Breaking News

ಜಿಲ್ಲೆ

ಬೀದರ್: 105 ವರ್ಷ ವಯಸ್ಸಿನ ಅಜ್ಜಿ ಬಾಯಲ್ಲಿ ಮೂಡಿತು ಹೊಸ ಹಲ್ಲು

ಬೀದರ್: ಇತ್ತೀಚಿನ ವರ್ಷಗಳಲ್ಲಿ ನೂರು ವರ್ಷ ಪೂರೈಸುವುದೇ ಅಪರೂಪ. ಅಂಥದ್ದರಲ್ಲಿ, ಶತಾಯುಷಿಯಾದವರಿಗೆ ಹೊಸ ಹಲ್ಲು ಚಿಗುರೊಡೆದರೆ? ಇದೊಂಥರಾ ವಿಶೇಷ ಅಲ್ಲವೇ? ಬೀದರ್ ಜಿಲ್ಲೆಯಲ್ಲೂ ಇಂಥದ್ದೇ ಒಂದು ವಿಶೇಷ ಕಂಡುಬಂದಿದೆ. ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹಾರಕೂಡ ಗ್ರಾಮದ ಶತಾಯುಷಿ ಗಂಗಮ್ಮ ಗುರಪ್ಪ ಕಣ್ಣೂರ್ ಜನವಾಡ್ ಎಂಬ ಅಜ್ಜಿಗೆ ಹೊಸ ಹಲ್ಲು ಮೂಡಿದೆ. ಇಷ್ಟು ಇಳಿ ವಯಸ್ಸಿನಲ್ಲಿ ಹೊಸದಾಗಿ ಹಲ್ಲು ಚಿಗುರೊಡೆದರೆ ಅಂಥವರಿಗೆ ಈ ಭಾಗದಲ್ಲಿ ತೊಟ್ಟಿಲೋತ್ಸವ ಮಾಡಲಾಗುತ್ತದೆ. 105 ವರ್ಷ …

Read More »

ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ

ಬೆಳಗಾವಿ: ಅಥಣಿಯ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಮಾಜಿ ಶಾಸಕ ಸವದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿಯ ಟಿಕೆಟ್ ವಂಚಿತರಿಗೆ ಕಾಂಗ್ರೆಸ್ ತನ್ನತ್ತ ಸೆಳೆಯಲು ಯತ್ನಿಸಿದ್ದು, ಈ ನಿಟ್ಟಿನಲ್ಲಿ ಲಕ್ಷ್ಮಣ ಸವದಿಯವರನ್ನು ಅವರ ಸ್ನೇಹಿತ ಮಾಜಿ ಶಾಸಕ ರಾಜು ಕಾಗೆ ಮೂಲಕವೇ …

Read More »

ಟಿಕೆಟ್ ಸಿಕ್ಕಾಯ್ತ ಇನ್ನೇನು ಗುಲಾಲ ಹಾರಸೋದ ಒಂದೇ ಬಾಕಿ…

ಬೆಳಗಾವಿ: ರಮೇಶ್ ಜಾರಕಿಹೊಳಿ ಗೋಕಾಕ ಬೆಳಗಾವಿ ಅಷ್ಟೇ ಅಲ್ಲ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಕೂಡ ಅವರ್ ಹೆಸರು ಅಜರಾಮರವಾಗಿ ಇದೆ ಎಂಬುದಕ್ಕೆ ಇವತ್ತಿನ ಬಿಡುಗಡೆ ಯಾದ ಪಟ್ಟಿಯೇ ಸಾಕ್ಷಿ ರಮೇಶ್ ಜಾರಕಿಹೊಳಿ ಅವರ ವಿರುದ್ಧ ಅನೇಕ ಊಹಾ ಪೋಹ ಗಳು ಇದ್ದರು ರಮೇಶ್ ಜಾರಕಿಹೊಳಿ ಅಷ್ಟೇ ಅಲ್ಲದೆ ಬೆಂಬಲಿಗರಿಗೆ ಕೂಡ ವಿಧಾನಸಭಾ ಟಿಕೆಟ್ ಕೊಡಿಸುವುದ ರಲ್ಲಿ ಯಶಸ್ವಿ ಯಾಗಿದ್ದಾರೆ ಸಾಹುಕಾರ ಗೆ ಜಯ ಸಿಕ್ಕಿದೆ ಇನ್ನೇನು ಗುಲಾಲ ಹಾರಸೊದ ಒಂದೇ …

Read More »

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ: ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಮಾತ್ರ ಬಾಕಿಯಿದ್ದು, ಇಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಬಿಜೆಪಿ ಪಟ್ಟಿಯನ್ನು ಬಿಡುಗಡೆ ಮಾಡಿದರು. ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸುವುದಾಗಿ ತಿಳಿಸಿದರು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಭ್ಯರ್ಥಿಗಳ ಹೆಸರು ಘೋಷಿಸಿದರು. 52 ಹೊಸ ಮುಖಗಳಿಗೆ ಅವಕಾಶ. ಒಬಿಸಿ -32, ಎಸಿ …

Read More »

ಕೆಲಸದ ಆಮಿಷವೊಡ್ಡಿ ವಂಚನೆ: ಇಂಡಿಯನ್ ಮನಿ ಫ್ರೀಡಂ ಕಂಪನಿ ಸಿಇಒ ಸುಧೀರ್ ವಿಚಾರಣೆ

ಬೆಂಗಳೂರು: ಅರೆಕಾಲಿಕ ಕೆಲಸ ಕೊಡುವ ಆಮಿಷವೊಡ್ಡಿ ತಮ್ಮ ಆಯಪ್ ಪ್ರಚಾರಕ್ಕೆ ಬಳಸಿಕೊಂಡು ಹಣ ನೀಡದೇ ವಂಚಿಸಿರುವ ಆರೋಪದಡಿ ಇಂಡಿಯನ್ ಮನಿ ಫ್ರೀಡಂ ಕಂಪನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಿ.ಎಸ್. ಸುಧೀರ್ ಅವರನ್ನು ಬನಶಂಕರಿ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.   ‘ವಂಚನೆಗೀಡಾಗಿರುವ ಯುವತಿ ಸೇರಿ 21 ಮಂದಿ ದೂರು ನೀಡಿದ್ದಾರೆ. ಅದರನ್ವಯ ಕಂಪನಿಯ ಸಂಸ್ಥಾಪಕರಾದ ಸುಧೀರ್ ಸೇರಿ 23 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ‘ಪ್ರಕರಣ …

Read More »

ತಾನು ಪ್ರೀತಿಸುತ್ತಿದ್ದ ಹುಡುಗಿಯ ಕತ್ತು ಹಿಸುಕಿ ಕೊಲೆ ಮಾಡಿದಪಾಗಲ್​ ಪ್ರೇಮಿ

ಬೀದರ್ : ಬೀದರ್ ತಾಲೂಕಿನ ಸೋಲಪೂರ್ ಗ್ರಾಮದ ಕೆರೆಯ ಸಮೀಪದಲ್ಲಿ ಮದುವೆ ನಿರಾಕರಿಸಿದ್ದಕ್ಕೆ ಪಾಗಲ್​ ಪ್ರೇಮಿಯೊಬ್ಬ (Lover) ತಾನು ಪ್ರೀತಿಸುತ್ತಿದ್ದ ಹುಡುಗಿಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನಡೆದಿದೆ.     ಶಿವಲೀಲಾ (18) ಕೊಲೆಗೀಡಾಗಿರುವ ಯುವತಿ. ಈಕೆ ಬ್ರೀಮ್ಸ್​ನಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಳು. ಇನ್ನೂ ಶ್ರೀನಿವಾಸ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮದುವೆಯಾಗಲು (Marriage) ಇಷ್ಟವಿಲ್ಲ ಎಂದು ಹೇಳಿದ್ದಕ್ಕೆ ಶ್ರೀನಿವಾಸ ಸೋಲಪೂರ್ ಕೆರೆಯ ಬಳಿ ಕರೆದುಕೊಂಡು ಹೋಗಿ …

Read More »

ಮನನೊಂದು ಮಹಿಳೆ ಆತ್ಮಹತ್ಯೆ

ಸಂಕೇಶ್ವರ ಸೋಲಾಪುರದ ಸುಧಾ ಸೋಮನಾಥ್ ವಾಜಂತ್ರಿ ವಯಸ್ಸು 25 ಸುಮಾರು 8 ವರ್ಷಗಳಿಂದ ಮಕ್ಕಳು ಆಗದ ಕಾರಣ ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಜನರು ಮಾತನಾಡುತ್ತಿದ್ದಾರೆ. ಆದರೆ ಬಾವಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡರೆ ಮೃತ ದೇಹವು ಮೂರು ದಿನಗಳ ನಂತರ ನೀರಿನ ಮೇಲೆ ತೇಲಾಡುತ್ತದೆ ಆದರೆ ಇಲ್ಲಿ ಆತ್ಮಹತ್ಯೆ ಮಾಡಿಕೊಂಡ ತಕ್ಷಣವೇ ಮೃತ ದೇಹ ನೀರಿನ ಮೇಲೆ ತೇಲಾಡುತ್ತಿದೆ. ಈ ಮೃತ ದೇಹ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ …

Read More »

ಇಂತಹ 10 ಅಮೂಲ್ ಬಂದರೂ ಸ್ಪರ್ಧೆ ಮಾಡುವ ಶಕ್ತಿ ನಂದಿನಿಗಿದೆ:ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಅಮೂಲ್ ಜೊತೆ ಕೆಎಂಎಫ್ ವಿಲೀನ ಇಲ್ಲವೇ ಇಲ್ಲ. ಇಂತಹ 10 ಅಮೂಲ್ ಬಂದರೂ ಸ್ಪರ್ಧೆ ಮಾಡುವ ಶಕ್ತಿ ನಂದಿನಿಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಕಾರಣಕ್ಕಾಗಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿ, ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು. ಕೆಎಂಎಫ್ ನಲ್ಲಿ 26 ಲಕ್ಷ ರೈತರು ಸದಸ್ಯರಿದ್ದಾರೆ. 10 ಲಕ್ಷ ರೈತರು ಹಾಲು ಹಾಕುತ್ತಾರೆ. 15,200 ಸಂಘಗಳಿವೆ, 28 ಸಾವಿರ …

Read More »

ಲಕ್ಷ್ಮಣ ಸವದಿ ಟಿಕೇಟ್‌ ವಿಷಯದಲ್ಲಿ ಮುನಿಸಿಕೊಂಡಿದ್ದು ಕಾಂಗ್ರೆಸ್‌ ಸೇರ್ಪಡೆಗೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಬಿಜೆಪಿ ಸಭೆ ನಡೆಸುತ್ತಿದ್ದು, ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ನಡುವೆಯೇ ಬಿಜೆಪಿ ಹಿರಿಯ ಮುಖಂಡ ಲಕ್ಷ್ಮಣ ಸವದಿ ಟಿಕೇಟ್‌ ವಿಷಯದಲ್ಲಿ ಮುನಿಸಿಕೊಂಡಿದ್ದು ಕಾಂಗ್ರೆಸ್‌ ಸೇರ್ಪಡೆಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಗಾಗಿ ಪೈಪೋಟಿ ಆರಂಭವಾಗಿದ್ದು, ಟಿಕೆಟ್ ಗಾಗಿ ಬಿಜೆಪಿ ಹಿರಿಯ …

Read More »

ದಲಗಾ- ದತ್ತವಾಡ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಚುನಾವಣೆ ಸಿಬ್ಬಂದಿ 50 ಲಕ್ಷ ರೂ ವಶಪಡಿಸಿಕೊಂಡಿದ್ದಾರೆ.

ಬೆಳಗಾವಿ: ಸದಲಗಾ- ದತ್ತವಾಡ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಚುನಾವಣೆ ಸಿಬ್ಬಂದಿ 50 ಲಕ್ಷ ರೂ ವಶಪಡಿಸಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್ ಪೊಸ್ಟ್ ನಿರ್ಮಾಣ ಮಾಡಲಾಗಿದ್ದು, ದಿನದ 24 ಗಂಟೆಯೂ ಅಲ್ಲಿ ಪೊಲೀಸರು ಮತ್ತು ಚುನಾವಣಾ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಗ್ಗೆ ತಪಾಸಣೆ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರೂ. ಪತ್ತೆಯಾಗಿದ್ದು, ವಶಪಡಿಸಿಕೊಂಡು ತನಿಖೆ ನಡೆಸಲಾಗಿದೆ.

Read More »