ಚಿಕ್ಕೋಡಿ: ಕುಡಿತದ ಚಟಕ್ಕೆ ದಾಸನಾಗಿ ಕುಟುಂಬಸ್ಥರನ್ನು ಪೀಡಿಸುತ್ತಿದ್ದ ಯುವಕನನ್ನು ಸ್ವಂತ ತಂದೆ ಮತ್ತು ಅಣ್ಣನೇ ಹೊಡೆದು ಸಾಯಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದ ಸೋಮಯ್ಯ ಮಹಾಲಿಂಗಯ್ಯ ಹಿರೇಮಠ (24) ಮೃತ ದುರ್ದೈವಿ. ಆರೋಪಿಗಳಾದ ಮಹಾಲಿಂಗಯ್ಯ ಗುರುಸಿದ್ದಯ್ಯ ಹಿರೇಮಠ, ಬಸಯ್ಯ ಹಿರೇಮಠ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ : ಜುಲೈ 10ರಂದು ಸೋಮಯ್ಯ ಮದ್ಯಪಾನ ಮಾಡಲು ಹಣ …
Read More »ದೇಗುಲದ ಗರ್ಭಗುಡಿ ಮೇಲೆ ಕೋಳಿ ಮರಿಗಳನ್ನು ಹಾರಿಸಿ ಹರಕೆ ತೀರಿಸುವ ವಿಶಿಷ್ಟ ಪದ್ಧತಿ
ಬೆಳಗಾವಿ : ಜಾತ್ರೆಗಳಲ್ಲಿ ನಡೆಯುವ ರಥೋತ್ಸವಗಳಲ್ಲಿ ಸಾಮಾನ್ಯವಾಗಿ ಬಾಳೆಹಣ್ಣು, ಉತ್ತತ್ತಿ ಮುಂತಾದವುಗಳನ್ನು ದೇವರಿಗೆ ಎಸೆಯುವುದನ್ನು ನಾವು ನೋಡಿದ್ದೇವೆ. ಆದರೆ, ಬೆಳಗಾವಿಯಲ್ಲಿ ನಡೆಯುವ ಜಾತ್ರೆಯೊಂದರಲ್ಲಿ ಗರ್ಭಗುಡಿ ಮೇಲೆ ಕೋಳಿ ಮರಿಗಳನ್ನು ಎಸೆಯುವ ವಿಶಿಷ್ಟ ಪದ್ಧತಿಯಿದೆ. ವಡಗಾವಿ ಆರಾಧ್ಯ ದೇವಿ ಮಂಗಾಯಿದೇವಿ ಜಾತ್ರೆಯಲ್ಲಿ ಕೋಳಿ ಮರಿಗಳನ್ನು ಗರ್ಭಗುಡಿ ಮೇಲೆ ಎಸೆಯುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಪ್ರತಿ ವರ್ಷ ಆಷಾಢ ಮಾಸದ ಹುಣ್ಣಿಮೆಯ ಬಳಿಕ ಬರುವ ಮಂಗಳವಾರದಿಂದ ಮಂಗಾಯಿ ದೇವಿ ಜಾತ್ರೆ ಪ್ರಾರಂಭವಾಗುತ್ತದೆ. ಅದ್ಧೂರಿ …
Read More »ರೈತರಿಂದ ವಶಪಡಿಸಿಕೊಂಡ ಜಮೀನಿಗೆ ಸೂಕ್ತ ಪರಿಹಾರದ ಹಣ ನೀಡಲು ಈ ವರ್ಷ ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ನಾವು ಬಸವರಾಜ ಬೊಮ್ಮಾಯಿ ಅವರ ಬಜೆಟ್ ಅನ್ನು ಸ್ವಲ್ಪ ಮಾರ್ಪಾಡಿಸಿ ಮಂಡಿಸಿದ್ದೇವೆ. ಹೀಗಾಗಿ ಈ ವರ್ಷ ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ ಪ್ರತ್ಯೇಕವಾಗಿ ಹೆಚ್ಚಿನ ಅನುದಾನ ನೀಡಲು ಮತ್ತು ಈ ನೀರಾವರಿ ಯೋಜನೆಗಳಿಗೆ ರೈತರಿಂದ ವಶಪಡಿಸಿಕೊಂಡ ಜಮೀನಿಗೆ ಸೂಕ್ತ ಪರಿಹಾರದ ಹಣ ನೀಡಲು ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ನಲ್ಲಿ ಮಂಗಳವಾರ ನಿಯಮ 72ರ ಅಡಿ ಬಿಜೆಪಿ ಸದಸ್ಯ ಹನುಮಂತ ನಿರಾಣಿ ಮಂಡಿಸಿದ ಗಮನ ಸೆಳೆಯುವ …
Read More »ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ತಾಯಿ
ಮಹಿಳೆಯೊಬ್ಬರು ಮಗಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ದಿಂಡಲಕೊಪ್ಪ ಗ್ರಾಮದಲ್ಲಿ ನಡೆದಿದೆ. ಮಹಾದೇವಿ ಇಂಚಲ (34) ಮತ್ತು ಚಾಂದಿನಿ ಇಂಚಲ (7) ಆತ್ಮಹತ್ಯೆ ಮಾಡಿಕೊಂಡವರು. ಸಹೋದರ ಹಾಗೂ ನಾದಿನಿಯ ಕಿರುಕುಳದಿಂದ ಬೇಸತ್ತ ಗೃಹಿಣಿ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಸೈನಿಕನೊಂದಿಗೆ ಮಹಾದೇವಿ ವಿವಾಹವಾಗಿದ್ದರು. ಏಳು ವರ್ಷಗಳ ಹಿಂದೆ ಅವರ ಪತಿ ಅಕಾಲಿಕ ಮರಣ ಹೊಂದಿದ್ದರು. ಹೀಗಾಗಿ ಈ …
Read More »14 ದಿನ ಜೈನಮುನಿ ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ
ಹಿರೇಕೋಡಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಚಿಕ್ಕೋಡಿ ಡಿವೈಎಸ್ಪಿ ಬಸವರಾಜ ಯಲಿಗಾರ ಸಿಪಿಐ ಆರ್.ಆರ್.ಪಾಟೀಲ್ ಅವರ ತಂಡ ಹಿಂಡಲಗಾ ಜೈಲಿನಿಂದ ವಶಕ್ಕೆ ಪಡೆದಿದೆ. ಆರೋಪಿಗಳ ಆರೋಗ್ಯವನ್ನು ಚಿಕ್ಕೋಡಿ ತಾಲೂಕಾ ಆಸ್ಪತ್ರೆಯಲ್ಲಿ ಪರೀಕ್ಷಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು 14 ದಿನಗಳ ಕಸ್ಟಡಿಗೆ ಕೋರಲಾಗಿದೆ. ಜುಲೈ 5 ರಂದು ಇಡೀ ರಾಜ್ಯವಷ್ಟೇ ಅಲ್ಲ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಚಿಕ್ಕೋಡಿ ತಾಲೂಕಿನ ಜೈನ ಮುನಿ …
Read More »ಅವರಾದಿ ಬ್ರಿಡ್ಜ್ ಮೇಲೆ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬೈಕ್ ನೀರಲ್ಲಿ ಕೊಚ್ಚಿ ಹೋದ ಇಬ್ಬರು
ಬೆಳಗಾವಿ: ಘಟಪ್ರಭಾ ನದಿಯಲ್ಲಿ ಇಬ್ಬರು ಸಂಬಂಧಿಕರು ಕೊಚ್ಚಿ ಹೋಗಿರುವ ಘಟನೆ ಮೂಡಲಗಿ ತಾಲೂಕಿನ ಅವರಾದಿ ಬಳಿ ಇಂದು ಮಧ್ಯಾಹ್ನ ನಡೆದಿದೆ. ಅವರಾದಿ ಬ್ರಿಡ್ಜ್ ಮೇಲೆ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬೈಕ್ ಬಿದ್ದಿದ್ದು, ಅವರಾದಿ ಗ್ರಾಮದ ಚನ್ನಪ್ಪ ಹರಿಜನ(30), ದುರ್ಗವ್ವ ಹರಿಜನ(25) ಕೊಚ್ಚಿಹೋದ ಸಂಬಂಧಿಗಳು ಎಂದು ಗುರುತಿಸಲಾಗಿದೆ. ಅವರಾದಿ ಗ್ರಾಮದಿಂದ ಮಹಾಲಿಂಗಪುರ ಪಟ್ಟಣಕ್ಕೆ ಇಬ್ಬರು ಹೊರಟಿದ್ದರು. ಈ ವೇಳೆ, ನಿಯಂತ್ರಣ ತಪ್ಪಿ ಬೈಕ್, ಸೇತುವೆ ಮೇಲಿಂದ ನೀರಿನಲ್ಲಿ ಬಿದ್ದಿದೆ. ಬ್ರಿಡ್ಜ್ …
Read More »ಆಶಾ ಕಾರ್ಯಕರ್ತೆಯರಿಗೆ ಪಿಂಚಣಿ ಸೌಲಭ್ಯ ಇಲ್ಲ, ಸ್ಮಾರ್ಟ್ ಫೋನ್ ನೀಡುವ ಬಗ್ಗೆ ಪರಿಶೀಲನೆ :ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಆಶಾ ಕಾರ್ಯಕರ್ತೆಯರು ಖಾಯಂ ನೌಕರರಲ್ಲ ಹಾಗಾಗಿ ಅವರಿಗೆ ಪಿಂಚಣಿ ವ್ಯವಸ್ಥೆ ಕಲ್ಪಿಸಲು ಸಾಧ್ಯವಿಲ್ಲ, ಆದರೆ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳೆಲ್ಲವೂ ಅವರಿಗೆ ಅನ್ವಯವಾಗಲಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಶಾ ಕಾರ್ಯಕರ್ತೆಯರ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ, ಅವರು ಸ್ವಯಂ ಪ್ರೇರಿತರಾಗಿ ಕೆಲಸ ಮಾಡುತ್ತಿದ್ದಾರೆ ಎಂದರು. ಅದಕ್ಕಾಗಿ ರಾಜ್ಯ ಸರ್ಕಾರ ಅವರಿಗೆ ಐದು ಸಾವಿರ …
Read More »ರೌಡಿಶೀಟರ್ ಮಾಸ್ತಿಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳು ಶರಣಾಗಿದ್ದಾರೆ.
ಹಾಸನ: ಮೂರು ದಿನಗಳ ಹಿಂದೆ ಚನ್ನರಾಯಪಟ್ಟಣದಲ್ಲಿ ರೌಡಿಶೀಟರ್ ಮಾಸ್ತಿಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳು ಶರಣಾಗಿದ್ದಾರೆ. ಚನ್ನರಾಯಪಟ್ಟಣದ ರೌಡಿಶೀಟರ್ ಹುಲಿವಾಲ ಚೇತು, ಹಾಸನದ ಸಾಲಗಾಮೆ ರಾಕೇಶ್ ಅಲಿಯಾಸ್ ರಾಕಿ ಮತ್ತು ಮಂಡ್ಯ ಮೂಲದ ಶಿವು, ಶರಣಾದ ಆರೋಪಿಗಳು. ಜೂ.4ರ ಮಂಗಳವಾರ ಐದು ಮಂದಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಮಾಸ್ತಿಗೌಡನನ್ನು ಬರ್ಬರವಾಗಿ ಕೊಲೆ ಮಾಡಿ, ಪರಾರಿಯಾಗಿದ್ದರು. ಆರೋಪಿಗಳಲ್ಲಿ ಮೂವರು ತಾವಾಗಿಯೇ ಶರಣಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ. …
Read More »ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ C.M. ಸಿದ್ದರಾಮಯ್ಯ ಚಾಲನೆ
ಬೆಂಗಳೂರು: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅನ್ನಭಾಗ್ಯ ಯೋಜನೆಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಅವರೇನು …
Read More »ಕೃಷಿ ಭೂಮಿಯಲ್ಲಿ ಅನಧಿಕೃತ ಹೋಂ ಸ್ಟೇ ನಡೆಸಲು ಅವಕಾಶವಿಲ್ಲ: ರೆಡ್ಡಿ ಪ್ರಶ್ನೆಗೆ ಸಚಿವ ಭೈರತಿ ಸುರೇಶ್ ಸ್ಪಷ್ಟನೆ
ಬೆಂಗಳೂರು : ಹಂಪಿ ಯೋಜನಾ ಪ್ರಾಧಿಕಾರ ವ್ಯಾಪ್ತಿಯ ಆನೆಗೊಂದಿ ಪ್ರದೇಶದಲ್ಲಿ ಕೃಷಿ ಭೂಮಿಯಲ್ಲಿ ಅನಧಿಕೃತ ಹೋಂ ಸ್ಟೇ ನಡೆಸಲು ಅವಕಾಶವಿಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿಧಾನಸಭೆಗೆ ಸ್ಪಷ್ಟಪಡಿಸಿದ್ದಾರೆ. ಇಂದು ಶೂನ್ಯವೇಳೆಯಲ್ಲಿ ಸದಸ್ಯ ಜಿ ಜನಾರ್ದನರೆಡ್ಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಹಂಪಿ ಯೋಜನಾ ಪ್ರಾಧಿಕಾರ ವ್ಯಾಪ್ತಿಯಲ್ಲಿ 15 ಗ್ರಾಮಗಳು ಬರುತ್ತವೆ. 2008ರಲ್ಲೇ ಅಧಿಸೂಚನೆ ಹೊರಡಿಸಲಾಗಿದೆ ಎಂದರು. ಹಂಪಿ ಪ್ರಾಧಿಕಾರದ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ 58 ಅನಧಿಕೃತ ಹೋಂ ಸ್ಟೇಗಳಿವೆ. …
Read More »
Laxmi News 24×7