Breaking News

ಜಿಲ್ಲೆ

ಕೆಳಗಿನ ಮನೆ ಆಂಟಿ ಜೊತೆಗೆ ಮೇಲಿನ ಮನೆ ಅಂಕಲ್‌ ಜೂಟ್‌!

ಬೆಂಗಳೂರು: ಒಂದೇ ಕಟ್ಟಡದ ಕೆಳ ಮನೆಯಲ್ಲಿದ್ದ ಆಂಟಿ ಹಾಗೂ ಮೇಲಿನ ಮನೆಯಲ್ಲಿದ್ದ ಎರಡು ಮಕ್ಕಳ ತಂದೆ ಜತೆಯಾಗಿ ಪರಾರಿಯಾಗಿರುವ ವಿಚಿತ್ರ ಲವ್‌ ಸ್ಟೋರಿ ಜ್ಞಾನಭಾರತೀ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಾರುತಿ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.   ಕೆಳ ಮಹಡಿಯಲ್ಲಿ ವಾಸವಿದ್ದ ಮುಬಾರಕ್‌ (28) ಅವರು ತಮ್ಮ ಪತ್ನಿ ಶಾಜಿಯಾ (22) ನಾಪತ್ತೆಯಾಗಿರುವುದಾಗಿ ಹಾಗೂ ಮೇಲ್ಮನೆಯಲ್ಲಿರುವ ಝೀನತ್‌ (29) ಅವರು ತಮ್ಮ ಪತಿ ಮೊಹಮ್ಮದ್‌ ನವೀದ್‌ (37) ಕಾಣೆಯಾಗಿರುವುದಾಗಿ ಪೊಲೀಸ್‌ …

Read More »

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದಲ್ಲಿ

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಮೂಡಲಗಿ: ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದಲ್ಲಿ ಶ್ರೀ ಹನುಮಂತೆಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮಿ …

Read More »

ಹೆಚ್ ಡಿಕೆ ಸಿಎಂ ಆಗದಿದ್ದರೆ ನಾನು. : ಸಿಎಂ ಇಬ್ರಾಹಿಂ ಶಪಥ !

ವಿಜಯಪುರ : ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಕಾಂಗ್ರೆಸ್-ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಹೇಳಿ ಎಂದು ಆಗ್ರಹಿಸಿದರು.   ಶುಕ್ರವಾರ ನಗರದಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಫೆಬ್ರುವರಿ ಮುಗಿಯಲಿ ಬಿಜೆಪಿ, ಕಾಂಗ್ರೆಸ್ ಪಕ್ಷದಿಂದ ಜೆಡಿಎಸ್ ಪಕ್ಷಕ್ಕೆ ಯಾರು ವಲಸೆ ಬರಲಿದ್ದಾರೆ ಎಂದು ಹೇಳುತ್ತೇನೆ ಎಂದರು. ವಿಜಯಪುರ ಜಿಲ್ಲೆಯಲ್ಲಿ 5 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲಲಿದ್ದು, ನಾಗಠಾಣಾ ಕ್ಷೇತ್ರದ …

Read More »

ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ ₹1.10 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹ

 (ಬೆಳಗಾವಿ ಜಿಲ್ಲೆ): ಇಲ್ಲಿನ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಮತ್ತು ಗುರುವಾರ ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ಮಾಡಲಾಗಿದ್ದು, ಒಟ್ಟು ₹1.10 ಕೋಟಿಗೂ ಅಧಿಕ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. 2022ರ ಡಿಸೆಂಬರ್‌ನಲ್ಲಿ ಭಕ್ತರು ಹುಂಡಿಗೆ ಹಾಕಿದ್ದ ₹95 ಲಕ್ಷ ನಗದು, ₹6.66 ಲಕ್ಷ ಮೌಲ್ಯದ 119 ಗ್ರಾಂ ಚಿನ್ನಾಭರಣ ಹಾಗೂ ₹8.73 ಲಕ್ಷ ಮೌಲ್ಯದ 2.962 ಕೆ.ಜಿ ಬೆಳ್ಳಿ ಆಭರಣ ಸಂಗ್ರಹವಾಗಿವೆ. ಇಲ್ಲಿಯವರೆಗೆ ಅರ್ಧದಷ್ಟು ಹುಂಡಿಯನ್ನು ಮಾತ್ರ ಎಣಿಸಲಾಗಿದೆ. ಬಾಕಿ ಉಳಿದ ಎಣಿಕೆ ಮುಂದಿನ …

Read More »

K.P.T.C.L. ಪರೀಕ್ಷಾ ಅಕ್ರಮ: ಮತ್ತೊಬ್ಬ ಆರೋಪಿ ಬಂಧನ

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಗುರುವಾರ ಇನ್ನೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ 51ಕ್ಕೆ ಏರಿದೆ. ಗೋಕಾಕ ತಾಲ್ಲೂಕಿನ ಉಪ್ಪಾರಟ್ಟಿಯ ಹನುಮಂತ ಮಲ್ಲಪ್ಪ ಗುದಿಗೊಪ್ಪ (22) ಬಂಧಿತ. ಈಗಾಗಲೇ ಬಂಧಿತರಾದ ಸಂಜೀವ ಭಂಡಾರಿ, ಬಾಳೇಶ ಕಟ್ಟಿಕಾರ, ಸಿದ್ದಪ್ಪ ಮದಿಹಳ್ಳಿ, ಭೀಮಪ್ಪ ಗುದಿಗೋಪ್ಪ ಅವರೊಂದಿಗೆ ಹನುಮಂತ ಕೂಡ ಸೇರಿದ್ದ. ಇವರೆಲ್ಲರೂ ಕೂಡಿಕೊಂಡು ಏಳು ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದೊಳಗೆ ಎಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್‌ ತಲುಪಿಸಿದ್ದರು …

Read More »

ಬೆಳಗಾವಿಯಲ್ಲಿ ಉದ್ಯೋಗ ಮೇಳ | 38 ಕಂಪನಿ, 3,500 ಯುವಜನರು ಭಾಗಿ

ಬೆಳಗಾವಿ: ‘ಜಗತ್ತಿನಾದ್ಯಂತ ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ, ಶಿಕ್ಷಣ, ಸೇವೆ ಮತ್ತು ಉತ್ಪಾದನಾ ವಲಯದಲ್ಲಿ ವಿಫುಲ ಉದ್ಯೋಗಾವಕಾಶಗಳಿವೆ. ಆಕಾಂಕ್ಷಿಗಳು ಕಾಲಕ್ಕೆ ತಕ್ಕಂತೆ ಕೌಶಲ ಬೆಳೆಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಲಹೆ ನೀಡಿದರು.   ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ಆಶ್ರಯದಲ್ಲಿ ನಗರದಲ್ಲಿ ಗುರುವಾರ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ವಿದ್ಯಾರ್ಥಿ ಜೀವನದ ಬಳಿಕ ನಮ್ಮ ಹೆಸರಿನ ಜತೆ …

Read More »

ಯಾದಗಿರಿ, ಕಲಬುರಗಿಗೆ ಇಂದು ಪ್ರಧಾನಿ ಮೋದಿ ಭೇಟಿ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಜ.19) ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗೆ ಭೇಟಿ ನೀಡಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕೊಡೆಕಲ್‌ಗೆ ಮಧ್ಯಾಹ್ನ 12ಕ್ಕೆ ಆಗಮಿಸುವರು. ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧುನಿಕ ಕಾಮಗಾರಿ ಲೋಕಾರ್ಪಣೆ, ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸೂರತ್‌-ಚೆನ್ನೈ ಎಕ್ಸ್‌ಪ್ರೆಸ್‌ ವೇ ಪ್ಯಾಕೇಜ್‌-3 ಕಾಮಗಾರಿ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸುವರು. ‌ ಕಲಬುರಗಿ ಜಿಲ್ಲೆಯ …

Read More »

ಬಿಜೆಪಿಯಲ್ಲಿ ಗಂಡಸರೇ ಇಲ್ವಾ: ಹರಿಪ್ರಸಾದ್‌

ಬಾಗಲಕೋಟೆ: ಬಿಜೆಪಿಯಲ್ಲಿ ಸ್ಯಾಂಟ್ರೋ ರವಿ, ಫೈಟರ್‌ ರವಿ, ಪಿಂಪ್‌ ರವಿ, ಸಿ.ಟಿ. ರವಿ ಹೀಗೆ ತುಂಬಿ ತುಳುಕುತ್ತಿದ್ದಾರೆ. ಹೀಗಾಗಿ ಅಂತಹ ರವಿಗಳಿಂದ ಏನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಪಿಂಪ್‌ ಕೆಲಸ ಮಾಡಿಯೇ ಸಚಿವರಾಗಿದ್ದಾರೆ ಎಂದು ಒಬ್ಬ ಬಿಜೆಪಿಯ ಶಾಸಕರು ಹೇಳುತ್ತಾರೆ. ಶಾಸಕ ಯತ್ನಾಳ್‌ ಹೇಳಿಕೆಗೆ ಉತ್ತರ ಕೊಡಲು ಬಿಜೆಪಿಯಲ್ಲಿ ಒಬ್ಬ ಗಂಡಸೂ ಇಲ್ವಾ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ಪ್ರಶ್ನಿಸಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ …

Read More »

ಕಾರು ಕಳುವು ಮಾಡಿ ಮಾರುತ್ತಿದ್ದ ಆರೋಪಿಗಳ ಬಂಧನ

ಹುಕ್ಕೇರಿ: ಕಾರು ಖರೀದಿಸಿ ಮಾರಾಟ ಮಾಡಿ, ಅದೇ ಕಾರನ್ನು ಕಳ್ಳತನ ಮಾಡಿ ಮತ್ತೆ ಮಾರಾಟ ಮಾಡುತ್ತಿದ್ದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಕಿಂಗ್ ಪಿನ್ ಮಹಾರಾಷ್ಟ್ರದ ಔರಂಗಾಬಾದ್ ನಿವಾಸಿಯಾಗಿದ್ದು ಗಡಹಿಂಗ್ಲಜ್ ನಲ್ಲಿ ಮಹಾರಾಷ್ಟ್ರರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದ. ನಂತರದಲ್ಲಿ ಕೆಲಸ ಕಳೆದುಕೊಂಡಿದ್ದ ಈತ ಹಳೆಯ ಕಾರುಗಳನ್ನು ಕೊಳ್ಳುವಿಕೆ ವ್ಯವಹಾರ ಪ್ರಾರಂಭಿಸಿದ್ದ. ಬೇರೆಯವರ ಕಾರುಗಳನ್ನು ತಾನು ನಡೆಸುವುದಾಗಿ ಹೇಳಿ ಅವುಗಳನ್ನು ಪಡೆದ ನಂತರ ನಂಬರ್ ಪ್ಲೇಟ್ ಗಳನ್ನು …

Read More »

ಬೆಳಗಾವಿಯಿಂದ ಸೇವೆ ನೀಡುತ್ತಿದ್ದ 12 ವಿಮಾನಗಳ ಸೇವೆ ಬಂದ್

ಬೆಳಗಾವಿ: ಬೆಳಗಾವಿಯಿಂದ ಸೇವೆ ನೀಡುತ್ತಿದ್ದ ಕೆಲ ವಿಮಾನ ಸೇವೆ ಬಂದ್ ಆಗಿವೆ. ಇದರಿಂದ ಉದ್ಯಮಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಕುರಿತು ಸರಕಾರ ಹಾಗೂ ಇಲ್ಲಿನ ಜನಪ್ರತಿನಿಧಿಗಳು ಗಮನ ಹರಿಸುವ ಅವಶ್ಯಕತೆ ಇದೆ ಎಂದು ಬೆಳಗಾವಿ ಚೆಂಬರ್ ಆಫ್ ಕಾಮಸ್೯ ಸಭಾಂಗಣದಲ್ಲಿ ಉದ್ಯಮಿಗಳು ಹಕ್ಕೊತ್ತಾಯ ಮಾಡಿದರು. ಮಂಗಳವಾರ ವಿವಿಧ ಉದ್ಯಮಿಗಳು ನಡೆಸಿದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಯಿತು. ಚೇಂಬರ್ ಆಫ್ ಕಾಮಸ್೯ನ ಅಧ್ಯಕ್ಷ ಹೇಮೇಂದ್ರ ಪೋರವಾಲ್ ಮಾತನಾಡಿ, ಬೆಳಗಾವಿಯಲ್ಲಿ ಈಗಾಗಲೇ ಸಾಕಷ್ಟು ಬಾರಿ …

Read More »