Breaking News

ಜಿಲ್ಲೆ

ಬೆಳಗಾವಿ| ಬಸ್‌- ಬೈಕ್‌ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಾರೂಗೇರಿ ಹೊರವಲಯದಲ್ಲಿ ಶನಿವಾರ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್‌ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಯಬಾಗ ತಾಲ್ಲೂಕಿನ ಹಾಲಶಿರಗೂರು ಗ್ರಾಮದವರಾದ ಭಗವಂತ ಶಿವರಾಯ ಕಾಂಬಳೆ (45), ವಿಶ್ವನಾಥ ಎಸ್‌. ಕಾಂಬಳೆ (24) ಹಾಗೂ ಕುಮಾರ ಬಾಳಪ್ಪ ಕಾಂಬಳೆ (35) ಮೃತಪಟ್ಟವರು. ಮೂವರೂ ಸಹೋದರ ಸಂಬಂಧಿಗಳಾಗಿದ್ದಾರೆ. ಸರ್ಕಾರಿ ಬಸ್‌ ಹಾಲಗಿ ಕಡೆಯಿಂದ ಸಾಂಗ್ಲಿ ಕಡೆಗೆ ಹೊರಟಿತ್ತು. ಮೂವರೂ ಸಹೋದರ …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ೧೧ ನೇ ಘಟಿಕೋತ್ಸವ ಸೋಮವಾರ (ಮಾ.೨೦) ರಂದು

ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ೧೧ ನೇ ಘಟಿಕೋತ್ಸವ ಸೋಮವಾರ (ಮಾ.೨೦) ರಂದು ಮುಂಜಾನೆ ೧೧ ಗಂಟೆಗೆ ಸುವರ್ಣ ವಿಧಾನ ಸೌಧದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಘಟಿಕೋತ್ಸವದಲ್ಲಿ ಒಟ್ಟು ೪೭,೧೮೫ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಪದವಿಯನ್ನು ಪಡೆದುಕೊಳ್ಳಲಿದ್ದಾರೆ. ಸ್ನಾತಕೋತ್ತರ ಹಾಗೂ ಸ್ನಾತಕ ವಿದ್ಯಾರ್ಥಿಗಳಿಗೆ ೧೧ ಸ್ವರ್ಣ ಪದಕಗಳನ್ನು ನೀಡಲಾಗುವುದು. ೨೭ ಪಿಹೆಚ್.ಡಿ. ಪದವಿಗಳನ್ನು ಪ್ರದಾನ ಮಾಡಲಾಗುವುದು ಎಂದು ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೋ. ರಾಮಚಂದ್ರಗೌಡ ಅವರು ತಿಳಿಸಿದರು. …

Read More »

20ರಂದು ಕಾಂಗ್ರೆಸ್ ರ್‍ಯಾಲಿ | ಯುವಜನರಿಗೆ ಸಂದೇಶ ನೀಡಲಿರುವ ರಾಹುಲ್ ಗಾಂಧಿ: ಸತೀಶ

ಬೆಳಗಾವಿ: ‘ಕಾಂಗ್ರೆಸ್‌ನಿಂದ ಈಗಾಗಲೇ ರೈತರ ಹಾಗೂ ಮಹಿಳಾ ಸಮಾವೇಶ ಮಾಡಲಾಗಿದೆ. ಈಗ ಯುವಜನರ ಸಮಾವೇಶಕ್ಕೆ ಬೆಳಗಾವಿಯಲ್ಲಿ ಸಿದ್ಧತೆ ಮಾಡಿದ್ದೇವೆ. ನಾಯಕ ರಾಹುಲ್‌ ಗಾಂಧಿ ಅವರು ರಾಜ್ಯದ ಯುವಜನತೆಗೆ ಚುನಾವಣಾ ಸಂದೇಶ ನೀಡಲಿದ್ದಾರೆ’ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು.   ಮಾರ್ಚ್‌ 20ರಂದು ನಗರದಲ್ಲಿ ಆಯೋಜಿಸಿದ ಕಾಂಗ್ರೆಸ್‌ ಯುವ ಕ್ರಾಂತಿ ರ್‍ಯಾಲಿಯ ಸಿದ್ಧತೆ ಪಡಿಶೀಲಿಸಿ ಮಾತನಾಡಿದ ಅವರು, ‘ವೇದಿಕೆಯಲ್ಲಿ 2 ಲಕ್ಷ ಕುರ್ಚಿಗಳನ್ನು ಹಾಕಿದ್ದೇವೆ. ರಾಜ್ಯದ ಮೂಲೆಮೂಲೆಯಿಂದ ಅಪಾರ ಸಂಖ್ಯೆಯ …

Read More »

ಚುನಾವಣಾ ಅಕ್ರಮ ತಡೆಗೆ 24X7 ಹದ್ದಿನ ಕಣ್ಣು: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ: ‘ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮೇಲೆ ಕಣ್ಣಿಡಲು ಹಾಗೂ ಅಕ್ರಮ ಚಟುವಟಿಕೆ ತಡೆಯಲು ತಂಡಗಳು 24X7 ಕಾರ್ಯನಿರ್ವಹಿಸಲಿವೆ. ಇದಕ್ಕಾಗಿ ಪಾಳಿಯಲ್ಲಿ ಕೆಲಸ ಮಾಡು ಮೂರು ತಂಡ ರಚನೆ ಮಾಡಲಾಗಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.   ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಶನಿವಾರ ಚುನಾವಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಮತ್ತು ವಿವಿಧ ತಂಡಗಳ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ‘ಯಾವುದೇ ರೀತಿಯ ಅಕ್ರಮ ಅಥವಾ …

Read More »

ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ನ ಇಬ್ಬರು ಅಧಿಕಾರಿಗಳು

ಬೆಂಗಳೂರು: ಪವರ್ ಸಪ್ಲೈ ಅಪ್ ಗ್ರೇಡ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಬೆಸ್ಕಾಂ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಂಧಿತ ಅಧಿಕಾರಿಗಳನ್ನು ಸುಮನಹಳ್ಳಿ ಬೆಸ್ಕಾಂ ಎಇಇ ಭಾರತಿ ಹಾಗೂ ಎಇ ಕುನಾಲ್ ಕುಮಾರ್ ಎಂದು ಗುರುತಿಸಲಾಗಿದೆ. ಪವರ್ ಸಪ್ಲೈಗಾಗಿ ಅನಂತರಾಜು ಎಂಬುವವರು ಅರ್ಜಿ ಸಲ್ಲಿಸಿದ್ದರು. ಕೆಲಸ ಮಾಡಿಕೊಡಲು 25 ಸಾವಿರ ರೂಪಾಯಿ ಹಣ ನೀಡುವಂತೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅನಂತರಾಜು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನನ್ವಯ ಲೋಕಾಯುಕ್ತ …

Read More »

ಮಳೆ: ಮೈಸೂರು ಬೆಂಗಳೂರು ಹೆದ್ದಾರಿಯ ಬಸವನಪುರ ಅಂಡರ್ ಪಾಸ್‌ನಲ್ಲಿ ನಿಂತ ನೀರು

ರಾಮನಗರ: ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ ಉತ್ತಮ ಮಳೆ ಸುರಿದಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಬಸವನಪುರ ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಂತು ಪರದಾಡುವಂತೆ ಆಯಿತು. ಈ ಸಂದರ್ಭ ಲಾರಿಯೊಂದು ಡಿಕ್ಕಿ ಹೊಡೆದು ಕಾರ್ ಜಖಂ ಆಯಿತು.   ಮಳೆಯಿಂದಾಗಿ ಹೊಲಗಳಲ್ಲಿ ನೀರು ನಿಂತಿದೆ. ಕಟಾವು ಹಂತಕ್ಕೆ‌ ಬಂದಿರುವ ಮಾವಿನ‌ ಬೆಳೆಗೂ ಮಳೆ ನೀರೆರೆದಿದೆ.

Read More »

ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ರೊಕ್ಕದಕಟ್ಟಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …

Read More »

ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷ ಪೂರೈಕೆ- ಸಾಧನೆ ಪಟ್ಟಿ ಬಿಡುಗಡೆ ಮಾಡಿದ ಲಖನ್ ಜಾರಕಿಹೋಳಿ

    ಗೋಕಾಕ್- ಲಖನ್ ಜಾರಕಿಹೋಳಿ ಅವರು ವಿಧಾನಪರಿಷತ್ ಸದಸ್ಯರಾಗಿ ಒಂದು ವರ್ಷದ ಅವಧಿ ಪೂರೈಸಿದ್ದಾರೆ. ಈ ಸಂದರ್ಭದಲ್ಲಿ ಅವರು ಜಿಲ್ಲೆಯ ಬೇರೆ ಬೇರೆ ಕಡೆಗಳಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿ ಹಾಗೂ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಕೈಗೊಂಡ ಅಭಿವೃದ್ಧಿ ಕಮಗಾರಿಗಳ ವಿವರ ಬಿಡುಗಡೆ ಮಾಡಿದ್ದಾರೆ   ವಿಧಾನಪರಿಷತ್ ಸದಸ್ಯರಾದ ನಂತರ ಬಿಡುಗಡೆಯಾದ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಒಟ್ಟು 2ಕೋಟಿ ರೂಪಾಯಿ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 1ಕೋಟಿ ರೂಪಾಯಿ …

Read More »

BJP ಟಿಕೆಟ್‌ ಆಕಾಂಕ್ಷಿ ನಾಗೇಶ ಮನ್ನೋಳಕರ ಹಾಗೂ ನಾಗೇಂದ್ರ ನಾಯಿಕ ವಿರುದ್ಧ ಶುಕ್ರವಾರ F,I,R, ದಾಖಲ

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಂತಿ ಬಸ್ತವಾಡ ಗ್ರಾಮದಲ್ಲಿ ಮಾರ್ಚ್‌ 15ರಂದು ಮಾಂಸಾಹಾರ ಊಟದ ವ್ಯವಸ್ಥೆ ಮಾಡಿದ ಆರೋಪದ ಮೇರೆಗೆ, ಬಿಜೆಪಿ ಟಿಕೆಟ್‌ ಆಕಾಂಕ್ಷಿ ನಾಗೇಶ ಮನ್ನೋಳಕರ ಹಾಗೂ ನಾಗೇಂದ್ರ ಬಾಳಪ್ಪ ನಾಯಿಕ ಅವರ ವಿರುದ್ಧ ಶುಕ್ರವಾರ ಎಫ್‌ಐಆರ್‌ ದಾಖಲಿಸಲಾಗಿದೆ.   ಮತದಾರರಿಗೆ ಆಮಿಷ ಒಡ್ಡುವ ಉದ್ದೇಶದಿಂದ ಅಂದು ರಾತ್ರಿ 9ಕ್ಕೆ ಸುಮಾರು 3,000 ಮಂದಿಗೆ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಚುನಾವಣಾ …

Read More »

ಯಲ್ಲಮ್ಮನಗುಡ್ಡದಲ್ಲಿಎರಡೇ ತಿಂಗಳಲ್ಲಿ ₹1.81 ಕೋಟಿ ಕಾಣಿಕೆ ಸಂಗ್ರಹ

ಯಲ್ಲಮ್ಮನಗುಡ್ಡ :ಯಲ್ಲಮ್ಮನಗುಡ್ಡದಲ್ಲಿ ಮಾರ್ಚ್‌ 13ರಿಂದ 17ರವರೆಗೆ ಹುಂಡಿ ಎಣಿಕೆ ಮಾಡಲಾಗಿದ್ದು, ₹1.81 ಕೋಟಿಗಿಂತ ಅಧಿಕ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. 2023ರ ಜನವರಿ ಹಾಗೂ ಫೆಬ್ರುವರಿಯಲ್ಲಿ ನಡೆದ ಬನದ ಹುಣ್ಣಿಮೆ ಮತ್ತು ಭಾರತ ಹುಣ್ಣಿಮೆ ಜಾತ್ರೆಗೆ ಬಂದಿದ್ದ ಭಕ್ತರು, ಯಲ್ಲಮ್ಮ ದೇವಿ ದೇವಸ್ಥಾನ ಹುಂಡಿಯಲ್ಲಿ ಹಾಕಿದ್ದ ₹1.66 ಕೋಟಿ ನಗದು, ₹12.83 ಲಕ್ಷ ಮೌಲ್ಯದ 235 ಗ್ರಾಂ ಚಿನ್ನಾಭರಣ ಹಾಗೂ ₹2.46 ಲಕ್ಷ ಮೌಲ್ಯದ 3.7 ಕೆ.ಜಿ ಬೆಳ್ಳಿ ಆಭರಣ ಸಂಗ್ರಹವಾಗಿವೆ. …

Read More »