Breaking News

ಜಿಲ್ಲೆ

ಕಳ್ಳತನ,ಕಳ್ಳತನ,ಕಳ್ಳತನ ಘಟಪ್ರಭಾದಲ್ಲಿ ಮತ್ತೆ ಕಳ್ಳರ ಕೈಚಳಕ..!

ಘಟಪ್ರಭಾ : ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಬಂಗಾರದ ಆಭರಣ ಸೇರಿದಂತೆ ನಗದು ಕಳ್ಳತನ ಮಾಡಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣ ಸೇರಿದಂತೆ ಅನೇಕ ಕಡೆಗಳಲ್ಲಿ ಕಳ್ಳತನಗಳು ಕೆಲವು ತಿಂಗಳ ಹಿಂದೆ ಸಾಕಷ್ಟು ಕಳ್ಳತನ ಪ್ರಕರಣಗಳು ಕೇಳಿಬರುತ್ತಿದ್ದವು, ಈಗ ಮತ್ತೆ ಖದೀಮರು ತಮ್ಮ ಕೈಚಳಕ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ಘಟಪ್ರಭಾ ಸೇರಿದಂತೆ ಶಿಂಧಿಕುರಭೇಟ, ಅರಭಾವಿ, ಸಂಗನಕೇರಿ ಸೇರಿದಂತೆ ಅನೇಕ ಕಡೆಗಳಲ್ಲಿ ಕಳ್ಳತನವಾಗಿವೆ. ಘಟಪ್ರಭಾ ಪಟ್ಟಣದ ಮಲ್ಲಿಕಾರ್ಜುನ ನಗರದ ಬಾರಾ ಕೂಟ್ …

Read More »

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣದಲ್ಲಿ ಬಂಧಿತರಾಗಿರುವ ತಹಶೀಲ್ದಾರ್ ಅಜಿತ್ ಕುಮಾರ್ ರೈ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಕೆ.ಆರ್ ಪುರ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಪುತ್ತೂರು ಮೂಲದ ತಹಶೀಲ್ದಾರ್ ಅಜಿತ್ ಕುಮಾರ್ ರೈ ನ್ಯಾಯಾಂಗ ಬಂಧನದಲ್ಲಿದ್ದು, ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳು 1957ರ ನಿಯಮ 10(1)(A)(A) ಮತ್ತು 10(2(A) ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ. ಏನಿದು ಪ್ರಕರಣ: ಅಕ್ರಮ ಆಸ್ತಿ …

Read More »

ಆಗಸ್ಟ್​ ತಿಂಗಳೊಳಗೆ ಐದೂ ಗ್ಯಾರಂಟಿ ಯೋಜನೆಗಳನ್ನು ನೂರಕ್ಕೆ ನೂರರಷ್ಟು ಜಾರಿ ಮಾಡುತ್ತೇವೆ ಎಂದು ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಯುಪಿಎ ಸರ್ಕಾರದ ಅವಧಿಯಲ್ಲಿ ಆಹಾರ ಭದ್ರತೆ ಕಾನೂನು ಜಾರಿಗೆ ತರಲಾಗಿದೆ. ನಾವು ಐದೂ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದರೆ ಬಿಜೆಪಿಯವರಿಗೆ ಇನ್ನು 10 ವರ್ಷ ಮಾಡಲು ಏನೂ ಕೆಲಸ ಇರುವುದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಕೊಪ್ಪಳದಲ್ಲಿ ಹಮ್ಮಿಕೊಂಡಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದ 25 ಜನ ಬಿಜೆಪಿ ಸಂಸದರು ಪ್ರಧಾನ ಮಂತ್ರಿ ಬಳಿ ಹೋಗಿ …

Read More »

ವಿದ್ಯುತ್ ಕಂಬಕ್ಕೆ ಮಾರ್ಕೆಟ್​ನಲ್ಲಿ 20 ಸಾವಿರ ರೂ. ಬೆಲೆ ಇದ್ದರೆ, 60-70 ಸಾವಿರ ರೂ. ಹಾಕಿದ್ದಾರೆ

ಬೆಳಗಾವಿ: ಬೆಳಗಾವಿ ಅಷ್ಟೇ ಅಲ್ಲದೇ ಎಲ್ಲ ಕಡೆ ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಿ ಮೂಲ ನೀಲನಕ್ಷೆ ಪ್ರಕಾರ ಆಗಿಲ್ಲ. ಮೊನ್ನೆ ಕ್ಯಾಬಿನೆಟ್​ನಲ್ಲೂ ಈ ಬಗ್ಗೆ ಚರ್ಚೆ ಆಗಿದೆ. ಅದಕ್ಕೆ ಸರ್ಕಾರದಿಂದ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಲೋಕೋಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅಭಿಪ್ರಾಯ ಪಟ್ಟರು. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಸ್ಮಾರ್ಟ್ ಸಿಟಿ ಅಧಿಕಾರಿಗಳ ಜೊತೆಗಿನ ಸಭೆ ಬಳಿಕ, ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಕಾಮಗಾರಿಗಳ ಪ್ರಥಮ ಸಭೆ …

Read More »

ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ : ಶಾಸಕ ರಮೇಶ ಜಾರಕಿಹೊಳಿ

ಗೋಕಾಕ ಜು 1 : ನಾವು ಪರಿಸರ ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ ಎಂದು ಮಾಜಿ ಸಚಿವ ,ಶಾಸಕ ರಮೇಶ ಜಾರಕಿಹೊಳಿ ಹೇಳಿದರು . ಶನಿವಾರದಂದು ಅರಣ್ಯ ಇಲಾಖೆ ವತಿಯಿಂದ ನಗರದ ನ್ಯೂ ಇಂಗ್ಲಿಷ್ ಸ್ಕೂಲ್ ಶಾಲಾ ಆವರಣದಲ್ಲಿ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪ್ರಸ್ತುತ ದಿನಗಳಲ್ಲಿ ಪರಿಸರ ಅಸಮತೋಲನದಿಂದಲೇ ಹವಾಮಾನ ವೈಪರಿತ್ಯ ಕಾಣುತ್ತಿದೆ.ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದರೆ ಪರಿಸರ ರಕ್ಷಣೆಗೆ ಹೆಚ್ಚಿನ …

Read More »

ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಬೆಳಗಾವಿ: ಇಲ್ಲಿನ ಗಾಂಧಿ ನಗರದ ಸುಭಾಷ್​ ಗಲ್ಲಿಯ ಮನೆಯೊಂದರಲ್ಲಿ ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಗಾಂಧಿ ನಗರದ ಸುಭಾಷ್ ಗಲ್ಲಿಯ ಮಂಜುನಾಥ ನರಸಪ್ಪ ಅಥಣಿ (42), ಪತ್ನಿ ಲಕ್ಷ್ಮೀ (36), ವೈಷ್ಣವಿ (13), ಪುತ್ರ ಸಾಯಿಪ್ರಸಾದ (10) ಗಂಭೀರ ಗಾಯಾಳುಗಳು. ಮನೆಯಲ್ಲಿದ್ದ ಬಹುತೇಕ ವಸ್ತುಗಳು ಬೆಂಕಿಗಾಹುತಿಗಾಗಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದವು. ಸುಭಾಷ್​ ಗಲ್ಲಿಯ ಕಟ್ಟಡದ ಮೊದಲ ಮಹಡಿಯಲ್ಲಿ …

Read More »

ರಾಷ್ಟ್ರೀಯ ಶಿಕ್ಷಣ ನೀತಿ ಕಿತ್ತೆಸೆದು, ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುತ್ತೇವೆ: ಸಚಿವ ಡಾ‌.ಎಂ.ಸಿ.ಸುಧಾಕರ್​

ಬೆಳಗಾವಿ: ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಪಡಿಸುವ ಬಗ್ಗೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಹೇಳಿದ್ದೇವೆ. ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊಸ ಶಿಕ್ಷಣ ನೀತಿ ಕಿತ್ತೆಸೆದು, ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ‌.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.​ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎರಡು ವರ್ಷದ ಹಿಂದೆ ನಮ್ಮ ರಾಜ್ಯದಲ್ಲಿ ಮಾತ್ರ ಹೊಸ ಶಿಕ್ಷಣ ನೀತಿ ಅನುಷ್ಠಾನಕ್ಕೆ ತರಲಾಗಿದೆ. ಅದಕ್ಕೆ ಬಹಳಷ್ಟು ಪೂರ್ವ ತಯಾರಿ‌ ಆಗಬೇಕಿತ್ತು ಮತ್ತು …

Read More »

12 ವರ್ಷಗಳ ನಂತರ ಗೋಚರಿಸಿದ ಪುರಾತನ ದೇವಾಲಯ

ಚಿಕ್ಕೋಡಿ (ಬೆಳಗಾವಿ): ಜೂನ್ ತಿಂಗಳು ಮುಗಿದರೂ ಮಳೆ ಮಾತ್ರ ಆಗುವ ಲಕ್ಷಣಗಳು ಕಾಣುತ್ತಿಲ್ಲ. ಈಗಾಗಲೇ ಬರದ ಛಾಯೆ ಆವರಿಸಿ ಹಲವು ಜಿಲ್ಲೆಯಲ್ಲಿ ಬಹುತೇಕ ನದಿಗಳು ಬತ್ತಿ ಹೋಗಿವೆ. ಮಳೆಯಾಗದೇ ಇರುವುದರಿಂದ ಉತ್ತರ ಕರ್ನಾಟಕದ ಬಹುತೇಕ ಡ್ಯಾಂಗಳು ಖಾಲಿಖಾಲಿಯಾಗಿ ಗೋಚರಿಸುತ್ತಿವೆ. ಹಾಗೇ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ನೀರು ಖಾಲಿಯಾಗಿದ್ದು, ಬರೋಬ್ಬರಿ 12 ವರ್ಷಗಳ ನಂತರ ಪುರಾತನ ದೇವಸ್ಥಾನವೊಂದು ದರ್ಶನಕ್ಕೆ ಮುಕ್ತವಾಗಿದೆ. ವಿಠ್ಠಲ ದೇವಾಲಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ …

Read More »

ಮೊಬೈಲ್‌ ಕಳ್ಳರ ಕರಾಮತ್ತಿಗೆ ಕೇಂದ್ರದ CEIR ಕಡಿವಾಣ:

ಬೆಂಗಳೂರು: ದೇಶದಲ್ಲಿ ದಿನೇ ದಿನೆ ಹೆಚ್ಚಾಗುತ್ತಿರುವ ಮೊಬೈಲ್ ಕಳ್ಳತನ ಪ್ರಕರಣಗಳ ನಿಯಂತ್ರಣಕ್ಕೆ ಹಾಗೂ ಕದ್ದ ಮೊಬೈಲ್‌ಗಳ ದುರ್ಬಳಕೆ ತಪ್ಪಿಸಲು ಕೇಂದ್ರ ಗೃಹ ಇಲಾಖೆ ಹಾಗೂ ದೂರ ಸಂಪರ್ಕ ಇಲಾಖೆಗಳ ಸಹಭಾಗಿತ್ವದಲ್ಲಿ ಜಾರಿಗೆ ತಂದಿದ್ದ ಸೆಂಟ್ರಲ್ ಎಕ್ವಿಟ್‌ಮೆಂಟ್ ಐಡೆಂಟಿಟಿ ರಿಜಿಸ್ಟ್ರರ್ (ಸಿಇಐಆರ್) ಯೋಜನೆ ಫಲಪ್ರದವಾಗುತ್ತಿದೆ.   ಇಂದಿನ ಹೈಟೆಕ್ ಜಮಾನದಲ್ಲಿ ಸ್ಮಾರ್ಟ್‌ಪೋನ್ ಬಳಸುವುದು ಸಾಮಾನ್ಯ. ಇದನ್ನೇ ತಮ್ಮ ದುಷ್ಕೃತ್ಯಕ್ಕೆ ಗುರಿಯಾಗಿಸಿಕೊಳ್ಳುತ್ತಿರುವ ಖದೀಮರು ಮೊಬೈಲ್ ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಕಳುವಾದ ಮೊಬೈಲ್ ದೊರೆತರೂ ದುರ್ಬಳಕೆ …

Read More »

ನನ್ನ ಝಂಡಾ ಬದಲಾವಣೆ ಆಗಬಹುದು, ಅಜೆಂಡಾ ಬದಲಾಗಲ್ಲ: ಹೆಚ್.ವಿಶ್ವನಾಥ್​

ಬೆಳಗಾವಿ: ನನ್ನ ಝಂಡಾ ಬದಲಾವಣೆ ಆಗಬಹುದು ಆದರೆ, ಅಜೆಂಡಾ ಬದಲಾಗದು ಎಂದು ಬಿಜೆಪಿ ಎಂಎಲ್​ಸಿ ಹೆಚ್. ವಿಶ್ವನಾಥ್​ ಹೇಳಿದ್ದಾರೆ. ನನ್ನ ರಕ್ತದ ಕಣಕಣದಲ್ಲೂ ಕಾಂಗ್ರೆಸ್​ ಇದ್ದು, ಬಿಜೆಪಿ ತೊರೆಯುವ ಕಾಲ ಸನ್ನಿಹಿತವಾಗಿದೆ ಎಂಬ ಅವರ ಹೇಳಿಕೆ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಸಂದರ್ಭಗಳು ಹಾಗು ಹಲವಾರು ಕಾರಣಗಳಿಂದ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಬೇಕಾಯಿತು ಎಂದರು.   ವಲಸಿಗರಿಂದ ಬಿಜೆಪಿ ಹಾಳಾಯ್ತು ಎಂದು ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ ಎಂದು ಮಾಧ್ಯಮಗಳು ಕೇಳಿದ …

Read More »