ಕಾರದ ನೂರು ದಿನದ ಸಾಧನೆ ಅಂದ್ರೆ ಅದು ವರ್ಗಾವಣೆ ಮಾತ್ರ:ಯತ್ನಾಳ್
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ನೂರು ದಿನದ ಸಾಧನೆ ಅಂದರೆ ಅದು ವರ್ಗಾವಣೆ ಮಾತ್ರ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕೆಲಸ ಎಲ್ಲಾ ಸ್ಥಗಿತ ಆಗಿದೆ. ನಮ್ಮ ಅಧಿಕಾರಾವಧಿಯಲ್ಲಿನ ಕೆಲಸಗಳನ್ನೆಲ್ಲಾ ಸ್ಥಗಿತ ಮಾಡಿದ್ದಾರೆ. ಎಲ್ಲರಿಗೂ ಉಚಿತ ಖಚಿತ ಅಂದ್ರು. ಆದರೆ ಈಗ ನೂರಾರು ಷರತ್ತುಗಳನ್ನು ಹಾಕಿದ್ದಾರೆ. ಯಾವುದೇ ಯೋಜನೆ ಪೂರ್ಣ ಪ್ರಮಾಣದಲ್ಲಿ ಜನರಿಗೆ ಸಿಗುವುದಿಲ್ಲ …
Read More »
Laxmi News 24×7