Breaking News

ಜಿಲ್ಲೆ

ವಕೀಲರ ಮೇಲೆ ಹಲ್ಲೆ: ಪ್ರತಿಭಟನೆ

ಅಥಣಿ: ವಾಹನ ನಿಲುಗಡೆ ವಿಚಾರವಾಗಿ ಪೊಲೀಸರು ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಖು ಎಂದು ಆಗ್ರಹಿಸಿ ಅಥಣಿ ವಕೀಲರ ಸಂಘದಿಂದ ಶಿವಯೋಗಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಮೇತ್ರಿ ಮಾತನಾಡಿ, ‘ಮೂಲತಃ ರಾಮದುರ್ಗದ ವಕೀರೊಬ್ಬರು ಪ್ರಸ್ತುತ ಬೆಳಗಾವಿಯಲ್ಲಿ ವೃತ್ತಿ ನಡೆಸುತ್ತಿದ್ದು, ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿ ಠಾಣೆ ಹಿಂಬದಿ ವಾಹನ ನಿಲ್ಲಿಸಿದ್ದರು. ಈ ವೇಳೆ ಮಹಿಳಾ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿ ವಾಹನ …

Read More »

10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮದೃಷ್ಟಿ ಬೀರಿ ಕಂಬಿ ಹಿಂದೆ ಸರಿದಿದ್ದಾನೆ. ಪ್ರಾಚಾರ್ಯ

ರಾಯಚೂರು: ಪ್ರಾಚಾರ್ಯನೊಬ್ಬ ತನ್ನ ಸ್ಥಾನ- ಮಾನಗಳ ಪರಿವೆ ಇಲ್ಲದೆ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮದೃಷ್ಟಿ ಬೀರಿ ಕಂಬಿ ಹಿಂದೆ ಸರಿದಿದ್ದಾನೆ. ವಿಜಯಕುಮಾರ ಅಂಗಡಿ ಆರೋಪಿ. ಈತನ ವಿರುದ್ಧ ಪೋಕ್ಸೋ, ಲೈಂಗಿಕ ಕಿರುಕುಳ, ಜಾತಿ ನಿಂದನೆ ಸೇರಿದಂತೆ ಹಲವು ಕಾಯ್ದೆ, ಕಲಂಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಮೊದಲಿಗೆ ಸಭ್ಯನಾಗೇ ಇದ್ದ ಪ್ರಾಚಾರ್ಯ ಅಂಗಡಿ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯೊಬ್ಬಳ ವಿಷಯದಲ್ಲಿ ಗಡಿ ಮೀರಿದ ವರ್ತನೆ ತೋರಲು ಹೋಗಿ ಈಗ ಫಜೀತಿಗೆ ಬಿದ್ದಿದ್ದಾನೆ. ವಿದ್ಯಾರ್ಥಿನಿಯನ್ನು …

Read More »

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಇನ್ನೂ ಅವಕಾಶ

ಬೆಳಗಾವಿ : ಚುನಾವಣಾ ಆಯೋಗವು ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಇನ್ನೂ ಅವಕಾಶವಿದ್ದು, ಏಪ್ರಿಲ್ 10 ರವರೆಗೂ ಹೆಸರು ಸೇರ್ಪಡೆ ಮಾಡಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಮಾ.29) ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯುವ ಮತದಾರರ ಹೆಸರನ್ನು ಮತದಾರರ …

Read More »

ಬಿಜೆಪಿ ಸರ್ಕಾರ ಕಿತ್ತೆಸೆಯಿರಿ, ಬ್ರಾಂಡ್ ಕರ್ನಾಟಕ ನಿರ್ಮಿಸೋಣ: ಸುರ್ಜೆವಾಲ

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ. ಚುನಾವಣೆ ದಿನಾಂಕ ಪ್ರಕಟ ಬೆನ್ನಲೇ ಟ್ವಿಟರ್‌ನಲ್ಲಿ ವಿಡಿಯೊ ಹಂಚಿಕೊಂಡಿರುವ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ, ‘ಶಾಂತಿ ಮತ್ತು ಸಮೃದ್ಧಿಯ ಹೊಸ ಕರ್ನಾಟಕ ನಿರ್ಮಾಣಕ್ಕಾಗಿ ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡೋಣ’ ಎಂದು ಕರೆ ನೀಡಿದ್ದಾರೆ.   …

Read More »

ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನಮಾಡಲು ಅವಕಾಶ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾರ್ಯ ನಿರತ ಪತ್ರಕರ್ತರಿಗೆ ಅಂಚೆ ಮತದಾನ (ಪೋಸ್ಟಲ್ ವೋಟಿಂಗ್) ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಮಾಡಿದ ಮನವಿ ಪುರಸ್ಕರಿಸಿರುವ ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಇಂಥದೊಂದು ಅವಕಾಶ ಕಲ್ಪಿಸಿದೆ. ಇದರಿಂದಾಗಿ ನಾನಾ ಕಡೆಯಲ್ಲಿ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ‌ ಮಾಡುತ್ತಿದ್ದ ಕಾರ್ಯ ನಿರತ ಪತ್ರಕರ್ತರು ಮತದಾನ ವಂಚಿತರಾಗುವುದು ತಪ್ಪಿದಂತಾಗಿದೆ. ಕರ್ತವ್ಯ ನಿರತರಾಗಿದ್ದಲ್ಲಿಂದಲೇ (ಅಗತ್ಯವಿದ್ದವರು) ತಮ್ಮ ಮತವಿರುವ ಕ್ಷೇತ್ರದಲ್ಲಿ …

Read More »

ಹಾರೂಗೇರಿ ಕ್ರಾಸ್ ನಲ್ಲಿ ಅಪಾರ ಪ್ರಮಾಣದ ನಗದು, ಹೊಲಿಗೆ ಮಷಿನ್, ಕೂಲರ್ ವಶ

ಬೆಳಗಾವಿ: ರಾಜ್ಯದಲ್ಲಿ ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾರರಿಗೆ ಆಮಿಷವೊಡ್ಡಲು ಕೆಲ ಅಭ್ಯರ್ಥಿಗಳು ಅಕ್ರಮದ ಹಾದಿ ಹಿಡಿದಿದ್ದರೆ ಇತ್ತ ಜಿಲ್ಲೆಯ ಪೊಲೀಸ್ ವ್ಯವಸ್ಥೆ ಕೂಡ ಚುರುಕಾಗಿದ್ದು ಇದಕ್ಕೆ ಬ್ರೇಕ್ ಹಾಕುವ ಕಾರ್ಯದಲ್ಲಿ ತೊಡಗಿದೆ.                     ಜಿಲ್ಲೆಯಲ್ಲಿ ಬುಧವಾರ ಲಕ್ಷಾಂತರ ರೂ. ಅಕ್ರಮ ಹಣವನ್ನು ಚೆಕ್ ಪೋಸ್ಟ್ ಕರ್ತವ್ಯದಲ್ಲಿರುವ ಪೊಲೀಸರು ಜಪ್ತಿ ಮಾಡಿದ್ದಾರೆ. ಹಾರೂಗೇರಿ ಕ್ರಾಸ್ ನಲ್ಲಿರುವ ಚೆಕ್ ಪೋಸ್ಟ್ …

Read More »

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆ?

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರಾಜ್ಯ ರಾಜಧಾನಿ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ಹಾಸನ, ಕೊಡಗು, ಚಾಮರಾಜನಗರ, ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ. ತಮಿಳುನಾಡಿನಲ್ಲಿ 9 ಮೀಟರ್ ಗಾಳಿಯ ದಿಕ್ಕಿನಲ್ಲಿ ಬದಲಾವಣೆ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. …

Read More »

ಸಿಎಂ ಕಾರ್ಯಕ್ರಮ ರದ್ದಾಗುವುದಿಲ್ಲ: ಸಚಿವ ಹಾಲಪ್ಪ ಆಚಾರ್‌

ಕೊಪ್ಪಳ: ಜಿಲ್ಲೆಯ ಯಲಬುರ್ಗಾದಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ಆಯೋಜನೆಯಾಗಿರುವ ಮುಖ್ಯಮಂತ್ರಿ ಕಾರ್ಯಕ್ರಮ ನಿಗದಿಯಂತೆ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ, ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್ ತಿಳಿಸಿದರು.   ಕೃಷ್ಣ ಬಿ ಸ್ಕೀಂ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮದ ಉದ್ಘಾಟನೆಗೆ ಸಿಎಂ ಬರಲಿದ್ದಾರೆ. 11.30ಕ್ಕೆ ಚುನಾವಣೆ ಆಯೋಗದ ಪತ್ರಿಕಾಗೋಷ್ಠಿ ಇದೆ. ನಮ್ಮ ಕಾರ್ಯಕ್ರಮ 11ಕ್ಕೆ ನಿಗದಿಯಾಗಿದೆ. ನಿಗದಿತ ಸಮಯಕ್ಕೆ ಕಾರ್ಯಕ್ರಮ ಆರಂಭವಾಗಲಿದೆ ಎಂದು ತಿಳಿಸಿದರು.

Read More »

ಚುನಾವಣೆಗೆ ಸ್ಪರ್ಧಿಸಲೇಬೇಕೆಂದು ಲಕ್ಷ್ಮಣ ಸವದಿ ನಿರ್ಧರಿಸಿದರೆ ಜಿಲ್ಲೆಯಷ್ಟೇ ಅಲ್ಲ, ರಾಜ್ಯ ರಾಜಕಾರಣದಲ್ಲೂ ಬಿಜೆಪಿಯಲ್ಲಿ ದೊಡ್ಡ ಗೊಂದಲ ಸೃಷ್ಟಿ

ಬೆಳಗಾವಿ : ಬಿಜೆಪಿಯ ಟಿಕೆಟ್ ಘೋಷಣೆ ದಿನಾಂಕ ಮುಂದಕ್ಕೆ ಹೋಗಿರುವುದರಿಂದ ನನ್ನ ನಿರ್ಧಾರ ತೆಗೆದುಕೊಳ್ಳುವ ದಿನವನ್ನು ಮುಂದೂಡಿದ್ದೇನೆ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಮಾರ್ಚ್ 27ರೊಳಗೆ ಎಲ್ಲ ಸಮುದಾಯದ ನಾಯಕರ ಜೊತೆ ಚರ್ಚಿಸಿ, 27ರಂದು ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ಲಕ್ಷ್ಮಣ ಸವದಿ ಈ ಮೊದಲು ತಿಳಿಸಿದ್ದರು. ಆದರೆ ಬಿಜೆಪಿಯ ಟಿಕೆಟ್ ಘೋಷಣೆ ಸಮಯ ಮುಂದಕ್ಕೆ ಹೋಗಿದೆ. ಹಾಗಾಗಿ ನಾನು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅವರು …

Read More »

ಗೋಕಾಕ ನಗರದ ವಿವಿಧ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿದ C.M. ಬೊಮ್ಮಾಯಿ:

ಬೆಳಗಾವಿ :  ಗೋಕಾಕ ನಗರ ಹಾಗೂ ಲೋಳಸೂರ ಗ್ರಾಮವನ್ನು ಪ್ರವಾಹದಿಂದ ತಡೆಗಟ್ಟುವ ಸಲುವಾಗಿ ಘಟಪ್ರಭ ನದಿಗೆ ತಡೆಗೋಡೆ ನಿರ್ಮಿಸುವ ಯೋಜನೆ ಹಾಗೂ ಘಟ್ಟಿ ಬಸವಣ್ಣ ಡ್ಯಾಂ ನಿರ್ಮಿಸುವುದು, ಕುಡಿಯುವ ನೀರು ಸರಬರಾಜು ಯೋಜನೆ ಸೇರಿದಂತೆ ಗೋಕಾಕ, ಅಥಣಿ, ಅರಭಾವಿ ಕ್ಷೇತ್ರದ ವಿವಿಧ ಕಾಮಗಾರಿಗಳ ಶಿಲಾನ್ಯಾಸಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾವರಣಗೊಳಿಸಿದರು. ಗೋಕಾಕ ನಗರದ ಚಿಕ್ಕೊಳ್ಳಿ ಸೇತುವೆ ಬಳಿ ಮಂಗಳವಾರ (ಮಾ.28) ವಿವಿಧ ಕಾಮಗಾರಿಗಳ ಪೂಮಿ ಪೂಜೆ ಹಾಗೂ ಶಿಲಾನ್ಯಾಸಗಳನ್ನು ಅವರು …

Read More »