ಬೆಳಗಾವಿ: ನನ್ನ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮರ್, ಉದ್ಯಮಿ ಪರಶಿವಮೂರ್ತಿ, ನರೇಶ, ಶ್ರವಣ, ಡಿ.ಕೆ. ಶಿವಕುಮಾರ್ ವಾಹನ ಚಾಲಕ ಹಾಗೂ ಮಂಡ್ಯ ಮೂಲದ ಇಬ್ಬರು ಪ್ರಮುಖ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಆಗ್ರಹಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ರಾಜಕಾರಣ ಮಾಡಲು ಯೋಗ್ಯನಲ್ಲ. ಷಡ್ಯಂತ್ರದ ಮೂಲಕ ರಾಜಕಾರಣ ಹಾಳು ಮಾಡುವ ಮತ್ತು ನನ್ನ ರಾಜಕೀಯ ಜೀವನ ಮುಗಿಸಲು ಪ್ರಯತ್ನಿಸಿರುವ ಡಿ.ಕೆ.ಶಿವಕುಮಾರ್ ಅವರನ್ನು …
Read More »ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : H.D.K.
ಕೊಪ್ಪಳ: ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಸಂಪೂರ್ಣ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ 1 ಲಕ್ಷ ರೂ ವರೆಗಿನ ಸಾಲ ಮನ್ನಾ ಮಾಡುವೆ ನಮಗೆ ಪೂರ್ಣ ಬಹುಮತ ಕೊಡಿ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದರು. ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾವಿರಾರು ರೈತರು ಮಹಿಳೆಯರು ತಮ್ಮ ಕಷ್ಟ ಹೇಳಿಕೊಂಡು ನಮ್ಮ ಬಳಿ ಬರುತ್ತಿದ್ದಾರೆ. ಯುವಕರು ಕೆಲಸ ಕೊಡಿ …
Read More »ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ : ಮಾಜಿ ಸಿಎಂ BSY
ಬೆಳಗಾವಿ : ಮುಖ್ಯಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಈಗಾಗಲೇ ನಾನು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ನನಗೆ 80 ವರ್ಷ ವಯಸ್ಸಾಗಿದೆ. ಹೀಗಾಗಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
Read More »ಸವಿತಾ ಸಮುದಾಯದವರ ಜೀವನಮಟ್ಟ ಸುಧಾರಿಸಲಿ’:.ನಿರ್ಮಲಾ ಬಟ್ಟಲ್
ಬೆಳಗಾವಿ: ‘ಸಮಾಜದಲ್ಲಿ ಎಲ್ಲ ವರ್ಗಗಳ ಜನರು ಸುಂದರವಾಗಿ ಕಾಣಲು ಕಾರಣವಾಗಿರುವ ಸವಿತಾ ಸಮುದಾಯದವರ ಜೀವನಮಟ್ಟ ಸುಧಾರಣೆಯಾಗಬೇಕು. ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಅವರೂ ಬೆಳೆಯಬೇಕು’ ಎಂದು ಎಂಎನ್‌ಆರ್‌ಎಸ್ ಬಿ.ಇಡಿ ಕಾಲೇಜಿನ ಪ್ರಾಚಾರ್ಯೆ ಪ್ರೊ.ನಿರ್ಮಲಾ ಬಟ್ಟಲ್ ಹೇಳಿದರು. ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಶನಿವಾರ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ …
Read More »ಬೆಳಗಾವಿ; ಸ್ತ್ರೀ ಸಂವೇದನೆಗಳಿಗೆ ಕನ್ನಡಿ ಹಿಡಿದ ಸಮ್ಮೇಳನ
ಬೆಳಗಾವಿ: ಇಲ್ಲಿ ಶನಿವಾರ ಆರಂಭವಾದ ಅಖಿಲ ಭಾರತ ಕವಯತ್ರಿಯರ ಸಮ್ಮೇಳನವು ಸ್ತ್ರೀ ಸಂವೇದನೆಗಳಿಗೆ ಕನ್ನಡಿ ಹಿಡಿಯಿತು. ಮೊದಲ ದಿನದ ಗೋಷ್ಠಿಗಳಲ್ಲಿ ಕಾವ್ಯಗಳನ್ನು ಪ್ರಸ್ತುತಪಡಿಸಿದ ವಿವಿಧ ರಾಜ್ಯಗಳ ಕವಯತ್ರಿಯರು, ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ಆಸಿಡ್ ದಾಳಿ, ಕೌಟುಂಬಿಕ ದೌರ್ಜನ್ಯಗಳನ್ನು ಖಂಡಿಸಿದರು. ಪುರುಷರು ಮತ್ತು ಮಹಿಳೆಯರ ಮಧ್ಯೆ ಇರುವ ಅಸಮಾನತೆ ನಿವಾರಣೆ, ಮಹಿಳಾ ಸಬಲೀಕರಣದ ಬಗ್ಗೆಯೂ ದನಿ ಎತ್ತಿದರು. ಮಹಿಳೆಯರ ಅಂತಃಶಕ್ತಿಯಾಗಿರುವ ಪ್ರೀತಿ, ಪ್ರೇಮ, ಕರುಣೆ, ಸಹನೆ ಮೇಲೂ ಹಲವರು …
Read More »ಫೆಬ್ರವರಿ 1ರಿಂದ ಬೆಳಗಾವಿ ಜಿಲ್ಲೆಯಲ್ಲಿ ಒಳ್ಳೆ ಬೆಳವಣಿಗೆ ಎನ್ನುತ್ತ ನಗುತ್ತಲೇ ಹೊರಟುಬಿಟ್ಟರು ಚಾಣಾಕ್ಷ ಬಾಲಚಂದ್ರ ಜಾರಕಿಹೊಳಿ.
ಬೆಳಗಾವಿ – ಅಮಿತಾ ಶಾ ಬಂದು ಸಭೆ ಮಾಡಿದ್ದು ಬಹಳ ಒಳ್ಳೆಯದಾಗಿದೆ. ಫೆಬ್ರವರಿ 1ರಿಂದ ಬೆಳಗಾವಿ ಜಿಲ್ಲೆಯಲ್ಲಿ ಒಳ್ಳೆಯ ಬೆಳವಣಿಗೆ ಆಗಲಿದೆ. ಎಲ್ಲ ನಾಯಕರು ಭಿನ್ನಾಭಿಪ್ರಾಯ ಮರೆತು ಕೆಲಸ ಮಾಡಲಿದ್ದಾರೆ ಎಂದು ಮಾಜಿ ಸಚಿವ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯ ಖಾಸಗಿ ಹೊಟೆಲ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಡೆಸಿದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಯಡಿಯೂರಪ್ಪ, ಪ್ರಹ್ಲಾದ ಜೋಶಿ, ನಳೀನ್ ಕುಮಾರ …
Read More »ಸ್ಯಾಂಡಲ್ ವುಡ್ ಹಿರಿಯ ನಟ ಮಂದೀಪ್ ರಾಯ್ ಇನ್ನಿಲ್ಲ
ಬೆಂಗಳೂರು: ಕನ್ನಡದ ಹಿರಿಯ ನಟ ಮಂದೀಪ್ ರಾಯ್ ಅವರು ಕೊನೆಯುಸಿರೆಳೆದಿದ್ದಾರೆ. 73 ವರ್ಷದ ಮಂದೀಪ್ ರಾಯ್ ಅವರಿಗೆ ಮಧ್ಯರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಮಂದೀಪ್ ರಾಯ್ ಅವರು ಮೂಲತಃ ಮುಂಬೈನವರು. ಬಾಲ್ಯದಲ್ಲಿ ಕರಾಟೆ, ಕುಂಗ್ ಫು ಅಭ್ಯಾಸ ಮಾಡಿದ್ದ ಮಂದೀಪ್ ಅವರು ಒಂಬತ್ತನೇ ವಯಸ್ಸಿನಲ್ಲಿ ರಂಗಭೂಮಿ ಒಲವು ಮೂಡಿಸಿಕೊಂಡರು. ರಂಗಭೂಮಿಯಲ್ಲಿ ಪರಿಚಯವಾದ ಶಂಕರ್ ನಾಗ್ ಮತ್ತು ಅನಂತ್ ನಾಗ್ ಅವರ ಕಾರಣದಿಂದ …
Read More »ರಾಯಬಾಗ| ಅಪಘಾತದಲ್ಲಿ ಮೂವರು ಸವಾರರ ಸಾವು
ರಾಯಬಾಗ: ತಾಲ್ಲೂಕಿನ ನಿಡಗುಂದಿ ಬಳಿ ಬೈಕ್‌ಗಳ ಮಧ್ಯೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ನಿವಾಸಿ ಸಿದ್ಧಾರ್ಥ ಜಗದಾಳೆ (24), ಬಾಗಲಕೋಟೆ ಜಿಲ್ಲೆಯ ಲೋಕಾಪುರದ ಮಾರುತಿ ವಿಭೂತಿ (32), ಮುಧೋಳದ ಶಾಮಣ್ಣ ವಿಭೂತಿ(22) ಮೃತರು. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಯುದ್ಧ ವಿಮಾನಗಳ ಪತನದಲ್ಲಿ ಮೃತಪಟ್ಟ ಪೈಲೆಟ್ ಬೆಳಗಾವಿ ಮೂಲದವರು
ಬೆಳಗಾವಿ: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪ ಸುಖೋಯ್ 30 ಎಂಕೆಐ ಹಾಗೂ ಮಿರಾಜ್-2000 ಯುದ್ಧ ವಿಮಾನಗಳ ಮಧ್ಯೆ ಶನಿವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಪೈಲೆಟ್, ವಿಂಗ್ ಕಮಾಂಡರ್ ಹನುಮಂತರಾವ್ ರೇವಣಸಿದ್ಧಪ್ಪ ಸಾರಥಿ (34) ಬೆಳಗಾವಿ ಮೂಲದವರು. ಇಲ್ಲಿನ ಗಣೇಶಪುರದ ಮನೆಯಲ್ಲಿ 1987ರಲ್ಲಿ ಜನಿಸಿದ ಅವರು, ಬಾಲ್ಯವನ್ನು ಇಲ್ಲಿಯೇ ಕಳೆದಿದ್ದರು. ನಗರದ ಕೇಂದ್ರೀಯ ವಿದ್ಯಾಲಯ-2ರಲ್ಲಿ ಶಿಕ್ಷಣ ಪೂರೈಸಿದ್ದರು. ಪೈಲೆಟ್ ಆದ ಮೇಲೆ ಪತ್ನಿ, ಮಕ್ಕಳ ಸಮೇತ ಗ್ವಾಲಿಯರ್‌ನಲ್ಲಿ ನೆಲೆಸಿದ್ದರು. 2009ರಿಂದ ಭಾರತೀಯ …
Read More »ಬಿಎಸ್‌ವೈಗೆ ಕಲ್ಲು ಎಸೆದರೆ ಪಕ್ಷಕ್ಕೆ ಪೆಟ್ಟು: ಬಿ.ವೈ ವಿಜಯೇಂದ್ರ
ವಿಜಯಪುರ: ‘ಯಡಿಯೂರಪ್ಪ ಅವರಿಗೆ ಕಲ್ಲು ಎಸೆದರೆ ಅದು ಪಕ್ಷಕ್ಕೆ ಪೆಟ್ಟು ಎನ್ನುವುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಬಿಎಸ್‌ವೈ ಬಗ್ಗೆ ಶಾಸಕ ಬಸನಗೌಡ ಯತ್ನಾಳ ಇನ್ನು ಟೀಕೆ ಮಾಡುವುದಿಲ್ಲ ಎಂದು ಹೇಳಿಕೆ ನೀಡಿರುವುದು ಪಕ್ಷದ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ವಿಜಯಪುರ ಜಿಲ್ಲೆಯ ಹೊರ್ತಿ ಗ್ರಾಮದಲ್ಲಿ ಶುಕ್ರವಾರ ಮಾಧ್ಯಮದ ಜೊತೆ ಮಾತನಾಡಿದ ಅವರು, ‘ಯತ್ನಾಳ ಬಗ್ಗೆ ನಮಗೆ ವೈಯಕ್ತಿಕ ವಿರೋಧವಿಲ್ಲ. …
Read More »
Laxmi News 24×7