ಬೆಳಗಾವಿ : ಬೆಳಗಾವಿಯ ಆರ್‌ಪಿಡಿ ವೃತ್ತದ ಸಮೀಪ ನಿನ್ನೆ ರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಮೂಲದ ಕುಟುಂಬ ಖಾನಾಪುರ ತಾಲೂಕಿನ ಅಸೋಗಾದಿಂದ ಸ್ವಗ್ರಾಮಕ್ಕೆ ವಾಪಸ್ಸಾಗುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಟಿಳಕವಾಡಿಯ ಆರ್‌ಪಿಡಿ ವೃತ್ತದ ಮಾರ್ಗವಾಗಿ ಬರುತ್ತಿದ್ದಾಗ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ ಎಚ್ಚೆತ್ತ ಚಾಲಕ ಕಾರು ನಿಲ್ಲಿಸಿ ಕಾರಿನಲ್ಲಿದ್ದವರನ್ನು ಕೆಳಗಿಳಿಸಿದ್ದಾನೆ. …
Read More »ಹತ್ತರಗಿ ಹತ್ತಿರ ಟೋಲ್ ನಾಕಾ ಬಳಿ ಕಾಡಾನೆ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಸಮೀಪ ಹತ್ತರಗಿಯಲ್ಲಿ ಕಾಡಿನಿಂದ ಆಹಾರ ಹುಡುಕುತ್ತಾ ಆನೆಯೊಂದು ನಾಡಿಗೆ ಬಂದಿದೆ ಎನ್ನಲಾಗಿದೆ.ಇನ್ನೂ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೆಟಿ ನೀಡಿ ಆನೆಯನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡಲು ಸಿದ್ದತೆ ನಡೆಸಿದ್ದಾರೆ. ರಾಷ್ಟಿಯ ಹೇದ್ದಾರಿ 4 ಕ್ಕೆ ಹೊಂದಿಕೊಂಡಿರುವ ರಿಲಾಯನ್ಸ ಪೆಟ್ರೊಲ್ ಪಂಪನಲ್ಲಿ ಆನೆಯನ್ನು ಕಂಡು ಸ್ಥಳಿಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ, ವಿಷಯ ತಿಳಿದ ಅರಣ್ಯ ಅಧಿಕಾರಿಗಳು ಆನೆಯನ್ನ ಹಿಡಿಯಲು ಸಿದ್ದತೆ …
Read More »ರಿಲ್ಯಾಕ್ಸ್ ಮೂಡ್ ನಲ್ಲಿರುವ ಬೊಮ್ಮಾಯಿ ದೇವಸ್ಥಾನಗಳಿಗೆ ಭೇಟಿ
ಬೆಳಗಾವಿ: ವಿಧಾನಸಭಾ ಚುನಾವಣೆ ಮುಗಿದಿರುವ ಹಿನ್ನೆಲೆಯಲ್ಲಿ ಫಲಿತಾಂಶಕ್ಕಾಗಿ ರಾಜಕೀಯ ನಾಯಕರು, ರಾಜ್ಯದ ಜನತೆ ಕಾಯುತ್ತಿದ್ದಾರೆ. ಈ ನಡುವೆ ರಿಲ್ಯಾಕ್ಸ್ ಮೂಡ್ ನಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗಾವಿಯ ಸವದತ್ತಿ ಯೆಲ್ಲಮ್ಮ ದೇವಸ್ಥಾನಕ್ಕೆ ಪತ್ನಿ ಚೆನ್ನಮ್ಮ ಜೊತೆ ಭೇಟಿ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ರೇಣುಕಾ ಯೆಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸಚಿವ ಸಿ.ಸಿ.ಪಾಟೀಲ್ …
Read More »ಜನರ, ಕಾರ್ಯಕರ್ತರ ಆಸೆಯಂತೆ ಗೆಲುವಿನ ಅಂತರ ಹೆಚ್ಚಿನ ಪ್ರಮಾಣದಲ್ಲಾಗಲೆಂದು ದೇವರಲ್ಲಿ ಪ್ರಾರ್ಥನೆ: ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಜಿಲ್ಲೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಬಂದು ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರುತ್ತದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಹೊಸಪೇಟ ಗಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ನಂ೩ ಮತಗಟ್ಟೆ ೧೩೧ ರಲ್ಲಿ ಬುಧವಾರ ಮತದಾನ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಸಿಎಂ ಬೊಮ್ಮಾಯಿ ಅವರು ಈಗಾಗಲೇ ಈ …
Read More »ಮತಗಟ್ಟೆಗೆ ಬಿಜೆಪಿ ಕಾರ್ಯಕರ್ತರು ಕೇಸರಿಶಾಲು ಧರಿಸಿ ಬಂದು ಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅಕ್ರೋಶ
ಖಾನಾಪುರ: ಬೆಳಿಗ್ಗೆಯಿಂದ ಶಾಂತಿಯುತವಾಗಿ ನಡೆಯುತ್ತಿದ್ದ ಮತದಾನ ಮಧ್ಯಾಹ್ನವಾಗುತ್ತಿದ್ದಂತೆ ಕೆಲ ಮತಗಟ್ಟೆಗಳ ಬಳಿ ಬಿಗುವಿನ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ. ಮತಗಟ್ಟೆಗೆ ಬಿಜೆಪಿ ಕಾರ್ಯಕರ್ತರು ಕೇಸರಿಶಾಲು ಧರಿಸಿ ಬಂದು ಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ದೇವಲತ್ತಿ ಗ್ರಾಮದಲ್ಲಿ ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು ಕೇಸರು ಶಾಲು ಧರಿಸಿ ಬಂದಿರುವುದಲ್ಲದೇ, ಕೇಸರಿ ಶಾಲು ಬೀಸಿ ಪ್ರಚಾರ ನಡೆಸಿದ್ದಾರೆ ಎನ್ನಲಾಗಿದೆ. ಮತಗಟ್ಟೆಯ ಬಳಿ …
Read More »ಅರಭಾವಿ ಮತಕ್ಷೇತ್ರದ ಸಮಗ್ರ ಪ್ರಗತಿಗಾಗಿಮತಯಾಚಿಸಿ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಅರಭಾವಿ ಮತಕ್ಷೇತ್ರದ ಸಮಗ್ರ ಪ್ರಗತಿಗಾಗಿ ಈ ಬಾರಿಯೂ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದು, ಮೇ. 10 ರಂದು ನಡೆಯುವ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಆಯ್ಕೆ ಮಾಡಿ ಜನಸೇವೆಗೆ ಮತ್ತೊಮ್ಮೆ ಅವಕಾಶ ನೀಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದರು. ತಾಲ್ಲೂಕಿನ ಕುಲಗೋಡ ಗ್ರಾಮದಲ್ಲಿ ಚುನಾವಣೆ ಪ್ರಚಾರದ ನಿಮಿತ್ಯ ಮತಯಾಚಿಸಿ ಮಾತನಾಡಿದ ಅವರು, ಅಭಿವೃದ್ಧಿ ಆಧಾರದ ಮೇಲೆ ಮತ ಯಾಚನೆ ಮಾಡುತ್ತಿರುವುದಾಗಿ ತಿಳಿಸಿದರು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ …
Read More »ನಿಪ್ಪಾಣಿ ನಗರಕ್ಕೆ ಇಂದುನಿತಿನ್ ಗಡ್ಕರಿ
ನಿಪ್ಪಾಣಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇಂದು ನಿಪ್ಪಾಣಿ ನಗರಕ್ಕೆ ಆಗಮಿಸಲಿದ್ದಾರೆ. ಅವರು ಮುಜರಾಯಿ ಮತ್ತು ವಕ್ಫ್ ಸಚಿವೆ ಹಾಗೂ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಅವರ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇಲ್ಲಿನ ಸರಕಾರಿ ಕನ್ನಡ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಪ್ರಚಾರ ಸಭೆ ಆಯೋಜನೆಗೊಂಡಿದೆ.
Read More »ಮುದ್ದೇಬಿಹಾಳದಲ್ಲಿ ಚುನಾವಣಾ ಸಿಬ್ಬಂದಿಯಿದ್ದ ಬಸ್ ಪಲ್ಟಿ: 15 ಜನರಿಗೆ ಗಾಯ
ವಿಜಯಪುರ: ಚುನಾವಣಾ ಕರ್ತವ್ಯಕ್ಕಾಗಿ ಹೊರಟಿದ್ದ ಬಸ್ ಪಲ್ಟಿಯಾಗಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಹಳ್ಳೂರು ಕ್ರಾಸ್ ಬಳಿ ಇಂದು ಬೆಳಗ್ಗೆ 7.30 ಗಂಟೆಯ ಸುಮಾರಿಗೆ ನಡೆದಿದೆ. ಘಟನೆಯಲ್ಲಿ 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸಿಂಧಗಿ ವಿಧಾನಸಭಾ ಕ್ಷೇತ್ರದ ಮತಕೇಂದ್ರದ ತರಬೇತಿಗಾಗಿ ಸಿಬ್ಬಂದಿಯನ್ನು ಸಿಂಧಗಿಗೆ ಕರೆದೊಯ್ಯಲಾಗುತ್ತಿತ್ತು. ಬಸ್ನ ಎಕ್ಸಲ್ ಕಟ್ ಆಗಿದ್ದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಬಸ್‌ನಲ್ಲಿ ಒಟ್ಟು 40ಕ್ಕೂ ಅಧಿಕ ಜನ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. …
Read More »ಬೆಳಗಾವಿ ಹಿರೇಬಾಗೇವಾಡಿಯಲ್ಲಿ ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ್ದಾರೆ.
ಬೆಳಗಾವಿ: ಹಿರೇಬಾಗೇವಾಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಲವಾರು ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಬಿಜೆಪಿಗೆ ಗುಡ್ ಬೈ ಹೇಳಿ ಬೆಳಗಾವಿಯ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಸೇರಿದ್ದಾರೆ.ಮುಖಂಡರುಗಳಾದ ದಯಾನಂದ ಹಂಚಿನಮನಿ, ಬಸವರಾಜ ಹಂಚಿನಮನಿ, ಬಾಬು ಮುಸೆನ್ನವರ, ಅಜ್ಜಪ್ಪ ಮುಗಪ್ಪಗೋಳ, ನಾಗಪ್ಪ ಕಲಭಾಂವಿ, ನಿಜಲಿಂಗ ಅಂಗಡಿ, ಮಲ್ಲಪ್ಪ ಕಬ್ಬೂರ, ದೊಡ್ಡಯ್ಯ ಹಿರೇಮಠ, ಚಂದ್ರು ತಳವಾರ, ಮಾಂತಯ್ಯ ಹಿರೇಮಠ, ಉದಯ ಹುಲಮನಿ, ಬಾಳೇಶ ಕಕ್ಕಾಳಿ ಮತ್ತು ಅಪಾರ ಸಂಖ್ಯೆಯಲ್ಲಿ …
Read More »ಕಾಂಗ್ರೆಸ್ 50 ಜನರ ಮನೆಗಳ ಮೇಲೆ ಐಟಿ ಅಧಿಕಾರಿಗಳು ರೇಡ್ ಮಾಡುವ ಸಾಧ್ಯತೆ ಇದೆ.ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಕಾಂಗ್ರೆಸ್ ಮುಖಂಡರ ಮೇಲೆ ಸುಳ್ಳು ಕೇಸು ಹಾಕುವ ಯತ್ನ ನಡೆದಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನನ್ನ ಕ್ಷೇತ್ರದಲ್ಲಿ ಮೂವರು ಮುಖಂಡರನ್ನು ಟಾರ್ಗೆಟ್ ಮಾಡಲಾಗಿದೆ.ಮುಖಂಡರ ಮನೆಗಳ ಮೇಲೆ ಲೋಕಾಯುಕ್ತ ಮತ್ತು ಐಟಿ ಅಧಿಕಾರಿಗಳು ದಾಳಿ ನಡೆಸುವ ಮಾಹಿತಿ ಇದೆ. ನಮ್ಮ ಪಕ್ಷದ ಮುಖಂಡರ ಶಕ್ತಿ ತಡೆಯುವ ಪ್ರಯತ್ನ ನಡೆದಿದೆ ಎಂದು ದೂರಿದ್ದಾರೆ. ಸುಮಾರು 50 …
Read More »
Laxmi News 24×7