ಬೆಂಗಳೂರು: ಸರ್ಕಾರ ಮದ್ಯದ ದರ ಹೆಚ್ಚಳ ಮಾಡಿಲ್ಲ. ಯಾವುದೇ ಅಧಿಕೃತ ಆದೇಶವೂ ಆಗಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮದ್ಯದ ದರ ಹೆಚ್ಚಳ ಮಾಡುವ ಬಗ್ಗೆ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಬಂದಿಲ್ಲ. ಮದ್ಯದ ದರ ಹೆಚ್ಚಳ ಮಾಡಿದರೆ ಮಾಹಿತಿ ನೀಡುತ್ತೇನೆ ಎಂದರು. ಅಬಕಾರಿ ಇಲಾಖೆಯಿಂದ ಯಾವುದೇ ದರ ಏರಿಕೆ ಮಾಡಿಲ್ಲ. ನನಗೆ ಮಾಹಿತಿಯೂ ಇಲ್ಲ. ದರ ಏರಿಕೆ ಇದುವರೆಗೂ …
Read More »ಒಣಗುತ್ತಿರುವ ಭತ್ತದ ಸಸಿ: ಸಂಕಷ್ಟದಲ್ಲಿ ಬೆಳಗಾವಿ ಅನ್ನದಾತರು
ಬೆಳಗಾವಿ: ಈ ಬಾರಿ ಮಳೆರಾಯ ಮುನಿಸಿಕೊಂಡಂತೆ ಕಾಣಿಸುತ್ತಿದೆ. ಜೂನ್ ಮೂರನೇ ವಾರ ಬಂದರೂ ಮಳೆಯಾಗದ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭತ್ತ ಬೆಳೆದ ರೈತರು ನಷ್ಟದ ಭೀತಿ ಎದುರಿಸುತ್ತಿದ್ದಾರೆ. ಹೌದು. ಬೆಳಗಾವಿ ಸುತ್ತಮುತ್ತಲಿನ ರೈತರು ಅಧಿಕವಾಗಿ ಭತ್ತವನ್ನೆ ಬೆಳೆಯುತ್ತಾರೆ. ಉತ್ತಮ ಮುಂಗಾರು ಮಳೆಯಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಇಲ್ಲಿನ ವಡಗಾವಿ, ಅನಗೋಳ ಮತ್ತು ತಾಲೂಕಿನ ಯಳ್ಳೂರು ಸೇರಿ ಸುತ್ತಮುತ್ತಲಿನ ಗ್ರಾಮಗಳ ರೈತರು ಮೇ ತಿಂಗಳ 3 ಮತ್ತು 4ನೇ ವಾರದಲ್ಲೇ ಭತ್ತದ ಒಣ …
Read More »ಲಂಚ ಪಡೆಯುತ್ತಿದ್ದ ಹರಿಹರ ನಗರಸಭೆ ಸದಸ್ಯೆ ಲೋಕಾಯುಕ್ತ ಬಲೆಗೆ
ದಾವಣಗೆರೆ: ಲಂಚ ಸ್ವೀಕರಿಸುವ ವೇಳೆ ಹರಿಹರ ನಗರಸಭೆ ಕಾಂಗ್ರೆಸ್ ಸದಸ್ಯೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರನಿಂದ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ನಗರಸಭೆ ಸದಸ್ಯೆ ನಾಗರತ್ನ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾವಣಗೆರೆ ಜಿಲ್ಲೆಯ ಹರಹರ ನಗರಸಭೆ ಕಾಂಗ್ರೆಸ್ ಸದಸ್ಯೆ ನಾಗರತ್ನ ಜತೆಗೆ ಅವರ ಪತಿ ಮಂಜುನಾಥ, ಪುತ್ರ ರೇವಂತ ಸೇರಿ ಗುತ್ತಿಗೆದಾರ ಮಜೀದ್ ಎಂಬುವರಿಂದ ಲಂಚ ಸ್ವೀಕರಿಸುವ ವೇಳೆ ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್ ಕೌಲಾಪುರೆ …
Read More »ರಾಜ್ಯದ 8 ಕಡೆ ಸಣ್ಣ ಕೈಗಾರಿಕೆ ಹಬ್ ಸ್ಥಾಪಿಸಲು ಚಿಂತನೆ: ಸಚಿವ ಶರಣ ಬಸಪ್ಪ ದರ್ಶನಾಪೂರ್
ಬೆಳಗಾವಿ, ಚಾಮರಾಜನಗರ, ಚಿತ್ರದುರ್ಗ, ಹುಬ್ಬಳ್ಳಿ, ಬೀದರ್ ಹಾಗು ವಿಜಯಪುರದಲ್ಲಿ ಕೈಗಾರಿಕಾ ವಸಾಹತು ಸ್ಥಾಪಿಸುವ ಉದ್ದೇಶವಿದೆ ಎಂದು ಸಣ್ಣ ಕೈಗಾರಿಕೆ ಸಚಿವ ಶರಣ ಬಸಪ್ಪ ದರ್ಶನಾಪೂರ್ ಹೇಳಿದ್ದಾರೆ. ಬೆಂಗಳೂರು: ರಾಜ್ಯದ ಎಂಟು ಕಡೆಗಳಲ್ಲಿ ಸಣ್ಣ ಕೈಗಾರಿಕಾ ಹಬ್ ಮಾಡಲು ಉದ್ದೇಶಿಸಲಾಗಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಶರಣ ಬಸಪ್ಪ ದರ್ಶನಾಪೂರ್ ತಿಳಿಸಿದರು. ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಈ ತಿಂಗಳ 17ರಂದು ಸಣ್ಣ ಕೈಗಾರಿಕೆ ಇಲಾಖೆಯ ಬಜೆಟ್ …
Read More »GST ಕೌನ್ಸಿಲ್ ಸದಸ್ಯರಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇಮಕ
ಬೆಂಗಳೂರು : ಜಿಎಸ್‌ಟಿ ಕೌನ್ಸಿಲ್‌ಗೆ ರಾಜ್ಯ ಸರ್ಕಾರದ ಪರವಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 2013 ರಿಂದ 2018ರವರೆಗೂ ಕೃಷ್ಣಭೈರೇಗೌಡ ಕೌನ್ಸಿಲ್‌ನ ಸದಸ್ಯರಾಗಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಲ್ಲೂ ಸದಸ್ಯರಾಗಿದ್ದರು. ಇದೇ ಅನುಭವದ ಆಧಾರದ ಮೇಲೆ ಮತ್ತೊಮ್ಮೆ ಕೃಷ್ಣಭೈರೇಗೌಡರನ್ನೇ ಜಿಎಸ್‌ಟಿ ಕೌನ್ಸಿಲ್‌ಗೆ ನಾಮನಿರ್ದೇಶನ ಮಾಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಸದಸ್ಯರಾಗಿದ್ದರು. …
Read More »ಬೈಕ್ ಮತ್ತು ಟೆಂಪೋ ನಡುವೆ ಭೀಕರ ಅಪಘಾತ ಮೂವರ ಸಾವು
ಚಿಕ್ಕೋಡಿ: ಬೈಕ್ ಮತ್ತು ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಯುವಕರು ಮೃತಪಟ್ಟಿರುವ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಸವನಾಳಗಡ್ಡೆ ಬಳಿ ಮಂಗಳವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು, ಇದಲ್ಲಿ ಕೇರೂರು ಗ್ರಾಮದ ಪ್ರಶಾಂತ ಬೈರು ಖೋತ(22), ಸತೀಶ ಕಲ್ಲಪ್ಪ ಹಿರೇಕೊಡಿ(23), ಯಲಗೌಡ ಚಂದ್ರಕಾಂತ ಪಾಟೀಲ (22) ಮೃತ ದುರ್ದೈವಿಗಳು. ಯುವಕರು ಬೈಕ್ ಮೇಲೆ ಚಿಕ್ಕೋಡಿ ಕಡೆಯಿಂದ ಕೇರೂರು ಗ್ರಾಮಕ್ಕೆ ತೆರಳುವ ಸಮಯದಲ್ಲಿ ಚಿಕ್ಕೋಡಿ ಅಂಕಲಿ …
Read More »ಫ್ಲೈ ಓವರ್ ನಿರ್ಮಿಸುವ ಪ್ರಸ್ತಾವಿತ ಯೋಜನೆ ರಸ್ತೆಗೆ ಸಂಬಂಧಿಸಿದಂತೆ ಸಭೆ
ಬೆಳಗಾವಿ ಜನರ ಬಹುದಿನಗಳಿಂದ ಬೇಡಿಕೆಯಾಗಿದ್ದ ಸ್ಮಾರ್ಟ್ ಸಿಟಿ ಯೋಜನೆಯ ಫ್ಲೇಓವರ್ ನಿರ್ಮಾಣದ ಕನಸನ್ನು ನನಸು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಸ್ಮಾರ್ಟ್ ಸಿಟಿ ಯೋಜನೆ ಬೆಳಗಾವಿಗೆ ಕಳೆದ ಹಲವುವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು ಈಗ ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾದ ಮೇಲೆ ಮತ್ತೆ ಸ್ಮಾರ್ಟ್ ಸಿಟಿ ಯೋಜನೆಯನ್ನು ಕೈಗೆತ್ತಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿಯಿಂದ ಬೆಳಗಾವಿ ನಗರ ಪ್ರವೇಶಿಸುವ ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಿಸುವ ಪ್ರಸ್ತಾವಿತ ಯೋಜನೆ ಹಾಗೂ ಸರ್ವಿಸ್ ರಸ್ತೆಗೆ ಸಂಬಂಧಿಸಿದಂತೆ ಮಂಗಳವಾರ …
Read More »ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಅತ್ತೆಯನ್ನೇ ಹತ್ಯೆ ಮಾಡಿದ ಸೊಸೆ.!
ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಕ್ಷುಲ್ಲಕ ವಿಷಯಕ್ಕೆ ತವರು ಮನೆಯವರನ್ನು ಕರೆಯಿಸಿ ಅತ್ತೆ, ಗಂಡನ ಮೇಲೆ ಹಲ್ಲೆ ಮಾಡಿದ್ದು, ತೀವ್ರವಾಗಿ ಹಲ್ಲೆಗೊಳಗಾದ ಅತ್ತೆ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ. ಮಹಾಬೂಬಿ ಯಾಕೂಶಿ (53) ಎಂಬುವವರೆ ಸಾವನ್ನಪ್ಪಿದ್ದ ದುರ್ದೈವಿ ಅತ್ತೆ. ಕಳೆದ ಮೇ. 22ರಂದು ಸೊಸೆ ಮೇಹರೂಣಿ ಯಾಕೂಶಿ, ತನ್ನ ಇಬ್ಬರು ಸಹೋದರರ ಜೊತೆ ಸೇರಿ ಹಲ್ಲೆ ಮಾಡಿದ್ದಳು. ಈ ವೇಳೆ ರಾಡ್‌ನಿಂದ ಗಂಡ ಸುಬಾನ್ ಮತ್ತು ಅತ್ತೆ …
Read More »ಇಂಧನ ಸಚಿವರ ಹೇಳಿಕೆ ಆಶ್ಚರ್ಯ ತಂದಿದೆ: ಎಲ್ಲರಿಗೂ 200 ಯೂನಿಟ್ ವಿದ್ಯುತ್ ಕೊಡಬೇಕೆಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗ್ರಹ
ಬೆಂಗಳೂರು: ”ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿಕೆ ಬಹಳ ಆಶ್ಚರ್ಯ ಉಂಟುಮಾಡಿದೆ” ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ”ಹೊಸದಾಗಿ ಮನೆ ಕಟ್ಟಿದವರು ಹಾಗೂ ಹೊಸ ಬಾಡಿಗೆದಾರರಿಗೆ 58 ಯೂನಿಟ್ ಉಚಿತ ಅಂತ ಹೇಳಿದ್ದಾರೆ. ಆದರೆ, ಸಿಎಂ ಸಿದ್ದರಾಮಯ್ಯ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತವೆಂದು ಹೇಳಿದ್ದಾರೆ. ನೀವು ಕೊಟ್ಟಿರುವ ಭರವಸೆ ಹಿನ್ನೆಲೆಯಲ್ಲಿ ಜನರು ನಿಮಗೆ ವೋಟ್ ಕೊಟ್ಟಿದ್ದಾರೆ. …
Read More »ಬಿಲ್ ಎಷ್ಟೇ ಬಂದರೂ ಎಲ್ಲರೂ ಅದನ್ನು ಕಡ್ಡಾಯವಾಗಿ ತುಂಬಬೇಕು.: ಹೆಸ್ಕಾಂ ಎಂಡಿ
ಬೆಳಗಾವಿ : ಸರ್ಕಾರ ಹಾಗೂ ಹೆಸ್ಕಾಂ ವತಿಯಿಂದ ಲೆಕ್ಕಾಚಾರ ಮಾಡಿದ ಹಾಗೆಯೇ ವಿದ್ಯುತ್ ದರ ನಿಗದಿಪಡಿಸಲಾಗಿದೆ. ವಿದ್ಯುತ್ ದರ ಹೆಚ್ಚಳ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಇದಕ್ಕೆ ಪರಿಹಾರ ಸೂಚಿಸಿದರೆ ಅದನ್ನು ಅನುಷ್ಠಾನ ಮಾಡಲಾಗುವುದು. ಹೀಗಾಗಿ ವಿದ್ಯುತ್ ಬಿಲ್ ಎಷ್ಟೇ ಬಂದರೂ ಎಲ್ಲರೂ ಅದನ್ನು ಕಡ್ಡಾಯವಾಗಿ ತುಂಬಲೇಬೇಕು ಎಂದು ಹೆಸ್ಕಾಂ ಎಂ.ಡಿ. ಮಹಮ್ಮದ್ ರೋಷನ್ ಹೇಳಿದರು. ಮಂಗಳವಾರ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಉದ್ಯಮಿಗಳ ಜೊತೆಗೆ ಅವರು ಸಭೆ ನಡೆಸಿದರು. …
Read More »
Laxmi News 24×7