Breaking News

ಜಿಲ್ಲೆ

ಇದು ಸ್ಮಶಾನವೋ..? ಗಾಡಿ ಪಾರ್ಕಿಂಗ್ ಜಾಗವೋ..? ಮಾಜಿ ಮೇಯರ್ ವಿಜಯ್ ಮೋರೆ

ಈ ಸ್ಮಶಾನ ಭೂಮಿಯನ್ನು ವಿವಿಧ ಸಂಘಟನೆಗಳು ಕೂಡಿಕೊಂಡು ನಂದನವನವಾಗಿ ಅಭಿವೃದ್ಧಿ ಮಾಡಿದ್ದರು. ಆದರೆ ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ವಹಣೆ ಕೊರತೆಯಿಂದ ಈ ಸ್ಮಶಾನ ಭೂಮಿ ಹಲವು ಸಮಸ್ಯೆಗಳ ತಾಣವಾಗಿ ಮಾರ್ಪಟ್ಟಿದೆ. ಅಲ್ಲದೇ ಇದು ಸ್ಮಶಾನವೋ..? ಗಾಡಿ ಪಾರ್ಕಿಂಗ್ ಜಾಗವೋ..? ಎಂದು ಜನ ಪ್ರಶ್ನಿಸುತ್ತಿದ್ದಾರೆ.   ಎಲ್ಲಿ ಬೇಕಾದಲ್ಲಿ ನಿಲ್ಲಿಸಿರುವ ಹಳೆಯ ವಾಹನಗಳು, ಕಸ ವಿಲೇವಾರಿ ವಾಹನಗಳು, ಹದಗೆಟ್ಟ ರಸ್ತೆ. ಹೌದು ನೀವು ನೋಡುತ್ತಿರುವ ಈ ದೃಶ್ಯ ಬೆಳಗಾವಿಯ ಪ್ರಸಿದ್ಧ ಸದಾಶಿವ ನಗರ …

Read More »

ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ರೈಲ್ವೇ ಗೇಟ್ ಕಳಪೆ ಕಾಮಗಾರಿ ಖಂಡಿಸಿ ಪ್ರತಿಭಟನೆ

ಬೆಳಗಾವಿಯ ಟಿಳಕವಾಡಿ 3ನೇ ರೈಲ್ವೇ ಗೇಟ್‍ನ ಮೇಲ್ಸೇತುವೆಯ ಕಳಪೆ ಕಾಮಗಾರಿ ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ವಿನೂತನ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಹೌದು ಬೆಳಗಾವಿ-ಖಾನಾಪುರ ರಸ್ತೆ ಟಿಳಕವಾಡಿಯಲ್ಲಿ ನಿರ್ಮಿಸಲಾಗಿರುವ 3ನೇ ರೈಲ್ವೇ ಗೇಟ್‍ನ ಮೇಲ್ಸೇತುವೆಯನ್ನು ಕಳೆದ ವಾರವಷ್ಟೇ ಸಂಸದೆ ಮಂಗಲಾ ಅಂಗಡಿ ಅವರು ನಗರ ಶಾಸಕರು, ರೈಲ್ವೇ ಅಧಿಕಾರಿಗಳ ಸಮ್ಮುಖದಲ್ಲಿ ಲೋಕಾರ್ಪಣೆಗೊಳಿಸಿದ್ದರು. ಈ ಮೇಲ್ಸೇತುವೆ ಉದ್ಘಾಟನೆಗೊಂಡ ಕೇವಲ 24 ಗಂಟೆಯಲ್ಲಿಯೇ ರಸ್ತೆಯಲ್ಲಿ ತೆಗ್ಗು ಬಿದ್ದಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕಳಪೆ ಕಾಮಗಾರಿ …

Read More »

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ: ಫೋನ್‌ ಸಂಭಾಷಣೆಯ ಆಡಿಯೊ ವೈರಲ್‌

ಚಿತ್ರದುರ್ಗ: ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾಶ್ರೀ ಬಂಧನಕ್ಕೆ ಒಳಗಾಗಿರುವುದಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವೆ ರಾಣಿ ಸತೀಶ್‌ ಹಾಗೂ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಮಹಡಿ ಶಿವಮೂರ್ತಿ ನಡುವೆ ನಡೆದ ಫೋನ್‌ ಸಂಭಾಷಣೆಯ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.   ಸುಮಾರು 12 ನಿಮಿಷದ ಮಾತುಕತೆಯಲ್ಲಿ ಹಲವು ವಿಚಾರಗಳು ಚರ್ಚೆಗೆ ಬಂದಿವೆ. ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಆಕ್ರೋಶ, ಯಡಿಯೂರಪ್ಪ …

Read More »

ಮುರುಘಾ ಮಠದಲ್ಲಿದೆ ಶಾಮನೂರು, ಯಡಿಯೂರಪ್ಪನವರ ದುಡ್ಡು’ : ಮಾಜಿ ಸಚಿವೆಯ ಸ್ಪೋಟಕ ಆಡಿಯೋ ವೈರಲ್

ಚಿತ್ರದುರ್ಗ : ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿದ ನಂತರ ದಾವಣಗೆರೆಯ ವಿರಕ್ತ ಮಠದ ಶ್ರೀ ಬಸವಪ್ರಭು ಅವರನ್ನು ಮುರುಘಾ ಮಠದ ಉಸ್ತುವಾರಿ ಪೀಠಾಧಿಪತಿಯಾಗಿ ನೇಮಿಸಲಾಗಿದೆ.   ಇದರ ನಡುವೆ ಮಾಜಿ ಸಚಿವೆ ರಾಣಿ ಸತೀಶ ಆಡಿಯೋ ಸಂಭಾಷಣೆಯೊಂದು ವೈರಲ್ ಆಗಿದೆ. ಮಠದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹಾಗೂ ಶಾಮನೂರು ಶಿವಶಂಕರಪ್ಪನವರ ಹಣವಿದೆ ಎನ್ನುವ ವಿಚಾರ ಈ ಆಡಿಯೋದಲ್ಲಿದೆ. …

Read More »

ಕೆಪಿಟಿಸಿಎಲ್‌ ಪರೀಕ್ಷಾ ಅಕ್ರಮ: ಮತ್ತೆ ಇಬ್ಬರ ಬಂಧನ

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಮಂಗಳವಾರ ಪೊಲೀಸರು ಮತ್ತೆ ಇಬ್ಬರು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಸೋಮವಾರ 20 ಮಂದಿಗೆ ಜಾಮೀನು ಕೂಡ ಸಿಕ್ಕಿದೆ.   ಗೋಕಾಕ ತಾಲ್ಲೂಕಿನ ಲೋಳಸೂರ ಗ್ರಾಮದ ಯಲ್ಲಪ್ಪ ಮಹದೇವ ರಕ್ಷಿ (26) ಹಾಗೂ ಚಿಕ್ಕೋಡಿ ತಾಲ್ಲೂಕಿನ ಜಾಗನೂರ ಗ್ರಾಮದ ನಾಗಪ್ಪ ಶಿವಪ್ಪ ದೊಡಮನಿ (27) ಬಂಧಿತರು. ನಾಗಪ್ಪ ಪರೀಕ್ಷಾ ಕೇಂದ್ರದೊಳಗೆ ಎಲೆಕ್ಟ್ರಾನಿಕ್ಸ್‌ ಉಪಕರಣ ತೆಗೆದುಕೊಂಡು ಹೋಗಿ …

Read More »

ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆ ಅಕ್ರಮ; ಇತ್ತ ಜಾಮೀನು- ಅತ್ತ ಬಂಧನ

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಯಲ್ಲಿ ಅಕ್ರಮ ಎಸಗಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಎಲ್ಲ 20 ಮಂದಿಗೂ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಗೋಕಾಕದ ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಜಿ.   ಪ್ರಕರಣದ ವಿಚಾರಣೆ ನಡೆಸಿದ ಗೋಕಾಕದ ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಜಿ. ರಾಜೀವ್‌ ಅವರು ಪ್ರಮುಖ ಆರೋಪಿ ಸಂಜೀವ ಭಂಡಾರಿ ಸೇರಿ ಎಲ್ಲರಿಗೂ ಜಾಮೀನು ನೀಡಿದರು. ಗೋಕಾಕ ನಗರದ ಜಿಎಸ್‌ಎಸ್ ಪರೀಕ್ಷಾ ಕೇಂದ್ರದಲ್ಲಿ ಆಗಸ್ಟ್‌ …

Read More »

ಸಿದ್ದರಾಮಯ್ಯ ದೊಡ್ಡ ದೊಡ್ಡ ಮಾತನಾಡುತ್ತಾರಷ್ಟೇ, ಧಮ್ ಇಲ್ಲ: ಸಿಎಂ ಬೊಮ್ಮಾಯಿ

ಬೀದರ್: ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿನ ಹಗರಣ ಮತ್ತು ಅವ್ಯವಹಾರ ಸಂಬಂಧ ಎಲ್ಲ ಮಾಹಿತಿ, ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ಮುಟ್ಟಿಸುತ್ತೇನೆ. ಅವರು ಏನು ಶಿಕ್ಷೆ ಕೊಡುತ್ತಾರೆ ಕಾದು ನೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸವಾಲು ಹಾಕಿದ್ದಾರೆ.   ಔರಾದ ಪಟ್ಟಣದಲ್ಲಿ ಮಂಗಳವಾರ ‘ಜನಸಂಕಲ್ಪ ಯಾತ್ರೆ’ಗೆ ಚಾಲನೆ ನೀಡಿ ಮಾತನಾಡಿದ ಅವರು, 2016ರ ಶಿಕ್ಷಕರ ನೇಮಕಾತಿ ಹಗರಣ, ಪ್ರಾಸಿಕ್ಯೂಟರ್ ಮತ್ತು ಪೊಲೀಸ್ ನೇಮಕಾತಿಯಲ್ಲಿನ ಹಗರಣ ಸೇರಿ ಎಲ್ಲ …

Read More »

ಕಿತ್ತೂರ ರಾಣಿ ಚನ್ನಮ್ಮಳ ದೇಶ ಪ್ರೇಮ, ಶೌರ್ಯ ಇಂದಿನ ಮಕ್ಕಳಿಗೆ ತಿಳಿವಂತಾಗ ಬೇಕು: ಪವನ ಕತ್ತಿ

ನಮ್ಮ ನಾಡಿನ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ಚನ್ನಮ್ಮಳ ಇತಿಹಾಸ ನಮ್ಮ ಮಕ್ಕಳಿಗೆ ತಿಳಿಸುವದು ಅವಶ್ಯವಾಗಿದೆ ಎಂದು ಹೀರಾ ಶುಗರ ನಿರ್ದೆಶಕ ಪವನ ಕತ್ತಿ ಹೇಳಿದರು. ಕಿತ್ತೂರು ಉತ್ಸವ ಅಂಗವಾಗಿ ರಾಜ್ಯಾದ್ಯಾಂತ ಸಂಚರಿಸುತ್ತಿರುವ ಕಿತ್ತೂರ ಜ್ಯೋತಿಯನ್ನು ಇಂದು ತಾಲೂಕಾ ಆಡಳಿತ ವತಿಯಿಂದ ಭವ್ಯವಾದ ಸ್ವಾಗತ ಕೋರಲಾಯಿತು. ಅಡವಿಸಿದ್ದೇಶ್ವರ ಮಠದ ಆವರಣದಲ್ಲಿ ತಹಸಿಲ್ದಾರ ಡಾ, ಡಿ ಎಚ್ ಹೂಗಾರ ಜ್ಯೋತಿ ಹೋತ್ತ ರಥವನ್ನು ಬರಮಾಡಿಕೊಂಡು ಪೂಜೆ ಸಲ್ಲಿಸಿದರು. ಮಾದ್ಯಮಗಳೊಂದಿಗೆ ಮಾತನಾಡಿದ ತಹಸಿಲ್ದಾರ ಹೂಗಾರ …

Read More »

ಬೆಳಗಾವಿ | ಗಮನ ಸೆಳೆದ ‘ದೀಪೋತ್ಸವ’

ಬೆಳಗಾವಿ: ಇಲ್ಲಿನ ಕೆಎಲ್‌ಇ ಸಂಸ್ಥೆಯ ಸ್ವಶಕ್ತಿ ಮಹಿಳಾ ಸಬಲೀಕರಣ ಘಟಕವು ದೀಪಾವಳಿ ಅಂಗವಾಗಿ ದೀಪೋತ್ಸವ ಎಂಬ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜೆ.ಎನ್. ಮೆಡಿಕಲ್‌ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಈಚೆಗೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಪ್ರಾಚಾರ್ಯರಾದ ಡಾ.ಎನ್.ಎಸ್. ಮಹಾಂತಶೆಟ್ಟಿ, ‘ಮಹಿಳಾ ಸಬಲೀಕರಕ್ಕೆ ಅಗತ್ಯವಾದ ಎಲ್ಲ ಸಹಕಾರ ನೀಡುವಲ್ಲಿ ಈ ಸಂಘ ಕ್ರಿಯಾಶೀಲವಾಗಿದೆ. ಶಿಕ್ಷಣ, ಸಂಘಟನೆ, ಧೈರ್ಯ ನೀಡುವುದರೊಂದಿಗೆ ಸಮಾಜದಲ್ಲಿ ಸ್ವಾಭಿಮಾನಿ ಆಗಲು ಬೇಕಾದ ತರಬೇತಿಗಳನ್ನು ನೀಡುತ್ತಿದೆ’ ಎಂದರು. ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ …

Read More »

ನೀರು ಪೂರೈಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಅನಿಲ ಬೆನಕೆ,

ಬೆಳಗಾವಿ: ಇಲ್ಲಿನ ಸದಾಶಿವ ನಗರಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡದ ಜಲಮಂಡಳಿ ಹಾಗೂ ಎಲ್‌ ಆಯಂಡ್‌ ಟಿ ಕಂಪನಿ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡರು. ಸದಾಶಿವ ನಗರದ ಆರಿದ್ರಾ ಗಣೇಶ ಮಂದಿರ ಆವರಣದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕ ಅನಿಲ ಬೆನಕೆ, ‘ನೀವೂ ತಪ್ಪು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸಬೇಡಿ. ನಾಲ್ಕು ದಿನಗಳಿಗೊಮ್ಮೆ ಸಮರ್ಪಕವಾಗಿ ನೀರು ಪೂರೈಸಿ. ಜನರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ. ಈ ಬಗ್ಗೆ …

Read More »