Breaking News

ಜಿಲ್ಲೆ

ಸರ್ಕಾರಿ ನೌಕರರು ಮಾರ್ಚ್‌ 1 ರಿಂದ ಕರ್ತವ್ಯಕ್ಕೆ ಗೈರಾಗುವುದಕ್ಕೆ ಕರೆ ಕೊಟ್ಟ ರಾಜ್ಯ ಸರ್ಕಾರಿ ನೌಕರರ ಸಂಘ

ಬೆಂಗಳೂರು: ಏಳನೇ ವೇತನ ಆಯೋಗ ಜಾರಿ ಸೇರಿದಂತೆ ಹಲವು ಸೌಲಭ್ಯಗಳನ್ನು ಜಾರಿಗೆ ತರುವುದರಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿರುವ ರಾಜ್ಯ ಸರ್ಕಾರಿ ನೌಕರರ ಸಂಘವು ಮಾರ್ಚ್‌ 1 ರಿಂದ ಕರ್ತವ್ಯಕ್ಕೆ ಗೈರಾಗುವ ಹೋರಾಟ ನಡೆಸಲು ಕರೆ ನೀಡಿದೆ.   ಇಂದು ನಡೆದ ಸರ್ಕಾರಿ ನೌಕರರ ಸಂಘದ ಸುಮಾರು 8 ಸಾವಿರ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಈ ಬಗ್ಗೆ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಸರ್ಕಾರಿ …

Read More »

ಬೆಳಗಾವಿಗೆ ಪ್ರಧಾನಿ ಭೇಟಿ: ಸಕಲ ಸಿದ್ಧತೆಗೆ ಸೂಚನೆ

ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಫೆ.27ರಂದು ನಗರದ ನವೀಕೃತ ರೈಲು ನಿಲ್ದಾಣ ಲೋಕಾರ್ಪಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು.   ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ರೈಲ್ವೆ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದು, ಫಲಾನುಭವಿಗಳು …

Read More »

ಏ.1ರಿಂದಲೇ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್: ಸಿಎಂ ಬೊಮ್ಮಾಯಿ

ಬೆಂಗಳೂರು: ಏಪ್ರಿಲ್ 1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅವರು ಇಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.   ಮಹಿಳೆಯರಿಗೆ ಗೌರವದ ಜೊತೆಗೆ ಆರ್ಥಿಕವಾಗಿ ಸ್ವಾವಲಂಬಿಯಾಗಲು ಈ ಯೋಜನೆ ರೂಪಿಸಲಾಗಿದೆ. ಮಿನಿ ಸ್ಕೂಲ್ …

Read More »

ಹಾರೂಗೇರಿ ಪೊಲೀಸರ ಕಾರ್ಯಾಚರಣೆ ಯಿಂದ ಅಪಹರಣ ಪ್ರಕರಣ ಭೇದಿಸಲು ಯಶಸ್ವಿ ಯಾದ ತಂಡ

ರಾಯಬಾಗ :ತಾಲೂಕಿನ ಖನದಾಳ ಗ್ರಾಮದ ಅಪಹರಣ ಪ್ರಕರಣ ಭೇದಿಸಲಾಗಿದ್ದು ಈ ಸಂಬಂಧ ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ನಾಲ್ಕು ಲಕ್ಷ ಹತ್ತು ಸಾವಿರ ನಗದು ಕೃತಕ್ಕೆ ಬಳಸಿದ್ದ ಎರಡು ಕಾರು ಒಂದು ತಲವಾರ ಚಾಕು ಅಪಹರಣ ಮಾಡಿದವನಿಗೆ ಹಾಕುವ ಕರಿ ಬಣ್ಣದ ಕನ್ನಡಕಾ ಆರೋಪಿತದ ಎಳು ಮೊಬೈಲ್ ಫೋನುಗಳನ್ನು ವಶಪಡಿಸಿಕೊಳ್ಳುವಲ್ಲಿ ಹಾರೂಗೇರಿ ಪೋಲಿಸ ತಂಡ ಯಶಸ್ವಿ ಆಗಿದೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಬೆಳಗಾವಿ ಪೋಲಿಸ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ …

Read More »

ಸಚಿನ್ ಸಬ್ನಿಸ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್*

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿಯ 22ನೇ ವಾರ್ಷಿಕ ಘಟಿಕೋತ್ಸವವನ್ನು ಶುಕ್ರವಾರ, ದಿನಾಂಕ 24ನೇ ಫೆಬ್ರವರಿ, 2023 ರಂದು ಪೂರ್ವಾಹ್ನ 11:30ಕ್ಕೆ ವಿ. ತಾ. ವಿ. ಜ್ಞಾನ ಸಂಗಮ ಆವರಣದ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಆಯೋಜಿಸಲಿದೆ.   ಶ್ರೀ. ಥಾವರಚಂದ್ ಗೆಹ್ಲೋಟ್, ಗೌರವಾನ್ವಿತ ರಾಜ್ಯಪಾಲರು, ಕರ್ನಾಟಕ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಅಧ್ಯಕ್ಷತೆ ವಹಿಸುವರು   ಡಾ. ಸಿ. ಎನ್. ಅಶ್ವಥ್ ನಾರಾಯಣ್, ಮಾನ್ಯ ಸಚಿವರು, ಉನ್ನತ …

Read More »

ಗೋಕಾಕದ ಉದ್ಯಮಿ ರಾಜು ಝಂವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಇಬ್ಬರುನ್ನು ಬಂಧಿಸಲಾಗಿದೆ,

ಗೋಕಾಕ:  ಗೋಕಾಕದ ಉದ್ಯಮಿ ರಾಜು ಝಂವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಇಬ್ಬರುನ್ನು ಬಂಧಿಸಲಾಗಿದೆ, ಬಂಧಿತರ ಸಂಖ್ಯೆ 5ಕ್ಕೇರಿದೆ. ಗೋಕಾಕ ಮೋಮಿನ್ ಗಲ್ಲಿಯ ವೆಲ್ಡಿಂಗ್ ವರ್ಕ ಮಾಡುವ 24 ವರ್ಷದ ಮೋಯಿನ್ ಪಟೇಲ್ ಮತ್ತು ಲಕ್ಕಡ ಗಲ್ಲಿಯ ಟೈಲ್ಸ್ ಕೆಲಸ ಮಾಡುವ 21 ವರ್ಷದ ಅಬುತಾಲ್ ಮೊಹ್ಮದ್ ಹನೀಫ್ ಮುಲ್ಲಾ ಬಂಧಿತರು. ಇವರಿಬ್ಬರೂ ಈಗಾಗಲೆ ಬಂಧಿತರಾಗಿರುವ ಶಫತ್ ಟ್ರಾಸ್ಗರ್ ನ ಗೆಳೆಯರು. ಇವರೆಲ್ಲರೂ ಸೇರಿ ಯೋಗಿ ಕೊಳ್ಳದಲ್ಲಿ ಕೊಲೆ ಮಾಡಿದ್ದಾರೆ. …

Read More »

ಪ್ರಧಾನಿ ಮೋದಿ ಬೆಳಗಾವಿ ಭೇಟಿ 27ಕ್ಕೆ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಫೆ.27ರಂದು ಬೆಳಗಾವಿಗೆ ಆಗಮಿಸಲಿದ್ದು, ಹೈಟೆಕ್‌ ರೈಲ್ವೆ ನಿಲ್ದಾಣ ಉದ್ಘಾಟಿಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ನಾಯಕರು ಭಾನುವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.   ‘ಫೆ.27ರಂದು ಶಿವಮೊಗ್ಗದಲ್ಲಿ‌ ನಡೆಯಲಿರುವ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸುವರು. ಬಳಿಕ, ಇಲ್ಲಿಗೆ ಬಂದು ರೈಲ್ವೆ ನಿಲ್ದಾಣ ಉದ್ಘಾಟಿಸುವರು. ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಇದರೊಂದಿಗೆ ರೋಡ್ ಷೋ ನಡೆಸುವ ಬಗ್ಗೆಯೂ ಚರ್ಚಿಸುತ್ತಿದ್ದೇವೆ’ ಎಂದು ಪಕ್ಷದ ರಾಜ್ಯ …

Read More »

ಬಿಜೆಪಿಯ ಡೋಂಗಿ ಹಿಂದುತ್ವವಾದಿಗಳ ವಿರುದ್ಧ ಹೋರಾಟ: ಮುತಾಲಿಕ್

ಬಾಗಲಕೋಟೆ: ‘ನನ್ನದು ಬಿಜೆಪಿ ವಿರುದ್ಧದ ಹೋರಾಟವಲ್ಲ. ಬಿಜೆಪಿಯಲ್ಲಿರುವ ಹಿಂದೂ ದ್ರೋಹಿಗಳು, ಅದರ ತತ್ವ, ಸಿದ್ಧಾಂತ ಹಾಳು ಮಾಡಿದವರ ವಿರುದ್ಧ ಹೋರಾಟ’ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾರ್ಕಳದಲ್ಲಿ ಗೆದ್ದರೂ ಬಿಜೆಪಿಯನ್ನೇ ಬೆಂಬಲಿಸುತ್ತೇನೆ. ಆದರೆ ಡೋಂಗಿ ಹಿಂದುತ್ವವಾದಿಗಳಿಗೆ ಬುದ್ಧಿ ಕಲಿಸಲು ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ’ ಎಂದರು. ‘ನನಗೆ ಬಾಗಲಕೋಟೆ ಮತ್ತು ಕಾರ್ಕಳದಿಂದ ಸ್ಪರ್ಧಿಸಲು ಬೇಡಿಕೆ ಇತ್ತು. ಕಾರ್ಕಳವನ್ನೇ ಆಯ್ಕೆ ಮಾಡಿಕೊಂಡಿದ್ದೇನೆ. ಕಾರ್ಕಳದಲ್ಲಿ …

Read More »

ಒಬ್ಬ ಹಿಂದೂ ಹುಡುಗಿ ಮುಸ್ಲಿಂ ಹುಡುಗನ ಜೊತೆ ಹೋದ್ರೆ , 10 ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್

ಬಾಗಲಕೋಟೆ : ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ಹರಿತವಾದ ತಲ್ವಾರ್ ಇಟ್ಟುಕೊಳ್ಳಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಆಚರಣೆ ವೇಳೆ ಮಾತನಾಡಿದ ಅವರು ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ತಲ್ವಾರ್ ಇಟ್ಟುಕೊಳ್ಳಿ, ನಿಮ್ಮ ಅಕ್ಕ -ತಂಗಿ ರಕ್ಷಣೆಗಾಗಿ ಹಾಗೂ ಗೋ ಮಾತೆ ರಕ್ಷಣೆಗಾಗಿ ಮನೆಯಲ್ಲಿ ಹರಿತವಾದ ತಲ್ವಾರ್ ಇಟ್ಟುಕೊಳ್ಳಿ ಎಂದು ಮುತಾಲಿಕ್ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ.   ಪ್ರತಿಯೊಬ್ಬ ಹಿಂದೂ ಮನೆಯಲ್ಲಿ …

Read More »

ಯಾರ ಚಡ್ಡಿ ಗಟ್ಟಿ ಇದೆಯೋ ಅವರಿಗೆ ಟಿಕೆಟ್, ಟಿಕೆಟ್ ಘೋಷಣೆ ಆದ್ಮೇಲೆ ಎಲ್ಲವೂ ತಣ್ಣಗಾಗಲಿದೆ.:ಸತೀಶ ಜಾರಕಿಹೋಳಿ

ಇನ್ನೊಂದು ವಾರದಲ್ಲಿ ಕಾಂಗ್ರೆಸ್ ಟಿಕೆಟ್ ಬಗ್ಗೆ ಘೋಷಣೆ ಮಾಡಬಹುದು ಎಲ್ಲರೂ ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷಕ್ಕೆ ದುಡಿಯೋಣ. ಯಾರ ಚಡ್ಡಿ ಗಟ್ಟಿ ಇದೆಯೋ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಕಾರ್ಯಕರ್ತರನ್ನ ಉದ್ದೇಶಿಸಿ ಮಾತನಾಡಿದ ಅವರು ಟಿಕೆಟ್ ಘೋಷಣೆ ಆಗದೇ ಇರೋದ್ರಿಂದ ಭಿನ್ನಮತ ಇರೋದು ಸಹಜ. ಟಿಕೆಟ್ ಘೋಷಣೆ ಆದ್ಮೇಲೆ ಎಲ್ಲವೂ ತಣ್ಣಗಾಗಲಿದೆ. ಎಲ್ಲರೂ ಸೇರಿ ಟಿಕೆಟ್ …

Read More »