Breaking News

ಜಿಲ್ಲೆ

ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್

ಮೈಸೂರು : ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರದಲ್ಲಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ, ವರುಣಾ ಕ್ಷೇತ್ರದಲ್ಲಿ ಬಿಜೆಪಿಯವರು ಸರಿಯಾದ ಅಭ್ಯರ್ಥಿ ಹಾಕಿಲ್ಲ, ಜೆಡಿಎಸ್ ಬಿಜೆಪಿ ಒಳ ಒಪ್ಪಂಡ ಮಾಡಿಕೊಂಡಿಲ್ಲ ಕಾಂಗ್ರೆಸ್ ಬಿಜೆಪಿ ಒಳಒಪ್ಪಂದ ಮಾಡಿಕೊಂಡಿದೆ. ಜೆಡಿಎಸ್ 124 ಸ್ಥಾನ ಗೆಲ್ಲಲು ಹೋರಾಟ ನಡೆಸುತ್ತಿದೆ ಎಂದು …

Read More »

ಬಳ್ಳಾರಿಯಲ್ಲಿ ಪೊಲೀಸರ ಕಾರ್ಯಾಚರಣೆ :10 ಲಕ್ಷ ರೂ. ನಗದು, 131.13 ಲೀ ಮದ್ಯ ವಶ

ಬಳ್ಳಾರಿ: ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಬುಧವಾರದಂದು ನೀತಿ ಸಂಹಿತೆ ಉಲ್ಲಂಘಿಸಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 10 ಲಕ್ಷ ನಗದು ಹಣ ಸೇರಿ 131.13 ಲೀಟರ್ (ರೂ.50,268 ಸಾವಿರ ಬೆಲೆಬಾಳುವ) ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ಮಾಹಿತಿ ನೀಡಿದ್ದಾರೆ.   ಜಿಲ್ಲೆಯಾದ್ಯಂತ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ವಿವಿಧ ತಂಡಗಳನ್ನು ರಚಿಸಲಾಗಿದ್ದು, ಈಗಾಗಲೇ ಕಾರ್ಯಪ್ರವೃತ್ತವಾಗಿದೆ. ಒಟ್ಟು 43 …

Read More »

ಕಾಂಗ್ರೆಸ್ ಅಭ್ಯರ್ಥಿಗಳ 2 ನೇ ಪಟ್ಟಿ ರಿಲೀಸ್ : ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್

ವಿಜಯಪುರ : ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಎಐಸಿಸಿ ಇಂದು 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ 2 ನೇ ಪಟ್ಟಿಯಲ್ಲಿ ಲಿಂಗಾಯತರಿಗೆ ಹೆಚ್ಚಿನ ಟಿಕೆಟ್ ನೀಡಲಾಗಿದೆ. ಲಿಂಗಾಯತರಿಗೆ 10, ರೆಡ್ಡಿ ಲಿಂಗಾಯ ಸಮುದಾಯಕ್ಕೆ 1 ಟಿಕೆಟ್ ಕೊಟ್ಟರೆ, ಒಕ್ಕಲಿಗ ಸಮುದಾಯಕ್ಕೆ 10 ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದೆ. ಕುರುಬ ಸಮುದಾಯಕ್ಕೆ …

Read More »

ಬೊಮ್ಮಾಯಿ ಅಸಾಮರ್ಥ್ಯವೇ ಮಹಾರಾಷ್ಟ್ರದ ಗಡಿ ತಂಟೆಗೆ ಕಾರಣ – ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ

ಬೆಂಗಳೂರು: ಬಿಜೆಪಿ ಸರ್ಕಾರದ ವೈಫಲ್ಯ, ಬಸವರಾಜ ಬೊಮ್ಮಾಯಿ ಅವರ ಅಸಾಮರ್ಥ್ಯವೇ ಮಹಾರಾಷ್ಟ್ರದ ಗಡಿ ತಂಟೆಗೆ ಕಾರಣ. ಚುನಾವಣೆಗಾಗಿ ಏಕಾಏಕಿ ಕರ್ನಾಟಕದ ಮೇಲೆ ವಿಶೇಷ ಪ್ರೀತಿ ಹುಟ್ಟಿ ವಾರಕ್ಕೊಮ್ಮೆ ಕರ್ನಾಟಕಕ್ಕೆ ಬರುವ ಮೊ-ಶಾ ಜೋಡಿ ಮಹಾರಾಷ್ಟ್ರದಲ್ಲಿನ ತಮ್ಮದೇ ಸರ್ಕಾರದ ಉದ್ಧಟತನಕ್ಕೆ ಕಡಿವಾಣ ಹಾಕುತ್ತಿಲ್ಲವೇಕೆ ಬಿಜೆಪಿ ಎಂದು ಕರ್ನಾಟಕ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.ಈ ಕುರಿತಂತೆ ಟ್ವಿಟ್ ಮಾಡಿದ್ದು, ರಮೇಶ್ ಜಾರಕಿಹೊಳಿ ಬಿಜೆಪಿಗೆ ದುಬಾರಿ ಮನುಷ್ಯನಾಗಿದ್ದಾರೆ, ಒಂದೆಡೆ ಸವದಿ ಜೊತೆ ಕಿರಿಕ್, ಇನ್ನೊಂದೆಡೆ ಈರಣ್ಣ …

Read More »

ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಯೋಜನೆ ವಿವಾದ

ಗಡಿ ವಿಷಯದಲ್ಲಿ ಕರ್ನಾಟಕದ ಜತೆ ಸದಾ ತಂಟೆ ತೆಗೆಯುವ ಮಹಾರಾಷ್ಟ್ರ ಸರ್ಕಾರ ಈ ಬಾರಿ ಸ್ವಲ್ಪ ಭಿನ್ನ ಹಾದಿ ಹಿಡಿದಿದೆ. ಕರ್ನಾಟಕ ವ್ಯಾಪ್ತಿಯ ಸುಮಾರು 865 ಹಳ್ಳಿಗಳಲ್ಲಿ ಆರೋಗ್ಯ ಯೋಜನೆ ಜಾರಿಗೊಳಿಸುವ ಮೂಲಕ ಜಾಣ ಕಾರ್ಯತಂತ್ರ ಬಳಸಲು ಮುಂದಾಗಿದೆ. ಆರೋಗ್ಯ ವಿಷಯವಾಗಿದ್ದರಿಂದ ಯಾರೂ ತಕರಾರು ತೆಗೆಯಲಾಗದು ಎಂಬುದು ಅವರ ಭಾವನೆಯಿರಬೇಕು. ಆದರೆ ಈ ತಂತ್ರದ ಹಿಂದೆ ಬೇರೆಯದೇ ಸಂಚನ್ನು ಗುರುತಿಸಿರುವ ರಾಜ್ಯದ ರಾಜಕೀಯ ಪಕ್ಷಗಳ ನಾಯಕರು ಒಗ್ಗಟ್ಟಾಗಿ ಏಕದನಿಯಲ್ಲಿ ವಿರೋಧ …

Read More »

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಸವಕಲ್ಯಾಣ ಲೇಡಿ ಪಿಎಸ್​ಐ, ಪೇದೆ!

ಬೀದರ್: ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆಗೆ ಲಾರಿಗಳಿಗೆ ಅನುಮತಿ ನೀಡಲು 25 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​​ರನ್ನು ಲೋಕಾಯುಕ್ತ ಪೊಲೀಸರು ರೆಡ್​ಹ್ಯಾಂಡ್​ ಆಗಿ ಬಲೆಗೆ ಕೆಡವಿದ್ದಾರೆ.   ಬಸವಕಲ್ಯಾಣ ತಾಲೂಕಿನ ಮಂಠಾಳ ಠಾಣೆಯ ಪಿಎಸ್‌ಐ ಶೀಲಾ ನ್ಯಾಮನ್ ಹಾಗು ಕಾನ್​ಸ್ಟೆಬಲ್ ಪರಶುರಾಮರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದವರು. ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆ ಲಾರಿಗಳಿಗೆ ಅನುಮತಿ ನೀಡಲು ದೂರುದಾರ ಇರ್ಷಾದ್​ ಪಟೇಲ್‌ನಿಂದ 21 ಸಾವಿರ ರೂಪಾಯಿ …

Read More »

ಅಂಕಲಗಿ ಶ್ರೀ ಗುರುಸಿದ್ಧ ಶ್ರೀಗಳಿಗೆ ಶೃದ್ಧಾಂಜಲಿ ಅರ್ಪಿಸಿದ ಹುಕ್ಕೇರಿ ಕಾರಂಜಿಮಠದ ಶ್ರೀಗಳು

ಬೆಳಗಾವಿ: ಅಂಕಲಗಿ ಅಡವಿಸಿದ್ದೇಶ್ವರ ಮಠದ ಶ್ರೀ ಗುರುಸಿದ್ಧ ಮಹಾಸ್ವಾಮೀಜಿ ಇತ್ತೀಚೆಗೆ ಲಿಂಗೈಕೆರಾಗಿದ್ದಾರೆ. ಇವರ ಗದ್ದುಗೆಗೆ ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಳಗಾವಿ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಪೂಜೆ ಸಲ್ಲಿಸಿ ಶೃದ್ಧಾಂಜಲಿ ಅರ್ಪಿಸಿದರು. ಈ ವೇಳೆ ಮಾತನಾಡಿದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಅಂಕಲಗಿ ಶ್ರೀಗಳು ಭಕ್ತರ ಶೃದ್ಧಾ ಕೇಂದ್ರವಾಗಿರುವ ಅಂಕಲಗಿ ಅಡವಿಸಿದ್ದೇಶ್ವರ ಮಠವನ್ನು ಪುನರೋತ್ಥಾನಗೊಳಿಸುವುದರ ಮೂಲಕ ಅನೇಕ ಜನಪರ ಕೆಲಸ ಮಾಡಿದ್ದಾರೆ. ಇವರ ಅಗಲಿಕೆಯಿಂದ ಇಡೀ ಸಮಾಜಕ್ಕೆ ತುಂಬಲಾರದಷ್ಟು …

Read More »

ಹೆರಿಗೆ ವೇಳೆ ವೈದ್ಯರ ನಿರ್ಲಕ್ಷದಿಂದ ಮಗು ಸಾವು

ಗದಗ: ಹೆರಿಗೆ ವೇಳೆ ವೈದ್ಯರ ನಿರ್ಲಕ್ಷದಿಂದ ಮಗು ಸಾವು ಎಂಬ ಆರೋಪ ಆಗಾಗ ಕೇಳಿ ಬರುತ್ತಲಿರುತ್ತದೆ. ಅಂಥ ಪ್ರಕರಣಗಳ ಪಟ್ಟಿಗೆ ಇಂದು ಇನ್ನೊಂದು ಸೇರ್ಪಡೆ ಆಗಿದೆ. ಇಲ್ಲಿ ಗರ್ಭಿಣಿಯ ಕಪಾಳಕ್ಕೆ ವೈದ್ಯೆ ಹೊಡೆದಿದ್ದು, ಮಗು ಹೊಟ್ಟೆಯಲ್ಲೇ ಸಾವಿಗೀಡಾಗಿದೆ ಎಂದೂ ಹೇಳಲಾಗಿದೆ.   ಗದಗ ಜಿಮ್ಸ್​ನಲ್ಲಿ ಈ ಪ್ರಕರಣ ನಡೆದಿದೆ. ಹೆರಿಗೆಗೆ ಎಂದು ಬಂದಿದ್ದ ಮಹಿಳೆಯನ್ನು ಹೆರಿಗೆಗೆ ಒಳಪಡಿಸದೆ ವಿಳಂಬ ಮಾಡಲಾಗಿದೆ ಎನ್ನಲಾಗಿದೆ. ಮಾತ್ರವಲ್ಲ, ಹೆರಿಗೆ ಮಾಡಿಸದೆ ಗರ್ಭಿಣಿಯ ಕಪಾಳಕ್ಕೆ ವೈದ್ಯೆ ಬಾರಿಸಿದ್ದಾರೆ …

Read More »

ಬೆಳಗಾವಿ ಉತ್ತರದಲ್ಲಿ ಮುಗಳಿ ಹಾಳ ಅವರ್ ಭರ್ಜರಿ ಪ್ರಚಾರ ಇಬ್ಬರ ಜಗಳದಲ್ಲಿ 3ನೆ ಯವರಿಗೆ ಲಾಭ ಆಗುವ ಸಾಧ್ಯತೆ?

ಬೆಳಗಾವಿ: ವಿಧಾನ ಸಭಾ ಚುನಾವಣೆ ಬರುತ್ತಿದ್ದಂತೆ ಎಲ್ಲಾಕಡೆ ಪ್ರಚಾರ ಜೋರಾಗಿಯೇ ಇದೆ ಒಂದು ಕಡೆ ಬಿಜೆಪಿ ಯಲ್ಲಿ ಒಳ ಜಗಳ ಇದ್ದರೆ ಕಾಂಗ್ರೆಸ್ ನಲ್ಲಿ ಬಂಡಾಯದ ಬಿಸಿ ಇಲ್ಲಿ ಜೆಡಿಎಸ್ ನಿಂದ ಮುಗಳಿಹಾಳ ಅವರು ಸ್ಪರ್ಧೆಗೆ ರೆಡಿ ಆಗಿದ್ದಾರೆ ಇವಾಗಿನಿಂದಲೆ ಕ್ಷೇತ್ರಗಳಲ್ಲಿ ತಮ್ಮ ಪ್ರಚಾರ ವನ್ನಾ ಪ್ರಾರಂಭ ಮಾಡಿದ್ದಾರೆ ಬೆಳಗಾವಿ ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ರೈತ ಸಂಘದ ಚುನಪ್ಪ ಪೂಜಾರಿ ಅವರು ಕೂಡ ಸಾಥ್ ನೀಡಿದ್ದಾರೆ ವಿಧಾನ ಸಭೆ …

Read More »

ಬುಧವಾರ ಮತ್ತಷ್ಟು ನಗದು ಹಣ ವಶ

ಬೆಳಗಾವಿ : ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ತೀವ್ರ ತಪಾಸಣೆ ನಡೆಸುತ್ತಿರುವ ಅಧಿಕಾರಿಗಳು ಬೆಳಗಾವಿ ಜಿಲ್ಲೆಯಲ್ಲಿ ಬುಧವಾರ ಮತ್ತಷ್ಟು ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಬುಧವಾರ ಬೆಳಗಿನ ಜಾವ ಹಿರೇಬಾಗೇವಾಡಿ ಟೋಲ್ ನಾಕಾ ಬಲಿ 2 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿತ್ತು. ಸಂಜೆ ಹಿಟ್ನಿ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ದಾಖಲೆಗಳಿಲ್ಲದ ರೂ.11,49,000 ನಗದನ್ನು ಎಸ್‌ಎಸ್‌ಟಿ, ಎಫ್‌ಎಸ್‌ಟಿ, ಎಂಸಿಸಿ ನೋಡಲ್ ಅಧಿಕಾರಿ, ಸಿಪಿಐ, ಹುಕ್ಕೇರಿ ಮತ್ತು ಸಿಪಿಐ ಸಂಕೇಶ್ವರ ತಂಡದ ಸಮನ್ವಯದಲ್ಲಿ ವಶಪಡಿಸಿಕೊಂಡಿದ್ದಾರೆ. …

Read More »