ಗೋಕಾಕ: ಖಜಕಿಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಐರನ್-ಮ್ಯಾನ್ ಸ್ಪರ್ಧೆಯಲ್ಲಿ ವಿಜೇತರಾದ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸತ್ಕರಿಸಿ ಅಭಿನಂದಿಸಿದರು. ಅಂತರಾಷ್ಟ್ರೀಯ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿ 3.8 ಕಿ.ಮೀ ಈಜು, 180 ಕಿ. ಮೀ ಸೈಕ್ಲಿಂಗ್ ಹಾಗೂ 42 ಕೀ.ಮೀ. ಓಟವನ್ನು 14 ಗಂಟೆ 30 ನಿಮಿಷದಲ್ಲಿ ಪೂರ್ತಿಗೊಳಿಸಿ ಅಂತರರಾಷ್ಟ್ರೀಯ ಐರನ್ ಮ್ಯಾನ್ ಆಗಿ ಹೊರಹೊಮ್ಮಿದ್ದ ಸಿಪಿಐ ಶ್ರೀಶೈಲ ಬ್ಯಾಕೋಡ ಅವರನ್ನು ಲೋಕೋಪಯೋಗಿ …
Read More »ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ:
ಬೆಳಗಾವಿಯ ಸೇಂಟ್ ಕ್ಸೇವಿಯರ್ ಶಾಲೆ ಬಳಿಯ ಸೈನಿಕ ಆಸ್ಪತ್ರೆ ಕ್ಯಾಂಪ್ ಕಡೆಗೆ ಹೋಗುವ ರಸ್ತೆ ಕೆಸರಿನಿಂದ ಕೂಡಿದೆ, ಪಾದಚಾರಿಗಳು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡುವಂತೆ ವಹಿಸುವಂತೆ ಸಾಮಾಜಿಕ ಕಾರ್ಯಕರ್ತ ಸಂತೋಷ ದಾರೆಕರ್ ಮನವಿ ಮಾಡಿದ್ದಾರೆ. ಸೇಂಟ್ ಕ್ಸೇವಿಯರ್ ಶಾಲೆ ಬಳಿಯ ಮಿಲಿಟರಿ ಆಸ್ಪತ್ರೆ ಕ್ಯಾಂಪ್ ಕಡೆಗೆ ಹೋಗುವ ರಸ್ತೆಯನ್ನು ಪ್ರಸ್ತುತ ಪೈಪ್ಲೈನ್ ಹಾಕಲು ರಸ್ತೆಯ ಉದ್ದಕ್ಕೂ ಅಗೆಯಲಾಗುತ್ತಿದೆ. ಹಾಗಾಗಿ ಈ ಸ್ಥಳದಲ್ಲಿ ಭಾರೀ ಯಂತ್ರೋಪಕರಣಗಳಿವೆ. ರಸ್ತೆ …
Read More »ದೂಧ್ ಸಾಗರ ನೋಡಲು ಹೋದ ಪ್ರವಾಸಿಗರಿಗೆ ಬಸ್ಕಿ ಹೊಡೆಸಿದ ಗೋವಾ ಪೊಲೀಸ
ಬೆಳಗಾವಿ: ದೂಧ್ ಸಾಗರ ನೋಡಲು ಹೋದ ಪ್ರವಾಸಿಗರಿಗೆ ಬಸ್ಕಿ ಹೊಡೆಸಿದ ಘಟನೆ ನಡೆದಿದ್ದು ಗೋವಾ ಪೊಲೀಸರ ವರ್ತನೆ ಖಂಡಿಸಿ ರೈಲ್ವೆ ಹಳಿಯ ಮೇಲೆ ಕುಳಿತು ಪ್ರವಾಸಿಗರ ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ- ಗೋವಾ ಗಡಿಭಾಗದಲ್ಲಿರುವ ದೂಧ್ ಸಾಗರ ಜಲಪಾತ ಘಟನೆ ನಡೆದಿದ್ದು ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನಲೆಯಲ್ಲಿ ದೂದ್ ಸಾಗರ ನೋಡಲು ಜನಸಾಗರವೇ ಆಗಮಿಸಿದೆ. ಪ್ರವಾಸಿಗರು ಬರುತ್ತಿದ್ದಂತೆ ದೂಧ್ ಸಾಗರ ಪ್ರವೇಶಕ್ಕೆ ನಿಷೇಧವನ್ನು ಗೋವಾದ ಪೊಲೀಸರು ಹೇರಿದ್ದಾರೆ.ದೂದಸಾಗರದಲ್ಲಿ ಆಳವಾದ …
Read More »ಪ್ರತಿಪಕ್ಷ ನಾಯಕನ ಆಯ್ಕೆ ವಿಚಾರ ಅದು ನಮ್ಮ ಪಕ್ಷಕ್ಕೆ ಬಿಟ್ಟಿದ್ದು: ಬೊಮ್ಮಾಯಿ
ಹಾವೇರಿ: ಬಿಸಿಯೂಟ ಕಾರ್ಯಕರ್ತೆಯರು ಕೈ ಬಳೆ ಹಾಕುವಂತಿಲ್ಲಾ ಎಂಬ ಮಾರ್ಗಸೂಚಿಯನ್ನು ಸರ್ಕಾರ ಹೊರಡಿಸಿದೆ ಎಂಬ ವದಂತಿ ಹಬ್ಬುತ್ತಿದೆ. ಈ ವಿಚಾರ ಕುರಿತಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಾಡಲು ಬೇರೆ ಕೆಲಸ ಇಲ್ವಾ? ಎಂದು ಪ್ರಶ್ನಿಸಿದ್ದಾರೆ. ನಾನು ಸರ್ಕಾರಕ್ಕೆ ಪ್ರಶ್ನೆ ಕೇಳ್ತಿನಿ, ಈ ಹಿಂದೆ ಎಲ್ಲರೂ ಬಳೆ ಹಾಕಿಕೊಂಡು ಕೆಲಸ ಮಾಡಿದಾರೆ. ಅಂದು ಯಾವ ತೊಂದರೆ ಆಗಿಲ್ಲಾ. ಸರ್ಕಾರಕ್ಕೆ ಮಾಡಲು ಬೇರೆ …
Read More »ಜೈನ ಮುನಿ ಮಹಾರಾಜರ ಕನಸುಗಳನ್ನು ಪೂರ್ಣ ಮಾಡುತ್ತೇವೆ: ಸಂಸದ ಅಣ್ಣಾಸಾಹೇಬ್ ಜೊಲ್ಲೆ
ಚಿಕ್ಕೋಡಿ (ಬೆಳಗಾವಿ) : ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆಘಾತ ಉಂಟು ಮಾಡಿದೆ. ಹಿರೇಕೋಡಿ ಎಂಬ ಸಣ್ಣ ಹಳ್ಳಿಯಲ್ಲಿ ಉತ್ತಮ ಆಶ್ರಮ ಕಟ್ಟಿ, ಶಿಕ್ಷಣ ಸಂಸ್ಥೆ ಮಾಡಿದರು. ಮುಂದೆ ಅವರು ಬಿಟ್ಟು ಹೋದ ಕನಸುಗಳನ್ನು ಪೂರ್ಣ ಮಾಡುತ್ತೇವೆ ಎಂದು ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹೇಳಿದರು. ಇಂದು ಜೈನಮುನಿ ಆಶ್ರಮಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಮಕುಮಾರ ನಂದಿ ಮಹಾರಾಜರು ಬಿಇ ಪದವೀಧರ ಆಗಿದ್ದು, 14 ಭಾಷೆಗಳಲ್ಲಿ ಪರಿಣಿತರಾಗಿದ್ದರು. …
Read More »ಬೆಂಗಳೂರು – ಮೈಸೂರು ಹೈವೇಯ ದುಪ್ಪಟ್ಟು ಟೋಲ್ ವಿರೋಧಿಸಿ ಕರವೇ ಸ್ವಾಭಿಮಾನಿ ಸೇನೆ ಪ್ರತಿಭಟನೆ
ಬೆಂಗಳೂರು: ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ದುಪ್ಪಟ್ಟು ಟೋಲ್ ವಸೂಲಿ ವಿರೋಧಿಸಿ ಹಾಗೂ ಅಪಘಾತದಲ್ಲಿ ಮೃತಪಟ್ಟಿರುವ ಕುಟುಂಬದವರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಸೇನೆ ಪ್ರತಿಭಟನೆ ನಡೆಸಿತು. ರಾಜ್ಯಾಧ್ಯಕ್ಷರಾದ ನಿಂಗರಾಜ್ ಗೌಡ ನೇತೃತ್ವದಲ್ಲಿ ಕರವೇ ಸ್ವಾಭಿಮಾನಿ ಸೇನೆಯ ನೂರಾರು ಜನ ಕಾರ್ಯಕರ್ತರು ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ ಬಳಿ ಪ್ರತಿಭಟನೆ ನಡೆಸಿದ್ದಾರೆ. ಸಾರ್ವಜನಿಕರ ತೆರಿಗೆ ಹಣದಿಂದ ಎಕ್ಸ್‌ಪ್ರೆಸ್ ಹೈವೇ ನಿರ್ಮಾಣವಾಗಿದೆ. ಆದರೂ ಅದನ್ನ ಬಳಸಲು ದುಪ್ಪಟ್ಟು …
Read More »ತರಕಾರಿಗಳ ಬೆಲೆ ಏರಿಕೆಯಿಂದಾಗಿ ಅಂಗನವಾಡಿ ಕೇಂದ್ರಗಳಿಗೂ ತೊಂದರೆ
ಬೆಂಗಳೂರು: ತರಕಾರಿಗಳ ಬೆಲೆ ಏರಿಕೆಯಿಂದಾಗಿ ಅಂಗನವಾಡಿ ಕೇಂದ್ರಗಳಿಗೂ ತೊಂದರೆ ಎದುರಾಗಿದೆ. ತರಕಾರಿ ಹಾಗೂ ನಿತ್ಯ ಬಳಸುವ ವಸ್ತುಗಳು ಆಗಸಕ್ಕೇರಿದ ಹಿನ್ನೆಲೆ ತರಕಾರಿ ಖರೀದಿಗೆ ಹಿಂದೆ ಮುಂದೆ ಯೋಚಿಸುವ ಪರಿಸ್ಥಿತಿ ಬಂದಿದೆ. ದುಬಾರಿ ಬೆಲೆ ಕಾರಣ ಶಾಲಾ ಬಿಸಿಯೂಟದಲ್ಲಿ ಪೌಷ್ಠಿಕಾಂಶದ ಕೊರತೆ ಎದುರಾಗಿದೆ. ಅಂಗನವಾಡಿ ಕೇಂದ್ರಗಳು ನೀಡುತ್ತಿರುವ ಊಟದಲ್ಲಿ ತರಕಾರಿ ತುಂಡುಗಳೇ ನಾಪತ್ತೆ ಆಗುತ್ತಿದೆ. ಅಂಗನವಾಡಿ ಕೇಂದ್ರಗಳು ಬರಿ ಅನ್ನ ಮತ್ತು ತಿಳಿಸಾರು ಮೊರೆ ಹೋಗುತ್ತಿದ್ದಾರೆ. ಅಂಗನವಾಡಿಗಳಲ್ಲಿ ಮಕ್ಕಳಿಗೆ, ಗರ್ಭಿಣಿಯರಿಗೆ, ಬಾಣಂತಿಯರಿಗೆ ಪೌಷ್ಟಿಕ …
Read More »ಜೈನಮುನಿ ಕಾಮಕುಮಾರ ನಂದಿ ಮಹಾರಾಜರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಜಯಮೃತ್ಯುಂಜಯ ಶ್ರೀ
ಚಿಕ್ಕೋಡಿ: ಹಿರೇಕೊಡಿ ನಂದಿ ಪರ್ವತ ಮಹಾರಾಜರ ಹತ್ಯೆಯಿಂದ ಭಾರತದ ಅಧ್ಯಾತ್ಮ ಪರಂಪರೆಗೆ ಧಕ್ಕೆ ಆಗಿದೆ. ಒಕ್ಕೊರಲಾಗಿ ಖಂಡಿಸಿ ನ್ಯಾಯ ಕೊಡಿಸುವ ಕೆಲಸ ಎಲ್ಲರೂ ಕೂಡಿ ಮಾಡಬೇಕು. ನೊಂದ ಮನಸ್ಸುಗಳಿಗೆ ಧೈರ್ಯ ಹೇಳಿ ಮುಂದೆ ಈ ರೀತಿ ಘಟನೆ ಆಗದಂತೆ ಎಲ್ಲರೂ ಸಾಮೂಹಿಕ ಪ್ರಯತ್ನ ಮಾಡಬೇಕಾಗಿದೆ ಎಂದು ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತದ ಆಶ್ರಮಕ್ಕೆ ಭೇಟಿ ನೀಡಿ ಮಾಧ್ಯಮಗಳ …
Read More »ಸ್ನೇಹಿತನನ್ನು ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ: ಇಲ್ಲಿನ ಪೀರನವಾಡಿಯ ಯುವಕ ಅರ್ಬಾಜ್ ರಫೀಕ್ ಮುಲ್ಲಾ(22) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪೀರನವಾಡಿ ಗ್ರಾಮದ ಪ್ರಸಾದ ನಾಗೇಶ ವಡ್ಡರ, ಪ್ರಶಾಂತ ಕರ್ಲೇಕರ್ ಬಂಧಿತ ಆರೋಪಿಗಳು. ಇನ್ನು ಕೊಲೆಗೆ ಹಳೆ ದ್ವೇಷವೇ ಕಾರಣ ಎಂದು ತಿಳಿದು ಬಂದಿದೆ. ಆರೋಪಿಗಳಾದ ಪ್ರಸಾದ ವಡ್ಡರ, ಪ್ರಶಾಂತ ಕರ್ಲೇಕರ್ ಮತ್ತು ಕೊಲೆಯಾದ ಅರ್ಬಾಜ್ ಮುಲ್ಲಾ ಮೂವರು ಸ್ನೇಹಿತರು. ಮೂರು ವರ್ಷಗಳ ಹಿಂದೆ ಪೀರನವಾಡಿಯ ಜನ್ನತ್ …
Read More »ಕಪರಟ್ಟಿಯ ಬಸವರಾಜ ಹಿರೇಮಠ ಅವರನ್ನ ಪ್ರಶಂಶಿಸಿದ ಸರ್ವೊತ್ತಮ ಜಾರಕಿಹೊಳಿ
ಗೋಕಾಕ್- ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಅಧಿಕ ಮಾಸದಲ್ಲಿ ಕಪರಟ್ಟಿಯ ಬಸವರಾಜ ಹಿರೇಮಠ ಅವರು ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ಮಹಾಪೂಜೆ ನಡೆಸುತ್ತಿರುವುದು ಶ್ಲಾಘನೀಯ ಎಂದು ಯುವ ಧುರೀಣ ಸರ್ವೊತ್ತಮ ಜಾರಕಿಹೊಳಿ ಪ್ರಶಂಶಿಸಿದರು. ಶನಿವಾರ ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇಂತಹ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಪ್ರತಿ ಹಳ್ಳಿ- ಹಳ್ಳಿಗಳಲ್ಲಿಯೂ ನಡೆಯಬೇಕು. ಇದರಿಂದ ಇಂದಿನ ಯುವ ಜನಾಂಗಕ್ಕೆ ಮಹಾನ್ …
Read More »
Laxmi News 24×7