ಸವದತ್ತಿ: ಜಗನ್ಮಾತೆ ನಿತ್ಯ ಪೂಜಿತೆ ಏಳುಕೊಳ್ಳದ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿಯ ಸಡಗರ ಅದ್ದೂರಿಯಿಂದ ವಿಜ್ರಂಭಿಸುತ್ತಿದೆ. 7 ನೇ ದಿನ ರವಿವಾರ ರಾಜ್ಯ ಸೇರಿ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ದೇವಿಯ ದರ್ಶನಾಶೀರ್ವಾದ ಪಡೆದು ಪುನೀತರಾದರು. ಏಳುಕೊಳ್ಳಗಳ ನಾಡಿನಲ್ಲಿ ನೆಲೆ ನಿಂತ ಯಲ್ಲಮ್ಮ ದೇವಿ ದರ್ಶನಕ್ಕೆ ನಿತ್ಯವೂ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಘಟಸ್ಥಾಪನೆಯ 5 ನೇ ದಿನ ಶುಕ್ರವಾರ ಭಕ್ತರ ಆಗಮನ ಗಣನೀಯವಾಗಿ ಏರಿಕೆ ಕಂಡಿತ್ತು. 7 ನೇ ದಿನ ರವಿವಾರ …
Read More »ಗೋಕಾಕ್ ಶಾಸಕರಿಗೆ, ಸವದಿಗೆ ಸಚಿವ ಸಂಪುಟ ಸ್ಥಾನಮಾನ ಕೊಡಲಿ: ಮಹೇಶ್ ಕುಮಠಳ್ಳಿ
ಅಥಣಿ: ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನಮಾನ ನೀಡಲಿ. ನನಗೆ ಸಚಿವ ಸ್ಥಾನಕ್ಕಿಂತಲೂ ನನ್ನ ಕ್ಷೇತ್ರದ ಅಭಿವೃದ್ಧಿ ಮುಖ್ಯವಾಗಿದೆ. ನನಗೆ ಸಚಿವ ಸಂಪುಟದಲ್ಲಿ ಸ್ಥಾನ ಬೇಡ ಎಂದು ಶಾಸಕ ಮಹೇಶ್ ಕುಮಠಳ್ಳಿ ಅವರು ಹೇಳಿಕೆ ನೀಡಿದ್ದಾರೆ. ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ನೂತನ ಪೊಲೀಸ್ ಠಾಣೆ ಉದ್ಘಾಟನೆ ನೆರವೇರಿಸಿ ಮಾತನಾಡಿ, ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯವಾಗಿದೆ. …
Read More »ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಅವರನ್ನ ನಾನೂ ಸ್ವಾಗತಿಸುತ್ತೇನೆ ಎಂದ ಲಕ್ಷ್ಮಣ್ ಸವದಿ
ಅಥಣಿ: ರಾಜ್ಯಕ್ಕೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರು ಆಗಮಿಸಿದ್ದು, ಅವರಿಗೆ ನಾನು ಸ್ವಾಗತ ಕೋರುತ್ತೇನೆ, ಅವರು ಕಾಲು ಇಟ್ಟಲೆಲ್ಲ ಬಿಜೆಪಿಯ ಕಮಲ ಅರಳುತ್ತದೆ. ಹಾಗಾಗಿ ನಾನು ಅವರನ್ನ ಸ್ವಾಗತ ಬಯಸುತ್ತೇನೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಲಕ್ಷ್ಮಣ್ ಸವದಿ ಕೈ ಮುಖಂಡರ ವಿರುದ್ಧ ವ್ಯಂಗ್ಯವಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದಲ್ಲಿ ನೂತನವಾಗಿ ಪೊಲೀಸ್ ಠಾಣಾ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸದ್ಯ …
Read More »ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ
ಚಿಕ್ಕೋಡಿ: ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು, ಬೈಕ್ ಹಾಗೂ ಲಾರಿ ನಡುವೆ ಭೀಕರ ಸರಣಿ ಅಪಘಾತವಾಗಿದ್ದು, ಓರ್ವ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿ ಎರಡು ಕಾರು, ಟ್ರಕ್ ಹಾಗೂ 4ಕ್ಕೂ ಹೆಚ್ಚು ಬೈಕ್ಗಳ ನಡುವೆ ಸರಣಿ ಅಪಘಾತವಾಗಿದೆ. ಇದಕ್ಕೂ ಮೊದಲು ಮೊಲ್ಯಾಸೀಸ್ ತುಂಬಿದ್ದ ಟ್ಯಾಂಕರ್ ನಿಂದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಮೊಲ್ಯಾಸೀಸ್ ಸೋರಿಕೆಯಾಗಿದೆ. ಈ …
Read More »200 ವರ್ಷ ಇತಿಹಾಸ ಇರುವ ದೇವನಾಥ ಮಂದಿರ ಕಾಮಗಾರಿ ಶಾಸಕರಿಂದ ಪೂಜೆ
ಅಥಣಿ ಮತಕ್ಷೇತ್ರದ ಜನಪ್ರೀಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿಯ ಅಧ್ಯಕ್ಷರಾದ ಮಹೇಶ ಕುಮಟಳ್ಳಿಯವರಿಂದ ಹಲ್ಯಾಳ ಗ್ರಾಮದಲ್ಲಿ ಸುಮಾರು 12ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ದೇವನಾಥ ದೇವಸ್ಥಾನ ಕಾಮಗಾರಿ ಭೂಮಿ ಪೂಜೆ ಹಾಗೂ 5 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ಹನುಮಾನ ದೇವಸ್ಥಾನದ ಸಮುದಾಯ ಭವನಗಳ ಕಾಮಗಾರಿ ಪೂಜೆಯನ್ನು ನೆರವೇರಿಸಲಾಯಿತು.. ಈ ಸಂದರ್ಭದಲ್ಲಿ ಶ್ರೀ ಮ. ನಿ ಪ್ರ ಗುರುಸಿದ್ದೆಶ್ವರ ಮಹಾಸ್ವಾಮಿಗಳು …
Read More »ಇಂಚಲ ಗ್ರಾಮದ ಪ್ರಸಿದ್ಧ ಅಂಬಾ ಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಷ್ಟಮಿ ಕಾರ್ಯಕ್ರಮಗಳು ವೈಭವದಿಂದ ನೆರವೇರಿದವು.
ಬೈಲಹೊಂಗಲ (ಬೆಳಗಾವಿ ಜಿಲ್ಲೆ): ನವರಾತ್ರಿ ಮಹೋತ್ಸವ ಅಂಗವಾಗಿ ಸಮೀಪದ ಇಂಚಲ ಗ್ರಾಮದ ಪ್ರಸಿದ್ಧ ಅಂಬಾ ಪರಮೇಶ್ವರಿ ದೇವಸ್ಥಾನದಲ್ಲಿ ದುರ್ಗಾಷ್ಟಮಿ ಕಾರ್ಯಕ್ರಮಗಳು ವೈಭವದಿಂದ ನೆರವೇರಿದವು. ಹಲವಾರು ಮಹಿಳೆಯರು ಉಡಿ ತುಂಬುವ ಸಂಪ್ರದಾಯದಲ್ಲಿ ಪಾಲ್ಗೊಂಡರು. ಇಂಚಲ ಶಿವಯೋಗೀಶ್ವರ ಸಾಧು ಸಂಸ್ಥಾನಮಠದ ಪೀಠಾಧಿಪತಿ ಡಾ.ಶಿವಾನಂದ ಭಾರತಿ ಸ್ವಾಮೀಜಿ ಮಾರ್ಗದರ್ಶನದಲ್ಲಿ ದೇವಸ್ಥಾನ ಆಡಳಿತ ಮಂಡಳಿ, ಸಕಲ ವ್ಯವಸ್ಥೆ ಕಲ್ಪಿಸಿದರು. ಪರಮೇಶ್ವರಿ ಮೂರ್ತಿಗೆ ವಿಶೇಷ ಅಲಂಕಾರ, ಪೂಜೆ ನೆರವೇರಿಸಲಾಯಿತು. ಮಹಿಳೆಯರು ಆರತಿ ತಟ್ಟೆ ಹಿಡಿದು, ಕುಂಕುಮ, …
Read More »ದುರ್ಗಾಮಾತಾ ದೌಡ್ ಸ್ವಾಗತಿಸಿ, ಭಾವೈಕ್ಯ ಮೆರೆದ ಮುಸ್ಲಿಮರು
ಬೆಳಗಾವಿ: ನವರಾತ್ರಿ ಅಂಗವಾಗಿ ಶಿವ ಪ್ರತಿಷ್ಠಾನ ಹಿಂದೂಸ್ಥಾನ ವತಿಯಿಂದ 8ನೇ ದಿನವಾದ ಸೋಮವಾರ ದುರ್ಗಾಮಾತಾ ದೌಡ್ ನಡೆಯಿತು. ಇಲ್ಲಿನ ಕ್ಯಾಂಪ್ ಪ್ರದೇಶದಲ್ಲಿ ಮುಸ್ಲಿಮರು ಇದಕ್ಕೆ ಸ್ವಾಗತ ಕೋರಿ, ಭಾವೈಕ್ಯ ಸಂದೇಶ ಸಾರಿದರು. ದುರ್ಗಾಮಾತಾ ದೌಡ್ ಅಂಗವಾಗಿ ಕ್ಯಾಂಪ್‍ನ ಮಾರ್ಗಗಳಲ್ಲಿ ರಂಗೋಲಿ ಚಿತ್ತಾರ ಅರಳಿತ್ತು. ಯುವಕ-ಯುವತಿಯರು, ಮಕ್ಕಳು ಸಾಂಪ್ರದಾಯಿಕ ದಿರಿಸಿನಲ್ಲಿ ಗಮನ ಸೆಳೆದರು. ಬಾಲಕಿಯೊಬ್ಬಳು ಜೀಜಾಮಾತಾ ವೇಷ ಧರಿಸಿ, ಶಿವಾಜಿ ಮಹಾರಾಜರನ್ನು ಸ್ತುತಿಸಿದಳು. ದಂಡು ಮಂಡಳಿ ಮಾಜಿ ಉಪಾಧ್ಯಕ್ಷ ಸಾಜೀದ್ ಶೇಖ್ …
Read More »ಕಾಂಗ್ರೆಸ್ ಈ ದೇಶಕ್ಕೆ ಒಂದು ಶಾಪ, ಇದನ್ನು ಬ್ಯಾನ್ ಮಾಡಬೇಕು: ಬಸವಗೌಡ ಪಾಟೀಲ
ಬಾಗಲಕೋಟೆ: ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡಬೇಕು. ಕಾಂಗ್ರೆಸ್ ಈ ದೇಶಕ್ಕೆ ಒಂದು ಶಾಪವಾಗಿದೆ. ಸ್ವಾತಂತ್ರ್ಯ ಬಳಿಕ ಕಾಂಗ್ರೆಸ್ನನ್ನು ವಿಸರ್ಜಿಸುವಂತೆ ಗಾಂಧೀಜಿ ಹೇಳಿದ್ದರು ಎಂದು ವಿಜಯಪುರ ಶಾಸಕ ಬಸವಗೌಡ ಪಾಟೀಲ ಯತ್ನಾಳ್ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಬಾಗಲಕೋಟೆಯಲ್ಲಿ ಗುಡುಗಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪೂರ್ತಿ ಹತಾಶರಾಗಿದ್ದಾರೆ. ಹೀಗಾಗಿ ಆರ್ಎಸ್ಎಸ್ ಸಂಘಟನೆ ಬ್ಯಾನ್ ಮಾಡಬೇಕು ಎಂದು ಹೇಳುತ್ತಿದ್ದಾರೆ. ಆರ್ಎಸ್ಎಸ್ ದೇಶಭಕ್ತ ಸಂಘಟನೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. …
Read More »ಬಳ್ಳಾರಿ ಕೊಲೆ ಪ್ರಕರಣ : 7 ಜನರ ಬಂಧನ, ಮೂವರಿಗಾಗಿ ಶೋಧ
ಬಳ್ಳಾರಿ : ಸೆ.28ರಂದು ಮಧ್ಯರಾತ್ರಿ ರೇಡಿಯೋ ಪಾರ್ಕ್ ಬಳಿ ಹತ್ಯೆಗೀಡಾಗಿದ್ದ ಕುಂಟ ಮಂಜು ಕೊಲೆ ಪ್ರಕರಣದ ಆರೋಪಿಗಳನ್ನು ಕೌಲ್‍ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಡಿ ಏಳು ಆರೋಪಿಗಳ ಬಂಧನವಾಗಿದ್ದು, ಉಳಿದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇಲಿಯಾಸ್, ಹುಸೇನ್ ಅಲಿಯಾಸ್ ಲಕ್ಷ್ಮಣ, ಭಾಸ್ಕರ್, ಸಂತೋಷ ಸರ್ವರ್, ಪ್ರಭಾಕರ್, ರಘು ಎಂಬುವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. …
Read More »ವಿದ್ಯಾರ್ಥಿಗಳಿಗೆ ಇನ್ನೂ ತಲುಪಿಲ್ಲ “ಟ್ಯಾಬ್’
ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ ಸುಮಾರು ಒಂದೂವರೆ ತಿಂಗಳು ಕಳೆದಿದ್ದು, ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಶೇ.30ರಷ್ಟು ಪಾಠಗಳು ಮುಗಿದಿವೆ. ಆದರೂ ವಿದ್ಯಾರ್ಥಿಗಳಿಗೆ “ಟ್ಯಾಬ್’ ತಲುಪಿಲ್ಲ. ಟ್ಯಾಬ್ ವಿತರಿಸುವ ಸಂಬಂಧ ಉನ್ನತ ಶಿಕ್ಷಣ ಇಲಾಖೆಯು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಅನುಮತಿ ನೀಡಿದ ಬಳಿಕ ಪ್ರಕ್ರಿಯೆ ಆರಂಭವಾಗಲಿದೆ. ಸುಮಾರು 300 ಕೋಟಿ ರೂ. ಅನುದಾನ ಬೇಕಾಗುವುದರಿಂದ ಆರ್ಥಿಕ ಇಲಾಖೆ ಅನುಮತಿ ಪಡೆಯಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಕ್ರಿಯೆ ಆರಂಭವಾಗುವುದು ಸ್ವಲ್ಪ ವಿಳಂಬ …
Read More »
Laxmi News 24×7