ಬೆಳಗಾವಿ: ಪ್ರಧಾನಿ ಮೋದಿ ದೇಶವನ್ನು ಅಸಾಧ್ಯದಿಂದ ಸಾಧ್ಯದ ಕಡೆಗೆ, ಅನಿಶ್ಚಿತತೆಯಿಂದ ನಿಶ್ಚಿತತೆಯೆಡೆಗೆ ತೆಗೆದುಕೊಂಡು ಹೋಗಿದ್ದಾರೆ. ಸಂಶಯವನ್ನು ಸಂಕಲ್ಪ ಮಾಡಿದ್ದಾರೆ. ಸಂಕಲ್ಪವನ್ನು ಸಿದ್ಧಿ ಮಾಡಿ ತೋರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. ನಗರದ ಮಾಲಿನಿ ಸಿಟಿ ಮೈದಾನದಲ್ಲಿ ಸೋಮವಾರ ನಡೆದ 2,240 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿ, ಮೋದಿ ಆಸೆಯಂತೆ ನವ ಭಾರತ ಮತ್ತು ನವ ಕರ್ನಾಟಕ ನಿರ್ಮಾಣಕ್ಕೆ ನಾವು ಸಿದ್ಧರಾಗಿದ್ದೇವೆ. …
Read More »ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ
ಬೆಂಗಳೂರು: ವೇತನ ಭತ್ಯೆ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಮಾ.1ರಿಂದ ಅನಿರ್ಧಿಷ್ಟಾವಧಿಯ ಮುಷ್ಕರಕ್ಕೆ ಮುಂದಾಗಿದ್ದು, ಮುಷ್ಕರದ ವೇಳೆ ಉಪವಾಸ, ಧರಣಿ ಸತ್ಯಾಗ್ರಹ ಹಾಗೂ ಘೋಷಣೆ ಕೂಗುವುದನ್ನು ನಿರ್ಬಂಧಿಸಲಾಗಿದೆ. ಮುಷ್ಕರ ಯಶಸ್ವಿಗೊಳಿಸುವ ಸಂಬಂಧ ಸಂಘ ಸೋಮವಾರ ಮಾರ್ಗಸೂಚಿ ಪ್ರಕಟಿಸಿದೆ. ಶಾಂತಿಯುತ ಹೋರಾಟಕ್ಕೆ ಸೂಚನೆ ನೀಡಲಾಗಿದೆ. ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಯಾವುದೇ ಜನಪ್ರತಿನಿಧಿಗಳನ್ನು ಟೀಕಿಸದಂತೆ ತಾಕೀತು ಮಾಡಿದೆ. ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತುರ್ತು …
Read More »ಬೆಳಗಾವಿಯ ಕುಂದಾ ಮತ್ತು ಬೆಳಗಾವಿಯ ಜನರ ಪ್ರೀತಿ ಮರೆಯಲಾಗದ್ದು.: ಪ್ರಧಾನಿ ನರೇಂದ್ರ ಮೋದಿ
ಬೆಳಗಾವಿ:ಗೆ ಹೊಸ ಶಕ್ತಿ ನೀಡುವ ಯೋಜನೆಗಳನ್ನು ಜಾರಿಗೊಳಿಸಲಾಗಿದ್ದು,. ಇದು ಈ ಭಾಗದ ಕ್ಷಿಪ್ರಗತಿಯ ಬೆಳವಣಿಗೆಗೆ ಕಾರಣವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಬೆಳಗಾವಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ, ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು. ಬಸವೇಶ್ವರರನ್ನು ಸ್ಮರಿಸಿ ಮಾತನ್ನು ಆರಂಭಿಸಿದ ಪ್ರಧಾನಿ, ಬೆಳಗಾವಿಯ ಕುಂದಾ ಮತ್ತು ಬೆಳಗಾವಿಯ ಜನರ ಪ್ರೀತಿ ಮರೆಯಲಾಗದ್ದು. ಬೆಳಗಾವಿಯ ಬಂಧುಗಳಿಗೆ ನಮಸ್ಕಾರಗಳು ಎಂದು ಕನ್ನಡದಲ್ಲಿ ಹೇಳಿದರು. ಬೆಳಗಾವಿಯ ಜನರ ಪ್ರೀತಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದೂ ಅವರು …
Read More »ಧರ್ಮದಲ್ಲಿ ರಾಜಕೀಯ ಸಲ್ಲದು: ಸುಬುಧೇಂದ್ರ ಶ್ರೀ
ರಾಯಚೂರು: ರಾಜಕೀಯ ಕ್ಷೇತ್ರಕ್ಕೆ ಇಂಥವರೇ ಬರಬೇಕು ಎಂಬ ನಿಯಮವಿಲ್ಲ. ರಾಜಕೀಯದಲ್ಲಿ ಜನಪರ ಕಾಳಜಿ ಇರುವ ಧರ್ಮ ಬಂದರೆ ತಪ್ಪಿಲ್ಲ. ಆದರೆ ಧರ್ಮದಲ್ಲಿ ರಾಜಕೀಯ ಬರುವುದು ಸರಿಯಲ್ಲ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರತೀರ್ಥರು ಅಭಿಪ್ರಾಯಪಟ್ಟರು. ಮಂತ್ರಾಲಯದ ಶ್ರೀಮಠದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತನಾಡಿ, ರಾಜಕೀಯಕ್ಕೆ ಇಂಥವರೇ ಬರಬೇಕು, ಇಂಥವರು ಬರಬಾರದು ಎಂಬುದಿಲ್ಲ. ರಾಜಕೀಯಕ್ಕೆ ಬರುವ ವ್ಯಕ್ತಿಗಳು ಜನರ ಕಾಳಜಿ ಹೊಂದಿರಬೇಕು ಎಂದು ಹೇಳಿದ ರು. ಉತ್ತರ ಪ್ರದೇಶದಂತೆ ರಾಜ್ಯ ದಲ್ಲೂ ಬಿಜೆಪಿಯಿಂದ …
Read More »ಶಿವಮೊಗ್ಗದ ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ಶಿವಮೊಗ್ಗ: ಮಲೆನಾಡು ಭಾಗದ ಬಹುಕಾಲದ ಕನಸಾದ ಶಿವಮೊಗ್ಗದ ನೂತನ ವಿಮಾನ ನಿಲ್ದಾಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದರು. 450 ಕೋಟಿ ರೂ ವೆಚ್ಚದಲ್ಲಿ ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Read More »ಹಡಗಿನಾಳದಲ್ಲಿ ೧೫.೨೨ ಕೋಟಿ ರೂಗಳ ವೆಚ್ಚದ ೧೧೦/೧೧ ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರ ಗುದ್ದಲಿ ಪೂಜೆ
ಗೋಕಾಕ : ಹಡಗಿನಾಳ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಗುಣಮಟ್ಟದ ಗೃಹ ಹಾಗೂ ನೀರಾವರಿ ಬಳಕೆಗಾಗಿ ವಿದ್ಯುತ್ತ್ ಬೇಡಿಕೆ ಈಡೇರಿಸಲು ಹಡಗಿನಾಳ ಗ್ರಾಮದಲ್ಲಿ ೧೧೦/೧೧ ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲಾಗುತ್ತಿದ್ದು, ನವೆಂಬರ್ ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಅರಭಾವಿ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚಿಸಿದರು. ರವಿವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ತ ಪ್ರಸರಣ ನಿಗಮದಿಂದ ೧೫.೨೨ ಕೋಟಿ ರೂಗಳ ವೆಚ್ಚದ ೧೧೦/೧೧ಕೆ.ವ್ಹಿ ವಿದ್ಯುತ್ತ್ ಕೇಂದ್ರಕ್ಕೆ …
Read More »ಕಿಡಿಗೇಡಿಗಳಿಂದ ಶಾಲಾ ಕೊಠಡಿಗೆ ಬೆಂಕಿ
ಬೈಲಹೊಂಗಲ: ಪಟ್ಟಣದ ಹೊಸೂರ ರಸ್ತೆಯ ಶತಮಾನ ಪೂರೈಸಿದ ಪುರಸಭೆ ಶೂರ ಸಂಗೊಳ್ಳಿ ರಾಯಣ್ಣ ಪ್ರೌಢಶಾಲೆಯಲ್ಲಿ ರವಿವಾರ ಮಧ್ಯಾಹ್ನ ಕಿಡಿಗೇಡಿಗಳಿಂದ ಶಾಲಾ ಕೊಠಡಿಗೆ ಬೆಂಕಿ ತಗುಲಿದ ಪರಿಣಾಮ ದಗದಗ ಹೊತ್ತಿ ಉರಿದ ಘಟನೆ ಜರುಗಿದೆ. ಸುಡು ಬಿಸಿಲಿನಲ್ಲಿ ಶಾಲಾ ಕೊಠಡಿಗೆ ಬೆಂಕಿ ತಗುಲಿದ ಪರಿಣಾಮ ಬಾಗಿಲು ಇಲ್ಲದ ಕೊಠಡಿಯಲ್ಲಿದ್ದ ಹಳೆ ಡೆಸ್ಕ್, ಹಳೆಯ ಕಾಗದ ಪತ್ರಗಳು ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ. ಸುಡು ಬಿಸಿಲಿನಲ್ಲಿ ಬೆಂಕಿಯ ಕೆನ್ನಾಲಿಗೆ ಜ್ವಾಲಾ ಮುಖಿಯಂತೆ ಕಂಡಿತು. ಕಿಡಗೇಡಿಗಳು ಹೊತ್ತಿಸಿದ …
Read More »ಆಕಾಶಕ್ಕೆ ಲಗ್ಗೆ ಇಟ್ಟ ಚಿಣ್ಣರ ದಂಡು
ಚನ್ನಮ್ಮನ ಕಿತ್ತೂರು: ಅತ್ತ ರಾಜುವಿನ ಗಾಳಿಪಟ, ಇತ್ತ ಚಂದ್ರಿಕಾಳ ಗಾಳಿಪಟ, ರಮ್ಯ ಕೈಯಲ್ಲಿ ದಾರದ ಉಂಡೆ, ಉಸ್ತಾದನ ಕೈಯಲ್ಲಿ ಬಾಲಂಗೋಚಿ, ಸೂತ್ರ ಹರಿದು ಮಾಯವಾಯಿತು ಪರಮೇಶಿಯ ಪಟ, ಅದ ನೋಡಿ ಹೋಯ್… ಎಂದು ಕೂಗಿದ ಚಿಣ್ಣರ ದಂಡು. ‘ ವಿವಿಧ ಶಾಲೆಗಳಿಂದ ಬಂದಿದ್ದ ನೂರಾರು ಮಕ್ಕಳಿಗೆ ಬಣ್ಭಬಣ್ಣದ ಪಟಗಳನ್ನು ಉಚಿತವಾಗಿ ನೀಡಲಾಯಿತು. ಪಟ ಮತ್ತು ದಾರದ ಉಂಡೆಗಳು ಕೈಗೆ ಸಿಕ್ಕಿದ್ದೇ ತಡ ಚಿಣ್ಣರು ನಾ ಮುಂದು, ತಾ ಮುಂದು ಎಂದು …
Read More »ವಿಶಿಷ್ಟ ರೀತಿಯಲ್ಲಿ ಪ್ರಧಾನಿಯವರನ್ನು ಸ್ವಾಗತಿಸಲು ಸಜ್ಜಾದ ಬೆಳಗಾವಿ|
ಬೆಳಗಾವಿ: ಸೋಮವಾರ (ಫೆ.27) ಬೆಳಗಾವಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಶಿಷ್ಟ ರೀತಿಯಲ್ಲಿ ಸ್ವಾಗತಿಸಲು, ವಿವಿಧ ಕ್ಷೇತ್ರಗಳ ಆರು ಕಾರ್ಮಿಕರನ್ನು ಸಿದ್ಧಗೊಳಿಸಲಾಗಿದೆ. ಪೌರಕಾರ್ಮಿಕ ಮಹಿಳೆ ಮೀನಾಕ್ಷಿ ಕೃಷ್ಣ ತಳವಾರ, ಕೃಷಿ ಕಾರ್ಮಿಕ ಮಹಿಳೆ ಶೀಲಾ ಖನ್ನೂಕರ, ನೇಕಾರ ಕಲ್ಲಪ್ಪ ತಂಬಗಿ, ಆಟೊ ಚಾಲಕ ಮಯೂರ ಯಶವಂತ ಚವ್ಹಾಣ, ಹೋಟೆಲ್ ಮಾಣಿ ಚಂದ್ರಕಾಂತ ಮಹಾದೇವ ಹೋನಕರ, ಕಟ್ಟಡ ಕಾರ್ಮಿಕ ಮಂಗೇಶ ಬಸ್ತವಾಡಕರ ಅವರಿಗೆ ಶಿಷ್ಟಾಚಾರದ ತರಬೇತಿ ನೀಡಲಾಗಿದೆ. ಸೋಮವಾರ ಮಧ್ಯಾಹ್ನ …
Read More »ಎಂಬಿ.ಪಾಟೀಲ್ ನನ್ನ ಕ್ಷೇತ್ರದಿಂದ ಸ್ಪರ್ಧಿಸಿದರೆ ಗೆಲ್ಲಿಸುವ ಹೊಣೆ ನನ್ನದು: ಶಿವಾನಂದ ಪಾಟೀಲ್
ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು ಬಬಲೇಶ್ವರ ಬಿಟ್ಟು ನಾನು ಪ್ರತಿನಿಧಿಸುತ್ತಿರುವ ಬಸವನಬಾಗೇವಾಡಿ ಕ್ಷೇತ್ರದಿಂದ ಸ್ಪರ್ಧಿಸಿದರೆ ಅವರನ್ನು ಗೆಲ್ಲಿಸುವ ಜವಾಬ್ದಾರಿ ನನಗಿರಲಿ ಎಂದು ಸ್ವಪಕ್ಷೀಯ ಬಸವನಬಾಗೇವಾಡಿ ಹಾಲಿ ಶಾಸಕ ಶಿವಾನಂದ ಪಾಟೀಲ ಆಹ್ವಾನಿಸಿದ್ದಾರೆ. ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಬಲೇಶ್ವರ ನನ್ನ ಮೂಲ ಕ್ಷೇತ್ರವಾಗಿದ್ದು, ಅಲ್ಲಿಂದ ಸ್ಪರ್ಧಿಸಲು ಅವಕಾಶ ಕೊಡಿ ಎಂದು ಪಕ್ಷಕ್ಕೆ ಅರ್ಜಿ ಸಲ್ಲಿಸಿದ್ಧೇನೆ. ರಾಜಕೀಯ ಕಾರಣದಿಂದ ಬಬಲೇಶ್ವರ ಕ್ಷೇತ್ರದ ಜನರಿಗೆ ಹೇಳದೇ ನಾನು …
Read More »
Laxmi News 24×7