Breaking News
Home / ಜಿಲ್ಲೆ (page 39)

ಜಿಲ್ಲೆ

ಅವರಾದಿ ಬ್ರಿಡ್ಜ್ ಮೇಲೆ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬೈಕ್ ನೀರಲ್ಲಿ ಕೊಚ್ಚಿ ಹೋದ ಇಬ್ಬರು

ಬೆಳಗಾವಿ: ಘಟಪ್ರಭಾ ನದಿಯಲ್ಲಿ ಇಬ್ಬರು ಸಂಬಂಧಿಕರು ಕೊಚ್ಚಿ ಹೋಗಿರುವ ಘಟನೆ ಮೂಡಲಗಿ ತಾಲೂಕಿನ ಅವರಾದಿ ಬಳಿ ಇಂದು ಮಧ್ಯಾಹ್ನ ನಡೆದಿದೆ. ಅವರಾದಿ ಬ್ರಿಡ್ಜ್ ಮೇಲೆ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಬೈಕ್ ಬಿದ್ದಿದ್ದು, ಅವರಾದಿ ಗ್ರಾಮದ ಚನ್ನಪ್ಪ ಹರಿಜನ(30), ದುರ್ಗವ್ವ ಹರಿಜನ(25) ಕೊಚ್ಚಿಹೋದ ಸಂಬಂಧಿಗಳು ಎಂದು ಗುರುತಿಸಲಾಗಿದೆ.   ಅವರಾದಿ ಗ್ರಾಮದಿಂದ ಮಹಾಲಿಂಗಪುರ ಪಟ್ಟಣಕ್ಕೆ ಇಬ್ಬರು ಹೊರಟಿದ್ದರು. ಈ ವೇಳೆ, ನಿಯಂತ್ರಣ ತಪ್ಪಿ ಬೈಕ್, ಸೇತುವೆ ಮೇಲಿಂದ ನೀರಿನಲ್ಲಿ ಬಿದ್ದಿದೆ.‌ ಬ್ರಿಡ್ಜ್ …

Read More »

ಆಶಾ ಕಾರ್ಯಕರ್ತೆಯರಿಗೆ ಪಿಂಚಣಿ ಸೌಲಭ್ಯ ಇಲ್ಲ, ಸ್ಮಾರ್ಟ್ ಫೋನ್ ನೀಡುವ ಬಗ್ಗೆ ಪರಿಶೀಲನೆ :ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಆಶಾ ಕಾರ್ಯಕರ್ತೆಯರು ಖಾಯಂ ನೌಕರರಲ್ಲ ಹಾಗಾಗಿ ಅವರಿಗೆ ಪಿಂಚಣಿ ವ್ಯವಸ್ಥೆ ಕಲ್ಪಿಸಲು ಸಾಧ್ಯವಿಲ್ಲ, ಆದರೆ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳೆಲ್ಲವೂ ಅವರಿಗೆ ಅನ್ವಯವಾಗಲಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಶಾ ಕಾರ್ಯಕರ್ತೆಯರ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ, ಅವರು ಸ್ವಯಂ ಪ್ರೇರಿತರಾಗಿ ಕೆಲಸ ಮಾಡುತ್ತಿದ್ದಾರೆ ಎಂದರು. ಅದಕ್ಕಾಗಿ ರಾಜ್ಯ ಸರ್ಕಾರ ಅವರಿಗೆ ಐದು ಸಾವಿರ …

Read More »

ರೌಡಿಶೀಟರ್ ಮಾಸ್ತಿಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳು ಶರಣಾಗಿದ್ದಾರೆ.

ಹಾಸನ: ಮೂರು ದಿನಗಳ ಹಿಂದೆ ಚನ್ನರಾಯಪಟ್ಟಣದಲ್ಲಿ ರೌಡಿಶೀಟರ್ ಮಾಸ್ತಿಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳು ಶರಣಾಗಿದ್ದಾರೆ. ಚನ್ನರಾಯಪಟ್ಟಣದ ರೌಡಿಶೀಟರ್ ಹುಲಿವಾಲ ಚೇತು, ಹಾಸನದ ಸಾಲಗಾಮೆ ರಾಕೇಶ್ ಅಲಿಯಾಸ್​ ರಾಕಿ ಮತ್ತು ಮಂಡ್ಯ ಮೂಲದ ಶಿವು, ಶರಣಾದ ಆರೋಪಿಗಳು. ಜೂ.4ರ ಮಂಗಳವಾರ ಐದು ಮಂದಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಮಾಸ್ತಿಗೌಡನನ್ನು ಬರ್ಬರವಾಗಿ ಕೊಲೆ ಮಾಡಿ, ಪರಾರಿಯಾಗಿದ್ದರು. ಆರೋಪಿಗಳಲ್ಲಿ ಮೂವರು ತಾವಾಗಿಯೇ ಶರಣಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ. …

Read More »

ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ C.M. ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅನ್ನಭಾಗ್ಯ ಯೋಜನೆಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಅವರೇನು …

Read More »

ಕೃಷಿ ಭೂಮಿಯಲ್ಲಿ ಅನಧಿಕೃತ ಹೋಂ ಸ್ಟೇ ನಡೆಸಲು ಅವಕಾಶವಿಲ್ಲ: ರೆಡ್ಡಿ ಪ್ರಶ್ನೆಗೆ ಸಚಿವ ಭೈರತಿ ಸುರೇಶ್ ಸ್ಪಷ್ಟನೆ

ಬೆಂಗಳೂರು : ಹಂಪಿ ಯೋಜನಾ ಪ್ರಾಧಿಕಾರ ವ್ಯಾಪ್ತಿಯ ಆನೆಗೊಂದಿ ಪ್ರದೇಶದಲ್ಲಿ ಕೃಷಿ ಭೂಮಿಯಲ್ಲಿ ಅನಧಿಕೃತ ಹೋಂ ಸ್ಟೇ ನಡೆಸಲು ಅವಕಾಶವಿಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿಧಾನಸಭೆಗೆ ಸ್ಪಷ್ಟಪಡಿಸಿದ್ದಾರೆ. ಇಂದು ಶೂನ್ಯವೇಳೆಯಲ್ಲಿ ಸದಸ್ಯ ಜಿ ಜನಾರ್ದನರೆಡ್ಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಹಂಪಿ ಯೋಜನಾ ಪ್ರಾಧಿಕಾರ ವ್ಯಾಪ್ತಿಯಲ್ಲಿ 15 ಗ್ರಾಮಗಳು ಬರುತ್ತವೆ. 2008ರಲ್ಲೇ ಅಧಿಸೂಚನೆ ಹೊರಡಿಸಲಾಗಿದೆ ಎಂದರು. ಹಂಪಿ ಪ್ರಾಧಿಕಾರದ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ 58 ಅನಧಿಕೃತ ಹೋಂ ಸ್ಟೇಗಳಿವೆ. …

Read More »

ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಹಿಂದೆ ಐಸಿಸ್ ಚಿತಾವಣೆ ಇದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಗಂಭೀರ ಆರೋಪ

ಬೆಂಗಳೂರು : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಹಿಂದೆ ಐಸಿಸ್ ಚಿತಾವಣೆ ಇದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಚಿತ್ರಹಿಂಸೆ ಮಾಡಿ ಕರೆಂಟ್ ಶಾಕ್ ಕೊಟ್ಟು ಸ್ವಾಮೀಜಿ ಅವರನ್ನು ಕೊಂದಿದ್ದಾರೆ. ಇದರ ಹಿಂದೆ ಉಗ್ರಗಾಮಿಗಳ ಕೈವಾಡ ಇದೆ. ಇನ್ನು, ಭಯಾನಕ ಘಟನೆ ಭವಿಷ್ಯದಲ್ಲಿ ಕಾಣುವ ಆತಂಕ ಇದೆ. ಘಟನೆ ಹಿಂದೆ …

Read More »

ನಾವು ಜೈನ ಮಂದಿರಕ್ಕೆ ರಕ್ಷಣೆ ಕೊಡುತ್ತೇವೆ ಎಂದ ಗೃಹ ಸಚಿವ ಜಿ.ಪರಮೇಶ್ವರ

ಚಿಕ್ಕೋಡಿಯ ಹಿರೇಕೋಡಿಯ ನಂದಿ ಪರ್ವತ ಆಶ್ರಮದ ಆಚಾರ್ಯ ಶ್ರೀ 108 ಕಾಮಕುಮಾರ ರಾಜ ಮಹಾರಾಜರ ಬರ್ಬರ ಹತ್ಯೆ ಹಿನ್ನೆಲೆಯಲ್ಲಿ ಇಲ್ಲಿನ ವರೂರಿನ ನವಗ್ರಹ ತೀರ್ಥ ಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ಜೈನ್ ಮುನಿಗಳಿಗೆ, ಜೈ‌ನ್ ಬಸದಿಗಳಿಗೆ ಸರ್ಕಾರ ರಕ್ಷಣೆ ನೀಡುವಂತೆ ಆಗ್ರಹಿಸಿ ಸಲ್ಲೇಖನ ವ್ರತ ಕೈಗೊಂಡಿದ್ದರು ಈ ಹಿನ್ನೆಲೆಯಲ್ಲಿ ಇಂದು ಗೃಹ ಸಚಿವ ಜಿ.ಪರಮೇಶ್ವರ ಅವರು ನವಗ್ರಹ ಕ್ಷೇತ್ರಕ್ಕೆ ಭೇಟಿ ಕೊಟ್ಟು ಜೈನ್ ಮುನಿಗಳಿಗೆ ರಕ್ಷಣೆ ನೀಡುವ ಭರವಸೆ ನೀಡಿದರು. …

Read More »

ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಬಿಜೆಪಿ ನಾಯಕರಿಗೆ ಟಾಂಗ್

ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಮುಳುಗಡೆ ಸಂತ್ರಸ್ತರಿಗೆ 5 ಸಾವಿರ ಕೋಟಿ ರೂ ಅಲ್ಲ, 5 ಪೈಸೆಯೂ ಪರಿಹಾರ ಕೊಟ್ಟಿಲ್ಲ ಎಂದು ಬಿಜೆಪಿ ನಾಯಕರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಟಾಂಗ್ ಕೊಟ್ಟಿದ್ದಾರೆ. ಕೃಷ್ಣಾ ತೀರದ ಜನರಿಗೆ ಬಜೆಟ್ ನಲ್ಲಿ ಕಾಂಗ್ರೆಸ್ ಅನ್ಯಾಯ ಮಾಡಿದೆ ಎಂಬ ಮಾಜಿ ಸಚಿವ ಮುರುಗೇಶ ನಿರಾಣಿ ಆರೋಪಕ್ಕೆ ಇಂದು ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಐದು ಸಾವಿರ …

Read More »

ಹೆಚ್ಚಿನ ಮುತುವರ್ಜಿ ವಹಿಸಿ ತನಿಖೆ ನಡೆಸುತ್ತಿದ್ದೇವೆ- ಬೆಳಗಾವಿ ಎಸ್ಪಿ

ಚಿಕ್ಕೋಡಿ (ಬೆಳಗಾವಿ): ಚಿಕ್ಕೋಡಿಯ ಹಿರೇಕೋಡಿ ಜೈನ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಭೀಕರ ಕೊಲೆ ಪ್ರಕರಣವನ್ನು ಹೆಚ್ಚಿನ ಮುತುವರ್ಜಿ ವಹಿಸಿ ತನಿಖೆ ನಡೆಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಂಜೀವ್​ ಪಾಟೀಲ್ ಹೇಳಿದ್ದಾರೆ. ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದಲ್ಲಿ ಶ್ರೀಗಳ ಮೃತದೇಹಗಳ ಅಂತಿಮ ಕಾರ್ಯಗಳ ಸಕಲ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈನ ಮುನಿಗಳ ಪಾರ್ಥಿವ ಶರೀರವನ್ನು ಬೆಳಗಾವಿಯಲ್ಲಿ ಪರೀಕ್ಷೆ ನಡೆಸಿ …

Read More »

ಕಾಮಕುಮಾರ​ ನಂದಿ ಮಹಾರಾಜರ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಬಿಜೆಪಿ‌ ಶಾಸಕ ಅಭಯ ಪಾಟೀಲ್​ ಸರ್ಕಾರವನ್ನು ಒತ್ತಾಯ

ಬೆಳಗಾವಿ : ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ಜೈ‌ನ‌ ಮುನಿಗಳಾದ ಕಾಮಕುಮಾರ​ ನಂದಿ ಮಹಾರಾಜರ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಆಗ್ರಹಿಸಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುನಿಗಳು ಹಣಕಾಸಿನ ವ್ಯವಹಾರ ಮಾಡಿದ್ದಾರೆ ಎಂದು ಪೊಲೀಸರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ಜೈನ ಸಮುದಾಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ. ಪ್ರಕರಣದ ತನಿಖೆ ಅನುಮಾನ ಮೂಡಿಸುವಂತಿದೆ. ಹಾಗಾಗಿ ಸಿಬಿಐಗೆ …

Read More »