ಬೆಳಗಾವಿ: ಈಗಾಗಲೇ ಎಲ್ಲ ಚುನಾವಣೆಯಲ್ಲಿಯೂ ಸೋತು ಸುಣ್ಣವಾಗಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ಬಾಲ ಬಿಚ್ಚಿದ್ದು, ಕರ್ನಾಟಕದಲ್ಲಿ ಬೇಳೆ ಬೇಯುತ್ತಿಲ್ಲ ಎಂದು ಮುಂಬೈನಲ್ಲಿ ಮಹಾರಾಷ್ಟ್ರ ಸರ್ಕಾರದ ಬಾಗಿಲು ತಟ್ಟಿದೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಬೇಕೆಂಬ ಹಠಕ್ಕೆ ಬಿದ್ದಿರುವ ಎಂಇಎಸ್ ಗಡಿ ವಿವಾದವನ್ನೇ ಅಸ್ತ್ರವಾಗಿ ಇಟ್ಟುಕೊಂಡು ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಮಂಗಳವಾರ ಆಂದೋಲನ ನಡೆಸಿದೆ. ಬೆಳಗಾವಿಯಲ್ಲಿ ನಾಲ್ಕು ಸ್ಥಾನ ಗೆಲ್ಲಲು ಪ್ಲಾನ್ ಮಾಡಿಕೊಂಡು …
Read More »ಮೋದಿ ಸಾವು ಯಾರೂ ಬಯಸಿಲ್ಲ ಸಾವಿಗೆ ಕಾಂಗ್ರೆಸ್ ಜಪ ಮಾಡುತ್ತಿದೆ ಎಂಬುದು ದೊಡ್ಡ ಸುಳ್ಳು: ಸಿದ್ದರಾಮಯ್ಯ
ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಅವರ ಸಾವಿಗೆ ಕಾಂಗ್ರೆಸ್ ಜಪ ಮಾಡುತ್ತಿದೆ ಎಂಬುದು ದೊಡ್ಡ ಸುಳ್ಳು. ಈ ರೀತಿ ಯಾರೂ ಎಲ್ಲಿಯೂ ಹೇಳಿಲ್ಲ. ತಮ್ಮಷ್ಟಕ್ಕೆ ತಾವೇ ಇಂಥ ಭಾವುಕ ಸನ್ನಿವೇಶ ಹುಟ್ಟುಹಾಕುವುದು ಅವರಿಗೆ ಕರಗತ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ‘ಸಿದ್ದರಾಮಯ್ಯನನ್ನು ಮುಗಿಸಿಬಿಡಿ ಎಂದು ಅಶ್ವತ್ಥನಾರಾಯಣ ಬಹಿರಂಗವಾಗಿ ಹೇಳಿದರು. ನಮ್ಮ ಭಾವನೆಗಳು ಅವರಷ್ಟು ಕೆಟ್ಟದಾಗಿಲ್ಲ. ಪ್ರಧಾನಿ ಆರೋಗ್ಯವಾಗಿರಲಿ, ಹೆಚ್ಚು ಕಾಲ ಬದುಕಲಿ’ ಎಂದು ಅವರು ನಗರದಲ್ಲಿ ಬುಧವಾರ ಮಾಧ್ಯಮದವರ …
Read More »ಮಲ್ಲಮ್ಮನ ಪ್ರತಿಮೆ ಲೋಕಾರ್ಪಣೆ ನಿರ್ಲಕ್ಷ್ಯ, ತೀವ್ರ ಪ್ರತಿಭಟನೆ
ಬೈಲಹೊಂಗಲ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದ ವೃತ್ತದಲ್ಲಿ ಪ್ರತಿಷ್ಠಾಪಿಸಿದ ಅಶ್ವಾರೂಢ ಕಂಚಿನ ಪ್ರತಿಮೆ ಅನಾವರಣ ಸಂಬಂಧವಾಗಿ ಮಂಗಳವಾರ ರಾತ್ರಿ ಗ್ರಾಮದಲ್ಲಿ ತೀವ್ರ ವಾಗ್ವಾದ ನಡೆಯಿತು. ಬೆಳವಡಿ ಮಲ್ಲಮ್ಮನ ಉತ್ಸವ ಮೆರವಣಿಗೆ ಬೆಳಿಗ್ಗೆಯೇ ನಡೆಯಿತು. ಇದಕ್ಕೂ ಮುನ್ನ ಪ್ರತಿಮೆ ಅನಾವರಣ ಕಾರ್ಯಕ್ರಮ ಇತ್ತು. ಆದರೆ, ಜಿಲ್ಲಾ ಉಸ್ತುವಾರಿ ಸಚಿವರೂ ಸೇರಿದಂತೆ ಯಾವೊಬ್ಬ ಜನಪ್ರತಿನಿಧಿ, ಅಧಿಕಾರಿಯೂ ಬರಲಿಲ್ಲ. ಇದರಿಂದ ಅನಾವರಣ ಕಾರ್ಯಕ್ರಮವನ್ನು ಮುಂದಕ್ಕೆ ಹಾಕುತ್ತ ಬರಲಾಯಿತು. ರಾತ್ರಿ 8ರ ನಂತರ ಸಂಸದೆ …
Read More »ಬೆಳಗಾವಿ: ಮಾರ್ಚ್ 1ರಂದು ಸಿದ್ದರಾಮಯ್ಯ ‘ಪ್ರಜಾಧ್ವನಿ’ ಯಾತ್ರೆ
ಬೆಳಗಾವಿ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ‘ಪ್ರಜಾಧ್ವನಿ’ ಯಾತ್ರೆಯ ಅಂಗವಾಗಿ ಮಾರ್ಚ್ 1ರಂದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪಂತಬಾಳೆಕುದ್ರಿಯಲ್ಲಿ ಸಮಾವೇಶ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಶಿಂಧೋಳಿಯಿಂದ ಮೆರವಣಿಗೆ ನಡೆಯಲಿದೆ. 5 ಸಾವಿರ ಬೈಕುಗಳ ಸಮೇತ ಯುವಜನರು ಮೆರವಣಿಗೆಯಲ್ಲಿ ಪಾಲ್ಗೊಳ್ಳುವರು. ಅಲ್ಲಿಂದ ಪಂತಬಾಳೆಕುಂದ್ರಿಯ ವೈರ್‌ಲೆಸ್ ಮೈದಾನಕ್ಕೆ ತೆರಳಿ ಅಲ್ಲಿ ಸಮಾವೇಶ ನಡೆಸಲಾಗುವುದು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, …
Read More »ಶಿರಸಿ: ಡೀಲ್ ನಿಮ್ದು, ಕಮಿಷನ್ ನಮ್ದು- ಆಹಾರದ ಕಿಟ್ ಸ್ಕ್ಯಾಮ್ ಆರೋಪದ ಪೋಸ್ಟರ್ ವೈರಲ್
ಶಿರಸಿ: ಮಂಗಳವಾರ ಫೆ.28 ರಂದು ತಾಲೂಕಿನ ಬನವಾಸಿಗೆ ಕದಂಬೋತ್ಸವ ಉದ್ಘಾಟನೆಗೆ ಆಗಮಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸ್ಥಳೀಯ ಶಾಸಕ, ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಅಣಕಿಸುವ ಪೇ ಸಿ.ಎಂ. ಪೋಸ್ಟರ್ ಸೋಮವಾರ ರಾತ್ರಿ ಅಂಟಿಸಲಾಗಿದ್ದು, ಸಖತ್ ವೈರಲ್ ಆಗಿದೆ. ರಾಜ್ಯದ ಹಲವೆಡೆ ನಡೆಯುತ್ತಿದ್ದ ಪೇ ಸಿಎಂ ಪೋಸ್ಟರ್ ಅಭಿಯಾನ ಈಗ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಕ್ಷೇತ್ರಕ್ಕೂ ಕಾಲಿಟ್ಟಿದ್ದು, ಪೇ ಸಿಎಂ ಎಂದು ಹೆಬ್ಬಾರ ಅವರ ಪೊಟೋ ಹಾಕಲಾಗಿದೆ. …
Read More »ಸರ್ಕಾರಿ ನೌಕರರಿಗೆ ಬಿಜೆಪಿ ನೀಡಿದಷ್ಟು ಸೌಲಭ್ಯವನ್ನು ಬೇರೆ ಯಾರೂ ನೀಡಿಲ್ಲ: ಈಶ್ವರಪ್ಪ
ಮೈಸೂರು: ಯಡಿಯೂರಪ್ಪ- ಬಸವರಾಜ ಬೊಮ್ಮಾಯಿ ಅಣ್ಣ ತಮ್ಮನಂತೆ ಇದ್ದಾರೆ. ಷಡಕ್ಷರಿಯನ್ನು ಯಡಿಯೂರಪ್ಪ ಎತ್ತಿಕಟ್ಟಿದ್ದಾರೆ ಎಂದು ಹೇಳುವುದು ಕುತಂತ್ರ ಎಂದು ಕಾಂಗ್ರೆಸ್ ಟ್ವೀಟ್ ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದರು. ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವೆ ಕಿತ್ತಾಟವಿದೆ. ಅದೇ ರೀತಿ ಬಿಜೆಪಿಯವರೂ ಕಿತ್ತಾಡಲಿ ಎಂದು ಈ ರೀತಿ ಹೇಳುತ್ತಿದ್ದಾರೆ. ಸರ್ಕಾರಿ ನೌಕರರಿಗೆ ಬಿಜೆಪಿಯವರು ನೀಡಿದಷ್ಟು ಸೌಲಭ್ಯವನ್ನು ಬೇರೆ ಯಾರೂ ನೀಡಲಿಲ್ಲ. ಹೀಗಿದ್ದರೂ ಮುಷ್ಕರ ಮಾಡುತ್ತೇವೆ ಎಂದರೆ …
Read More »ನಾಳೆಯಿಂದಲೇ ರಾಜ್ಯಾದ್ಯಂತ ಪ್ರವಾಸ: B.S.Y.
ಶಿವಮೊಗ್ಗ: ನಾನು ಚುನಾವಣೆಗೆ ನಿಲ್ಲುವುದಿಲ್ಲವೆಂದು ಹೇಳಿದ್ದೇನೆ. ಆದರೆ, ರಾಜ್ಯದ ಉದ್ದಗಲಕ್ಕೂ ಓಡಾಡಿ ಪಕ್ಷ ಬಲಪಡಿಸಿ ಅಧಿಕಾರಕ್ಕೆ ತರುವುದೇ ನನ್ನ ಗುರಿ. ಆ ದಿಕ್ಕಿನಲ್ಲಿ ನಾಳೆಯಿಂದಲೇ ನಾನು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಾರು ಕೂಡ ಯಡಿಯೂರಪ್ಪ ಮನೆಯಲ್ಲಿ ಕುಳಿತಿದ್ದಾನೆಂದು ಭಾವಿಸುವುದು ಬೇಡ. ನನ್ನ ಕೈ ಕಾಲು ಗಟ್ಟಿ ಇರುವವರೆಗೂ ಪಕ್ಷ ಬಲಿಪಡಿಸಲು ನನ್ನ ಕೈಲಾದ ಕೆಲಸ ಮಾಡುತ್ತೇನೆ. …
Read More »ಚಿಕ್ಕೋಡಿ: ಆಲಿಸಿದ ಪಾಠ ಅರಿತು ಬಾಳಿರಿ
ಚಿಕ್ಕೋಡಿ: ‘ಸುಮಂಗಲಮ್ ಪಂಚಮಹಾಭೂತ ಲೋಕೋತ್ಸವ ಕೇವಲ ಉತ್ಸವವಾಗದೇ, ಇಲ್ಲಿ ಆಲಿಸಿದ, ವೀಕ್ಷಿಸಿದ ಎಲ್ಲ ಪಾಠವನ್ನು ಜೀವನದಲ್ಲಿ ಅಳವಡಿಸಿಕೊಂಡು ಪರಿಸರ ಸಮತೋಲನ ಕಾಪಾಡುವ ಮೂಲಕ ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರ ಉಳಿಸಬೇಕು’ ಎಂದು ಕೊಲ್ಹಾಪುರದ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಹೇಳಿದರು. ಮಠದಲ್ಲಿ ಭಾನುವಾರ ಉತ್ಸವದ ಸಮಾರೋಪದ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ‘ಮನುಷ್ಯನಿಗಿಂತ ಮರೆಗುಳಿತನ ಹೊಂದಿರುವ ಜೀವಿ ಇನ್ನೊಂದಿಲ್ಲ. ವಿನಾಶ ಕಾಲ ಸಮೀಪಿಸುತ್ತಿದೆ ಎಂಬುದು ಮನುಕುಲ …
Read More »ಬೆಳಗಾವಿಗರ ಪ್ರೀತಿ ಬಡ್ಡಿ ಸಮೇತ ವಾಪಸ್ : ಪ್ರಧಾನಿ ನರೇಂದ್ರ ಮೋದಿ
ಬೆಳಗಾವಿ: ‘ಬೆಳಗಾವಿ ಜನ ತೋರಿದ ಪ್ರೀತಿ, ಮಾಡಿದ ಆಶೀರ್ವಾದ ನನಗೆ ಸ್ಫೂರ್ತಿ ನೀಡಿದೆ. ಬೆಳಗಾವಿ ಕುಂದಾ, ಬೆಳಗಾವಿ ಮಂದಿ ಎರಡೂ ಬಹಳ ಸಿಹಿ. ನಿಮ್ಮ ಈ ಪ್ರೀತಿಯನ್ನು ಬಡ್ಡಿ ಸಮೇತ ವಾಪಸ್ ಕೊಡುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾನ ಮಾಡಿದರು. ನಗರದಲ್ಲಿ ಸೋಮವಾರ ₹2,240 ಕೋಟಿ ವೆಚ್ಚದ ರೈಲ್ವೆ ಕಾಮಗಾರಿ, ಜಲಜೀವನ್ ಮಿಷನ್ ಯೋಜನೆಗಳ ಉದ್ಘಾಟನೆ- ಶಂಕುಸ್ಥಾಪನೆ ನೆರವೇರಿಸಿ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ₹16 ಸಾವಿರ ಕೋಟಿಯನ್ನು …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರ ಈಗ ಇಡೀ ರಾಜ್ಯದ ಗಮನ ಸೆಳೆದಿದೆ.
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ರಾಜಕೀಯ ವೈರಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ನೇರವಾಗಿ ಅಖಾಡಕ್ಕೆ ಇಳಿದಿರುವ ಪರಿಣಾಮ ಬೆಳಗಾವಿ ಗ್ರಾಮೀಣ ಕ್ಷೇತ್ರ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ರಮೇಶ್ ಈ ಕ್ಷೇತ್ರದ ಅಭ್ಯರ್ಥಿಯಲ್ಲ. ಆದರೆ ಹೆಬ್ಟಾಳ್ಕರ್‌ಅವರನ್ನು ಸೋಲಿಸಲೇಬೇಕು ಎಂದು ಪಣ ತೊಟ್ಟಿರುವ ಕಾರಣ ಚುಣಾವಣ ಕಣ ರಣರಂಗವಾಗಿ ಬದಲಾಗಿದೆ. ಆರೋಪ-ಪ್ರತ್ಯಾರೋಪ ಪರಾಕಾಷ್ಠೆ ಮುಟ್ಟಿದೆ. ಕ್ಷೇತ್ರ ಪುನರ್ ವಿಂಗಡಣೆಯಿಂದ 2008ರಲ್ಲಿ ಉದಯವಾದ ಬೆಳಗಾವಿ ಗ್ರಾಮೀಣ ಕ್ಷೇತ್ರ …
Read More »
Laxmi News 24×7