Breaking News

ಜಿಲ್ಲೆ

ಐಸಿಯುನಲ್ಲಿದ್ದ ಅಜ್ಜಿಯನ್ನು ಸಬ್​ ರಿಜಿಸ್ಟರ್ ಕಚೇರಿಗೆ ಕರೆತಂದು ಆಸ್ತಿ ಪತ್ರಕ್ಕೆ ಸಹಿ: ಬೆಳಗಾವಿಯಲ್ಲೊಂದು ಘಟನೆ

ಬೆಳಗಾವಿ: ಸಾವು ಬದುಕಿನ‌ ಮಧ್ಯೆ ಹೋರಾಡುತ್ತಿರುವ 80 ವರ್ಷದ ವೃದ್ಧೆಯನ್ನೇ ಸಬ್ ರಿಜಿಸ್ಟರ್ ಕಚೇರಿಗೆ ಕರೆಯಿಸಿಕೊಂಡು ಉಪನೋಂದಣಾಧಿಕಾರಿಗಳು ಸಹಿ ಮಾಡಿಸಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ನಿವಾಸಿ ಮಹಾದೇವಿ ಅಗಸಿಮನಿ (79) ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ 80 ವರ್ಷದ ವೃದ್ಧೆ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಿರೇಬಾಗೆವಾಡಿ ಗ್ರಾಮದಲ್ಲಿ ಮಹಾದೇವಿ ಹೆಸರಿನಲ್ಲಿ 2 ಎಕರೆ 35 ಗುಂಟೆ ಜಮೀನಿದ್ದು, ಆ ಜಮೀನನ್ನು ಮಕ್ಕಳಾದ …

Read More »

ರಾಜ್ಯದ ಎಲ್ಲಾ ಕಾಲೇಜುಗಳ ಅಧ್ಯಾಪಕರಿಗೆ ಸಿಹಿಸುದ್ದಿ

ಬೆಂಗಳೂರು,ಅ.1- ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಪದವಿ ಕಾಲೇಜುಗಳ ಅಧ್ಯಾಪಕರಿಗೆ ಇಂದಿನಿಂದ ಅ.9ರವರೆಗೆ ರಜೆ ಘೋಷಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು, ಖಾಸಗಿ ಅನಿದಾನಿತ ಪದವಿ ಕಾಲೇಜುಗಳು ಹಾಗೂ ಖಾಸಗಿ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಇಂದಿನಿಂದ ಅ.9 ರವರೆಗೆ …

Read More »

ಕಿತ್ತೂರು ಉತ್ಸವಕ್ಕೆ : ₹ 2 ಕೋಟಿ ನೆರವು- ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವ

ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಈ ಭಾಗವನ್ನು ‘ಕಿತ್ತೂರು ಕರ್ನಾಟಕ’ ಎಂದು ಘೋಷಣೆ ಮಾಡಿದ ಬಳಿಕ ನಡೆಯುತ್ತಿರುವ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ₹ 2 ಕೋಟಿ ಅನುದಾನ ನೀಡಿದೆ. ಈ ಬಾರಿಯಿಂದ ರಾಜ್ಯಮಟ್ಟದ ಉತ್ಸವವಾಗಿಯೂ ಆಚರಿಸಲಾಗುತ್ತಿದೆ.   ಪಟ್ಟಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕ ಮಹಾಂತೇಶ ದೊಡ್ಡಗೌಡ್ರ, ಅ.23, 24, 25ರಂದು ವೈಭವ ಮರುಕಳಿಸಲಿದೆ. ಅ.2ರಂದು ಬೆಂಗಳೂರಿನಿಂದ ಹೊರಡುವ ವೀರಜ್ಯೋತಿ ಯಾತ್ರೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ’ …

Read More »

ಭರ್ತಿಯಾಗಿ ಕೋಡಿ ಬಿತ್ತು ನಟ ಯಶ್ ಅಭಿವೃದ್ಧಿಪಡಿಸಿದ್ದ ತಲ್ಲೂರು ಕೆರೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ಕೋಡಿ ಬಿದ್ದಿದೆ. ನಟ ರಾಕಿಂಗ್ ಸ್ಟಾರ್ ಯಶ್ ಅವರು 2016 ರಲ್ಲಿ ಕೋಟ್ಯಂತರ ರೂ. ವೆಚ್ಚದಲ್ಲಿ ಹೂಳು ತೆಗೆಸಿ ಕೆರೆ ಅಭಿವೃದ್ಧಿಪಡಿಸಿದ್ದರು. ಸುಮಾರು 96 ಎಕರೆ ವಿಸ್ತೀರ್ಣದ ಕೆರೆಯಿಂದ 1038 ಎಕರೆ ಜಮೀನಿಗೆ ನೀರಾವರಿ ಕಲ್ಪಿಸಲಾಗುತ್ತದೆ. ಕಳೆದೆರಡು ದಿನಗಳಿಂದ ಭಾರಿ ಮಳೆಯಾಗಿ ಕೆರೆ ತುಂಬಿ ಕೋಡಿ ಬಿದ್ದಿದೆ. ಜಲಪಾತದಂತೆ ಕೋಡಿ ನೀರು ಭೋರ್ಗರೆಯುತ್ತಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಈ ದೃಶ್ಯ ಕಣ್ತುಂಬಿಕೊಳ್ಳಲು ಹೆಚ್ಚಿನ …

Read More »

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ಖರ್ಗೆ ಬಗ್ಗೆ ಅಚ್ಚರಿಯ ಭವಿಷ್ಯ ನುಡಿದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ!

ಬೆಂಗಳೂರು: ಕಾಂಗ್ರೆಸ್​ನ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆ ಸಮೀಪಿಸುತ್ತಿದ್ದು, ಸಂಸದ ಶಶಿ ತರೂರ್ ಮತ್ತು ಮಾಜಿ ಸಚಿವ ಕೆ.ಎನ್​.ತ್ರಿಪಾಠಿ, ಗಾಂಧಿ ಪರಿವಾರದ ನಿಷ್ಠ ಮತ್ತು ಪಕ್ಷದ ಶಿಸ್ತಿನ ಸಿಪಾಯಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿದ್ದಾರೆ. ನಿನ್ನೆಯಷ್ಟೇ ಮೂವರು ನಾಯಕರು ನಾಮಪತ್ರ ಸಲ್ಲಿಸಿದ್ದು, ಮುಂದಿನ ಕಾಂಗ್ರೆಸ್​ ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಕುತೂಹಲ ಗರಿಗೆದರಿರುವಾಗಲೇ ಖರ್ಗೆ ಕುರಿತಾದ ಅಚ್ಚರಿಯ ಭವಿಷ್ಯವೊಂದು ಹೊರಬಿದ್ದಿದೆ. ಇತ್ತೀಚಿನ ದಿನಗಳಲ್ಲಿ ರಾಜಕೀಯ ಭವಿಷ್ಯದ ಕುರಿತು ಭಾರೀ ಸುದ್ದಿಯಲ್ಲಿರುವ ದಾವಣಗೆರೆ ಜಿಲ್ಲೆಯ …

Read More »

ಹಣಕ್ಕೆ ಬೇಡಿಕೆಯಿಟ್ಟಿದ್ದಲ್ಲದೆ, ತನ್ನೊಂದಿಗೆ ಮಲಗುವಂತೆ ಕೇಳಿದ ಆರೋಪ: ಮಂಜು ಪಾವಗಡ ಸಹೋದನಿಗೆ ಥಳಿತ

ತುಮಕೂರು: ಪತ್ರಕರ್ತನ ಸೋಗಿನಲ್ಲಿ ತುಮಕೂರು ಪಾಲಿಕೆ ಸಿಬ್ಬಂದಿಗೆ ಹಣಕ್ಕಾಗಿ ಬೇಡಿಕೆಯಿಟ್ಟು, ಬೆದರಿಕೆಯೊಡ್ಡಿದ್ದ ಆರೋಪದಡಿಯಲ್ಲಿ ಬಿಗ್‌ಬಾಸ್ ಖ್ಯಾತಿಯ ಮಂಜು ಪಾವಗಡ ಸಹೋದರ ಪ್ರದೀಪ್ ಪಾವಗಡ ಹಾಗೂ ಮೂವರು ಯುವತಿಯರು ಸೇರಿದಂತೆ ಒಟ್ಟು ನಾಲ್ವರನ್ನು ತುಮಕೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.   ಪ್ರದೀಪ್​ ಪಾವಗಡ ತಾನೊಬ್ಬ ಸತ್ಯ ವಿಸ್ಮಯ ವಾರ ಪತ್ರಿಕೆ ಸಂಪಾದಕ ಎಂದು ಹೇಳಿಕೊಂಡಿದ್ದ ಮತ್ತು ತುಮಕೂರು ಮಹಾನಗರ ಪಾಲಿಕೆ ನಲ್ಮ್ ವಿಭಾಗದ ಸಿಬ್ಬಂದಿ ದೀಪಿಕಾಗೆ ಪರಿಚಯವಾಗಿದ್ದ. ಸಂಘ, ಸಂಸ್ಥೆ ಹೆಸರಲ್ಲಿ …

Read More »

ಮಹದಾಯಿ ಯೋಜನೆ’ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ : ದಸರಾ ಬಳಿಕ ಕಾಮಗಾರಿ

ಬೆಂಗಳೂರು : ರಾಜ್ಯಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದ ಮಹತ್ವಾಕಾಂಕ್ಷಿ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ದಸರಾ ಹಬ್ಬದ ಬಳಿಕ ಯೋಜನೆಯ ಕಾಮಗಾರಿಗೆ ಚಾಲನೆ ಸಿಗುವ ಸಾಧ್ಯತೆ ಇದೆ.     ಮಹದಾಯಿ ಯೋಜನೆ ಜಾರಿ ಸಂಬಂಧ ಕೇಂದ್ರ ಜಲಶಕ್ತಿ ಇಲಾಖೆ ಅನುಮೋದನೆ ನೀಡಿದೆ. ದಸರಾ ಹಬ್ಬದ ಕಾರಣ ಸರ್ಕಾರಿ ರಜೆಗಳಿರುವ ಕಾರಣ ಕೇಂದ್ರ ಜಲಶಕ್ತಿ ಇಲಾಖೆಯು ನೀಡಿರುವ ಅನುಮೋದನೆ ಆದೇಶವು …

Read More »

ಪ್ರತಿ ಶನಿವಾರ ದಂತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ

ಗೋಕಾಕ : ಸದ್ದಿಲ್ಲದೆ, ಯಾವುದೇ ರೀತಿಯ ಪ್ರಚಾರ ಬಯಸದೆ ನಿಸ್ವಾರ್ಥ ಸೇವೆಯಿಂದ ಜನತೆಯ ಮನದಲ್ಲಿ ಮನೆ ಮಾಡಿದ್ದಾರೆ ಸಾಹುಕಾರ್ ಮನೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ. ಹೌದು ಸಂತೋಷ ಜಾರಕಿಹೊಳಿ ಅವರು ಸಾಕಷ್ಟು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಅನೇಕ ಸಾಮಾಜಿಕ ಕಾರ್ಯಗಳನ್ನು ಸದ್ದಿಲ್ಲದೆ ಮಾಡಿದ್ದಾರೆ. ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ …

Read More »

ಅ.3ರಿಂದ ರಾಜ್ಯ ಹೈಕೋರ್ಟ್ ಗೆ 5 ದಿನಗಳ ದಸರಾ ರಜೆ

ಬೆಂಗಳೂರು: ರಾಜ್ಯ ಹೈಕೋರ್ಟ್‌ಗೆ ಅ.3ರಿಂದ 7ರವರೆಗೆ ದಸರಾ ರಜೆ ಘೋಷಿಸಲಾಗಿದೆ. ಅ.1 ಮತ್ತು 2 ಶನಿವಾರ ಹಾಗೂ ಭಾನುವಾರ ಅದೇ ರೀತಿ ಅ.8 ಮತ್ತು 9 ಕ್ರಮವಾಗಿ ಶನಿವಾರ ಹಾಗೂ ಭಾನುವಾರ ರಜೆ ಇರುವುದರಿಂದ ಒಟ್ಟು 9 ದಿನಗಳ ಕಾಲ ಹೈಕೋರ್ಟ್‌ನ ಬೆಂಗಳೂರು ಪ್ರಧಾನಪೀಠ, ಧಾರವಾಡ ಮತ್ತು ಕಲಬುರಗಿ ಪೀಠಗಳಿಗೆ ರಜೆ ಇರಲಿದೆ.   ತುರ್ತು ಪ್ರಕರಣಗಳ ವಿಚಾರಣೆಗೆ ಅ.6ರಂದು ಬೆಂಗಳೂರು ಪ್ರಧಾನ ಪೀಠದಲ್ಲಿ ರಜಾ ಕಾಲದ ವಿಶೇಷ ಪೀಠಗಳ ಕಲಾಪ …

Read More »

ರಾಜ್ಯದ 9 ಚೆಕ್‌ಪೋಸ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಸಮರ ಸಾರಲು ಸಿದ್ಧತೆ ಮಾಡಿಕೊಂಡಿದ್ದ ಲೋಕಾಯುಕ್ತ ಪೊಲೀಸರು ರಾಜ್ಯದ 9 ಸಾರಿಗೆ ಇಲಾಖೆಯ ಚೆಕ್‌ಪೋಸ್ಟ್‌ಗಳ ಮೇಲೆ ಶುಕ್ರವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಶಾಕ್‌ ಕೊಟ್ಟಿದ್ದಾರೆ.   ರಾಜ್ಯದ 9 ಚೆಕ್‌ಪೋಸ್ಟ್‌ಗಳ ಮೇಲೆ ಶುಕ್ರವಾರ ಮುಂಜಾನೆ 4.30ಕ್ಕೆ ಏಕಕಾಲದಲ್ಲಿ ನೂರಾರು ಲೋಕಾಯಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಪೈಕಿ 7 ಚೆಕ್‌ಪೋಸ್ಟ್‌ಗಳಲ್ಲಿ ಅಕ್ರಮವಾಗಿ ಸಾರಿಗೆ ಇಲಾಖೆ ಸಿಬ್ಬಂದಿ ಸಂಗ್ರಹಿಸಿಟ್ಟಿದ್ದ ಕಂತೆ-ಕಂತೆ ನೋಟುಗಳನ್ನು ಕಂಡು ಲೋಕಾ ಪೊಲೀಸರೇ ದಂಗಾಗಿದ್ದಾರೆ. ಇನ್ನು …

Read More »