Breaking News

ಜಿಲ್ಲೆ

BREAKING NEWS : ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು.

ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್ -ಬೈಕ್ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.   ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಬಳಿ ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಮೃತರನ್ನು ನಾಗರಾಜು (25), ಸೀನು (30) ಮತ್ತು ಜಯಪಾಲ (30) ಎಂದು ಗುರುತಿಸಲಾಗಿದ್ದು, ಶ್ರೀಕಾಂತ ಕರ್ನೂಲು ಎಂಬುವರಿಗೆ …

Read More »

ಪ್ರೀತಿಸಿ ಮದುವೆಯಾಗಿ ದಾರಿ ತಪ್ಪಿದ ಪತ್ನಿ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಪತಿ ಕೊಲೆ ರಹಸ್ಯ.

ಕೋಲಾರ: ದಾರಿ ತಪ್ಪಿದ ಪತ್ನಿ ಅಕ್ರಮ ಸಂಬಂಧ ಬೆಳೆಸಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿಸಿದ ಘಟನೆ ನಡೆದಿದೆ. ಪೊಲೀಸರ ತನಿಖೆಯಲ್ಲಿ ಕೊಲೆ ರಹಸ್ಯ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನ. 28 ರಂದು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆನಂದ್ ನಾಪತ್ತೆಯಾಗಿರುವುದಾಗಿ ಆತನ ಅಣ್ಣ ವೆಂಕಟೇಶ್ ದೂರು ನೀಡಿದ್ದರು. ನಂತರ ಎರಡು ದಿನಗಳ ಬಳಿಕ ಮತ್ತೊಂದು ದೂರು ನೀಡಿ ತಮ್ಮನ ಪತ್ನಿ …

Read More »

ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದ ಗಡಿ ಪ್ರವೇಶಕ್ಕೆ ನಿಷೇಧ : ಬೆಳಗಾವಿ ಡಿಸಿ ಆದೇಶ

ಬೆಂಗಳೂರು- ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಗಡಿವಿವಾದದ ಸಂಘರ್ಷ ತಾರಕ್ಕೇರಿರುವ ಬೆನ್ನಲ್ಲೇ, ಇಂದು ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ 14,   ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯದಲ್ಲಿ ಕರ್ನಾಟಕ-ಮಹಾರಾಷ್ಟ್ರ ಉಲ್ಬಣಿಸಿದೆ. ಈ ಹಿಂದೆ ಕರ್ನಾಟಕಕ್ಕೆ ಬರಲಿರುವ ಮಹಾರಾಷ್ಟ್ರ ಸಚಿವರಿಗೆ ಇಲ್ಲಿಗೆ ಆಗಮಿಸಲು ಬಿಡಬಾರದು ಎಂದು ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಾಗಿತ್ತು. ಈ ಹಿನ್ನಲೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ …

Read More »

ಮಹಾರಾಷ್ಟ್ರ ಸಚಿವರ ಗಡಿ ಪ್ರವೇಶಕ್ಕೆ ನಿಷೇಧ ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ

ಬೆಳಗಾವಿಗೆ ಮಹಾರಾಷ್ಟ್ರ ಸಚಿವದ್ವಯರ ಸಂಸದ ಭೇಟಿ ವಿಚಾರ ಗಡಿ ಪ್ರವೇಶಕ್ಕೆ ನಿಷೇಧ ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ. ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದನ ಗಡಿ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದ್ದು CRPC 1973 ಕಲಂ 144(3)ರ ಅನ್ವಯ ಪ್ರದತ್ತ ಅಧಿಕಾರ ಬಳಸಿ ಡಿಸಿ ಆದೇಶಸಿದ್ದಾರೆ. ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧಿತ ಆದೇಶ ನೀಡಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ನೀಡಿದ್ದು ಮಹಾರಾಷ್ಟ್ರದ ಗಡಿ ಸಮನ್ವಯ …

Read More »

ಬೆಳಗಾವಿಯ ಪ್ರಭಾವಿ ರಾಜ ಕಾರಣಿಗಳ ಮೌನ ಮತ್ತು ತಟಸ್ಥ ನಿಲುವು ಈಗ ಅನು ಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿ ಬೆಳಗಾವಿಯ ಪ್ರಭಾವಿ ರಾಜ ಕಾರಣಿಗಳ ಮೌನ ಮತ್ತು ತಟಸ್ಥ ನಿಲುವು ಈಗ ಅನು ಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಸದ್ಯದಲ್ಲೇ ಬೆಳಗಾವಿ ಗಡಿ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ. ಹಾಗೆಯೇ ಮಹಾರಾಷ್ಟ್ರದ ಇಬ್ಬರು ಸಚಿವರು ಬೆಳಗಾವಿಗೆ ಬರಲು ತಯಾರಾಗಿದ್ದಾರೆ. ಈ ಅಂಶಗಳಿಂದ ವಿವಾದಕ್ಕೆ ಹೆಚ್ಚಿನ ಮಹತ್ವ ಬಂದಿದೆ. ಬೆಳಗಾವಿಯ ಜತೆಗೆ ನಿಕಟ ಸಂಪರ್ಕ ಇರಿಸಿಕೊಂಡಿರುವ ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ ಪಾಟೀಲ ಮತ್ತು …

Read More »

ಶಾಲೆಗೆ ಹೋಗಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಬೆಳಗಾವಿ: ಶಾಲೆಗೆ ಹೋಗಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಗುಜರಾತ್ ಮೂಲದ ಬಿ.ಕೆ. ಕಂಗ್ರಾಳಿಯ ನಿವಾಸಿ ಆಕಾಶ ಭರತಕುಮಾರ ದೋಂಡಿಯಾ (19) ಬಂಧಿತ. ತಾಲ್ಲೂಕಿನ ಗ್ರಾಮವೊಂದರ 14 ವರ್ಷದ ಬಾಲಕಿ ನಗರದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಬಾಲಕಿಯನ್ನು ಪುಸಲಾಯಿಸಿ ಸಲುಗೆ ಬೆಳೆಸಿದ ಆರೋಪಿ, ಗುಜರಾತಿಗೆ ಕರೆದೊಯ್ದು ಎರಡು ದಿನ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಮರಳಿ ಬೆಳಗಾವಿಗೆ ಬಂದು ತಂದೆಗೆ …

Read More »

ನಂದಗಡದಲ್ಲಿ ಈಗ ಸುಧಾರಣಾ ಪರ್ವ ಆರಂಭ

ನಂದಗಡ (ಖಾನಾಪುರ ತಾಲ್ಲೂಕು): ಕ್ರಾಂತಿಯ ನೆಲ, ರಕ್ತಸಿಕ್ತ ಇತಿಹಾಸಕ್ಕೆ ಸಾಕ್ಷಿಯಾಗಿ ನಿಂತ ತಾಲ್ಲೂಕಿನ ನಂದಗಡದಲ್ಲಿ ಈಗ ಸುಧಾರಣಾ ಪರ್ವ ಆರಂಭವಾಗಿದೆ. ಈ ಸ್ಥಳಕ್ಕೆ ಜಾಗತಿಕ ಗುರುತು ತಂದುಕೊಟ್ಟ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಮಾಧಿ ಈಗ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.   ಹಲವು ವರ್ಷಗಳಿಂದ ನಂದಗಡ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಚನ್ನಮ್ಮನ ಕಿತ್ತೂರು, ಬೈಲಹೊಂಗಲದಲ್ಲಿ ಆದಂಥ ಅಭಿವೃದ್ಧಿ ಕಾರ್ಯಗಳನ್ನು ಇಲ್ಲಿಯೂ ಮಾಡಬೇಕು ಎಂದು ಜನ ದಶಕದಿಂದ ಹೋರಾಟ ಮಾಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಶುಕ್ರದೆಸೆ …

Read More »

ಬೆಳಗಾವಿ | ವೈಯಕ್ತಿಕ ಕಾರಣಕ್ಕೆ ಅಣ್ಣನ ಕೊಲೆ ಮಾಡಿದ ತಮ್ಮ

ನಾಗರಮುನ್ನೋಳಿ: ಸಮೀಪದ ಉಮರಾಣಿ ಗ್ರಾಮದ ಹೊರವಲಯದಲ್ಲಿ ನಿಪ್ಪಾಣಿ- ಮುಧೋಳ ರಸ್ತೆಯಲ್ಲಿ ತಮ್ಮನೇ ಅಣ್ಣನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಚಿಕ್ಕೋಡಿ ಪಟ್ಟಣದ ಡಂಬಳ ಕಾಲೊನಿ ನಿವಾಸಿ ಅಕ್ಬರ್‌ ಅಬ್ದುಲ್‌ ಶೇಖ್‌ (40) ಕೊಲೆಯಾದವರು. ಅಮ್ಜಾದ್ ಅಬ್ದುಲ್‌ ಶೇಖ್ (32) ಆರೋಪಿ. ಅಕ್ಬರ್ ಅಬ್ದುಲ್‌ ಶೇಖ್ ಅವರು ಕಬ್ಬೂರು ಗ್ರಾಮದಿಂದ ಚಿಕ್ಕೋಡಿಗೆ ದ್ವಿಚಕ್ರ ವಾಹನದ ಮೇಲೆ ಬರುತ್ತಿರುವ ವೇಳೆ ಕಾರಿನಿಂದ ಹಿಂಬಾಲಿಸಿಕೊಂಡು ಬಂದ ಸಹೋದರ, ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದರು. ವೈಯಕ್ತಿ ಕಾರಣವಳಿಂದ …

Read More »

ರಾಜ್ಯದ 60 ವರ್ಷ ಮೇಲ್ಪಟ್ಟವರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ಉಚಿತ ಕಣ್ಣಿನ ಆಪರೇಷನ್‌, ಕನ್ನಡಕ ವಿತರಣೆ

ಹಾವೇರಿ: ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕಣ್ಣಿನ ಆಪರೇಷನ್ ( Eye Operation ) ಮಾಡಿಸಲಾಗುತ್ತದೆ. ಅಲ್ಲದೇ ಉಚಿತ ಕನ್ನಡಕವನ್ನು ಕೂಡ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಹೇಳಿದ್ದಾರೆ.   ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಇಂದು ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ರಮಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿದ ಅವರು, 96 ಕೋಟಿ ವೆಚ್ಚದ ಆಸ್ಪತ್ರೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. …

Read More »

ಸಿಸಿಬಿ ಖಡಕ್‌ ವಾರ್ನಿಂಗ್‌ಗೆ ಬೆಂಗಳೂರು ಬಿಡ್ತಿದ್ದಾರೆ ರೌಡಿಗಳು

ಬೆಂಗಳೂರು : ರಾಜಕೀಯ ನಾಯಕರ ಜೊತೆ ರೌಡಿ ಶೀಟರ್‌ಗಳು ವೇದಿಕೆ ಹಂಚಿಕೊಳ್ಳುವುದಕ್ಕೆ ಶುರು ಮಾಡಿದ್ರೋ ಆಗಿನಿಂದ ಇದು ಪೊಲೀಸ್‌ ಇಲಾಖೆಗೆ ದೊಡ್ಡ ತಲೆನೋವಾಗಿದೆ. ಸದ್ಯ ರಾಜಕೀಯದಿಂದ ಮುಜಗರಕ್ಕೆ ಇಡಾಗಿದ್ದ ಸಿಸಿಬಿ ಬೆಂಗಳೂರು ರೌಡಿಗಳ ವಿಷಯದಲ್ಲಿ ಖಡಕ್ ತೀರ್ಮಾನ ತೆಗೆದುಕೊಂಡಿದೆ. ರೌಡಿಗಳಿಗೆ ಊರು ಬಿಡುವಂತೆ ಖಡಕ್‌ ವಾರ್ನಿಂಗ್ ಕೊಟ್ಟಿದ್ದಾರೆ. ಸಿಸಿಬಿ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳೋದಕ್ಕಾಗಿ ರೌಡಿಗಳನ್ನ ಊರು ಬಿಡಿಸಿದ್ದಾರೆ   .ಸೈಲೆಂಟ್ ಸುನೀಲ ರಾಜಕೀಯ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು, ಸಿಸಿಬಿಗೆ ದೊಡ್ಡ ಮುಜುಗರ ಊಂಟು …

Read More »