Breaking News

ಜಿಲ್ಲೆ

ಹಿಂದೂ ಎಂಬುದು ಧರ್ಮವಲ್ಲ: ಸಿದ್ಧರಾಮಶ್ರೀ

ಬೆಳಗಾವಿ: ‘ಹಿಂದೂ ಎಂಬುದು ಧರ್ಮವಲ್ಲ, ಅದು ಜೀವನಕ್ರಮವೆಂದು ಡಾ.ಸರ್ವ‍ಪಲ್ಲಿ ರಾಧಾಕೃಷ್ಣನ್ ಅವರೇ ಹೇಳಿದ್ದಾರೆ. ಆದರೆ, ಇಂದು ವೈದಿಕ ಧರ್ಮಕ್ಕೆ ಹಿಂದೂ ಧರ್ಮ ಎನ್ನಲಾಗುತ್ತಿದೆ. ಹೀಗೆ ಉಚ್ಚರಿಸಿದರೆ ಲಿಂಗಾಯತರೇನು ಹಿಂದೂಗಳಾಗು ವುದಿಲ್ಲ’ ಎಂದು ಗದುಗಿನ ತೋಂಟದಾರ್ಯ ಮಠದ ಪೀಠಾಧಿಪತಿ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವೇದ, ಆಗಮ, ಪುರಾಣವನ್ನು ವಿರೋಧಿಸಿದ ಲಿಂಗಾಯತ ಅವೈದಿಕ ಧರ್ಮವಾಗಿದೆ. ಲಿಂಗಾಯತರು ಮತ್ತು ಹಿಂದೂಗಳ ಆಚರಣೆಯಲ್ಲಿ ಸಾಕಷ್ಟು ಭಿನ್ನಾಭಿಪ್ರಾಯ ಇವೆ’ ಎಂದರು. ‘ಹಿಂದೂಗಳು …

Read More »

ರೈತನಿಗೆ ಪರಿಹಾರ ವಿಳಂಬ: ಅಧಿಕಾರಿಗಳ ವಾಹನ ಜಪ್ತಿ

ಚಿಕ್ಕೋಡಿ : ರಸ್ತೆ ನಿರ್ಮಿಸಲು ಸ್ವಾದೀನ ಪಡೆದಿದ್ದ ಭೂಮಿಗೆ ರೈತನಿಗೆ ₹11 ಲಕ್ಷ ಪರಿಹಾರಧನ ನೀಡಲು ವಿಳಂಬ ಹಿನ್ನೆಲೆಯಲ್ಲಿ ಕೋರ್ಟ್‌ ಆದೇಶದಂತೆ ಉಪವಿಭಾಗಾಧಿಕಾರಿ ಮತ್ತು ಲೋಕೋಪಯೋಗಿ ಇಲಾಖೆ ಎಇಇ ಅವರ ವಾಹನಗಳನ್ನು ಗುರುವಾರ ಜಪ್ತಿ ಮಾಡಲಾಗಿದೆ.   15 ವರ್ಷದ ಹಿಂದೆ ಚಿಕ್ಕೋಡಿ ತಾಲ್ಲೂಕಿನ ಮಾಂಗೂರ (ಈಗಿನ ನಿಪ್ಪಾಣಿ ತಾಲ್ಲೂಕು) ಗ್ರಾಮದ ರೈತ ಬುದ್ದಿರಾಜ ಶಾಂತಿನಾಥ ಪಾಟೀಲ ಅವರ 31 ಗುಂಟೆ ಭೂಮಿಯನ್ನು ಇಲಾಖೆ ಪಡೆದುಕೊಂಡಿತ್ತು. ಈವರೆಗೂ ರೈತನಿಗೆ ಪರಿಹಾರ ಧನ …

Read More »

ಕಾಫಿ ಪುಡಿ ಕಲಬೆರಕೆ: ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್‌

ಬೆಂಗಳೂರು: ಕಲಬೆರಕೆ ಕಾಫಿ ಪುಡಿ ಮಾರಾಟ ಮಾಡಿದ್ದ ಪ್ರಕರಣದ ಅಪರಾಧಿಗೆ ಹಾಸನದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್‌ ವಿಧಿಸಿದ್ದ ಜೈಲು ಶಿಕ್ಷೆಯನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. ಶಿಕ್ಷೆ ರದ್ದು ಕೋರಿ ಸಕಲೇಶಪುರದ ‘ಸೆಲೆಕ್ಟ್ ಕಾಫಿ ವರ್ಕ್ಸ್‌’ ಮಾಲೀಕ ಸಯ್ಯದ್ ಅಹ್ಮದ್ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಚ್.ಬಿ.ಪ್ರಭಾಕರ ಶಾಸ್ತ್ರಿ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ.   ಪ್ರಕರಣವೇನು?: ಪೊಟ್ಟಣದ ಮೇಲೆ ಬ್ಯಾಚ್ ಸಂಖ್ಯೆ ಹಾಗೂ ಎಕ್ಸ್‌ಪೈರಿ ದಿನಾಂಕ ನಮೂದಿಸದೆ ಕಾಫಿ ಪುಡಿ …

Read More »

ಉತ್ತರ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ವಂದೇ ಭಾರತ್ ರೈಲು

ಹುಬ್ಬಳ್ಳಿ ನವೆಂಬರ್ 16: ಉತ್ತರ ಕರ್ನಾಟಕದ ಮಂದಿಗೆ ಹೀಗೊಂದು ಸಿಹಿ ಸುದ್ದಿ. ಅದೇನೆಂದರೆ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಒದಗಿಸಲು ಯೋಜನೆ ರೂಪಸಲಾಗುತ್ತಿದೆ. ಇದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೆ ಮುಂದೊಂದು ದಿನ ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ರೈಲು ಅದರಲ್ಲೂ ಉತ್ತರ ಕರ್ನಾಟಕದ ಕಡೆಗೆ ಪ್ರಯಾಣಿಸಲಿದೆ. ಕರ್ನಾಟಕದ ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಹೊಸ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಪ್ರಾರಂಭಿಸಲು ನೈಋತ್ಯ ರೈಲ್ವೆ (SWR) ರೈಲ್ವೇ …

Read More »

ಅರಮನೆಯಲ್ಲಿರುವ ಗುಂಬಜ್ ಮಾದರಿ ಗೋಪುರ ಕೆಡವಲು ತಾಕತ್ ಇದೆಯೇ?: ಸಿ.ಎಂ.ಇಬ್ರಾಹಿಂ ಪ್ರಶ್ನೆ

ಮೈಸೂರು: ಟಿಪ್ಪುಸುಲ್ತಾನ್ ಬಗ್ಗೆ ಬ್ರಿಟಿಷರು ಹಾಡಿ ಹೊಗಳಿದ್ದಾರೆ. ರಾಜಮನೆತನದವರು ಟಿಪ್ಪು ಹುತಾತ್ಮರಾದ ಮೇಲೆ ಹೇಳಿರುವ ಮಾತುಗಳು ಇತಿಹಾಸದಲ್ಲಿ ದಾಖಲಾಗಿದ್ದರೂ ಸಂಸದ ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಬೇಕು. ಟಿಪ್ಪು ಬಗ್ಗೆ ಏನು ಅರಿಯದೆ ಸುಳ್ಳು ಹೇಳುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಾಗ್ದಾಳಿ ನಡೆಸಿದರು.   ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಟಿಪ್ಪುಸುಲ್ತಾನ್ ಬ್ರಿಟಿಷರ ವಿರುದ್ಧ ಹೋರಾಡಿದ ಮಹಾನ್ ನಾಯಕ. ಅವರ ಕಾಲದಲ್ಲಿ ನಡೆದಿರುವ ಕ್ರಾಂತಿಕಾರಕ ಯೋಜನೆಗಳು, ಅಭಿವೃದ್ಧಿ, ಹೋರಾಡಿದನ್ನು …

Read More »

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಸರಕಾರದ ಹಂತಕ್ಕೆ

ಬೆಂಗಳೂರು: ಲೈಂಗಿಕ ಹಗರಣದಲ್ಲಿ ಸಿಲುಕಿರುವ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಜೈಲು ಸೇರಿರುವ ಹಿನ್ನೆಲೆಯಲ್ಲಿ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ ಈಗ ಸರ್ಕಾರದ ಹಂತಕ್ಕೆ ತಲುಪಿದೆ. ಮಠದ ಆಡಳಿತಾಧಿಕಾರಿ ನೇಮಕ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ಕಡತವನ್ನು ಸರ್ಕಾರ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದ್ದು, ಸರ್ಕಾರ ಶೀಘ್ರದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಉನ್ನತ ಮೂಲಗಳು ತಿಳಿಸಿವೆ.   ಈ‌ ಕಡತ ಈಗ ಕಂದಾಯ ಇಲಾಖೆ ಕಾರ್ಯದರ್ಶಿ ಕಚೇರಿಯನ್ನು ತಲುಪಿದ್ದು, …

Read More »

ಮಕ್ಕಳ ಅಭಿವೃದ್ಧಿ ಮೇಲಿದೆ ದೇಶದ ಭವಿಷ್ಯ; ಮಲಿಕಜಾನ

ಬೆಳಗಾವಿ: ಪ್ರತಿಯೊಂದು ದೇಶದ ಭವಿಷ್ಯ ಅಲ್ಲಿಯ ಮಕ್ಕಳ ಸಮಗ್ರ ಅಭಿವೃದ್ಧಿಯ ಮೇಲೆ ನಿಂತಿದೆ. ಮಕ್ಕಳ ಅಭಿವೃದ್ಧಿಯು ಅವರ ಶಿಕ್ಷಣದ ಮೇಲಿದೆ. ಹೀಗಾಗಿ ಎಲ್ಲ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವತ್ತ ಹೆಚ್ಚಿನ ಗಮನ ಕೊಡಬೇಕಿದೆ ಎಂದು ಶಿಕ್ಷಕ ಮಲಿಕಜಾನ ಗದಗಿನ ಹೇಳಿದರು.   ಕಣಬರಗಿಯ ಶ್ರೀ ರವಿಶಂಕರ ವಿದ್ಯಾವರ್ಧಕ ಸಂಸ್ಥೆಯ ಸಮತಾ ಶಾಲೆಯಲ್ಲಿ ಜರುಗಿದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಪಂಚ ವಾರ್ಷಿಕ ಯೋಜನೆಗಳ ಮೂಲಕ ಕೃಷಿ, ಕೈಗಾರಿಕೆ …

Read More »

ಚಿತ್ರದುರ್ಗ ಮಠದ ಮಾಜಿ ಆಡಳಿತಾಧಿಕಾರಿಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಪೋಕ್ಸೊ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ನೀಡಿದ ಆರೋಪದಡಿ ಬಂಧಿತರಾಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಶಿಕ್ಷಕ ಬಸವರಾಜೇಂದ್ರ ಅವರಿಗೆ ಜಿಲ್ಲಾ ನ್ಯಾಯಾಲಯ ನ.28ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.   ಪೊಲೀಸ್ ಕಸ್ಟಡಿ ಅವಧಿ ಮುಗಿದ ಪರಿಣಾಮ ತನಿಖಾ ತಂಡ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಿತು. ಪೊಲೀಸ್ ವಿಚಾರಣೆ ಪೂರ್ಣಗೊಂಡಿದ್ದರಿಂದ ಇಬ್ಬರು …

Read More »

ಬಸವಲಿಂಗ ಶ್ರೀ ಆತ್ಮಹತ್ಯೆ: ಆರೋಪಿಗಳ‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮನಗರ: ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ ಮೂವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಇದೇ 29ರವರೆಗೆ ವಿಸ್ತರಿಸಿ ನ್ಯಾಯಾಲಯವು ಮಂಗಳವಾರ ಆದೇಶಿಸಿತು. ಪ್ರಕರಣದ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ಅವರನ್ನು ಪೊಲೀಸರು ಮಂಗಳವಾರ ಮಾಗಡಿ ಜೆಎಂಎಫ್ ಸಿ ನ್ಯಾಯಾಧೀಶೆ ಎಂ. ಧನಲಕ್ಷ್ಮಿ ಅವರ ಎದುರು ಹಾಜರುಪಡಿಸಿದರು.   ಪ್ರಕರಣದ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ಅವರನ್ನು ಪೊಲೀಸರು ಮಂಗಳವಾರ …

Read More »

ಕ್ರಿಕೆಟ್ ತಾರೆ ರಾಜೇಶ್ವರಿ ಗಾಯಕವಾಡಗೆ ಗೌರವ ಡಾಕ್ಟರೇಟ್ ಪ್ರದಾನ

ವಿಜಯಪುರ: ಮಹಿಳಾ ಕ್ರಿಕೆಟ್‌ನಲ್ಲಿ ಮಿಂಚುತ್ತಿರುವ ವಿಜಯಪುರದ ಹೆಮ್ಮೆಯ ಕ್ರೀಡಾಪಟು ರಾಜೇಶ್ವರಿ ಗಾಯಕವಾಡ ಅವರಿಗೆ ರಾಜಸ್ಥಾನ ರಾಜ್ಯದ ಉದಯಪುರದ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.   ಉದಯಪುರ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಘಟಿಕೋತ್ಸವದಲ್ಲಿ ರಾಜೇಶ್ವರಿ ಗಾಯಕವಾಡ ಅವರಿಗೆ ಎಸ್.ಪಿ.ಎಸ್.ಯು ಅಧ್ಯಕ್ಷರಾದ ಡಾ.ಪದ್ಮಕಲಿ ಬ್ಯಾನರ್ಜಿ ಹಾಗೂ ಡಾ.ನಿಧಿಪತಿ ಸಿಂಗಾನಿಯಾ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಇದೇ ಮೊದಲ ಬಾರಿಗೆ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿಯೊಬ್ಬರಿಗೆ ಈ ಗೌರವ ಡಾಕ್ಟರೇಟ್ ದೊರೆತಿದೆ.

Read More »