ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಡಿ.19 ರಿಂದ 30 ರವರೆಗೆ ವಿಧಾನ ಮಂಡಲ ಚಳಿಗಾಲ ಅಧಿವೇಶನ ನಡೆಯಲಿದೆ. ಈ ಅವಧಿಯಲ್ಲಿ ವಸತಿ, ಊಟೋಪಾಹಾರ, ಸಾರಿಗೆ ಮತ್ತಿತರ ವ್ಯವಸ್ಥೆಯು ಪ್ರತಿ ಬಾರಿಯಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು ಎಂದು ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಮಂಡಲದ ಚಳಿಗಾಲ ಅಧಿವೇಶನದ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಸತಿ, ಊಟ, …
Read More »ಮಹಾರಾಷ್ಟ್ರದ ಪ್ರತಿಭಾವಂತ ಬಡ ವಿದ್ಯಾರ್ಥಿಗೆ ಎಂ.ಬಿ.ಪಾಟೀಲ್ ನೆರವು
ವಿಜಯಪುರ : ಆರ್ಥಿಕ ಸಂಕಷ್ಟದಿಂದ ವೈದ್ಯಕೀಯ ಪ್ರವೇಶ ಸಿಕ್ಕರೂ ಪ್ರವೇಶ ಪಡೆಯಲಾಗದ ಮತ್ತೋರ್ವ ವಿದ್ಯಾರ್ಥಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಆರ್ಥಿಕ ನೆರವು ನೀಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ನೆಲೆಸಿರುವ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿಗೆ ಭಾಷಾ ಸಂಕುಚಿತತೆ ಎಲ್ಲೆ ಮೀರಿ ಮಾನವೀಯತೆ ಮೆರೆದಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ನೆಲೆಸಿರುವ ವಿದ್ಯಾರ್ಥಿ ಯಲ್ಲಾಲಿಂಗ ಭೀಮರಾಯ ಜೈನಾಪುರ ಮೂಲತ ಮಹಾರಾಷ್ಟ್ರ ರಾಜ್ಯದ ಸಾಂಗಲಿ ಜಿಲ್ಲೆಯ ಜತ್ ತಾಲೂಕಿನ ಮುಚ್ಚಂಡಿ ಗ್ರಾಮದವರು. …
Read More »ಗೋಕಾಕ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಕಳ್ಳತನ
ಬೆಳಗಾವಿ: ತಹಶೀಲ್ದಾರರೊಬ್ಬರು ಚುನಾವಣಾ ಕರ್ತವ್ಯಕ್ಕೆ ತೆರಳಿದ್ದನ್ನು ತಿಳಿದು ಮನೆಗೆ ಹೊಕ್ಕಿದ್ದ ಕಳ್ಳರು 25 ತೊಲ ಚಿನ್ನ ಮಾತ್ರವಲ್ಲದೆ ಇತರ ವಸ್ತುಗಳನ್ನು ಕಳವು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ ಕಳ್ಳತನ ನಡೆದಿದೆ. ಗೋಕಾಕ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಚುನಾವಣೆ ಕರ್ತವ್ಯ ನಿಮಿತ್ತ ಅವರು ಮನೆಗೆ ಬೀಗ ಹಾಕಿ ತೆರಳಿದ್ದನ್ನು ತಿಳಿದ ಕಳ್ಳರು ಮನೆಗೆ ಹೊಕ್ಕಿದ್ದರು. ತಡರಾತ್ರಿಯಲ್ಲಿ ಕಳ್ಳರು ಬೀಗ ಒಡೆದು ಒಳಹೊಕ್ಕಿದ್ದರು. ಗೋಕಾಕದ ಲೋಕೋಪಯೋಗಿ ಇಲಾಖೆಯ …
Read More »ಶಾಲಾ ಪ್ರವಾಸದ ವೇಳೆ ಕಾಲು ಜಾರಿ ಬಿದ್ದು ವಿದ್ಯಾರ್ಥಿನಿ ಸಾವು
ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕೆ ಬೆಳಗಲ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವತಿಯಿಂದ ಕೈಗೊಳ್ಳಲಾಗಿದ್ದ ಪ್ರವಾಸ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ. 10ನೇ ತರಗತಿಯಲ್ಲಿ ಓದುತ್ತಿದ್ದ ನಾಗಲಕ್ಷ್ಮಿ(16) ಮೃತ ವಿದ್ಯಾರ್ಥಿನಿ. ಶ್ರವಣಬೆಳಗೊಳದಲ್ಲಿ ಮೆಟ್ಟಿಲು ಹತ್ತುವಾಗ ಕಾಲು ಜಾರಿ ಬಿದ್ದು ತಲೆಗೆ ಪೆಟ್ಟಾಗಿದ್ದರಿಂದ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ಬಿ.ಇ.ಒ ಗುರಪ್ಪ ತಿಳಿಸಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಕೆ.ಬೆಳಗಲ್ ಗ್ರಾಮಕ್ಕೆ ತೆರಳಿ ಘಟನೆ ಕುರಿತು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ …
Read More »ಜಾತ್ರೆ: ವಸ್ತುಪ್ರದರ್ಶನಕ್ಕೆ ಚಾಲನೆ
ರಾಮದುರ್ಗ: ‘ಜಾತ್ರೆಗಳಲ್ಲಿ ಆಯೋಜಿಸುವ ವಸ್ತುಪ್ರದರ್ಶನ ರೈತರಿಗೆ ಮತ್ತು ಯಾತ್ರಿಕರಿಗೆ ಉಪಯುಕ್ತವಾಗುವಂತೆ ಅಧಿಕಾರಿಗಳು ವ್ಯವಸ್ಥೆ ಮಾಡಬೇಕು. ಕಾಟಾಚಾರದ ವಸ್ತುಪ್ರದರ್ಶನ ಮಾಡಬಾರದು’ ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು. ತಾಲ್ಲೂಕಿನ ಗೊಡಚಿ ವೀರಭದ್ರೇಶ್ವರ ಜಾತ್ರೆಯ ಅಂಗವಾಗಿ ಗುರುವಾರ ಗ್ರಾಮ ಪಂಚಾಯ್ತಿ ಏರ್ಪಡಿಸಿದ್ದ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿ, ‘ಕೃಷಿಗೆ ಉತ್ತೇಜನ ನೀಡುವಂಥ ಮಳಿಗೆಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಕೃಷಿ , ತೋಟಗಾರಿಕೆ, ಅರಣ್ಯ ಇಲಾಖೆಗಳು ರೈತರಿಗೆ ನೂತನ ತಾಂತ್ರಿಕತೆಯ ಪರಿಚಯ ಮಾಡಿಕೊಡಬೇಕು’ ಎಂದರು. ತಹಶೀಲ್ದಾರ್ …
Read More »ಗುರ್ಲಾಪುರ: ಯೋಧನ ಅಂತ್ಯಕ್ರಿಯೆ
ಮೂಡಲಗಿ: ಬಹು ಅಂಗಾಂಗ ವೈಫಲ್ಯದಿಂದ ದೆಹಲಿಯಲ್ಲಿ ಮಂಗಳವಾರ ನಿಧನರಾದ ಭಾರತೀಯ ಸೇನೆಯ ಹವಾಲ್ದಾರ್ ಪ್ರಕಾಶ ಉದ್ದಪ್ಪ ಇವ್ವಕ್ಕಿ ಅವರ ಅಂತ್ಯಕ್ರಿಯೆ ತಾಲ್ಲೂಕಿನ ಗುರ್ಲಾಪುರ ಗ್ರಾಮದಲ್ಲಿ ಗುರುವಾರ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ದೆಹಲಿಯಿಂದ ಬೆಳಗಾವಿಯ ವಿಮಾನನಿಲ್ದಾಣಕ್ಕೆ ಬಂದ ಯೋಧನ ಪಾರ್ಥಿವಶರೀರವನ್ನು ಭಾರತೀಯ ಸೇನಾ ವಾಹನದ ಮೂಲಕ ಮಧ್ಯಾಹ್ನ 12ಕ್ಕೆ ಮೂಡಲಗಿಗೆ ತರಲಾಯಿತು. ಅಲ್ಲಿಂದ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿ ಗುರ್ಲಾಪುರ ಗ್ರಾಮಕ್ಕೆ ತರಲಾಯಿತು. ದಾರಿಯುದ್ದಕ್ಕೂ ‘ಭಾರತ ಮಾತಾಕೀ ಜೈ, ಅಮರ್ …
Read More »ಶಿಕ್ಷಣಕ್ಕೆ ಮಠಗಳ ಕೊಡುಗೆ ಅಪಾರ: ಡಾ.ಎಸ್.ವಿದ್ಯಾಶಂಕರ
ಬೆಳಗಾವಿ: ‘ಶಿಕ್ಷಣ ರಂಗದಲ್ಲಿ ರಾಜ್ಯ ಸರ್ಕಾರ ಮಾಡದ ಕೆಲಸವನ್ನು ಮಠ-ಮಾನ್ಯಗಳು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಮಾಡಿವೆ. ಗ್ರಾಮೀಣ ಭಾಗದ ಬಡ ಮಕ್ಕಳ ಬದುಕು ರೂಪಿಸಿವೆ’ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ವಿದ್ಯಾಶಂಕರ ಶ್ಲಾಘಿಸಿದರು. ಇಲ್ಲಿನ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ನಲ್ಲಿ ಲಿಂ. ಡಾ.ಶಿವಬಸವ ಸ್ವಾಮೀಜಿ 133ನೇ ಜಯಂತಿ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಡಾ.ಶಿವಬಸವ ಸ್ವಾಮೀಜಿ ಅವರ ವಸ್ತು ಸಂಗ್ರಹಾಲಯ ಉದ್ಘಾಟನೆ ಮತ್ತು ‘ಸೇವಾ ರತ್ನ’ ಪ್ರಶಸ್ತಿ ಪ್ರದಾನ …
Read More »ಬೇಕರಿ ಸಿಬಂದಿಗೆ ಮನಸೋ ಇಚ್ಛೆ ಹಲ್ಲೆ ಮೂವರ ಬಂಧನ
ಬೆಂಗಳೂರು: ಚಹಾ ಹಾಗೂ ಸಿಗರೇಟ್ ಕೊಡುವ ವಿಚಾರದಲ್ಲಿ ಕುಂದಲಹಳ್ಳಿ ಗೇಟ್ ಬಳಿಯ ಬೇಕರಿ ಸಿಬಂದಿಗೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪಕ್ಕದ ಅಂಗಡಿಯ ಮಾಲಕನೇ ತನ್ನ ಸಹಚರರ ಮೂಲಕ ಕೃತ್ಯ ಎಸಗಿರುವುದು ತನಿಖೆಯಲ್ಲಿ ತಿಳಿದು ಬಂದಿದೆ. ಪ್ರಕರಣದ ಸಂಬಂಧ ನಾಲ್ವರನ್ನು ಎಚ್‌ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೃತ್ಯ ನಡೆದ ಬೇಕರಿಯ ಪಕ್ಕದ ಅಂಗಡಿಯ ಮಾಲಕ ಮಂಜುನಾಥ್, ಡೆಲಿವರಿ ಬಾಯ್ ಅಶ್ವತ್ಥ ನಗರದ ಕಾರ್ತಿಕ್, ಅಲ್ಯೂಮಿನಿಯಂ ಕೆಲಸ …
Read More »ಕನ್ನಡದ ಮಕ್ಕಳು ಉದ್ಯಮಿಗಳಾಗಬೇಕು: C.M. ಬೊಮ್ಮಾಯಿ
ಬೆಂಗಳೂರು, ಡಿಸೆಂಬರ್ 10 : ರುಡ್ ಸೆಟ್ ನಂತಹ ಉತ್ತಮ ತರಬೇತಿ ಕೇಂದ್ರದಿಂದ ಕರ್ನಾಟಕದ ಮಕ್ಕಳು ಲಾಭವನ್ನು ಪಡೆದು, ಉದ್ಯಮಿಗಳಾಗಿ, ಇತರರಿಗೆ ಉದ್ಯೋಗ ನೀಡುವಂತಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶನಿವಾರ ರುಡ್‍ಸೆಟ್ ರಾಷ್ಟ್ರೀಯ ಅಕಾಡೆಮಿ ಹಾಗೂ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಪ್ರಯೋಜಕತ್ವದಲ್ಲಿ ಆಯೋಜಿಸಿರುವ “ರುಡ್‍ಸೆಟ್ ರಾಷ್ಟ್ರೀಯ ಅಕಾಡೆಮಿಯ ನೂತನ ಕಟ್ಟಡ”ದ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಪ್ರಧಾನ ಮಂತ್ರಿಗಳು ಕೌಶಲ್ಯ ಭಾರತದಡಿ ಶೇ 44 ರಷ್ಟಿರುವ ಯುವಕರಿಗೆ ಕೌಶಲ್ಯ …
Read More »ಖಾನಾಪೂರ ತಾಲೂಕಿನ ರಾಮಗುರವಾಡಿ ಗ್ರಾಮದಲ್ಲಿ ರಾಜಕೀಯ ವ್ಯಕ್ತಿಗಳಿಗೆ ಪ್ರವೇಶ ನಿರ್ಬಂಧ
ಖಾನಾಪೂರ ತಾಲೂಕಿನ ರಾಮಗುರವಾಡಿ ಗ್ರಾಮದಲ್ಲಿ ರಾಜಕೀಯ ವ್ಯಕ್ತಿಗಳಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಅದು ಎಲ್ಲಿ ಅಂತೀರಾ ಖಾನಾಪುರ ತಾಲೂಕಿನ ರಾಮಗುರವಾಡಿ ಗ್ರಾಮದಲ್ಲಿ 2023 ವಿಧಾನ ಸಭಾ ಚುನಾವಣೆ ಹೊಸ್ತಿಲಲ್ಲೇ ರಾಜಕೀಯ ವ್ಯಕ್ತಿಗಳಿಗೆ ಬಹಿಷ್ಕಾರ ಹಾಕಲಾಗಿದೆ. ಇದರ ಕುರಿತು ಗ್ರಾಮಸ್ಥರು ಸೂಚನಾ ಫಲಕ ಅಳವಡಿಸುವ ಮೂಲಕ ಯಾವುದೇ ಪಕ್ಷ ಅಥವಾ ಸ್ವತಂತ್ರ ವ್ಯಕ್ತಿಗಳು ಚುನಾವಣಾ ಪ್ರಚಾರಕ್ಕಾಗಿ ಗ್ರಾಮದಲ್ಲಿ ಪ್ರಚಾರ ಅಥವಾ ಸಭೆ ನಡೆಸಬಾರದು, ಖಾನಾಪುರ ತಾಲೂಕಿನ ಶಾಸಕರು ಹಾಗೂ ಇತರೆ ಪಕ್ಷಗಳ …
Read More »
Laxmi News 24×7