ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆಯಾಗಿದೆ. ಹೈಕಮಾಂಡ್ ವೀಕ್ಷಕರು ಇನ್ನು ಆಗಮಿಸದೇ ಇರುವ ಕಾರಣದಿಂದಾಗಿ ನಾಳೆಗೆ ಶಾಸಕಾಂಗ ಸಭೆ ಮುಂದೂಡಿಕೆಯಾಗಿದ್ದು, ನಾಳೆಯ ಕಲಾಪ ಅಧಿಕೃತ ಪ್ರತಿಪಕ್ಷದ ನಾಯಕನಿಲ್ಲದೇ ನಡೆಯಲಿದೆ. ಆದರೆ ಗ್ಯಾರಂಟಿ ವಿಚಾರದಲ್ಲಿನ ಬಿಜೆಪಿ ಹೋರಾಟ ಮಾತ್ರ ಮುಂದುವರೆಯಲಿದೆ. ಉಭಯ ಸದನದಲ್ಲಿ ಬಿಜೆಪಿ ಸದಸ್ಯರು ಹೋರಾಟ ನಡೆಸಿದರೆ ಫ್ರೀಡಂ ಪಾರ್ಕ್ ನಲ್ಲಿ ಪಕ್ಷದ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಇಂದು ಸಂಜೆ 6 ಗಂಟೆಗೆ …
Read More »ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ ಪರಾರಿ
ಪತಿಯೇ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿ ಪರಾರಿಯಾದ ಘಟನೆ ನಗರದ ನೇಕಾರನಗರದ ಬಸವೇಶ್ವರ ಸರ್ಕಲ್ ಬಳಿ ಇಂದು ಮುಂಜಾನೆ ನಡೆದಿದೆ. ಕೊಲೆಯಾದ ಮಹಿಳೆ ಸುಧಾ (೨೪) ಎಂದು ತಿಳಿದು ಬಂದಿದ್ದು, ಪತಿ ಶಿವಯ್ಯಾ ಹಿರೇಮಠ (೨೮) ಎಂಬಾತನೇ ಕುಡಿದ ಮತ್ತಿನಲ್ಲಿಯೇ ಕತ್ತು ಹಿಚುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬೆಳಗಿನ ಜಾವ ೧೨.೩೦ ರಿಂದ ಬೆಳಿಗ್ಗೆ ೯.೩೦ ರ ಮಧ್ಯದಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಪತಿ ಶಿವಯ್ಯಾ …
Read More »ಗಜಪತಿ ಗ್ರಾಮದಲ್ಲಿ ಬೆಳಗ್ಗೆ ಬಸ್ ನಿಲ್ಲಿಸದ ಕಾರಣ ಆಕ್ರೋಶಗೊಂಡ ವಿದ್ಯಾರ್ಥಿಗಳು
ಬೆಳಗಾವಿ ತಾಲೂಕಿನ ಗಜಪತಿ ಗ್ರಾಮದಲ್ಲಿ ಬೆಳಗ್ಗೆ ಬಸ್ ನಿಲ್ಲಿಸದ ಕಾರಣ ಆಕ್ರೋಶಗೊಂಡ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬಸ್ ತಡೆದು ಪ್ರತಿಭಟನೆ ನಡೆಸಿದರು. ಹಾಗೂ ಗಜಪತಿ ಗ್ರಾಮಕ್ಕೆ ಪ್ರತ್ಯೇಕ ಬಸ್ ಬಿಡುವಂತೆ ಒತ್ತಾಯಿಸಿದರು. ಬೆಳಗಾವಿ ತಾಲೂಕಿನ ಗಜಪತಿ ಗ್ರಾಮದಲ್ಲಿ ಬೆಳಗ್ಗೆ ಬಸ್ ನಿಲ್ಲಿಸದ ಕಾರಣ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮುಂಜಾನೆಯೇ ವಿದ್ಯಾರ್ಥಿಗಳು ಬಸ್‌ಗಾಗಿ ಕಾಯುತ ನಿಲ್ಲುತ್ತಾರೆ. ಆದರೆ ಹಿಂದಿನ ಗ್ರಾಮದಿಂದ ಮುಗುಳಿಗಲ್ ,ಬಿಡಿ ಗ್ರಾಮದಿಂದ ಬೆಳಗಾವಿಗೆ ಹೋಗುವ …
Read More »ಸರ್ಕಾರ ಬದಲಾದರೂ ಬದಲಾಗದ ಹೆಚ್ ವಿಶ್ವನಾಥ ಸ್ಥಾನ
ಬೆಂಗಳೂರು: ಸರ್ಕಾರ ಬದಲಾಗಿ ಮೊದಲ ಅಧಿವೇಶನ ಆರಂಭಗೊಂಡಿದ್ದು, ಆಡಳಿತ ಪಕ್ಷ ಪ್ರತಿಪಕ್ಷದ ಸಾಲಿನಲ್ಲಿ ಪ್ರತಿಪಕ್ಷ ಆಡಳಿತ ಪಕ್ಷದ ಸಾಲಿಗೆ ಬಂದರೆ ಹಿರಿಯ ಸದಸ್ಯ ಹೆಚ್ ವಿಶ್ವನಾಥ್ ಸ್ಥಾನ ಮಾತ್ರ ಬದಲಾಗಿಲ್ಲ. ಬಿಜೆಪಿ ಸರ್ಕಾರ ಇದ್ದಾಗಲೂ ಆಡಳಿತ ಪಕ್ಷದ ಸಾಲಿನಲ್ಲಿ ಇದ್ದ ಅವರು ಇದೀಗ ಕಾಂಗ್ರೆಸ್ ಸರ್ಕಾರ ಬಂದಿದ್ದರೂ ಆಡಳಿತ ಪಕ್ಷದ ಸಾಲಿನಲ್ಲೇ ಆಸೀನರಾಗಿದ್ದಾರೆ. ಬಿಜೆಪಿ ಸರ್ಕಾರದ ವೇಳೆ ನಾಮ ನಿರ್ದೇಶನಗೊಂಡಿದ್ದ ಹೆಚ್ ವಿಶ್ವನಾಥ್ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಪಕ್ಷದ ಜೊತೆ …
Read More »ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಹಿಂಪಡೆದರೆ ಸಾಲದು ನಮ್ಮ ಕೃಷಿ ಮಾರಾಟ ವ್ಯವಸ್ಥೆ ಸದೃಢಗೊಳಿಸಿ ರೈತ ಸ್ನೇಹಿ ಮಾಡುವಂತೆ ಕೃಷಿ ಆರ್ಥಿಕ ತಜ್ಞ ಡಾ ಪ್ರಕಾಶ ಕಮ್ಮರಡಿ ಒತ್ತಾಯಿ
ಬೆಳಗಾವಿ : ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಹಿಂಪಡೆದರೆ ಸಾಲದು ನಮ್ಮ ಕೃಷಿ ಮಾರಾಟ ವ್ಯವಸ್ಥೆ ಸದೃಢಗೊಳಿಸಿ ರೈತ ಸ್ನೇಹಿ ಮಾಡುವಂತೆ ಕೃಷಿ ಆರ್ಥಿಕ ತಜ್ಞ ಡಾ ಪ್ರಕಾಶ ಕಮ್ಮರಡಿ ಒತ್ತಾಯಿಸಿದ್ದಾರೆ. ಬೆಳಗಾವಿಯ ಎಪಿಎಂಸಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದಿನ ಕೊರೊನಾ ವೇಳೆ ಬಿಜೆಪಿ ಸರ್ಕಾರ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಅವಶ್ಯಕತೆ ಇರಲಿಲ್ಲ. ಎಪಿಎಂಸಿ ಕಾಯ್ದೆ ವ್ಯಾಪ್ತಿಗೆ ಬರುವ ಉತ್ಪನ್ನಗಳ ಮಾರಾಟ ಈ ಪ್ರಾಂಗಣದಲ್ಲಿ ನಡೆಯಬೇಕು. …
Read More »12ನೇ ಶತಮಾನದ ಬಸವಾದಿ ಶರಣರ ವಚನಗಳಿಗೆ ಪುನರ್ಜನ್ಮ ಕೊಟ್ಟಿದ್ದು ವಚನ ಗುಮ್ಮಟ ಹಳಕಟ್ಟಿಯವರು: ಡಾ ಸಿ ಕೆ ನಾವಲಗಿ
ಬೆಳಗಾವಿ : 12ನೇ ಶತಮಾನದ ಕಲ್ಯಾಣ ಕ್ರಾಂತಿಯ ನಂತರ ಚದುರಿ ಹೋಗಿದ್ದ ವಚನಗಳನ್ನು ಸಂಗ್ರಹಿಸಿ, ವಚನಗಳಿಗೆ ಪುನರ್ಜನ್ಮ ಕೊಟ್ಟಿದ್ದು ವಚನ ಪಿತಾಮಹ ಡಾ ಫ ಗು ಹಳಕಟ್ಟಿಯವರು. ಇವರು 20ನೇ ಶತಮಾನದ ವಚನ ಸಾಹಿತ್ಯದ ಶಿಖರ ಸೂರ್ಯ ಎಂದು ಖ್ಯಾತ ಸಾಹಿತಿ ಡಾ ಸಿ ಕೆ ನಾವಲಗಿ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ …
Read More »ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆ ಲಭ್ಯ: ಸೆ.30 ರೊಳಗೆ ಪಾವತಿಸುವಂತೆ ಮೂರು ತಿಂಗಳು ಕಾಲಾವಕಾಶ
ಬೆಂಗಳೂರು: ಗ್ರಾಹಕರು ವಿದ್ಯುತ್ ಬಿಲ್‌ನ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಪ್ರಯೋಜನ ಸಿಗಲಿದೆ ಎಂದು ಇಂಧನ ಇಲಾಖೆ ಸ್ಪಷ್ಟಪಡಿಸಿದೆ. ಇದೇ ವೇಳೆ ಹಿಂಬಾಕಿಯನ್ನು ಸೆ.30 ರೊಳಗೆ ಪಾವತಿಸುವಂತೆ ಮೂರು ತಿಂಗಳು ಕಾಲಾವಕಾಶ ನೀಡಲಾಗಿದೆ. ಜುಲೈ 25ರೊಳಗೆ ಯೋಜನೆಗೆ ನೋಂದಾಯಿಸಿಕೊಂಡಲ್ಲಿ ಆಗಸ್ಟ್ ತಿಂಗಳ ಬಿಲ್ನಲ್ಲಿ ಯೋಜನೆಯ ಪ್ರಯೋಜನ ದೊರಕಲಿದೆ. ಹಾಗೆಯೇ, ಜುಲೈ 25 ರಿಂದ ಆಗಸ್ಟ್ 25ರೊಳಗೆ ನೋಂದಾಯಿಸಿದಲ್ಲಿ ಸೆಪ್ಟೆಂಬರ್ ತಿಂಗಳ ಬಿಲ್ನಲ್ಲಿ ಯೋಜನೆಯ ಪ್ರಯೋಜನ ಸಿಗಲಿದೆ. (ಬಿಲ್ಲಿಂಗ್ ಅವಧಿ …
Read More »ತಾಳಿಕೋಟೆಯ ಖಾಸ್ಗತೇಶ್ವರ ಮಠದ ಅದ್ಧೂರಿ ರಥೋತ್ಸವ
ವಿಜಯಪುರ: ಜಿಲ್ಲೆಯ ಐತಿಹಾಸಿಕ ನಗರಿ ತಾಳಿಕೋಟೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀ ಖಾಸ್ಗತೇಶ್ವರ ಅಜ್ಜನ ಜಾತ್ರೆ ವಿಜೃಂಭಣೆಯಿಂದ ಜರುಗಿತು. ರಾಜ್ಯ, ಹೊರರಾಜ್ಯ ಸೇರಿದಂತೆ ಲಕ್ಷಾಂತರ ಭಕ್ತರನ್ನ ಹೊಂದಿರುವ ಈ ಖಾಸ್ಗತೇಶ್ವರ ಮಠದ ಜಾತ್ರೆ ಇಲ್ಲಿನ ವಿರಕ್ತ ಮಹಾಸ್ವಾಮಿಗಳ ಆಶೀರ್ವಾದದಿಂದ ಶ್ರೀ ಸಿದ್ದಲಿಂಗ ದೇವರು ಇವರ ಅಧ್ಯಕ್ಷತೆಯಲ್ಲಿ ಜಾತ್ರೆಯನ್ನ ಮಠದ ಭಕ್ತರು ಅಚ್ಚುಕಟ್ಟಾಗಿ ಆಯೋಜಿಸಿದ್ದರು. ಜಾತ್ರೆಯ ಅಂಗವಾಗಿ ಕಳೆದೊಂದು ವಾರದಿಂದ ಮಠದ ಅಂಗಳದಲ್ಲಿ ಮತ್ತು ತಾಳಿಕೋಟೆಯಲ್ಲಿ ವಿವಿಧ ಧಾರ್ಮಿಕ ಹಾಗೂ …
Read More »ಜುಲೈ 14ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಶುರು: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಜುಲೈ 14ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಶುರು ಮಾಡುವ ಬಗ್ಗೆ ಮಾತನಾಡಿಕೊಂಡಿದ್ದೇವೆ. ಜು.3 ಅಥವಾ 4ನೇ ತಾರೀಖು ಈ ಬಗ್ಗೆ ಘೋಷಣೆ ಮಾಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ವೈಎಸ್‌ಟಿ ಸಂಗ್ರಹ ಎಂಬ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿ, ಕುಮಾರಸ್ವಾಮಿ ಅವರು ಕೂಡ ಸರ್ಕಾರ ನಡೆಸಿದಂತ …
Read More »ಅಕ್ರಮವಾಗಿ ರಾತ್ರೋರಾತ್ರಿ ಮರಳು ಗಣಿಗಾರಿಕೆ ನಡೆಸುತ್ತಿರುವ ಅಡ್ಡೆಗಳ ಮೇಲೆ ಅಥಣಿ ಪೊಲೀಸರ ದಾಳಿ
ಚಿಕ್ಕೋಡಿ (ಬೆಳಗಾವಿ): ಕೃಷ್ಣಾ ನದಿಯಲ್ಲಿ ಅಕ್ರಮವಾಗಿ ರಾತ್ರೋರಾತ್ರಿ ಮರಳು ಗಣಿಗಾರಿಕೆ ನಡೆಸುತ್ತಿರುವ ಅಡ್ಡೆಗಳ ಮೇಲೆ ಅಥಣಿ ಪೊಲೀಸರು ದಾಳಿ ನಡೆಸಿ 30ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಮಳೆಯಿಲ್ಲದೇ ಬತ್ತಿ ಹೋಗಿರುವ ನದಿಯೊಡಲಿನ ಅಲ್ಲಲ್ಲಿ ಮರಳು ಗಣಿಗಾರಿಕೆ ನಡೆಯುತ್ತಿದೆ. ಸರ್ಕಾರ ಇದಕ್ಕಾಗಿ ನಿಯಮಗಳನ್ನು ಮಾಡಿದ್ದರೂ ಗುತ್ತಿಗೆ ಪಡೆಯದೇ ಅಧಿಕಾರಿಗಳಿಗೆ ತಿಳಿಯದಂತೆ ದಂದೆ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದ ಸಮೀಪದಲ್ಲಿ ಹರಿಯುವ ಕೃಷ್ಣಾ ನದಿಯಲ್ಲಿ ರಾತ್ರಿ ಅಕ್ರಮವಾಗಿ ಮರಳು …
Read More »
Laxmi News 24×7