Home / ಜಿಲ್ಲೆ (page 3)

ಜಿಲ್ಲೆ

ಶೆಟ್ಟರ್‌ರನ್ನು ಕೀಳಾಗಿ ಕಾಣಬೇಡಿ: ಬಾಲಚಂದ್ರ

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರನ್ನು ಯಾರೂ ಕೀಳಾಗಿ ಕಾಣಬಾರದು’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಶೆಟ್ಟರ್ ಅವರು ಅರಭಾವಿ ಮತ್ತು ಗೋಕಾಕ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ, ಪ್ರಮುಖರೊಂದಿಗೆ ಸಭೆ ನಡೆಸಿದ್ದಾರೆ. ವಿವಿಧ ಮಠಾಧೀಶರ ಆಶೀರ್ವಾದ ಪಡೆದಿದ್ದಾರೆ. ನಾನು, ಶಾಸಕ ರಮೇಶ ಜಾರಕಿಹೊಳಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದೇವೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರಕ್ಕೆ ನಮ್ಮನ್ನು …

Read More »

ಸಂಕೇಶ್ವರ ಮಾರುಕಟ್ಟೆಗೆ ಮಹಾರಾಷ್ಟ್ರ ಮಾವಿನಕಾಯಿ ಲಗ್ಗೆ

ಸಂಕೇಶ್ವರ: ಸಂಕೇಶ್ವರ ಪಟ್ಟಣಕ್ಕೆ ಮಹಾರಾಷ್ಟ್ರದಿಂದ ಮಾವಿನಕಾಯಿಗಳು ಬರುತ್ತಿದ್ದು ಪಟ್ಟಣದ ತುಂಬೆಲ್ಲ ಮಾವಿನಕಾಯಿಗಳದ್ದೇ ರಾಶಿ.   ಆದರೆ ದರ ಮಾತ್ರ ಗಗನಕ್ಕೇರಿದ್ದು ದುಬಾರಿ ದರಕ್ಕೆ ಮಾವಿನಕಾಯಿಗಳನ್ನು ಖರೀದಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ. ದೇವಗಡ ಆಪೂಸ್ ಮಾವಿನಕಾಯಿ ದರ ಒಂದು ಡಜನ್ನಿಗೆ ₹800 ರಿಂದ ₹1,000 ಗಳಿದ್ದು ರತ್ನಾಗಿರಿ ಆಪೂಸ್ ಮಾವಿನಕಾಯಿ ದರ ₹1,200 ರೂಪಾಯಿಗಳಷ್ಟಿದೆ.   ಯುಗಾದಿ ನಂತರವೇ ಮಾವಿನ ಹಣ್ಣಿನ ದರ ಇಳಿಮುಖವಾಗಲಿದೆ.

Read More »

ಎಸೆಸೆಲ್ಸಿ ಪರೀಕ್ಷೆ ನಕಲಿಗೆ ಸಹಕಾರ: ನಾಲ್ವರು ಸಹ ಶಿಕ್ಷಕರ ಅಮಾನತು

ಚಿತ್ರದುರ್ಗ: ಎಸೆಸೆಲ್ಸಿ ವಿಜ್ಞಾನ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ ಆರೋಪದಲ್ಲಿ ನಾಲ್ವರು ಸಹ ಶಿಕ್ಷಕರನ್ನು ಅಮಾನತು ಮಾಡಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್‌ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಚಳ್ಳಕೆರೆ ತಾಲೂಕು ಪರಶುರಾಂಪುರ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಕೊಠಡಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಳ್ಳಕೆರೆ ತಾಲೂಕು ಪಿ.ಈಬನಹಳ್ಳಿ ಶಾಲೆಯ ಚಂದ್ರಶೇಖರ್‌, ಕೊರ್ಲಕುಂಟೆ ಶಾಲೆಯ ಪ್ರಕಾಶ್‌, ಗೋಸಿಕೆರೆ ರಾಧಾಕೃಷ್ಣ ಶಾಲೆಯ ರಾಘವೇಂದ್ರ ಹಾಗೂ ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ರೇವಣ್ಣ ಅಮಾನತುಗೊಂಡ …

Read More »

ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

ಬೆಳಗಾವಿ: ಖಾನಾಪೂರ ವಿಧಾನಸಭಾ ಕ್ಷೇತ್ರದ ಕಣಕುಂಬಿ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 7.98 ಲಕ್ಷ ರೂ ಗಳನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಎಸ್‌ಎಸ್ ಟಿ ತಂಡದ ಅಧಿಕಾರಿಗಳಾದ ಮಲಗೌಡ ಪಾಟೀಲ ಅವರು ಶುಕ್ರವಾರ ಕಣಕುಂಬಿ ಚೆಕ್ ಪೋಸ್ಟ್ ದಲ್ಲಿ ಬೆಳಿಗ್ಗೆ ಕರ್ತವ್ಯದಲ್ಲಿದ್ದಾಗ ಬೈಲಹೊಂಗಲ ತಾಲೂಕಿನ ವಣ್ಣೂರು ಗ್ರಾಮದ ಸಂಜಯ ಬಸವರಾಜ ರೆಡ್ಡಿ, ಅವರು ಪ್ರಯಾಣಿಸುತ್ತಿದ್ದ ವಾಹನ (ಸಂಖ್ಯೆ ಕೆ.ಎ-29 ಎಪ್-1532) ತಪಾಸಣೆ ನಡೆಸಿದಾಗ ಅವರ ಬಳಿ ದಾಖಲೆ ಇಲ್ಲದ 7.98 …

Read More »

ಬೆಳಗಾವಿ: ಪುತ್ರನ ಪರ ಪ್ರಚಾರಕ್ಕೆ ಆಶಾ ಕಾರ್ಯಕರ್ತೆಯರಿಗೆ ಒತ್ತಡ – ಸಚಿವೆ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್

ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಗುರುವಾರ ಸಮನ್ಸ್‌ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯ ಕುವೆಂಪುನಗರದ ತಮ್ಮ ಗೃಹಕಚೇರಿ ಪಕ್ಕದ ಸಭಾಂಗಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರ ಸಭೆಯನ್ನು ಮಾರ್ಚ್ 20ರಂದು ನಡೆಸಿದ್ದರು. ಅದಕ್ಕೆ ಅನುಮತಿ ಪಡೆದಿರಲಿಲ್ಲ. ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿತ್ತು. …

Read More »

ದಿನ ಕಳೆದಂತೆ ಬೆಳಗಾವಿ ಲೋಕಸಭಾ ಅಖಾಡ ರಂಗು ಪಡೆಯುತ್ತಿದ್ದು

ಬೆಳಗಾವಿ : ದಿನ ಕಳೆದಂತೆ ಬೆಳಗಾವಿ ಲೋಕಸಭಾ ಅಖಾಡ ರಂಗು ಪಡೆಯುತ್ತಿದ್ದು ನಾಯಕರ ಆರೋಪ, ಹಾಗೂ ಪ್ರತ್ಯಾರೋಪಗಳು ಜೋರಾಗಿವೆ.‌ ಈ ನಡುವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೂ ಅಬ್ಬರದ ಪ್ರಚಾರ ನಡೆಸಿದ್ದಾರೆ. ರಾಜಕೀಯ ಬದ್ಧ ಎದರುರಾಳಿಗಳಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಬ್ಬರೂ ನಾಯಕು ಅಖಾಡಕ್ಕೆ ಇಳಿದ ಕಾರಣ ಲೋಕಸಭಾ ಕಣ ಮತ್ತಷ್ಟು ರಂಗು ಪಡೆದಿದೆ. ಈಗಾಗಲೇ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲೆಯ ಅನೇಕ ಕ್ಷೇತ್ರದಲ್ಲಿ …

Read More »

‘ಲೋಕಾ’ ದಾಳಿಯಲ್ಲಿ ಪತ್ತೆಯಾಯ್ತು ಅಧಿಕಾರಿಯ ಆಕ್ರಮ ಸಂಪತ್ತು;17 ಸೈಟ್, 27 ಎಕರೆ ಕೃಷಿ ಭೂಮಿ:

ಕೊಪ್ಪಳ: ಕೊಪ್ಪಳದ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪ ಅವರಿಗೆ ಸೇರಿದ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಅಕ್ರಮ ಸಂಪತ್ತು ಹೊಂದಿರುವುದು ಪತ್ತೆಯಾಗಿದೆ. ಕೊಪ್ಪಳದ ಬಿ.ಟಿ. ಪಾಟೀಲ ನಗರದ ಬಾಡಿಗೆ ಮನೆ, ಗದಗದ ಮನೆ, ಕಚೇರಿ ಹಾಗೂ ರೋಣ ತಾಲೂಕಿನ ಮೆಣಸಗಿಯಲ್ಲಿರುವ ಮನೆ ಸೇರಿ ಒಟ್ಟು ಎಂಟು ಕಡೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಎರಡು ವರ್ಷಗಳಿಂದ ಸಹದೇವ ಕೊಪ್ಪಳ …

Read More »

ಬೆಳಕೂಡದಲ್ಲಿ ಕೊಡ ನೀರಿಗಾಗಿ ಹೆಣಗಾಟ

ಚಿಕ್ಕೋಡಿ: ತಾಲ್ಲೂಕಿನ ನಾಗರಮುನ್ನೋಳಿ ಹೋಬಳಿ ವ್ಯಾಪ್ತಿಯಲ್ಲಿ ಬೇಸಿಗೆ ಆರಂಭದಲ್ಲೇ ಕುಡಿಯುವ ನೀರಿನ ಬವಣೆ ತಲೆದೋರಿದೆ. ಹೋಬಳಿ ವ್ಯಾಪ್ತಿಯ ಬಹುತೇಕ ಗ್ರಾಮಗಳಲ್ಲಿ ಹನಿ ನೀರಿಗಾಗಿ ಜನರು ಪರಿತಪಿಸುತ್ತಿದ್ದಾರೆ. ಅದರಲ್ಲೂ ಜಲಬವಣೆ ಹೇಳತೀರದಾಗಿದೆ. ಬೆಳಕೂಡ ಗ್ರಾಮ ಪಂಚಾಯಿತಿಯಲ್ಲಿ ಇದೊಂದೇ ಗ್ರಾಮವಿದ್ದು, 10ಕ್ಕೂ ಅಧಿಕ ತೋಟಪಟ್ಟಿಗಳಿವೆ. 3,900 ಜನಸಂಖ್ಯೆ ಇದ್ದು, ಮೂರು ವಾರ್ಡ್‌ಗಳಿವೆ. ಇಲ್ಲಿ ಗ್ರಾಮ ಪಂಚಾಯಿತಿಗೆ ಸೇರಿದ 12 ಕೊಳವೆಬಾವಿ ಇವೆ. ಈ ಪೈಕಿ ನಾಲ್ಕರಲ್ಲಿ ನೀರು ಲಭ್ಯವಿಲ್ಲ. ಉಳಿದ ಎಂಟು ಕೊಳವೆಬಾವಿಗಳಲ್ಲೂ …

Read More »

ಗೋಕಾಕ: ಮಾರ್ಚ್ 28ರಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ

ಗೋಕಾಕ: ಬೆಳಗಾವಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 28ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮಹಾಲಕ್ಷ್ಮಿ ಸಭಾಭವನದಲ್ಲಿ ಗೋಕಾಕ ಮತ್ತು ಅರಭಾವಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಅಭ್ಯರ್ಥಿ ಮೃಣಾಲ ಹೆಬ್ಬಾಳಕರ ಸೇರಿದಂತೆ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವಿವೇಕ ಜತ್ತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More »

ವೀಣಾಗೆ ಕೈತಪ್ಪಿದ ಟಿಕೆಟ್​! ಸಂಯುಕ್ತಾ ಪಾಟೀಲ ಕೊಟ್ಟ ಪ್ರತಿಕ್ರಿಯೆ ಹೀಗಿದೆ

ಬಾಗಲಕೋಟೆ: ಲೋಕಸಭಾ ಚುನಾವಣೆ 2024ರ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಾಗಲಕೋಟೆ ಕ್ಷೇತಕ್ಕೆ ‘ಕೈ’ ಅಭ್ಯರ್ಥಿಯಾಗಿ ಯಾರು ಹೊರಹೊಮ್ಮಲ್ಲಿದ್ದಾರೆ ಎಂಬ ಪ್ರಶ್ನೆ ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿತ್ತು. ಈ ಮಧ್ಯೆ ಟಿಕೆಟ್​ ಸ್ಪರ್ಧೆಯಲ್ಲಿದ್ದ ಶಾಸಕ ವಿಜಯಾನಂದ ಪತ್ನಿ ವೀಣಾ ಕಾಶಪ್ಪನವರ ಮತ್ತು ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಪಾಟೀಲ ಮಧ್ಯೆ ಭಾರೀ ಹಣಾಹಣಿ ಇತ್ತು. ಆದ್ರೆ, ಕಾಂಗ್ರೆಸ್​ ತನ್ನ ಮೂರನೇ ಪಟ್ಟಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ಸಂಯುಕ್ತಾಗೆ …

Read More »