ಬೆಳಗಾವಿ: ಇಲ್ಲಿನ ಶಹಾಪುರದ ಛತ್ರಪತಿ ಶಿವಾಜಿ ಉದ್ಯಾನವನ ಬಳಿ ಮಾ.16ರಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ಕನಸಿನ ಕೂಸಾದ ‘ಶಿವಚರಿತ್ರ’ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಂಜೆ 5.30ಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಲಿದ್ದಾರೆ. ಇನ್ನೂ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
Read More »ನಮ್ಮ ಪಕ್ಷಕ್ಕೆ ಬರ್ತಿಯೋ ಇಲ್ಲ ಸಿಡಿ ಬಿಡಲೋ ಎಂದು ಡಿ.ಕೆ.ಶಿ. ಸಚಿವರೊಬ್ಬರನ್ನು ಬೆದರಿಸುತ್ತಿದ್ದಾರೆ:. ರಮೇಶ್ ಜಾರಕಿಹೊಳಿ
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದು, ಮಂತ್ರಿಯೋರ್ವರಿಗೆ ಡಿ.ಕೆ.ಶಿ ಕಾಂಗ್ರೆಸ್ ಸೇರ್ತಿಯಾ ಇಲ್ಲ ಸಿಡಿ ಬಿಡುಗಡೆ ಮಾಡ್ಲಾ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಡಿ.ಕೆ.ಶಿವಕುಮಾರ್ ಸಚಿವರೊಬ್ಬರನ್ನು ಬೆದರಿಸುತ್ತಿದ್ದಾರೆ. ನಮ್ಮ ಪಕ್ಷಕ್ಕೆ ಬರ್ತಿಯೋ ಇಲ್ಲ ಸಿಡಿ ಬಿಡಲೋ ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸುವ ಮೂಲಕ ರಾಜ್ಯದಲ್ಲಿ ಮತ್ತೆ ಸಿಡಿ ರಾಜಕಾರಣ ಪ್ರಸ್ತಾಪಿಸಿದ್ದಾರೆ. ನಾವು ಯುದ್ಧ ಮಾಡುವವರು ಹೊರತು ಷಡ್ಯಂತ್ರ ಮಾಡುವವರಲ್ಲ. …
Read More »ಚುನಾವಣೆಗೆ ಸಿದ್ಧತೆ; ಈ ಬಾರಿ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ
ಬೆಂಗಳೂರು: ಕರ್ನಾಟಕದಲ್ಲಿ ಸುಮಾರು 17,000 ಮಂದಿ ಶತಾಯುಷಿಗಳಿದ್ದು, ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮನೆಯಲ್ಲಿಯೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಚುನಾವಣಾ ಆಯೋಗ ಶನಿವಾರ (ಮಾರ್ಚ್ 11) ಘೋಷಿಸಿದೆ. ರಾಜ್ಯದಲ್ಲಿ ಈ ಬಾರಿ ಯುವ ಮತದಾರರ ಸಂಖ್ಯೆಯೂ ಹೆಚ್ಚಳವಾಗಿದೆ ಎಂದು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಸಿದ್ಧತೆ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತ ಅನುಪ್ …
Read More »ಹಾಲಿನ ಕೊರತೆ: ಹೋಟೆಲ್‌ಗಳಿಗೆ ತೊಂದರೆ. ರಾಜ್ಯಗಳಿಗೆ ಹಾಲು ಸರಬರಾಜು ಸ್ಥಗಿತಕ್ಕೆ ಆಗ್ರಹ
ಬೆಂಗಳೂರು: ಹಾಲಿನ ಬೇಡಿಕೆ ಹೆಚ್ಚಾಗಿರುವುದರಿಂದ ಹೊರರಾಜ್ಯಗಳಿಗೆ ಸರಬರಾಜು ಮಾಡುವುದನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಬೃಹತ್ ಬೆಂಗಳೂರು ಹೋಟೆಲುಗಳ ಸಂಘ ಇದೀಗ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್)ಕ್ಕೆ ಮನವಿ ಮಾಡಿದೆ. ಈ ಬಗ್ಗೆ ಕೆಎಂಎಫ್ನ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘದ ಅಧ್ಯಕ್ಷ ಪಿ.ಸಿ.ರಾವ್, ಇತ್ತೀಚೆಗೆ ನಂದಿನಿ ಹಾಲು ಮತ್ತು ನಂದಿನಿ ಹಾಲಿನ ಉತ್ಪನ್ನಗಳ ಕೊರತೆ ಬಹಳಷ್ಟು ಉಂಟಾಗಿದೆ. ಬೆಂಗಳೂರಿನ ಹೋಟೆಲ್‌ಗಳಲ್ಲಿ ಹೆಚ್ಚಾಗಿ ನಂದಿನಿ ಹಾಲು …
Read More »ಮೋದಿಯೇ ದಶಪಥ ಹೆದ್ದಾರಿಯ ರೂವಾರಿ: ಬೊಮ್ಮಾಯಿ
ಬೆಂಗಳೂರು: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಯೋಜನೆಯ ಸಂಪೂರ್ಣ ರೂವಾರಿ ಪ್ರಧಾನಿ ನರೇಂದ್ರ ಮೋದಿ. ಆದರೆ, ವಿರೋಧ ಪಕ್ಷಗಳು ಅನಗತ್ಯವಾಗಿ ಯೋಜನೆಯ ಹೆಸರಿನಲ್ಲಿ ಪ್ರಚಾರ ಪಡೆಯಲು ಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘2008ರಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮೂಲಕ ಈ ಮಾರ್ಗದಲ್ಲಿ ಹೆದ್ದಾರಿ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ, ಯಾವ ಪ್ರಗತಿಯೂ ಆಗಿರಲಿಲ್ಲ. 2014ರಲ್ಲಿ ಕೇಂದ್ರ ಸರ್ಕಾರವು …
Read More »ಪ್ರಜಾಧ್ವನಿ ಯಾತ್ರೆ15ರಂದು:ಸತೀಶ ಜಾರಕಿಹೊಳಿ
ಗೋಕಾಕ (ಬೆಳಗಾವಿ ಜಿಲ್ಲೆ): ‘ನಾನು ಪಕ್ಷದ ಸಿದ್ಧಾಂತರ ತಳಹದಿ ಮೇಲೆ ಚುನಾವಣೆಗೆ ಹೋಗುತ್ತೇನೆ ಹೊರತು; ಕೌಟುಂಬಿಕ ವಿಚಾರಗಳನ್ನು ಅನುಸರಿಸುವುದಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ‘ಯಮಕನಮರಡಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರಮೇಶ ಜಾರಕಿಹೊಳಿ ಅವರನ್ನು ಕಣಕ್ಕಿಳಿಸುವ ಯತ್ನ ನಡೆದಿದೆ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳೇ ನನಗೆ ಮುಖ್ಯ. ಯಮಕನಮರಡಿ, ಗೋಕಾಕ ಕ್ಷೇತ್ರದಲ್ಲಿ ಯಾರು ಯಾರ ವಿರುದ್ಧ ಸ್ಪರ್ಧಿಸುತ್ತಾರೆ, ನನ್ನ ವಿರುದ್ಧ ಯಾರು …
Read More »ಮಾರ್ವಲಸ್ ಬೆಳಗಾಂ ಅಡ್ಮಿನ್ ರಾಖೇಶ್ ನಂದಗಡಕರ್&ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವಿಶಾಲ ಕಂಟ್ರಿ ಸೈಡ್ ಹೊಟೆಲ್ ಸಿಬ್ಬಂದಿ
ಬೆಳಗಾವಿ: ಊಟ ಮಾಡಲು ಹೋದ ತಮ್ಮ ತಂಡದ ಮೇಲೆ ಹೊಟೆಲ್ ಸಿಬ್ಬಂದಿ ತೀವ್ರತರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಬೆಳಗಾವಿಯ ಸೋಶಿಯಲ್ ಮೀಡಿಯಾ ಮಾರ್ವಲಸ್ ಬೆಳಗಾಂ ಅಡ್ಮಿನ್ ರಾಖೇಶ್ ನಂದಗಡಕರ್ ಪೊಲೀಸ್ ದೂರು ದಾಖಲಿಸಿದ್ದಾರೆ. ಸುಳಗಾದ ವಿಶಾಲ ಕಂಟ್ರಿ ಸೈಡ್ ಎನ್ನುವ ಹೊಟೆಲ್ ಗೆ ಮಾರ್ಚ್ 9ರ ರಾತ್ರಿ ತಾವು ಸುಮಾರು 25 ಜನರು ಊಟಕ್ಕೆ ತೆರಳಿದ್ದಾಗಿಯೂ, ಆ ವೇಳೆ ಅಲ್ಲಿನ ಸಿಬ್ಬಂದಿ ಅತ್ಯಂತ ಕೆಟ್ಟದಾಗಿ ನಡೆದುಕೊಂಡಿದ್ದಲ್ಲದೆ, ಜಗಳ ಮಾಡಿ ಹೊಟೆಲ್ ಪಾತ್ರೆಗಳಿಂದ …
Read More »ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ (60) ಹೃದಯಾಘಾತದಿಂದನಿಧನ
ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ (60) ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ. ನಗದಲ್ಲಿನ ಅವರ ಮನೆಯಲ್ಲಿ ಶುಕ್ರವಾರ ತಡರಾತ್ರಿಯಲ್ಲಿ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ಮೂಲಗಳು ತಿಳಿಸಿವೆ. 1983 ರಲ್ಲಿ ಕಾಂಗ್ರೆಸ್ ಸೇರುವ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶಿಸಿದ್ದ ಅವರು, ಸಂತೇಮರಹಳ್ಳಿ ಕ್ಷೇತ್ರದಿಂದ ಒಂದು ಶಾಸಕರಾಗಿ ಆಯ್ಕೆಯಾಗಿದ್ದರು. 2004 ರಲ್ಲಿ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು 1 ಮತದ ಅಂತರದಿಂದ ಗೆದ್ದಿದ್ದರು. 2008 ರಲ್ಲಿ ಎರಡನೇ ಬಾರಿ ಕೊಳ್ಳೇಗಾಲ …
Read More »ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಹಿರೇಬೂದನೂರ ಗ್ರಾಮದಲ್ಲಿ ಶ್ರೀ ಡೆಂಗಿ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …
Read More »3 ಪಟ್ಟು ಅಧಿಕ ದರಕ್ಕೆ ಕಸ ಗುಡಿಸುವ ಯಂತ್ರ ಖರೀದಿ!
ಬೆಂಗಳೂರು: ಶುಭ್ರ ಬೆಂಗಳೂರು ಯೋಜನೆ ಅಡಿಯಲ್ಲಿ ಬಿಬಿಎಂಪಿ ತಲಾ 2 ಕೋಟಿ ರೂ. ಮೊತ್ತದ 30 ಮೆಕ್ಯಾನಿಕಲ್ ಸ್ವೀಪಿಂಗ್ ವಾಹನ ಖರೀದಿಗೆ ಮುಂದಾಗಿದೆ. ಆದರೆ, ಯಂತ್ರಗಳಿಗೆ ನಿಗದಿ ಮಾಡಿರುವ ಮೊತ್ತದ ಬಗ್ಗೆ ಇದೀಗ ಅಪಸ್ವರ ಎದ್ದಿದೆ. ನಗರದಲ್ಲಿ 587.58 ಕಿ.ಮೀ. ಉದ್ದದ 156 ಮುಖ್ಯ ರಸ್ತೆಗಳು ಹಾಗೂ 735.50 ಕಿ.ಮೀ. ಉದ್ದದ 316 ಉಪಮುಖ್ಯ ರಸ್ತೆಗಳಿವೆ. ಅವುಗಳಲ್ಲಿ ಶೇಖರಣೆಯಾಗುವ ದೂಳನ್ನು ಗುಡಿಸಿ ಸ್ವತ್ಛಗೊಳಿಸುವ ಸಲುವಾಗಿ ಮೆಕ್ಯಾನಿಕಲ್ ಸ್ವೀಪಿಂಗ್ ಯಂತ್ರಗಳನ್ನು ಖರೀದಿಸಲಾಗುತ್ತಿದೆ. ಕಳೆದ …
Read More »
Laxmi News 24×7