ಬೆಳಗಾವಿ: ಈ ಬಾಲಕನ ವಯಸ್ಸು ಹದಿಮೂರು. ಈಗಾಗಲೇ ಆತನಿಗೆ ಹನ್ನೆರಡು ಶಸ್ತ್ರಚಿಕಿತ್ಸೆಗಳಾಗಿವೆ. ಆದರೆ, ಈ ಬಾಲಕನ ಸಾಧನೆಗೆ ಯಾವುದೂ ಅಡ್ಡಿಬಂದಿಲ್ಲ. ಅಂಗ ವೈಕಲ್ಯದ ಮಧ್ಯೆಯೂ ರಾಷ್ಟ್ರಮಟ್ಟದ ಈಜು ಟೂರ್ನಿಗಳಲ್ಲಿ ಮಿಂಚುತ್ತಿದ್ದಾರೆ. ನಗರದ ಅನಗೋಳ ಬಡಾವಣೆಯ ಈಜುಪಟು ಅನಿಕೇತ್ ಚಿದಂಬರ ಪಿಲನಕರ್ ಯಶೋಗಾಥೆ ಇದು. ಹುಟ್ಟಿನಿಂದಲೂ ಆರೋಗ್ಯ ಸಮಸ್ಯೆ ಎದುರಿಸುತ್ತಲೇ ಬೆಳೆದ ಬಾಲಕ, ಇದೀಗ ಈಜಿನಲ್ಲಿ ಸಾಧನೆ ಮೆರೆಯುತ್ತಿದ್ದಾರೆ. ರಾಷ್ಟ್ರೀಯ ಟೂರ್ನಿಗಳಲ್ಲಿ 6, ರಾಜ್ಯಮಟ್ಟದ ಟೂರ್ನಿ ಗಳಲ್ಲಿ 3 ಚಿನ್ನದ …
Read More »ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಹತ್ಯೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಹುಕ್ಕೇರಿ ಪೊಲೀಸರು ಯಶಸ್ವಿ
ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಓರ್ವ ಅಜ್ಜಿಯನ್ನು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಹುಕ್ಕೇರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ಅಕ್ಟೋಬರ್ 7ರಂದು ಬೆಲ್ಲದಬಾಗೇವಾಡಿಯ ಮನೆಯೊಂದರಲ್ಲಿ 75 ವರ್ಷದ ಮಲ್ಲವ್ವ ಜೀವಪ್ಪ ಕಮತೆ ಎಂಬ ವೃದ್ಧ ಮಹಿಳೆ ಸಾವನ್ನಪ್ಪಿದ್ದರು. ಈ ವೇಳೆ ಸ್ಥಳಕ್ಕೆ ಭೇಟಿ ಕೊಟ್ಟಿದ್ದ ಹುಕ್ಕೇರಿ ಪೊಲೀಸರು ಆರಂಭದಲ್ಲಿ ಅನೈಸರ್ಗಿಕ ಸಾವು ಎಂದು ಕೇಸ್ ದಾಖಲಿಸಿಕೊಂಡಿದ್ದರು. ಆದರೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಈ ಅಜ್ಜಿಯನ್ನು ಕತ್ತು …
Read More »ಈ ಬಾರಿ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಅನುಮತಿ: ಶಿಕ್ಷಣ ಇಲಾಖೆ
ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸವನ್ನು ಪ್ರಸಕ್ತ ವರ್ಷದಿಂದ ಪುನರಾರಂಭಿಸಲು ಶಿಕ್ಷಣ ಇಲಾಖೆ ಅನುಮತಿ ಕೊಟ್ಟಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕಡ್ಡಾಯವಾಗಿ ಶಾಲಾ ಮಾನ್ಯತೆ ನವೀಕರಿಸಿಕೊಂಡಿರುವ ಖಾಸಗಿ ಶಾಲೆಗಳು ಮಾತ್ರ ಪ್ರವಾಸ ಕೈಗೊಳ್ಳಬಹುದಾಗಿದೆ. ಮಾನ್ಯತೆ ನವೀಕರಿಸಿಕೊಳ್ಳದ ಶಾಲೆಗಳಿಗೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯಲು ಅವಕಾಶ ನೀಡಲಿಲ್ಲ. ಪ್ರವಾಸದ ಸಮಯದಲ್ಲಿ ಅವಘಡ ಸಂಭವಿಸಿದರೆ ಶಾಲೆಯ ಮುಖ್ಯಸ್ಥರೇ ಹೊಣೆಗಾರರಾಗಿರುತ್ತಾರೆ. ಇಲಾಖೆಯು ಜವಾಬ್ದಾರಿಯಾಗಿರುವುದಿಲ್ಲ ಎಂದು …
Read More »ಯಂತ್ರಕ್ಕೆ ಸೀರೆ ಸಿಲುಕಿ ಪ್ರಾಣ ಕಳ್ಕೊಂಡ ಮಹಿಳೆ; ಗೋವಿನಜೋಳ ರಾಶಿ ಮಷಿನ್ಗೆ ಸಿಕ್ಕಿ ದೇಹ ಛಿದ್ರ..
ಬಾಗಲಕೋಟೆ: ಕೃಷಿ ಸಂಬಂಧಿತ ಚಟುವಟಿಕೆಗಳ ಸಂದರ್ಭ ಸಣ್ಣ ಎಡವಟ್ಟಿನಿಂದಾಗಿ ಅಂಥ ಕೆಲಸಗಾರರು ಪ್ರಾಣ ಕಳೆದುಕೊಂಡ ಪ್ರಕರಣಗಳು ಸಾಕಷ್ಟು ಸಂಭವಿಸಿವೆ. ಇಂದು ಅಂಥದ್ದೇ ಇನ್ನೊಂದು ಪ್ರಕರಣ ಸಂಭವಿಸಿದ್ದು, ಕೃಷಿ ಚಟುವಟಿಕೆ ವೇಳೆ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ. ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಈ ದುರಂತದಲ್ಲಿ ರೇಣುಕಾ ಮಾದರ (45) ಎಂಬಾಕೆ ಸಾವಿಗೀಡಾಗಿದ್ದಾರೆ. ಈಕೆ ಕೂಲಿ ಕೆಲಸಕ್ಕಾಗಿ ಬೇರೆ ಕಡೆಯಿಂದ ಬಂದಿದ್ದರು. ಕೆಲಸದ ವೇಳೆ ಇವರು ಗೋವಿನಜೋಳ ರಾಶಿ …
Read More »ಕುರಿಗಾಹಿಗಳಿಗೆ ಸಿಹಿ ಸುದ್ದಿ: ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಜಾರಿ
ಬೆಂಗಳೂರು: ಮುಂದಿನ ಚುನಾವಣೆಯಲ್ಲಿ 150 ಸ್ಥಾನದ ಗುರಿಯೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೇರುವ ನಿಟ್ಟಿನಲ್ಲಿ ರಣತಂತ್ರ ರೂಪಿಸಿರುವ ಬಿಜೆಪಿ ಸರ್ಕಾರ ಕುರಿಗಾಹಿಗಳನ್ನು ವಿಶ್ವಾಸಕ್ಕೆ ಪಡೆಯಲು ಮುಂದಾಗಿದೆ. ಕುರಿಗಾಹಿಗಳಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಟ್ಟು ಆರ್ಥಿಕವಾಗಿ ಬಲವರ್ಧನೆ ಮಾಡುವ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಜಾರಿಗೊಳಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುರಿದೊಡ್ಡಿಗೆ ಶೆಡ್ ನಿರ್ಮಿಸಿಕೊಳ್ಳಲು ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಕುರಿ ಮಾಂಸಕ್ಕೆ ಬೇಡಿಕೆ ಹೆಚ್ಚಾಗಿದೆ. ಮಾರುಕಟ್ಟೆ ಮೇಲಿನ ಮಾಫಿಯಾದ ಹಿಡಿತ ತಪ್ಪಿಸಲು ಕುರಿ …
Read More »ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ :ಯತ್ನಾಳ್‍ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರ ಖಡಕ್ ಎಚ್ಚರಿಕೆ
ಗೋಕಾಕ್‍ನಲ್ಲಿ ನಡೆಯುವ ಬೃಹತ್ ಪಂಚಮಸಾಲಿ ಸಮಾವೇಶದಲ್ಲಿ ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಹೌದು 2ಎ ಮೀಸಲಾತಿಗೆ ಆಗ್ರಹಿಸಿ ಗೋಕಾಕ್ ನಗರದ ನ್ಯೂ ಇಂಗ್ಲಿμï ಶಾಲಾ ಆವರಣದಲ್ಲಿ ಇಂದು ಮಧ್ಯಾಹ್ನ 1ಕ್ಕೆ ಬೃಹತ್ ಪಂಚಮಸಾಲಿ ಸಮಾವೇಶ ಆಯೋಜಿಸಲಾಗಿದೆ. ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದ್ದು ರಾಜ್ಯಸಭಾ ಸದಸ್ಯ …
Read More »ಅಕ್ರಮ ಗಾಂಜಾ ಗಿಡ ಬೆಳೆಸಿದ ಆರೋಪಿ ಅಂದರ್
ಕಿತ್ತೂರು ಪೊಲೀಸ್ ಸಬ್‌ಇನ್ಸಪೇಕ್ಟರ್ ಎಚ್‌ಎಲ್ ಧರ್ಮಟ್ಟಿ, ಬೈಲಹೊಂಗಲ ಡಿಎಸ್‌ಪಿ ಶಿವಾನಂದ ಕಟಗಿ ಮಾರ್ಗದರ್ಶನದಲ್ಲಿ ಖಾನಾಪೂರ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ, ಶಿವಾನಂದ ಶಿವನೆಪ್ಪ ಕಾದ್ರೋಳ್ಳಿಯನ್ನು ಬಂಧಿಸಿ ಸುಮಾರು ೬೦ ಸಾವಿರ ರೂಪಾಯಿ ಮೌಲ್ಯದ ೬ ಕಿಲೋ ಗಾಂಜಾ ಗಿಡಗಳನ್ನು ಮತ್ತು ಗಾಂಜಾ ಮಾರಾಟದಿಂದ ಬಂದ ೧ ಸಾವಿರ ರೂಪಾಯಿ ನಗದನ್ನು ಜಪ್ತಿ ಮಾಡಲಾಗಿದೆ. ಆರೋಪಿಯನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ. ಕಿತ್ತೂರು ಮತ್ತು ಖಾನಾಪೂರ ಪೊಲೀಸರ ಕಾರ್ಯವನ್ನು ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ ಪ್ರಶಂಸಿಸಿದ್ದಾರೆ.
Read More »ವೀರಶೈವ, ಲಿಂಗಾಯತ ಒಂದೇ ನಾಣ್ಯದ ಮುಖಗಳು: ಈಶ್ವರ ಖಂಡ್ರೆ
ತುಮಕೂರು: ಎಲ್ಲ ಧರ್ಮ, ಜಾತಿಗಳಿಗೂ ಪ್ರಪಂಚದ ಮೊದಲ ಸಂಸತ್ತು ಎನಿಸಿಕೊಂಡಿರುವ ಅನುಭವ ಮಂಟಪದಲ್ಲಿ ಅವಕಾಶ ಕಲ್ಪಿಸಿದವರು ಬಸವೇಶ್ವರರು. ಮೌಡ್ಯದಿಂದ ಸಮಾಜವನ್ನು ಹೊರತರಬೇಕೆಂಬುದು ಅವರ ಕನಸಾಗಿತ್ತು. ಇಂತಹ ಕನಸನ್ನು ನನಸು ಮಾಡಲು ನಾವೆಲ್ಲರೂ ಕಟಿಬದ್ಧರಾಗಬೇಕಿದೆ, ವೀರಶೈವ, ಲಿಂಗಾಯತ ಎಂಬುದು ಶರಣ ಸಮಾಜವೆಂಬ ಒಂದು ನಾಣ್ಯದ ಎರಡು ಮುಖಗಳು ಎಂದು ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಈಶ್ವರ ಖಂಡ್ರೆ ಹೇಳಿದರು. ನಗರದ ಶ್ರೀ …
Read More »ಬಿಜೆಪಿ ವಿರುದ್ಧ ಖಾನಾಪುರದಲ್ಲಿ ದಲಿತರ ಪ್ರತಿಭಟನೆ
ಖಾನಾಪೂರದಲ್ಲಿ ವಿವಿಧ ದಲಿತ ಸಂಘಟನೆಗಳ ಒಕ್ಕೂಟದಿಂದ ಸತೀಶ ಜಾರಕಿಹೊಳಿ ಅವರ ವಿರುದ್ಧ ಮಾಡಿದ ಪ್ರತಿಭಟನೆ ಖಂಡಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಲಾಯಿತು. ದಿನಾಂಕ ೧೧ ರಂದು ಖಾನಾಪೂರ ತಾಲೂಕಿನ ಬಿಜೆಪಿ ಸಂಘ ಪರಿವಾರದವರು ಎಲ್ಲ ಹಿಂದೂ ಪರ ಸಂಘಟನೆಗಳು ಒಂದಾಗಿ ಖಾನಾಪೂರ ಪಟ್ಟಣದ ಶಿವಸ್ಮಾರಕದ ಎದುರು ಸತೀಶ್ ಅಣ್ಣಾ ಜಾರಕಿಹೊಳಿಯವರ ವಿರುದ್ಧ ಅವರ ಪ್ರತಿಕೃತಿಯನ್ನು ದಹಿಸಿ ಅವರ ಭಾವಚಿತ್ರಕ್ಕೆ ಅವಮಾನ ಮಾಡೋವ ಮೂಲಕ ಇಡೀ ದಲಿತ ಸಮಾಜಕ್ಕೆ ಧಕ್ಕೆ …
Read More »ಶಾಲಾ ವಾಹನ ಪಲ್ಟಿ-12 ವಿದ್ಯಾರ್ಥಿಗಳಿಗೆ ಗಾಯ
ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾದ ಪರಿಣಾಮ ೧೨ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕರಿಕಟ್ಟಿ ರಸ್ತೆಯಲ್ಲಿ ನಡೆದಿದೆ. ಸವದತ್ತಿಯ ಕುಮಾರೇಶ್ವರ ಶಾಲೆಗೆ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ರಸ್ತೆ ಬದಿಗೆ ಪಲ್ಟಿಯಾಗಿದೆ. ಕರಿಕಟ್ಟಿ-ಅಸುಂಡಿ ಗ್ರಾಮದಿಂದ ಸವದತ್ತಿ ಕುಮಾರೇಶ್ವರ ಶಾಲೆಗೆ ಬರುತ್ತಿದ್ದ ವಾಹನದಲ್ಲಿ ೩೮ ಮಕ್ಕಳು ಪ್ರಯಾಣಿಸುತ್ತಿದ್ದರು. ಇದರಲ್ಲಿ ೧೨ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟಗಾಯಗಳಾಗಿವೆ. ಸವದತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ …
Read More »
Laxmi News 24×7